ದಂಡೋತಿ: ಮಂಗಗಳ ಹಾವಳಿ ತಡೆಯಲು ಗ್ರಾ.ಪಂ ಪಿಡಿಒಗೆ ಮನವಿ

ಚಿತ್ತಾಪುರ: ದಂಡೋತಿ ಗ್ರಾಮದಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದೆ, ಮಂಗಗಳನ್ನು ಸೆರೆ ಹಿಡುಯವಂತೆ ಒತ್ತಾಯಿಸಿ ಕರವೇ ಗ್ರಾಮ ಘಟಕದ ಅಧ್ಯಕ್ಷ ಮೈನೋದ್ದೀನ್ ತೊನಸನಳ್ಳಿ ಮತ್ತು ಪದಾಧಿಕಾರಿಗಳು ಗ್ರಾ.ಪಂ ಪಿಡಿಒ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಕರವೇ ಗ್ರಾಮ ಘಟಕದ ಅಧ್ಯಕ್ಷ ಮೈನೊದ್ದಿನ್ ತೊನಸನಳ್ಳಿ ಮಾತನಾಡಿ, ದಂಡೋತಿ ಗ್ರಾಮದಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದೆ, ಇಲ್ಲಿಯವರೆಗೆ 4-5 ಜನರಿಗೆ ಕಚ್ಚಿ ಗಾಯಗೊಳಿಸಿವೆ. ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಮನೆಯಿಂದ ಹೊರಗಡೆ ಬರಲು ಹೆದರುತ್ತಿದ್ದಾರೆ, ಗ್ರಾಮದ ಜನರು ಹೊಲಗಳಿಗೆ ತೆರಳಲು ಭಯಭೀತರಾಗಿದ್ದಾರೆ. ಹೀಗಾಗಿ […]

Continue Reading

ಧರ್ಮ ಆಧ್ಯಾತ್ಮದ ತವರೂರು, ಶಿಕ್ಷಣದ ಕಾಶಿ ಹರಸೂರು: ಮುಡುಬಿ

ಕಾಳಗಿ: ಕಲ್ಯಾಣ ಚಾಲುಕ್ಯರ ಮತ್ತು ರಾಷ್ಟ್ರಕೂಟರ ಕಾಲದಲ್ಲಿ ನಾಡಿಗೆ ವಿದ್ಯಾದಾನಗೈದ ಕೀರ್ತಿ ಹರಸೂರು ಗ್ರಾಮಕ್ಕೆ ಸಲ್ಲುತ್ತದೆ ಎಂದು ಸಂಶೋಧಕ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಹರಸೂರ ಗ್ರಾಮದಲ್ಲಿ ಬಸವೇಶ್ವರ ಸೇವಾ ಬಳಗ ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ- 28ರಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಹರಸೂರ ಗ್ರಾಮವು ಪ್ರಾಚೀನ ಕಾಲದಲ್ಲಿ ಆಧ್ಯಾತ್ಮದ ತವರೂರಾಗಿತ್ತು. ಗ್ರಾಮದ ಹೆಸರೇ ಸೂಚಿಸುವಂತೆ ಸಾಕ್ಷಾತ ಹರ(ಶಿವ)ನೇ ನೆಲೆ ನಿಂತ ಗ್ರಾಮವು ಹರಸೂರಾಗಿದೆ. ಗ್ರಾಮದಲ್ಲಿ ಶಿವನಿಗೆ ಸೇರಿದಂತೆ ಅವತಾರಗಳು, […]

