ಚಿತ್ತಾಪುರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ/ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಯವರ 46ನೇ ಜನ್ಮದಿನವು ಇದೆ ತಿಂಗಳು 22 ರಂದು ಇರುವ ಪ್ರಯುಕ್ತ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಸಂಜಯ ಬುಳಕರ ತಿಳಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪ್ರಿಯಾಂಕ್ ಖರ್ಗೆಯವರ ಅಭಿಮಾನಿಗಳು ಸ್ವ-ಇಚ್ಛೆಯಿಂದ ರಕ್ತದಾನ ಮಾಡಲು, ಇಚ್ಛೆಸುವವರು ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆ ಇರುವವರಿಗೆ ನೇರವಾಗುವ ಮೂಲಕ ಜೀವ ಉಳಿಸುವ ಕೆಲಸಕ್ಕೆ ಮುಂದಾಗಬೇಕ ಎಂದು ಕೊರಿದ್ದಾರೆ.
ಚಿತ್ತಾಪುರ ಪಟ್ಟಣದ ಬಸ್ ನಿಲ್ದಾಣದ ಎದುರುಗಡೆ ರಕ್ತದಾನ ಶಿಬಿರವು ನ. 22 ರಂದು ಬೆಳಗ್ಗೆ 10 ಘಂಟೆಗೆ ಪ್ರಾರಂಭವಾಗುವುದು ಎಂದು ತಿಳಿಸಿದ್ದಾರೆ.