ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಧಗಧಗ: ಹಾವೇರಿ ಲೋಕಾಯುಕ್ತ ಇನ್‌ಸ್ಪೆಕ್ಟರ್ ಸಜೀವ ದಹನ
ಧಾರವಾಡ: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಲೋಕಾಯುಕ್ತ ಇನ್‌ಸ್ಪೆಕ್ಟರ್ ಸಜೀವ ದಹನವಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಹಾವೇರಿ ಲೋಕಾಯುಕ್ತ ಇನ್‌ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಸಂಪೂರ್ಣ ಸುಟ್ಟು ಕರಕಲಾಗಿದ್ದಾರೆ. ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದಿತ್ತು. ಸಾಲಿಮಠ ಅವರು ಗದಗದಲ್ಲಿ ಇರುವ ಮನೆಗೆ ಪ್ರಯಾಣ ಬೆಳೆಸಿದ್ದರು. ಹುಬ್ಬಳ್ಳಿಯಿಂದ ಗದಗ ಮಾರ್ಗವಾಗಿ ಕಾರು ಹೊರಟಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತವಾಗಿ I20 ಕಾರ್ ಸಂಪೂರ್ಣ ಸುಟ್ಟು ಕರಕಲಾಯಿತು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ […]
Continue Reading