ಜೇವರ್ಗಿ ಸರ್ಕಾರಿ ಪಿಯು ಕಾಲೇಜು: ಸಂಭ್ರಮ-ಸಡಗರದಿಂದ ಪ್ರಾರಂಭ

ಕಲಬುರಗಿ: ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ 2025-26ನೇ ಶೈಕ್ಷಣಿಕ ಸಾಲಿನ ಕಾಲೇಜು ಪ್ರಾರಂಭೋತ್ಸವ ಅತ್ಯಂತ ಸಂಭ್ರಮ- ಸಡಗರದಿಂದ ಸೋಮವಾರ ಜರುಗಿತು. ತಳಿರು-ತೋರಣಗಳಿಂದ ಅಲಂಕರಿಸಿ, ರಂಗೋಲಿ ಬಿಡಿಸಿ, ಎಲ್ಲಾ ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ, ಸಿಹಿ ವಿತಿರಿಸಿ, ಆತ್ಮೀಯವಾಗಿ ಸ್ವಾಗತಿಸಲಾಯಿತು. ಕಾಲೇಜಿನ ವತಿಯಿಂದ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡ ಕಾಲೇಜಿನ ಪ್ರಾಚಾರ್ಯ ರವೀಂದ್ರಕುಮಾರ ಸಿ.ಬಟಗೇರಿ ಮಾತನಾಡಿ, ನಮ್ಮ ಕಾಲೇಜು ಜೇವರ್ಗಿ ತಾಲೂಕಿನಲ್ಲಿ ಅತ್ಯಂತ ಹಿರಿಯ ಕಾಲೇಜಾಗಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮುನ್ನುಡಿ ಬರೆದಿದೆ. […]

Continue Reading

ರೈತರು ಬಿತ್ತನೆ ಮಾಡುವಾಗ ಜಾಗೃತಿ ವಹಿಸಬೇಕು

ಕಲಬುರಗಿ: ರೈತರು ನಕಲಿ ಬೀಜಗಳಿಂದ ಮುನ್ನೆಚ್ಚರಿಕೆ ವಹಿಸಿ, ಬಿತ್ತನೆ ಮಾಡುವಾಗ ಜಾಗೃತಿ ವಹಿಸುವದು ಅಗತ್ಯ ಎಂದು ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್.ಬಿರಾದಾರ ರೈತರಿಗೆ ಸಲಹೆ ನೀಡಿದರು. ಆಳಂದ ತಾಲೂಕಿನ ತೆಲ್ಲೂರ ಗ್ರಾಮದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಮುಂಗಾರು ಕೃಷಿ ಜಾಗೃತಿ ಮತ್ತು ರೈತರೊಂದಿಗೆ ಸಂವಾದ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇನ್ನು ಕೆಲವೆ ದಿವಸಗಳಲ್ಲಿ ಮುಂಗಾರು ಮಳೆ ಆಗಮಿಸಲಿದೆ, ರೈತರು ಬಿತ್ತನೆ ಕಾರ್ಯ ಮಾಡಬೇಕಾಗುತ್ತದೆ. ಬಿತ್ತನೆ ಬೀಜಗಳನ್ನು ಖರೀದಿಸುವಾಗ ಲೇಬಲ್, ಅಗಮಾರ್ಕ […]