Continue Reading

ದೇಹದ ಆರೋಗ್ಯವೇ ದೇಶದ ನಿಜವಾದ ಸಂಪತ್ತು: ಸಿದ್ದಲಿಂಗ ಶ್ರೀ

ಚಿತ್ತಾಪುರ: ಭಗವಂತ ಸುಂದರವಾದ ದೇಹವನ್ನು ಕೊಟ್ಟಿದ್ದಾನೆ. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಮೂಲಕ ದೇಹವನ್ನು ಸದೃಢ ಮಾಡಿಕೊಳ್ಳಬೇಕು. ದೇಹದ ಆರೋಗ್ಯವೇ ದೇಶದ ನಿಜವಾದ ಸಂಪತ್ತು ಎಂದು ರಾವೂರ ಶ್ರೀ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು. ಸಮೀಪದ ರಾವೂರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ದಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ‘ವ್ಯಸನ ಮುಕ್ತ ದಿನಾಚರಣೆ’ ಉದ್ದೇಶಿಸಿ ಮಾತನಾಡಿದ ಅವರು, ಇಳಕಲ್ ಮಹಾoತ ಶಿವಯೋಗಿಗಳು ಮಹಾಂತ ಜೋಳಿಗೆ ಮೂಲಕ ಜನರನ್ನು ವ್ಯಸನದಿಂದ ದೂರವಿಡುವ ಪ್ರಯತ್ನ ಮಾಡಿದರು. ವಿವಿಧ ಚಟಗಳಿಂದ ನಿತ್ಯ […]

Continue Reading

ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆಯ ಜೀವ ವಿಮೆಯ 2 ಲಕ್ಷ ರೂ ಹಸ್ತಾಂತರ

ಕಾಳಗಿ: ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮೆಯ ನಾಮನಿರ್ದೇಶಿತ ಅರುಣಕುಮಾರ ಕಡ್ಲಿ ಅವರಿಗೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಪ್ರವೀಣಕುಮಾರ ಜೆ.ಎಚ್ 2 ಲಕ್ಷ ರೂ. ಚೆಕ್ ವಿತರಿಸಿದರು. ತಾಲೂಕಿನ ತೆಂಗಳಿ ಗ್ರಾಮದ ಅಣ್ಣೆಮ್ಮ ಅರುಣಕುಮಾರ್ ಕಡ್ಲಿ ಅಸುನಿಗಿದ ಕಾರಣ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆಯ ನಾಮನಿರ್ದೇಶಿತ ಅರುಣಕುಮಾರ ಕಡ್ಲಿ ಅವರಿಗೆ 2 ಲಕ್ಷ ರೂ. ಚೆಕ್ ವಿತರಿಸಲಾಯಿತು. ಬ್ಯಾಂಕ ಖಾತೆ ಹೊಂದಿರುವ ಗ್ರಾಹಕರು ಕೇಂದ್ರ ಸರ್ಕಾರದ ಯೋಜನೆಗಳಾದ ಪಿಎಂಜೆಜೆಬಿವೈ 436 ರೂ. ಮತ್ತು […]

Continue Reading

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಆತ್ಮವಿಶ್ವಾಸಕ್ಕೆ ಕೊರತೆಯಿದೆ: ಶಿವಾನಂದ ಖಜುರ್ಗಿ

ಚಿತ್ತಾಪುರ: ಬಹಳಷ್ಟು ಸಾಧಕರು, ಪ್ರತಿಭೆಗಳು ಗ್ರಾಮೀಣ ಭಾಗದಿಂದ ಬಂದಿದ್ದಾರೆ, ಅದರಲ್ಲೂ ಬಡತನದಿಂದ ಬಂದಿದ್ದಾರೆ ಎಂದು ದಿಶಾ ಪದವಿಪೂರ್ವ ಕಾಲೇಜಿನ ಚೇರ್ಮನ್ ಶಿವಾನಂದ ಖಜುರ್ಗಿ ಹೇಳಿದರು. ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕಲ್ಯಾಣದ ನಾಡಿನಲ್ಲಿ ಪ್ರತಿಭೆಗೆ ಕೊರತೆಯಿಲ್ಲ ಆದರೆ ಆತ್ಮವಿಶ್ವಾಸದ ಕೊರತೆಯಿದೆ, ಹಿಂಜರಿಕೆಯಿದೆ, ಕೀಳರಿಮೆಯಿದೆ, ಈ ಮನಸ್ಥಿತಿಯಿಂದ ಹೊರಬಂದರೆ ಖಂಡಿತ ನಮ್ಮ ಭಾಗದ ಮಕ್ಕಳು ಉತ್ತಮ ಸಾಧನೆ ಮಾಡಲು ಸಾಧ್ಯ. ಬೆಳಕಿಲ್ಲದ ದಾರಿಯಲ್ಲಿ ನಡೆಯಬಹುದು ಆದರೆ ಕನಸಿಲ್ಲದ […]

