ವಿಶ್ವ ಮಟ್ಟದಲ್ಲಿ ಕನ್ನಡದ ಕಂಪು ಪಸರಿಸಿದ ಬಾನು ಮುಷ್ತಾಕ್, ದೀಪಾ ಭಾಸ್ತಿ

ಕಲಬುರಗಿ: ಕನ್ನಡದ ಮೇರು ಲೇಖಕಿ, ಸಾಹಿತಿ ಬಾನು ಮುಷ್ತಾಕ್ ಅವರ ‘ಎದೆಯ ಹಣತೆ’ ಕಥಾ ಸಂಕಲನ ಮತ್ತು ಇದರ ಅನುವಾದಕಿಯರಾದ ದೀಪಾ ಭಾಸ್ತಿ ಅವರಿಗೆ ವಿಶ್ವದ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ದೊರೆತಿರುವುದು ಸಮಸ್ತ ಕನ್ನಡಿಗರಿಗೆ ದೊರೆತ ಗೌರವವಾಗಿದೆ, ತನ್ಮೂಲಕ ಕನ್ನಡದ ಕಂಪು ವಿಶ್ವ ಮಟ್ಟದಲ್ಲಿ ಪಸರಿಸಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಮುಕ್ತ ಕಂಠದಿಂದ ಶ್ಲಾಘಿಸಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನ ಸಕ್ಸಸ್ ಕಂಪ್ಯೂಟರ ತರಬೇತಿ ಸಂಸ್ಥೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ […]

Continue Reading

ಶಿರಸ್ತೆದಾರ್‌ ಮೇಲೆ ಹಲ್ಲೆ: ತಹಸೀಲ್ದಾರ್ ವಿರುದ್ಧ ಎಫ್‌ಐಆರ್‌

ಬೀದರ್: ಚಿಟಗುಪ್ಪ ತಹಸೀಲ್ದಾರ್ ಕಚೇರಿಯ ಶಿರಸ್ತೆದಾರ್ ಸುಭಾಷಚಂದ್ರ ಅವರನ್ನು ಅಪಹರಿಸಿ ತೀವ್ರವಾಗಿ ಹಲ್ಲೆ ನಡೆಸಿದ ಆರೋಪದಲ್ಲಿ ಗ್ರೇಡ್-2 ತಹಸೀಲ್ದಾರ್ ಜಯಶ್ರೀ ಮತ್ತು ಅವರ ಪತಿ ಶಾರಧಕ ಸೇರಿ ಐವರ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಚಿಟಗುಪ್ಪ ತಹಸೀಲ್ದಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಭಾಷಚಂದ್ರ ಹಾಗೂ ಜಯಶ್ರೀ ನಡುವೆ ಕಚೇರಿ ಕೆಲಸದಲ್ಲಿ ತಕರಾರು ನಡೆದಿದ್ದ ವಿಚಾರಕ್ಕೆ ಹಲ್ಲೆ ನಡೆದಿದೆ ಎನ್ನಲಾಗುತ್ತಿದೆ. ನಡೆದಿದ್ದು ಏನು ? ಮೇ.16 ರಂದು ಕೆಲಸ ಮುಗಿಸಿಕೊಂಡು ಚಿಟಗುಪ್ಪದಿಂದ ಸ್ವಗ್ರಾಮ ಕಲಬುರಗಿ ಜಿಲ್ಲೆಯ […]