Continue Reading

ಮಕ್ಕಳ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಪ್ರಮುಖ: ಎಚ್.ಬಿ ಪಾಟೀಲ

ಕಲಬುರಗಿ: ಮಕ್ಕಳನ್ನು ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿಸಿ, ಸಮಾಜದ ದೊಡ್ಡ ಆಸ್ತಿಯನ್ನಾಗಿಸುವಲ್ಲಿ ಪಾಲಕರ ಪಾತ್ರ ಪ್ರಮುಖವಾಗಿದೆ. ಮಕ್ಕಳು ತಮ್ಮ ಪಾಲಕ-ಪೋಷಕರ ಶ್ರಮ ಮರೆಯಬಾರದು. ಅವರಿಗೆ ಗೌರವಯುತವಾಗಿ ಕಾಣುವುದು ಅಗತ್ಯ. ಮಕ್ಕಳು ಪಾಲಕರನ್ನು ಎಂದಿಗೂ ವೃದ್ಧಾಶ್ರಮಕ್ಕೆ ನೂಕುವ ಪ್ರವೃತ್ತಿ ಬೆಳಿಸಿಕೊಳ್ಳಬೇಡಿ ಎಂದು ಉಪನ್ಯಾಸಕ, ಸಾಮಾಜಿಕ ಚಿಂತಕ ಎಚ್.ಬಿ ಪಾಟೀಲ ಮಾರ್ಮಿಕವಾಗಿ ಹೇಳಿದರು. ನಗರದ ಆಳಂದ ರಸ್ತೆಯ ಶಿವ ನಗರದ ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ‘ಜಾಗತಿಕ ಪಾಲಕರ ದಿನಾಚರಣೆ’ ಉದ್ಘಾಟಿಸಿಯಲ್ಲಿ […]

Continue Reading

ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಮತ್ತು ಸರ್ಕಾರಿ ಸೌಲಭ್ಯಗಳು ದೊರೆಯಲಿ

ಕಲಬುರಗಿ: ಹೈನೋದ್ಯಮ್ಯಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವುದು, ಸೂಕ್ತ ಫಲಾನುಭವಿಗೆ ಸಾಲ ಸೌಲಭ್ಯ, ಸಬ್ಸಿಡಿ, ಶೆಡ್ ನಿರ್ಮಾಣಕ್ಕೆ ಧನ ಸಹಾಯ, ಮೇವು ಕತ್ತರಿಸುವ ಹಾಗೂ ಹಾಲೂ ಕರೆಯುವ ಯಂತ್ರ ನೀಡುವುದು ಸೇರಿದಂತೆ ಇನ್ನಿತರ ಸರ್ಕಾರಿ ಸೌಲಭ್ಯಗಳು ದೊರೆಯಬೇಕು. ಅಂದಾಗ ಮಾತ್ರ ಹೈನುಗಾರಿಕೆಯತ್ತ ಜನರ ಒಲವು ಹೆಚ್ಚಾಗಲು ಸಾಧ್ಯ ಎಂದು ಹಿರಿಯ ಹೈನುಗಾರಿಕೆ-ರೈತ ಶಾಂತಪ್ಪ ದುಧನ್ ಮಾರ್ಮಿಕವಾಗಿ ನುಡಿದರು. ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ತಮ್ಮ ಹೈನುಗಾರಿಕೆ ಕೇಂದ್ರದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಏರ್ಪಡಿಸಿದ್ದ ‘ವಿಶ್ವ […]

Continue Reading

ಕಲಬುರಗಿ: ನಾಳೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಕಲಬುರಗಿ: ಮಹಾಸಾದ್ವಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ 603ನೇ ಜಯಂತ್ಯೋತ್ಸವ ಆಚರಣೆ ಮತ್ತು ರೆಡ್ಡಿ ಸಮಾಜದ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಶರಣಬಸಪ್ಪ ಕಾಮರೆಡ್ಡಿ ತಿಳಿಸಿದ್ದಾರೆ. ನಗರದ ಖೂಬಾ ಕಲ್ಯಾಣ ಮಂಟಪದಲ್ಲಿ ಜೂ.1 ರಂದು ಬೆಳಿಗ್ಗೆ 11 ಗಂಟೆಗೆ ಮಹಾಸಾದ್ವಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ 603ನೇ ಜಯಂತ್ಯೋತ್ಸವ ಆಚರಣೆ ಮತ್ತು ರೆಡ್ಡಿ ಸಮಾಜದ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದ್ದಾರೆ.

Continue Reading

ಸೇವೆಯಲ್ಲಿ ಕರ್ತವ್ಯ ಬದ್ಧತೆ, ಪ್ರಾಮಾಣಿಕತೆ ಮುಖ್ಯ

ಕಲಬುರಗಿ: ಸರ್ಕಾರಿ ನೌಕರಿ ಪಡೆಯುವುದು, ದೀರ್ಘಕಾಲ ಸೇವೆ ಸಲ್ಲಿಸುವುದು ದೊಡ್ಡ ಸಾಧನೆಯಲ್ಲ. ಬದಲಿಗೆ ದೊರೆತ ಹುದ್ದೆಗೆ ಪ್ರಾಮಾಣಿಕತೆ, ನಿಷ್ಠೆ ಹಾಗೂ ಕರ್ತವ್ಯಬದ್ಧತೆಯಿಂದ ಸೇವೆ ಸಲ್ಲಿಸಿ, ನ್ಯಾಯ ಒದಗಿಸುವುದು ಮುಖ್ಯ. ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ದಕ್ಷತೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿ, ಇಲಾಖೆ ಹಾಗೂ ಸರ್ಕಾರಿ ನೌಕರರಿಗೆ ಮಲ್ಲಿಕಾರ್ಜುನ ಜಮಾದಾರ ಮತ್ತು ದಾನಮ್ಮ ಅವರು ಮಾದರಿಯಾಗಿದ್ದಾರೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮನೀರ್ ಅಹಮ್ಮದ್ ಮಾರ್ಮಿಕವಾಗಿ ಹೇಳಿದರು. ನಗರದ ಸಾರ್ವಜನಿಕ ಉದ್ಯಾನವನದಲ್ಲಿರುವ ಕಿರು ಮೃಗಾಲಯದಲ್ಲಿ ಅರಣ್ಯ […]

Continue Reading

ತಂಬಾಕು, ಧೂಮಪಾನ ಸೇವನೆ ಬೇಡ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ತಂಬಾಕು, ಧೂಮಪಾನ ಸೇವನೆಯಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ದುಷ್ಪರಿಣಾಮವಾಗಿ ಜೀವಕ್ಕೆ ಗಂಡಾಂತರ, ಹೀಗಾಗಿ ಇವುಗಳ ಸೇವನೆ ಮಾಡಬಾರದು ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದಲ್ಲಿರುವ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಶನಿವಾರ ಜರುಗಿದ ‘ವಿಶ್ವ ತಂಬಾಕು ರಹಿತ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ದೇಶದ ಒಟ್ಟು ಜನಸಂಖ್ಯೆಯಲ್ಲಿ ಅರ್ಧದಷ್ಟು ಯುವ ಶಕ್ತಿಯಿದೆ. ರಾಷ್ಟ್ರದ ಅಭಿವೃದ್ಧಿಯಲ್ಲಿ ಸದೃಢ ಮಾನವ ಸಂಪನ್ಮೂಲ ತುಂಬಾ […]

Continue Reading

ಸಮಾಜಕ್ಕೆ ಅಹಿಲ್ಯಾಬಾಯಿ ಹೋಳ್ಕರ ಕೊಡುಗೆ ಅಪಾರ: ಎಚ್.ಬಿ ಪಾಟೀಲ

ಕಲಬುರಗಿ: ಮಹಿಳಾ ಸ್ವಾತಂತ್ರ ಹೋರಾಟಗಾರ್ತಿ, ಹಿಂದುಳಿದ, ಮಹಿಳೆಯರ, ಬಡವರ ಪರ ಹೋರಾಟ ಮಾಡಿ, ಪ್ರತಿಯೊಬ್ಬರಿಗೂ ಶಿಕ್ಷಣ ದೊರೆಯಲು ಶ್ರಮಿಸಿದ, ಅನೇಕ ಕೆರೆ-ಕಟ್ಟೆಗಳನ್ನು ನಿರ್ಮಿಸಿ ಸಮಾಜಪರ ಕೆಲಸಗಳನ್ನು ಮಾಡಿದ ಅಹಿಲ್ಯಾಬಾಯಿ ಹೋಳ್ಕರ ಅವರು ಬಹುಮುಖಿ ವ್ಯಕ್ತಿತ್ವದ ಮಹಾನ ಸಾಧಕಿಯಾಗಿ ಭಾರತೀಯ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಜರುಗಿದ ‘ಅಹಿಲ್ಯಾಬಾಯಿ ಹೋಳ್ಕರ್‌ರ 300ನೇ ಜಯಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದ […]

Continue Reading

ಗುಣಮಟ್ಟದ ಶಿಕ್ಷಣ ರಾಷ್ಟ್ರದ ಅಭಿವೃದ್ಧಿಗೆ ಪೂರಕ

ಕಲಬುರಗಿ: ಶಿಕ್ಷಣವು ವ್ಯಕ್ತಿಗೆ ಜ್ಞಾನ, ಬುದ್ದಿ, ಸಂಸ್ಕಾರ, ಮಾನವೀಯತೆ, ಕೌಶಲಗಳನ್ನು ನೀಡಿ ರಾಷ್ಟ್ರದ ಸದೃಢ ಮಾನವ ಸಂಪನ್ಮೂಲ ನಿರ್ಮಾಣ ಮಾಡುವ ಮೂಲಕ ಸಾಮಾಜಿಕ ಪರಿವರ್ತನೆಯ ಪ್ರಮುಖ ಸಾಧನವಾಗಿದೆ. ಆದರೆ ಶಿಕ್ಷಣವು ಕೇವಲ ಪರಿಮಾಣಾತ್ಮಕವಾಗಿದ್ದರೆ ಪ್ರಯೋಜನೆಯಿಲ್ಲ. ಅದು ಗುಣಮಟ್ಟದಿಂದ ಕೂಡಿರಬೇಕು. ಗುಣಮಟ್ಟದ ಶಿಕ್ಷಣ ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಶಿಕ್ಷಣ ಪ್ರೇಮಿ ಡಾ.ಸುನೀಲಕುಮಾರ ಎಚ್ ವಂಟಿ ಅಭಿಪ್ರಾಯಪಟ್ಟರು. ನಗರದ ಆಸಿಫ್ ಗಂಜ್‌ನ ಕಸ್ತೂರಬಾ ಬಾಲಿಕಾ ವಸತಿ ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿ […]

Continue Reading

ಐಪಿಎಲ್ ಟಿಕೆಟ್​ ಕಾಳಸಂತೆಯಲ್ಲಿ ಮಾರಾಟ: ದಂಧೆ ಕಿಂಗ್​ಪಿನ್ ಆಗಿದ್ದ ಇಬ್ಬರು ಪೊಲೀಸರು ಸಸ್ಪೆಂಡ್

ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಟಿಕೆಟ್‌ ಕಾಳಸಂತೆ ಮಾರಾಟದಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ಗಳು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಟಿಕೆಟ್ ಮಾರಾಟ ಮಾಡುವಾಗ ಇಬ್ಬರು ಕಾನ್ಸ್‌ಟೇಬಲ್‌ ಸಿಕ್ಕಿಬಿದ್ದಿದ್ದು, ಈ ಸಂಬಂಧ ಗೋವಿಂದರಾಜ ನಗರದ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಇದೀಗ ಇಬ್ಬರು ಪೊಲೀಸ್ ಪೇದೆಗಳನ್ನು ಸಸ್ಪೆಂಡ್ ಮಾಡಲಾಗಿದೆ. ಹಲಸೂರು ಸಂಚಾರಿ ಠಾಣೆಯ ಪೊಲೀಸ್ ಕಾನ್ಸ್​​ ಟೇಬಲ್ ರವಿಚಂದ್ರ ಹಾಗೂ ಟಿಎಂಸಿ ಸಿಬ್ಬಂದಿ ವೆಂಕಟಗಿರಿಗೌಡನನ್ನು ಸಸ್ಪೆಂಡ್ ಮಾಡಿ ಬೆಂಗಳೂರು ಸಂಚಾರ ವಿಭಾಗದ ಜಂಟಿ ಆಯುಕ್ತ ಅನುಚೇತ್ ಆದೇಶ ಹೊರಡಿಸಿದ್ದಾರೆ. ಮೇ 17 ರಂದು […]

Continue Reading