ಕರ್ನಾಟಕ ಬರ – ಜಿಲ್ಲೆಗಳಿಗೆ ಭೇಟಿ, ಕೇಂದ್ರ ತಂಡದಲ್ಲಿ ಯಾರಿದ್ದಾರೆ ?

ರಾಜ್ಯ

ಸುದ್ದಿ ಸಂಗ್ರಹ ಬೆಂಗಳೂರು
ರಾಜ್ಯದಲ್ಲಿ ಉಂಟಾಗಿರುವ ಖಾರಿಫ್ ಬರದ ಪರಿಸ್ಥಿತಿಯನ್ನು ಪ್ರತ್ಯಕ್ಷವಾಗಿ ಪರಿಶೀಲಿಸಲು ಮತ್ತು ಅಧ್ಯಯನ ನಡೆಸಲು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಉನ್ನತ ಮಟ್ಟದ ಅಧಿಕಾರಿಗಳ ತಂಡವು ಅಕ್ಟೋಬರ್ 6ರ ವರೆಗೆ ಜಿಲ್ಲೆಗಳಿಗೆ ಭೇಟಿ ನೀಡಲಿವೆ.

ಅಧಿಕಾರಿಗಳ ಈ ತಂಡವನ್ನು ಒಟ್ಟು ಮೂರು ವಿಭಾಗಗಳಾಗಿ, ತಂಡ 1, ತಂಡ 2 ಮತ್ತು ತಂಡ 3 ಎಂದು ವಿಂಗಡಿಸಲಾಗಿದ್ದು, ಈ ತಂಡಗಳು ಬರ ಪೀಡಿತ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪರಿಸ್ಥಿತಿಯನ್ನು ಅವಲೋಕಿಸಲಿವೆ.

​ತಂಡ 1
ಜಂಟಿ ಕಾರ್ಯದರ್ಶಿ ಅಜೀತಕುಮಾರ್ ಸಾಹು ಅವರ ನೇತೃತ್ವದ ಈ ತಂಡದಲ್ಲಿ ಉಪ ನಿರ್ದೇಶಕ ಚೇತ್ ರಾಮ್ ಮೀನಾ (ತಂಡದ ಸಂಯೋಜಕರು), ವಿಶೇಷ ಅಧಿಕಾರಿ (ಐ’ಎಸ್’ಡಿ ) ಕರ್ನಲ್ ಅಮರಿಂದರ್ ಸಿಂಗ್ ಮತ್ತು ನಿರ್ದೇಶಕ ಡಾ. ಜೆ ಹರ್ಷ ಸದಸ್ಯರಾಗಿದ್ದಾರೆ. ಈ ತಂಡವು ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಪರಿಶೀಲನೆ ನಡೆಸಲಿದೆ.

ತಂಡ 2
ಸಹಾಯಕ ಆಯುಕ್ತರಾದ ಡಾ. ಸುದಮ್ ಬಾಗ್ ಅವರ ನೇತೃತ್ವದ ತಂಡದಲ್ಲಿ ಸಹಾಯಕ ಸಲಹೆಗಾರರಾದ ಆಶಿಶ್ ಪಾಂಡೆ, ಅಧೀನ ಕಾರ್ಯದರ್ಶಿ ಪ್ರದೀಪಕುಮಾರ್ ಮತ್ತು ಉಪ ನಿರ್ದೇಶಕ ಕರಣ್ ಚೌಧರಿ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ತಂಡವು ಹಾಸನ, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲಿದೆ.

ತಂಡ 3
ನಿರ್ದೇಶಕ ಡಾ. ಮನ್ ಸಿಂಗ್ ಅವರ ನೇತೃತ್ವದ ಮೂರನೇ ತಂಡದಲ್ಲಿ ಅಧೀನ ಕಾರ್ಯದರ್ಶಿ ಪಾರ್ಥ ಪಾಲ್ ಮತ್ತು ಅಧೀನ ಕಾರ್ಯದರ್ಶಿ ರಾಕೇಶಕುಮಾರ್ ಸದಸ್ಯರಾಗಿದ್ದಾರೆ. ಈ ತಂಡವು ಯಾದಗಿರಿ, ರಾಯಚೂರು, ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಖಾರಿಫ್ ಬರದ ತೀವ್ರತೆ ಮತ್ತು ಹಾನಿಯ ಕುರಿತು ಪರಿಶೀಲಿಸಲಿದೆ.

​ಈ ಭೇಟಿಯ ನಂತರ ಕೇಂದ್ರ ತಂಡವು ರಾಜ್ಯದ ಬೆಳೆ ಹಾನಿ ಮತ್ತು ರೈತರ ಸಂಕಷ್ಟದ ಕುರಿತು ಕೇಂದ್ರ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಲಿದೆ.

Leave a Reply

Your email address will not be published. Required fields are marked *