Continue Reading

ಕನ್ನಡಿಗರ ಸಾಧನೆಗಳು ಸಾರುವ ಭಂಕೂರ್‌ನ ಶಾಸನಗಳು: ಮುಡುಬಿ ಗುಂಡೆರಾವ

ಕಲಬುರಗಿ: ಸಮಸ್ತ ಕನ್ನಡಿಗರ ಪ್ರಾಚೀನ ಸಾಧನೆಗಳು ಪ್ರತಿಪಾದಿಸುವ ಭಂಕೂರ ಗ್ರಾಮದ ಐತಿಹಾಸಿಕ ಸ್ಮಾರಕಗಳು, ವೀರಗಲ್ಲುಗಳು, ಶಿಲ್ಪ ಕಲೆಗಳು, ಶಾಸನಗಳು ಸಾವಿರಾರು ವರ್ಷದ ರೋಚಕ ಇತಿಹಾಸ ಸಾರುತ್ತವೆ ಎಂದು ಸಂಸೋಧಕ- ಸಾಹಿತಿ ಮುಡುಬಿ ಗುಂಡೆರಾವ ಅಭಿಮತ ವ್ಯಕ್ತಪಡಿಸಿದರು. ಶಹಬಾದ ತಾಲೂಕಿನ ಭಂಕೂರ ಗ್ರಾಮದ ಜೈನ ಶಾಂತಿನಾಥ ತೀರ್ಥಂಕರ ಮಂದಿರದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-16ರಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡುತ್ತ, ಮಾತನಾಡಿದ ಅವರು, ಭಂಕೂರಿನಲ್ಲಿ […]

Continue Reading

ಭಯೋತ್ಪಾದನೆ ನಿರ್ಮೂಲನೆಗೆ ದೃಢ ಸಂಕಲ್ಪದೊಂದಿಗೆ ಕಾರ್ಯನಿರ್ವಹಣೆ ಅಗತ್ಯ

ಕಲಬುರಗಿ: ನಮ್ಮ ದೇಶ ಸೇರಿದಂತೆ ವಿಶ್ವದಲ್ಲಿ ದಿನನಿತ್ಯ ನೂರಾರು ಅಮಾಯಕರ ಸಾವಿಗೆ ಕಾರಣವಾಗಿ, ಜಗತ್ತನ್ನು ತಲ್ಲಣಗೊಳಿಸಿ, ಅಶಾಂತಿಯುತ ವಾತಾವರಣದ ಸೃಷ್ಟಿಗೆ ಕಾರಣಿಕೃತವಾದ ಭಯೋತ್ಪಾದನೆ ಎಂಬುದು ದೊಡ್ಡ ಸಾಮಾಜಿಕ ಪಿಡುಗಾಗಿದೆ. ರಾಷ್ಟ್ರದ ಶಾಂತಿ, ಅಭಿವೃದ್ಧಿಗೆ ಇದು ತೊಡಕಾಗಿದೆ, ಅದರ ನಿರ್ಮೂಲನೆಗೆ ಎಲ್ಲರೂ ಜೊತೆಗೂಡಿ ಬೇರು ಸಹಿತ ಸರ್ವನಾಶ ಮಾಡುವ ದೃಢ ಸಂಕಲ್ಪದೊಂದಿಗೆ ಕಾರ್ಯನಿರ್ವಹಿಸಬೇಕಾಗಿದೆ‌ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಗಂಗಾ ನಗರದ ವಿವೇಕಾನಂದ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಏರ್ಪಡಿಸಿದ್ದ […]

Continue Reading

ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

ಕಲಬುರಗಿ: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿ ದೆಸೆಯಿಂದ ಪರಿಸರ ಪ್ರಜ್ಞೆ ಬೆಳೆಸಿಕೊಂಡು, ಪರಿಸರ ಸಂರಕ್ಷಣೆ ಮಾಡುವುದರ ಜೊತೆಗೆ ಬೇರೊಬ್ಬರಿಗೂ ಇದರ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಕುಸನೂರ ಗ್ರಾ.ಪಂ ಅಧ್ಯಕ್ಷ ಕುಪೇಂದ್ರ ಬರಗಾಲಿ ಹೇಳಿದರು. ನಗರದ ಸಮೀಪದ ಕುಸನೂರ ಗ್ರಾಮದ ಗವಿಸಿದ್ದೇಶ್ವರ ದೇವಸ್ಥಾನದಲ್ಲಿ ಹಿಂಗುಲಾಂಬಿಕಾ ಬಿ.ಎಡ್ ಕಾಲೇಜಿನ ಒಂದು ವಾರದ ಎನ್.ಎಸ್.ಎಸ್ ಶಿಬಿರಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದ ಅವರು, ಪರಿಸರ ಉಳಿದರೆ ಮಾತ್ರ ಸಕಲ ಜೀವಿಗಳು ಉಳಿಯಲು ಸಾಧ್ಯ ಎಂದರು. ಜೇವರ್ಗಿ ಸರ್ಕಾರಿ ಪಿಯು […]

