ಸರಡಗಿ ಬ್ಯಾರೇಜ್‌ಗೆ ಡಿಸಿ, ಸಿಇಒ ಭೇಟಿ, ನೀರು ಪೋಲಾಗದಂತೆ ಸೂಚನೆ

ಸುದ್ದಿ ಸಂಗ್ರಹ

ಸುದ್ದಿ ಸಂಗ್ರಹ ಕಲಬುರಗಿ
ತಾಲೂಕಿನ ಸರಡಗಿ ಗ್ರಾಮದ ಬ್ರಿಡ್ಜ್ ಕಂ ಬ್ಯಾರೇಜ್‌ಗೆ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಭೇಟಿ ನೀಡಿ, ಬ್ಯಾರೇಜ್‌ನಿಂದ ನೀರು ಪೋಲಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಜು, ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಸ್ತುತ ನೀರಿನ ಲಭ್ಯತೆ ಕಡಿಮೆ ಇರುವುದರಿಂದ ಬ್ಯಾರೇಜ್‌ನಲ್ಲಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಬೇಕು. ಬೇರೆ ಉದ್ದೇಶಗಳಿಗೆ ನೀರು ಬಳಸದಂತೆ ಕ್ರಮ ವಹಿಸಬೇಕು ಮತ್ತು ಬ್ಯಾರೇಜ್‌ನಿಂದ ನೀರು ಎತ್ತುವ ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಜೆಸ್ಕಾಂ ಎಇಇಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಸಂಕನೂರ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಶ್ರವಣ್ ಕುಮಾರ, ಸಹಾಯಕ ಆಯುಕ್ತೆ ರಿತಿಕಾ ವರ್ಮಾ ಮತ್ತು ಕಲಬುರಗಿ ತಹಸೀಲ್ದಾರ್ ಕೆ. ಆನಂದಶೀಲ್ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *