ಅಪ್ರಾಪ್ತರಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌ಗೆ ತಯಾರಿ: ಶಾಸನಬದ್ಧ ನಿಯಮ ರೂಪಿಸಲು ಸುಪ್ರೀಂ ಸೂಚನೆ

ನವದೆಹಲಿ

ಸುದ್ದಿ ಸಂಗ್ರಹ ನವದೆಹಲಿ
ದೇಶದಲ್ಲೂ 18 ವರ್ಷದೊಳಗಿನ ಅಪ್ರಾಪ್ತರಿಗೆ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ಬಂಧಿಸಲು ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ. ಈ ಸಂಬಂಧ, ಶಾಸನಬದ್ಧ ನಿಯಮಗಳನ್ನು ಜಾರಿಗೆ ತರುವ ಸಾಧ್ಯತೆಯನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ ಮೋಹನ ಅವರನ್ನೊಳಗೊಂಡ ಪೀಠವು ಜಸ್ಟ್ ರೈಟ್ಸ್’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ವಿಚಾರಣೆ ನಡೆಸಿತು. ಈ ವೇಳೆ, ಡಿಜಿಟಲ್ ಪರಿಸರದಲ್ಲಿ ಮಕ್ಕಳು ಎದುರಿಸುವ ಅಪಾಯಗಳನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಒಪ್ಪಿಕೊಂಡರು.

ಅಪ್ರಾಪ್ತರು ಈ ವೇದಿಕೆಗಳಲ್ಲಿ ನೋಂದಾಯಿಸುವುದನ್ನು ತಡೆಯುವುದನ್ನು ಮಧ್ಯವರ್ತಿಗಳಿಗೆ ಕಡ್ಡಾಯಗೊಳಿಸಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಹೊಸ ಶಾಸನಬದ್ಧ ಕ್ರಮಗಳ ಮೂಲಕ ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳನ್ನು ಬಲಪಡಿಸಲಾಗುವುದು ಅಂತ ಕೋರ್ಟ್ ತಿಳಿಸಿದೆ.

Leave a Reply

Your email address will not be published. Required fields are marked *