ಸುದ್ದಿ ಸಂಗ್ರಹ ವಾಡಿ
ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಪ್ರಚಾರ ಕಾರ್ಯ ಮುಗಿಸಿ ಹುಬ್ಬಳ್ಳಿಗೆ ಹೊರಟಿದ್ದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಅವರಿಗೆ ಕಲಬುರಗಿ ರೈಲು ನಿಲ್ದಾಣದಲ್ಲಿ . ಅಭಿನಂದಿಸಿ ಸನ್ಮಾನಿಸಲಾಯಿತು.
ಪೂಜ್ಯ ಸಿದ್ಧಲಿಂಗ ಸ್ವಾಮೀಜಿಗಳ ದಿವ್ಯ ಸಮ್ಮುಖದಲ್ಲಿ, ವಾಡಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ವಿಪಕ್ಷ ನಾಯಕರಿಗೆ ಶಾಲು ಹೊದಿಸಿ ಆತ್ಮೀಯವಾಗಿ ಸತ್ಕರಿಸಿ, ನಂತರ ಮಾತನಾಡಿದ ಅವರು, “ಚಲವಾದಿ ನಾರಾಯಣಸ್ವಾಮಿ ಅವರ ಪಕ್ಷಾಭಿಮಾನದ ನುಡಿಗಳು ಮತ್ತು ಕಾರ್ಯವೈಖರಿ ನಮ್ಮೆಲ್ಲ ಕಾರ್ಯಕರ್ತರಿಗೂ ದೊಡ್ಡ ಸ್ಪೂರ್ತಿಯಾಗಿದೆ” ಎಂದರು.
ಈ ಸೌಹಾರ್ದ ಭೇಟಿಯ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಅಶೋಕ ಬಗಲಿ, ಎಸ್‌ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಅಂಬರಾಯ ಅಷ್ಟಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಣ್ಣೂರ, ಮುಖಂಡರಾದ ಶಿವರಾಜಗೌಡ ಪಾಟೀಲ, ಧರ್ಮಣ್ಣ ಇಟಗಿ, ಮಹೇಂದ್ರ ಕುಮಾರ ಪೂಜಾರಿ, ಶಿವಕುಮಾರ ಮೂಲಗೆ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಮತ್ತು ಇತರ ಜಿಲ್ಲಾ ಪ್ರಮುಖರು ಉಪಸ್ಥಿತರಿದ್ದರು.