ಕರ್ನಾಟಕದ ಈ 14 ಜಿಲ್ಲೆಯಲ್ಲಿ ಬೇಸಿಗೆ ನೆನಪಿಸುತ್ತಿದೆ ಬಿರುಬಿಸಿಲು

ರಾಜ್ಯ

ಸುದ್ದಿ ಸಂಗ್ರಹ ಬೆಂಗಳೂರು
ಸೆಪ್ಟಂಬರ್ ತಿಂಗಳಲ್ಲಿ 75 ವರ್ಷದ ನಂತರ ಬೆಂಗಳೂರು ನಗರದಲ್ಲಿ ದಾಖಲೆ ಉಷ್ಣಾಂಶ ದಾಖಲಾಗಿದ್ದರೆ, ಉತ್ತರ ಹಾಗೂ ಮಧ್ಯಕರ್ನಾಟಕದ ಜಿಲ್ಲೆಗಳಲ್ಲಿ ಸೆಪ್ಟಂಬರ್ ನಲ್ಲಿಯೆ ಬಿಸಿಲ ಅನುಭವವಾಗುತ್ತಿದೆ.

ಸೆಪ್ಟಂಬರ್ ಮಳೆಗಾಲ ಮುಗಿದು ಇನ್ನೇನು ಅಕ್ಟೋಬರ್ ನಲ್ಲಿ ಚಳಿಗಾಲ ಶುರುವಾಗಬಹುದು ಎನ್ನುವ ನಿರೀಕ್ಷೆಯಲ್ಲಿ ಜನ ಇದ್ದರೂ ವಾತಾವರಣ ಮಾತ್ರ ಭಿನ್ನವಾಗಿದೆ.

ರಾಯಚೂರು, ಕಲಬುರಗಿ ಜಿಲ್ಲೆಯಲ್ಲಂತೂ ಕಳೆದ 24 ಗಂಟೆ ಅವಧಿಯಲ್ಲಿ ಗರಿಷ್ಟ ಉಷ್ಣಾಂಶದ ಪ್ರಮಾಣ 37 ಡಿಗ್ರಿ ಸೆಲ್ಸಿಯಸ್ ದಾಟಿದೆ.

ರಾಯಚೂರು ಜಿಲ್ಲೆಯಲ್ಲಿ ಅತ್ಯಧಿಕ 37.6 ಡಿಗ್ರಿ ಸೆಲ್ಸಿಯಸ್‌, ಕಲಬುರಗಿಯಲ್ಲಿ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ. ಅದೆ ರೀತಿ ಯಾದಗಿರಿ ಜಿಲ್ಲೆಯಲ್ಲಿ 36.7 ಡಿಗ್ರಿ ಸೆಲ್ಸಿಯಸ್‌, ಬಳ್ಳಾರಿಯಲ್ಲಿ 36.6 ಡಿಗ್ರಿ ಸೆಲ್ಸಿಯಸ್‌, ಕೊಪ್ಪಳದಲ್ಲಿ 36.3 ಡಿಗ್ರಿ ಸೆಲ್ಸಿಯಸ್‌, ವಿಜಯಪುರದಲ್ಲಿ 36.2 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ, ಬಾಗಲಕೋಟೆಯಲ್ಲಿ 36 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ.

ತುಮಕೂರು ಹಾಗೂ ಬೀದರ್‌ ಜಿಲ್ಲೆಯಲ್ಲಿ 35.7 ಡಿಗ್ರಿ ಸೆಲ್ಸಿಯಸ್‌, ಗದಗದಲ್ಲಿ 35.6 ಡಿಗ್ರಿ ಸೆಲ್ಸಿಯಸ್‌, ಮಂಡ್ಯದಲ್ಲಿ 35.5 ಡಿಗ್ರಿ ಸೆಲ್ಸಿಯಸ್‌, ಚಿಕ್ಕಬಳ್ಳಾಪುರದಲ್ಲಿ 35.4 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶವಿದೆ.

ಚಿತ್ರದುರ್ಗದಲ್ಲಿ 35.3 ಡಿಗ್ರಿ ಸೆಲ್ಸಿಯಸ್‌, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಯಲ್ಲಿ 35.1 ಡಿಗ್ರಿ ಸೆಲ್ಸಿಯಸ್‌, ವಿಜಯನಗರದಲ್ಲಿ 35.4 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 34,3 ಡಿಗ್ರಿ ಸೆಲ್ಸಿಯಸ್‌, ಬೆಂಗಳೂರು ದಕ್ಷಿಣದಲ್ಲಿ 34.6 ಡಿಗ್ರಿ ಸೆಲ್ಸಿಯಸ್‌, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 34.4 ಡಿಗ್ರಿ ಸೆಲ್ಸಿಯಸ್‌, ಬೆಂಗಳೂರು ನಗರ ಹಾಗೂ ಹಾಸನ ಜಿಲ್ಲೆಯಲ್ಲಿ 34 ಡಿಗ್ರಿ ಸೆಲ್ಸಿಯಸ್‌, ಶಿವಮೊಗ್ಗದಲ್ಲಿ 33.2 ಡಿಗ್ರಿ ಸೆಲ್ಸಿಯಸ್‌, ಉಡುಪಿಯಲ್ಲಿ 33.9 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ.

ಕೊಡಗಿನಲ್ಲಿ 32.3 ಡಿಗ್ರಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ 32.9 ಡಿಗ್ರಿ ಸೆಲ್ಸಿಯಸ್‌, ಉತ್ತರ ಕನ್ನಡ ಜಿಲ್ಲೆಯಲ್ಲಿ 33.1 ಡಿಗ್ರಿ, , ಕೋಲಾರದಲ್ಲಿ 34.2 ಡಿಗ್ರಿ, ಮೈಸೂರಿನಲ್ಲಿ 34.8 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ.

Leave a Reply

Your email address will not be published. Required fields are marked *