Continue Reading

ರಾವೂರ: 25 ರಿಂದ ಆ.22ರ ವರೆಗೆ ಶ್ರಾವಣ ಸತ್ಸಂಗ ಕಾರ್ಯಕ್ರಮ

ರಾವೂರ: ಗ್ರಾಮದ ಸಿದ್ದಲಿಂಗೇಶ್ವರ ಸಂಸ್ಥಾನ ಮಠದಲ್ಲಿ ಪವಿತ್ರ ಶ್ರಾವಣ ಮಾಸದ ಅಂಗವಾಗಿ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಒಂದು ತಿಂಗಳ ಪರ್ಯಂತ ಶ್ರಾವಣ ಸತ್ಸಂಗ ಕಾರ್ಯಕ್ರಮ ಸಂಜೆ 7 ರಿಂದ 7.30ರ ವರೆಗೆ ನಡೆಯಲಿದೆ ಎಂದು ಶ್ರೀಮಠದ ಕಾರ್ಯದರ್ಶಿ ಡಾ.ಗುಂಡಣ್ಣ ಬಾಳಿ ತಿಳಿಸಿದ್ದಾರೆ. ಜುಲೈ 25 ರಿಂದ ಆಗಸ್ಟ್ 22ರ ವರೆಗೆ ಶ್ರಾವಣ ಸತ್ಸಂಗ ಕಾರ್ಯಕ್ರಮ ನಡೆಯಲಿದೆ. ಸತ್ಸಂಗಕ್ಕೆ ಬರುವವರು ಬಿಳಿ ಬಣ್ಣದ ಅಂಗಿ, ಬಿಳಿ ಬಣ್ಣದ ಲುಂಗಿ ಧರಿಸಿ ಬರಬೇಕು. ಸತ್ಸಂಗ ಕಾರ್ಯಕ್ರಮದಲ್ಲಿ […]

Continue Reading

ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಶಿಕ್ಷಕ ಸಿದ್ದಲಿಂಗ ಬಾಳಿ ಆಯ್ಕೆ

ಚಿತ್ತಾಪುರ: ಸಮೀಪದ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯ ಶಿಕ್ಷಕ ಸಿದ್ದಲಿಂಗ ಬಾಳಿ ಅವರು ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜುಲೈ 20 ರವಿವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಲ್ಲಿ ಚೇತನ ಯೂತ್ ಫೌಂಡೇಶನ್ ವತಿಯಿಂದ ನಡೆಯುವ ರಾಷ್ಟ್ರೀಯ ಶಿಕ್ಷಣ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನದಲ್ಲಿ ಶಿಕ್ಷಕ ಸಿದ್ದಲಿಂಗ ಬಾಳಿ ಅವರಿಗೆ ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಫೌಂಡೇಶನ್ ಅಧ್ಯಕ್ಷ ಚಂದ್ರಶೇಖರ ಮಾಡಲಗೇರಿ ತಿಳಿಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಬಾಳಿಯವರು ಮಾಡುತ್ತಿರುವ ವಿಭಿನ್ನ […]

