ಚಿತ್ತಾಪುರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಐಟಿಬಿಟಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹುಟ್ಟು ಹಬ್ಬದ ಪ್ರಯುಕ್ತ ಅವರ ಅಭಿಮಾನಿ ಹಾಗೂ ಚಿತ್ತಾಪುರ ಯುವ ಕಾಂಗ್ರೆಸ್ ಅಧ್ಯಕ್ಷ ಸಂಜಯ ಬುಳಕರ ಅವರು ನೇತ್ರಾದಾನ ಮಾಡಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಐಟಿಬಿಟಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ 46ನೇ ಹುಟ್ಟು ಹಬ್ಬವು ನ.22 ರಂದು ಇರುವ ಪ್ರಯುಕ್ತ ಅವರ ಅಭಿಮಾನಿ ಹಾಗೂ ಚಿತ್ತಾಪುರ ಯುವ ಕಾಂಗ್ರೆಸ್ ಅಧ್ಯಕ್ಷ ಸಂಜಯ ಬುಳಕರ ಅವರು ಕಲಬುರಗಿಯ ಬಸವೇಶ್ವರ ಸಾರ್ವಜನಿಕ ಆಸ್ಪತ್ರೆಗೆ ನೇತ್ರಾದಾನ ಮಾಡುವ ಮೂಲಕ ಅಂಧರ ಬಾಳಿಗೆ ಬೆಳಕಾಗುವ ಮೂಲಕ ಮಾದರಿಯ ಕೆಲಸಕ್ಕೆ ಮುಂದಾಗಿದ್ದಾರೆ.