ಸೇಡಂ: ಕಮಲಾವತಿ ನದಿಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ

ಜಿಲ್ಲೆಯ

ಸುದ್ದಿ ಸಂಗ್ರಹ ಕಲಬುರಗಿ
ಸೇಡಂ ಪಟ್ಟಣದ ಹೊರವಲಯದಲ್ಲಿ ಹರಿಯುವ ಕಮಲಾವತಿ ನದಿಯಲ್ಲಿ ಸಾವಿರಾರು ಮೀನುಗಳು ಸಾವನ್ನಪ್ಪಿವೆ.

ನದಿಗೆ ಸಿಮೆಂಟ್ ಕಾರ್ಖಾನೆಯ ವಿಷಪೂರಿತ ನೀರು ಸೇರಿರುವುದರಿಂದ ಮೀನುಗಳ ಸಾವನ್ನಪ್ಪಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾರ್ಖಾನೆ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೇಡಂ ಜನರ ಜೀವನಾಡಿಯಾದ ನೀರಿನ ಪರೀಕ್ಷೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಈ ನೀರು ಪ್ರಾಣಿ ಪಕ್ಷಿಗಳು, ದನಕರುಗಳು ಕುಡಿದ್ರೆ ಯಾರು ಹೋಣೆ ? ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *