ಚಿತ್ತಾಪುರ ಶಾಂತಿ ಸಭೆಯಲ್ಲಿ ಅಶಾಂತಿ, ಸಂಘಟನೆಗಳ ಮಧ್ಯೆ ಮೂಡದ ಒಮ್ಮತ

ಕಲಬುರಗಿ: ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ ಪ್ರಕರಣ ಸಂಬಂಧ ಕಲಬುರಗಿ ಜಿಲ್ಲಾಡಳಿತ ನಡೆಸಿದ ಶಾಂತಿ ಸಭೆಯಲ್ಲಿ ಅಶಾಂತಿ ಮೂಡಿದೆ. ಬೆಳಗ್ಗೆ 11:30ಕ್ಕೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ನೇತೃತ್ವದಲ್ಲಿ ಆರ್‌ಎಸ್‌ಎಸ್, ಭೀಮ್ ಆರ್ಮಿ ಸೇರಿದಂತೆ 10 ಸಂಘಟನೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಮೊದಲಿಗೆ ಡಿಸಿಗೆ ಲಿಖಿತ ಹೇಳಿಕೆ ಸಲ್ಲಿಸಿದ ಸಂಘಟನೆಗಳಿಗೆ ಸಭೆಯಲ್ಲಿ ಅನಿಸಿಕೆ ಹೇಳಲು ಸೂಚಿಸಲಾಯಿತು. ಈ ವೇಳೆ ಆರ್‌ಎಸ್‌ಎಸ್ ಲಾಠಿ ಬಿಟ್ಟು ರಾಷ್ಟ್ರಧ್ವಜ ಹಿಡಿದು ಪಥಸಂಚಲನ ಮಾಡುವಂತೆ ದಲಿತ ಸಂಘಟನೆಗಳು ಪಟ್ಟು ಹಿಡಿದವು. ಇದಕ್ಕೆ ಲಾಠಿ ಹಿಡಿದು ಪಥಸಂಚಲನ […]

Continue Reading

ಕಲಬುರಗಿ: ಸರಕಾರಿ ನೌಕರರಿಗೆ ಗೀತ ಗಾಯನ ಸ್ಪರ್ಧೆ

ಕಲಬುರಗಿ: ಸರಕಾರಿ ನೌಕರರ ಸಂಘದಿಂದ ಕರ್ನಾಟಕರಾಜ್ಯೋತ್ಸವ ಅಂಗವಾಗಿ ಸರಕಾರಿ ನೌಕರರಿಗೆ ಬೆಂಗಳೂರಿನ ಸಂಘದ ಆವರಣದಲ್ಲಿ ನ.8 ರಂದು ರಾಜ್ಯಮಟ್ಟದ ಜನಪದ, ಕನ್ನಡ ಗೀತೆಗಳ ಗುಂಪು ನೃತ್ಯ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ. ನೌಕರರ ಸಂಘವು ನೀಡಿರುವ ಆನ್‌ಲೈನ್ ಲಿಂಕ್ https://forms.gle/8pR3m5nXowwQzccs9 ಮೂಲಕ ನ.2ರ ಸಂಜೆ 5 ಗಂಟೆಯೊಳಗೆ ನೋಂದಾಯಿಸಿಕೊಳ್ಳಬೇಕು. ವಿಜೇತ ತಂಡಗಳಿಗೆ ಪ್ರಥಮ 1,00,000 ರೂ., ದ್ವಿತೀಯ 75,000 ರೂ. ಹಾಗೂ ತೃತೀಯ ಬಹುಮಾನ 50,000 […]

Continue Reading

ಬಣ್ಣಬಣ್ಣದ ಮಾತನಾಡಿ 3 ಕೋಟಿ ವಂಚನೆ: ಮಹಿಳೆಯನ್ನು ಅಟ್ಟಾಡಿಸಿ ಹೊಡೆದ ಜನ

ಹಾಸನ: ಬಣ್ಣಬಣ್ಣದ ಮಾತನಾಡಿ ಹಲವಾರು ಜನರಿಂದ ಲಕ್ಷ ಲಕ್ಷ ಹಣ ಪಡೆದು ವಂಚಿಸಿದ್ದ ಮಹಿಳೆಯನ್ನು ಜನ ಅಟ್ಟಾಡಿಸಿ ಹೊಡೆದ ಘಟನೆ ಹಾಸನದ ಅರಳೆಪೇಟೆಯಲ್ಲಿ ನಡೆದಿದೆ. ಟೈಲರ್ ಶಾಪ್ ನಡೆಸುತ್ತಿದ್ದ ಮಹಿಳೆ ಹೇಮಾವತಿ ಎಂಬಾಕೆ, ಹಲವರ ಬಳಿ ಚಿಟ್ಸ್‍ನಲ್ಲಿ 1 ಕೋಟಿ ರೂ. ಚೀಟಿ ಹಾಕಿದ್ದೆನೆ ಎಂದು ಸ್ಲಿಪ್ ತೋರಿಸಿ ಹಣ ಪಡೆದಿದ್ದಳು. ಅಲ್ಲದೆ ಮಗಳನ್ನು ವಿದೇಶದಲ್ಲಿ ಇಂಜಿನಿಯರಿಂಗ್ ಓದಿಸುವುದಕ್ಕೆ, ಒಂದು ಕೋಟಿ ರೂ. ಮನೆ ಖರೀದಿಸಿದ್ದೆನೆಂದು ಹೇಳಿ ಹಲವರಿಂದ ಸಾಲ ಪಡೆದಿದ್ದಳು. ಚಿನ್ನಾಭರಣ ಅಡವಿಟ್ಟು ಜನ ಲಕ್ಷ […]

Continue Reading

ವಾಯುಭಾರ ಕುಸಿತ ಭಾರಿ ಮಳೆ: ರಾಜ್ಯದ 11 ಜಿಲ್ಲೆಗೆ 2 ದಿನ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ, ಅಕ್ಟೋಬರ್ 25 ಹಾಗೂ 26 ರಂದು 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಪೂರ್ವ ಅರಬ್ಬಿ ಸಮುದ್ರದಲ್ಲಿ ಪಣಜಿಯಿಂದ 380 ಕಿ.ಮೀ ದೂರದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದೆ. ಹಾಗೆಯೇ, ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಮತ್ತೊಂದು ತೀವ್ರ ವಾಯುಭಾರ ಕುಸಿತ ಉಂಟಾಗಿದ್ದು, ಇದು ಮತ್ತಷ್ಟು ತೀವ್ರಗೊಂಡು ಅಕ್ಟೋಬರ್ 27ರಂದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರದ ವಿಜ್ಞಾನಿ ಸಿ.ಎಸ್ ಪಾಟೀಲ್ ಮಾಹಿತಿ […]

Continue Reading

ಹಾವೇರಿ: ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ಮೂವರು ದುರ್ಮರಣ

ಹಾವೇರಿ: ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಮೂವರು ಬಲಿಯಾಗಿದ್ದಾರೆ. ಮೃತರನ್ನು ಚಂದ್ರಶೇಖರ ಕೋಡಿಹಳ್ಳಿ (70), ಗನಿಸಾಬ್ ಬಂಕಾಪುರ (70) ಹಾಗೂ ಭರತ್ (22) ಎಂದು ಗುರುತಿಸಲಾಗಿದ್ದು, 5ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಹಾವೇರಿ ವೀರಭದ್ರಶ್ವರ ದೇವಸ್ಥಾನದ ಮುಂದೆ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಭಾಗವಹಿಸಿ ಮನೆಗೆ ಹೋಗುತ್ತಿದ್ದ ಹೋರಿ ತಿವಿದು ಚಂದ್ರಶೇಖರ ಎಂಬ ವಯೋವೃದ್ದ ಸಾವನ್ನಪ್ಪಿದ್ದಾರೆ. ದೇವಿಹೊಸೂರು ಗ್ರಾಮದಲ್ಲಿ ಹೋರಿ ಹಬ್ಬದಲ್ಲಿ ಭಾಗವಹಿಸಿದ ಹೋರಿ ಮನೆಗೆ ನುಗ್ಗಿ ವಯೋವೃದ್ದ ಗನಿಸಾಬ್ ಬಂಕಾಪುರ ಎಂಬುವವರನ್ನು […]

Continue Reading

ಭಾರತೀಯ ಸಾಂಸ್ಕೃತಿಕ ಶ್ರೀಮಂತಿಕೆಗೆ ಬಂಜಾರರ ಕೊಡುಗೆ ಅಪಾರ

ಕಲಬುರಗಿ: ಆಧುನಿಕತೆ ಭರಾಟೆಯಲ್ಲಿ ಬಂಜಾರ ಸಮುದಾಯದವರು ತಮ್ಮದೆಯಾದ ವೇಷ-ಭೂಷಣ, ಕಲೆ, ಭಾಷೆ, ಸಂಸ್ಕೃತಿ, ಪರಂಪರೆಯನ್ನು ಇಂದಿಗೂ ಕೂಡಾ ಸಂರಕ್ಷಿಸಿಕೊಂಡು ಬಂದವರು. ಯಾವುದೆ ಹಬ್ಬ, ಉತ್ಸವ, ಆಚರಣೆಗಳನ್ನು ಶೃದ್ಧೆ, ಭಕ್ತಿಯಿಂದ ಮಾಡುವ ಮೂಲಕ ಮುಂದಿನ ಪೀಳಿಗೆಗೆ ವರ್ಗಾಯಿಸುವ ಬಂಜಾರರು ಭಾರತೀಯ ಸಾಂಸ್ಕೃತಿಕ ಶ್ರೀಮಂತಿಕೆಗೆ ಅಪಾರವಾದ ಕೊಡುಗೆ ನೀಡುತ್ತಿದ್ದಾರೆ ಎಂದು ಬಳಿರಾಮ ಮಹಾರಾಜರು ಅಭಿಮತಪಟ್ಟರು. ಅಫಜಲಪುರ ತಾಲೂಕಿನ ಗೊಬ್ಬೂರ ವಾಡಿಯ ತಾಂಡಾದ ಸಂತ ಸೇವಾಲಾಲ್ ಆಶ್ರಮದಲ್ಲಿ ದೀಪಾವಳಿ ಪಾಡ್ಯಮಿಯಂದು ಬುಧವಾರ ಜರುಗಿದ ‘ಬಂಜಾರಾ ದೀಪಾವಳಿ ಸಂಭ್ರಮ’ದಲ್ಲಿ ಬಾಲಕಿಯರು, ಮಹಿಳೆಯರಿಂದ ಜರುಗಿದ […]

Continue Reading

ಹಾವೇರಿ: ರಾಘವೇಂದ್ರ ಸ್ವಾಮಿ ಮಠದ ಬೀಗ ಮುರಿದು 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ

ಹಾವೇರಿ: ನಗರದಲ್ಲಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ಕಳ್ಳರು ಬೀಗ ಮುರಿದು 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ ‌ಮಾಡಿದ್ದಾರೆ. ನಗರದ ಹೃದಯ ಭಾಗದಲ್ಲಿರುವ ಮಠದಲ್ಲಿ ಎರಡು ಕೋಣೆಯ ಬೀಗ ಮುರಿದು ಕಳ್ಳತನ ಮಾಡಿದ್ದಾರೆ. ಮಠದಲ್ಲಿರುವ ಚಿನ್ನಾಭರಣ, ಬೆಳ್ಳಿಯ ಆಭರಣ ಮತ್ತು ತಾಮ್ರದ ವಸ್ತುಗಳನ್ನು ಖದೀಮರು ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳವಾದ ವಸ್ತುಗಳು1) 15 ಗ್ರಾಂ ಬಂಗಾರದ ಸರದ ಹುಕ್ಕು, 1,79,550 ರೂ. ಮೌಲ್ಯದ್ದು2) 18 ಗ್ರಾಂ ಬಂಗಾರದ […]

Continue Reading

ಗಂಡನ ಮನೆಯಲ್ಲಿ ಕಿರುಕುಳ ಆರೋಪ: ನದಿಗೆ ಹಾರಿ ಪ್ರಾಣಬಿಟ್ಟ ತಾಯಿ, ಮಗಳು

ಹಾವೇರಿ: ಪತಿ ಕುಟುಂಬ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು, ಮಹಿಳೆ ತನ್ನ ಮಗಳ ಜೊತೆ ವರಾದ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ತಾಲೂಕಿನ ವರದಾಹಳ್ಳಿ ಗ್ರಾಮದ ಬಳಿ ನಡೆದಿದೆ. ಸವಿತಾ ನಾಗರಾಜ್ ಉಳ್ಳಾಗಡ್ಡಿ (38) ಹಾಗೂ ಕಾವ್ಯಾ (12) ಆತ್ಮಹತ್ಯೆಗೆ ಶರಣಾದ ತಾಯಿ, ಮಗಳು. ಗಂಡನ ಮನೆಯಲ್ಲಿ ದಿನನಿತ್ಯ ಭಿನ್ನಾಭಿಪ್ರಾಯ ಹಾಗೂ ಕಲಹಗಳು ನಡೆಯುತ್ತಿದ್ದವು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ರವಿವಾರ (ಅ.19) ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. […]

Continue Reading

ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧಾರ

ಶಿವಮೊಗ್ಗ: ಸರ್ಕಾರಿ ಶಾಲೆಗಳಿಗೆ ಸೇರಬೇಕೆಂದು ಕಾದು ಕುಳಿತ ಶಿಕ್ಷಕರಿಗೆ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23 ರಿಂದ ನವೆಂಬರ್ 9ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಅನುದಾನಿತ […]

Continue Reading

ಸೇಡಂ ಆರ್‌ಎಸ್ಎಸ್ ಪಥಸಂಚಲನದಲ್ಲಿ ಸರ್ಕಾರಿ ವೈದ್ಯ ಭಾಗಿ

ಕಲಬುರಗಿ: ಸೇಡಂನಲ್ಲಿ ರವಿವಾರ ನಡೆದ ಆರ್‌ಎಸ್ಎಸ್ ಪಥಸಂಚಲನ ಕಾರ್ಯಕ್ರಮದಲ್ಲಿ ಸರ್ಕಾರಿ ವೈದ್ಯರೊಬ್ಬರು ಭಾಗಿಯಾಗಿದ್ದಾರೆ. ಸೇಡಂ ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ನಾಗರಾಜ್ ಮನ್ನೆ ಗಣವೇಶಧಾರಿಯಾಗಿ ಪಥ ಸಂಚಲನದಲ್ಲಿ ಭಾಗಿಯಾಗಿದ್ದಾರೆ. ಪಥಸಂಚಲನದಲ್ಲಿ ಭಾಗಿಯಾದ ವೈದ್ಯರ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅಕ್ಟೋಬರ್ 12 ರಂದು ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ನಡೆದ ಪಥಸಂಚಲನ ಕಾರ್ಯಕ್ರಮದಲ್ಲಿ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಭಾಗವಹಿಸಿದ್ದಕ್ಕೆ ಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಅವರು ಇಲಾಖಾ ತನಿಖೆ ಕಾಯ್ದಿರಿಸಿ ಅಮಾನತು ಮಾಡಿದ್ದರು. […]

Continue Reading