Continue Reading

ಗ್ರಾಹಕರಿಗೆ ಗುಣಮಟ್ಟದ ಸರಕುಗಳು ದೊರೆಯಲಿ

ಕಲಬುರಗಿ: ಜನಸಂಖ್ಯಾ ಸ್ಫೋಟ, ಮಾನವನ ದುರಾಸೆ, ಮೋಸ ಸೇರಿದಂತೆ ಮುಂತಾದ ಕಾರಣಗಳಿಂದ ಸರಕುಗಳಲ್ಲಿ ಕಲಬೆರಕೆ ವ್ಯಾಪಕವಾಗಿದೆ, ಗುಣಮಟ್ಟದ ಪ್ರಮಾಣ ಕಡಿಮೆಯಾಗಿರುವುದು ಗೋಚರಿಸುತ್ತಿದೆ. ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಗುಣಮಟ್ಟದ ಸರಕುಗಳ ಉತ್ಪಾದನೆಯ ಪ್ರಮಾಣ ಹೆಚ್ಚಳವಾಗಬೇಕಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ, ಸಾಮಾಜಿಕ ಚಿಂತಕ ಎಚ್.ಬಿ ಪಾಟೀಲ ಆಶಯ ವ್ಯಕ್ತಪಡಿಸಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ್ಲಿನ ಸನಲೈಟ್ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ‘ವಿಶ್ವ ಮಾಪಕ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಂದು […]

Continue Reading

ಮಾನವ ಸಂಪನ್ಮೂಲ ಸಂಸ್ಥೆಯ ಬೆನ್ನೆಲುಬು

ಕಲಬುರಗಿ: ಯಾವುದೆ ಒಂದು ಕಂಪನಿ ಅಥವಾ ಸಂಸ್ಥೆಗೆ ಸರಿಯಾದ ಅಭ್ಯರ್ಥಿಯನ್ನು ಆಯ್ಕೆ ಮಾಡುವುದರಿಂದ, ವೇತನ, ಸಂಘರ್ಷ ಪರಿಹಾರ, ಉದ್ಯೋಗಿಗಳಿಗೆ ತರಬೇತಿ, ಕಾನೂನು ಸಮಸ್ಯೆಗಳನ್ನು ನಿರ್ವಹಿಸುವುದು, ಉದ್ಯೋಗಿಗಳನ್ನು ಒಗ್ಗೂಡಿಸುವುದು ಸೇರಿದಂತೆ ಮುಂತಾದ ಪ್ರಮುಖ ಕಾರ್ಯಗಳು ಮಾಡುವ ಮಾನವ ಸಂಪನ್ಮೂಲ ವಿಭಾಗವು ಸಂಸ್ಥೆಯ ಬೆನ್ನೆಲುಬಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಜರುಗಿದ ‘ಅಂತಾರಾಷ್ಟ್ರೀಯ ಮಾನವ ಸಂಪನ್ಮೂಲ […]

Continue Reading

ನೆಲದ ಸಂಸ್ಕೃತಿ ಸಾರುವ ಹೊಡಲ್ ಸ್ಮಾರಕಗಳು: ಮುಡುಬಿ ಗುಂಡೇರಾವ

ಕಲಬುರಗಿ: ಕನ್ನಡ ನಾಡು-ನುಡಿ, ಸಂಸ್ಕೃತಿಯನ್ನು ಸಾರುವ ಹೊಡಲ ಗ್ರಾಮದ ರಾಮಲಿಂಗೇಶ್ವರ ದೇವಾಲಯ ಮತ್ತು ಸ್ಮಾರಕಗಳ ಕೊಡುಗೆ ಅಪಾರವಾಗಿವೆ ಎಂದು ಸಂಶೋಧಕ-ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಕಮಲಾಪುರ ತಾಲೂಕಿನ ಹೊಡಲ್ ಗ್ರಾಮದ ರಾಮಲಿಂಗೇಶ್ವರ ದೇವಾಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-15ರಲ್ಲಿ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದ ಅವರು, ನಾಡಿನ ಭವ್ಯ ಪರಂಪರೆಯ ಪ್ರತೀಕವಾದ ಸ್ಮಾರಕಗಳ ಬಗ್ಗೆ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ. ಇಲ್ಲಿಯ ಒಂದೊಂದು ಕಲ್ಲು, ಶಿಲ್ಪಗಳು, […]

Continue Reading

ಬಹುಮುಖ ವ್ಯಕ್ತಿತ್ವದ ಮೇರು ಸಾಹಿತಿ ಡಾ.ಗಿರೀಶ್ ಕಾರ್ನಾಡ

ಕಲಬುರಗಿ: ಗಿರೀಶ್ ಕಾರ್ನಾಡ ಅವರು ನಾಟಕಕಾರ, ರಂಗಕರ್ಮಿ, ಲೇಖಕ, ಸಿನಿಮಾ ನಟ, ನಿರ್ದೇಶಕ, ಚಿಂತಕ, ಹೋರಾಟಗಾರ, ವಿಮರ್ಶಕರಾಗಿ ಹೀಗೆ ವಿವಿಧ ಮುಖಗಳುಳ್ಳ ಬಹುಮುಖ ವ್ಯಕ್ತಿತ್ವದ ಮಹಾನ ಸಾಧಕ. ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟಿರುವ ಕೊಡುಗೆ ಅನನ್ಯವಾಗಿದೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಹೊರವಲಯ ಉಪಳಾಂವನ ಶ್ರೀರಾಮ ಕನ್ನಡ ಕಾನ್ವೆಂಟ್ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಜರುಗಿದ ‘ಡಾ.ಗಿರೀಶ್ ಕಾರ್ನಾಡ್‌ರ 87ನೇ ಜನ್ಮದಿನಾಚರಣೆ’ಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, […]

Continue Reading

ನಾಡಿಗೆ ಕನ್ನಡ ಭಾಷೆಯನ್ನು ಬೋಧಿಸಿದ ಬೋಧನ ಗ್ರಾಮ: ಮುಡುಬಿ ಗುಂಡೇರಾವ

ಕಲಬುರಗಿ: ತಾಲೂಕಿನ ಬೋಧನ ಗ್ರಾಮವು ಪ್ರಾಚೀನ ಕಾಲದಲ್ಲಿ ‘ಸರಸ್ವತಿಪುರ’ ಎಂದು ನಾಡಿಗೆ ಚಿರಪರಿಚಿತವಾಗಿದೆ. ನಾಡಿಗೆ ಕನ್ನಡ ಭಾಷೆಯನ್ನು ಬೋಧಿಸಿದ ‘ಬೋಧನ’ ಗ್ರಾಮವಾಗಿದೆ ಎಂದು ಸಂಶೋಧಕ ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಆಳಂದ ತಾಲೂಕಿನ ಬೋಧನ ಗ್ರಾಮದ ಮಲ್ಲಿಕಾರ್ಜುನ ದೇವಾಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-14ರಲ್ಲಿ ಜರುಗಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮದ ಮಲ್ಲಿಕಾರ್ಜುನ ದೇವಾಲಯದಲ್ಲಿ ಪ್ರಾಚೀನ ಕಾಲದಲ್ಲಿ ಕನ್ನಡ ವಿಷಯ […]

Continue Reading