ವಾಡಿ ಪಟ್ಟಣಕ್ಕೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಭೇಟಿ, ವಿವಿಧ ಇಲಾಖೆಯ ಕಾಮಗಾರಿ ಪರಿಶೀಲನೆ

ಚಿತ್ತಾಪುರ: ವಾಡಿ ಪಟ್ಟಣಕ್ಕೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಭೇಟಿ ನೀಡಿ ವಿವಿಧ ಇಲಾಖೆಯ ಕಾಮಗಾರಿ ಪರಿಶೀಲನೆ ಮಾಡಿದರು. ತಾಲೂಕಿನಲ್ಲಿ ವಾಡಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ, ಇಂದಿರಾ ಕ್ಯಾಂಟೀನ್ ಕಟ್ಟಡದ ಕಾಮಗಾರಿ ಮತ್ತು ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂಧರ್ಭದಲ್ಲಿ ಸೇಡಂ ಸಹಾಯಕ ಆಯುಕ್ತ ಪ್ರಭು ರೆಡ್ಡಿ, ತಹಸೀಲ್ದಾರ ನಾಗಯ್ಯ ಹಿರೇಮಠ ಮತ್ತು ಆಯಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಚಿತ್ತಾಪುರ: ತಹಸೀಲ್ ಕಚೇರಿಗೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಭೇಟಿ

ಚಿತ್ತಾಪುರ: ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಅವರು ಶನಿವಾರ ತಹಸೀಲ್ ಕಚೇರಿಗೆ ಭೇಟಿ ನೀಡಿ ಭೂ ದಾಖಲೆಗಳ ಡಿಜಿಟಲಿಕರಣ ಕೆಲಸದ ಪ್ರಗತಿ ಪರಿಶೀಲಿಸಿದರು. ನಂತರ ಕರ್ನಾಟಕ ಪಬ್ಲಿಕ್ ಶಾಲೆಯ ಹೊಸ ಕಟ್ಟಡ ಕಾಮಗಾರಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ನಾಗಯ್ಯ ಹಿರೇಮಠ, ಗ್ರೇಡ್ – 2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್, ಲೋಕೋಪಯೋಗಿ ಇಲಾಖೆಯ ಎಇಇ ಮಹ್ಮದ ಇಸ್ಮಾಯಿಲ್, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ, ಗ್ರಾಮಾಡಳಿತ ಅಧಿಕಾರಿ ಮೈನೋದ್ದಿನ್, ವಿಠಲರಾವ ಸೇರಿದಂತೆ ಅನೇಕರು ಇದ್ದರು.

Continue Reading