Continue Reading

ರಾವೂರ: ಶಾಲಾ ಚುನಾವಣೆಯಲ್ಲಿ ಗೆದ್ದು ಬೀಗಿದ ವಿದ್ಯಾರ್ಥಿ ನಾಯಕರು

ಚಿತ್ತಾಪುರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಡೆಯುವ ಚುನಾವಣೆ ಹಾಗೂ ಮತದಾನದ ಅರಿವು ಮೂಡಿಸಲು ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾದ ಶಾಲಾ ಸಂಸತ್ ಚುನಾವಣೆಯಲ್ಲಿ ಮಕ್ಕಳು ಗೆದ್ದು ಗೆಲುವಿನ ನಗೆ ಬೀರಿದರು. ಸಮೀಪದ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಮಕ್ಕಳ ಅಣಕು ಚುನಾವಣೆಯಲ್ಲಿ ಅಮೂಲ್ಯವಾದ ಮತವನ್ನು ಮತಯಂತ್ರದಲ್ಲಿ ಚಲಾಯಿಸಿ ತರಗತಿ ನಾಯಕರನ್ನು ಆಯ್ಕೆ ಮಾಡಿಕೊಂಡರು. ಒಟ್ಟು 10 ಮತ ಕೇಂದ್ರಗಳಲ್ಲಿ ನಡೆದ ಚುನಾವಣೆಯಲ್ಲಿ 520 ಮತದಾರರ ಪೈಕಿ 500 ಮಕ್ಕಳು ತಮ್ಮ ಮತ ಚಲಾಯಿಸಿದರು. ಶೇ.96 ರಷ್ಟು […]

Continue Reading

ಗುರುವಿನ ಸ್ಥಾನ ಎಲ್ಲದಕ್ಕಿಂತಲೂ ದೊಡ್ಡದು: ಸಿದ್ದಲಿಂಗ ಶ್ರೀ

ಚಿತ್ತಾಪುರ: ಭೂಮಿಯ ಮೇಲಿನ ಎಲ್ಲಾ ವೃತ್ತಿಗಳಲ್ಲಿ ಗುರುವಿನ ಸ್ಥಾನ ತುಂಬಾ ದೊಡ್ಡದು ಎಂದು ರಾವೂರ ಗ್ರಾಮದ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು. ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಗುರುಪೂರ್ಣಿಮೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಗುರುವಂದನಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಯಾರು ಜನರ ಅಂಧಕಾರ, ಮೌಢ್ಯತೆ ದೂರ ಮಾಡುತ್ತಾರೋ, ಯಾರು ಉತ್ತಮ ಜೀವನಕ್ಕೆ ಸೂಕ್ತ ಮಾರ್ಗದರ್ಶನ ನೀಡುವರೋ ಅವರು ನಿಜವಾದ ಗುರುಗಳು. ಶಿವಾಜಿಗೆ ಗುರು ರಾಮದಾಸರ ಮಾರ್ಗದರ್ಶನದ ಪ್ರಭಾವ ಬೀರಿತ್ತು. […]

Continue Reading

ವಚನ ಸಾಹಿತ್ಯಕ್ಕೆ ಡಾ.ಫ.ಗು ಹಳಕಟ್ಟಿ ಕೊಡುಗೆ ಅಪಾರ: ಜಗದೀಶ ಮರಪಳ್ಳಿ

ಚಿತ್ತಾಪುರ: ವಚನ ಸಾಹಿತ್ಯವನ್ನು ಇಂದು ನಾವು ಸಮಗ್ರವಾಗಿ, ವ್ಯವಸ್ಥಿತವಾಗಿ ಅಧ್ಯಯನ ಮಾಡುತ್ತಿದ್ದರೆ ಅದು ಡಾ. ಫ.ಗು. ಹಳಕಟ್ಟಿ ಅವರ ಕೊಡುಗೆ ಎಂದು ಸಾಹಿತ್ಯ ಪ್ರೇರಕ ಜಗದೀಶ ಮರಪಳ್ಳಿ ಹೇಳಿದರು. ಸಮೀಪದ ರಾವೂರ ಗ್ರಾಮದಲ್ಲಿ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ವತಿಯಿಂದ ವಚನ ಪಿತಾಮಹ ಡಾ. ಫ.ಗು ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ವಚನ ಕಂಠ ಪಾಠ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಸಸಿಗೆ ನಿರುಣಿಸಿ ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಜೀವನವನ್ನು […]

Continue Reading