ಲೋಕಾಯುಕ್ತ ದಾಳಿ: ಜೆಸ್ಕಾಂ ಎಇಇ ರಾಜೇಶ್ವರಿ ಮನೆಯಲ್ಲಿ ಅಪಾರ ಚಿನ್ನಾಭರಣ ಪತ್ತೆ

ನಗರದ

ಸುದ್ದಿ ಸಂಗ್ರಹ ಕಲಬುರಗಿ
ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂ ಬೆಳಿಗ್ಗೆ ಇಲ್ಲಿನ ಜೆಸ್ಕಾಂ ಎಇಇ ರಾಜೇಶ್ವರಿ ಬಬಲಾದ ‌ಅವರ ಮನೆಗಳು ಮತ್ತು ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

ನಗರದ‌ ಮಹಾಲಕ್ಷ್ಮಿ ಬಡಾವಣೆಯ ಮನೆ, ಖಾದ್ರಿ ಚೌಕನಲ್ಲಿರುವ ನಿವಾಸ ಮತ್ತು ಸೂಪರ್ ಮಾರ್ಕೆಟ್‌ನಲ್ಲಿರುವ ಜೆಸ್ಕಾಂ‌ನ ಅವರ ಕಚೇರಿಯ ಮೇಲೆ ದಾಳಿ ನಡೆದಿದೆ. ಬೆಳಿಗ್ಗೆ ವಾಕಿಂಗ್ ಹೋಗಿದ್ದ ರಾಜೇಶ್ವರಿ ಅವರು ಮನೆಗೆ ಬರುವುದರೊಳಗೆ ಈ ದಾಳಿ ನಡೆದಿದೆ.

ಲೋಕಾಯುಕ್ತ ಎಸ್ಪಿ ಸಿ ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಬಸವರಾಜ ಎಲಿಗಾರ, ಇನ್‌ಸ್ಪೆಕ್ಟರ್‌ ಅರುಣಕುಮಾರ ಮುರಗುಂಡಿ ಮತ್ತು ಯಾದಗಿರಿ ಇನ್‌ಸ್ಪೆಕ್ಟರ್‌ ನೇತೃತ್ವದಲ್ಲಿ ಮೂರು ತಂಡಗಳಲ್ಲಿ 40 ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಕಳೆದ ನಾಲ್ಕು ತಾಸುಗಳಿಂದ ದಾಖಲೆಗಳ ಪತ್ತೆ, ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಮಹಾಲಕ್ಷ್ಮಿ ಬಡಾವಣೆಯಲ್ಲಿರುವ ಮನೆಯಲ್ಲಿ ಚಿನ್ನದ ಸರಗಳು, ನಕ್ಲೆಸ್‌ಗಳು, ಉಂಗುರುಗಳು ಸೇರಿದಂತೆ ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿದೆ ಎಂದು ಲೋಕಾಯುಕ್ತ ಮೂಲಗಳು ಹೇಳಿವೆ.

ರಾಜೇಶ್ವರಿ ಅವರು 18 ವರ್ಷಗಳ ಹಿಂದೆ ಸರ್ಕಾರಿ ಹುದ್ದೆಗೆ ಸೇರಿದ್ದರು ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *