ಡಾ.ಎಚ್.ಎಸ್ ವೆಂಕಟೇಶ ಮೂರ್ತಿಯವರಿಗೆ ಶೃದ್ಧಾಂಜಲಿ

ಕಲಬುರಗಿ: ಶುಕ್ರವಾರ ನಿಧನರಾದ ಹಿರಿಯ ಸಾಹಿತಿ ಡಾ.ಎಚ್.ಎಸ್ ವೆಂಕಟೇಶ ಮೂರ್ತಿ ಅವರಿಗೆ ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶೃದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎಚ್.ಬಿ ಪಾಟೀಲ, ಶಿವಯೋಗೆಪ್ಪಾ ಎಸ್. ಬಿರಾದಾರ, ದತ್ತು ಹಡಪದ, ಡಾ‌ರಾಜಶೇಖರ ಪಾಟೀಲ, ರಾಜು ಕೊರಳ್ಳಿ ಹಾಗೂ ವಿದ್ಯಾರ್ಥಿಗಳು ಇದ್ದರು.

Continue Reading

ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಬೆಳೆಸಲು ಬೇಸಿಗೆ ಶಿಬಿರ ಪೂರಕ: ಎಚ್.ಬಿ ಪಾಟೀಲ

ಕಲಬುರಗಿ: ಬೇಸಿಗೆ ಶಿಬಿರದಲ್ಲಿ ಭಾಗವಹಿಸುವುದರಿಂದ ತರಗತಿಯ ಪಠ್ಯದ ಜೊತೆಗೆ ಪಠ್ಯೇತರ, ಸೃಜನಶೀಲ ಚಟುವಟಿಕೆಗಳ ಮೂಲಕ ವಿಷಯದ ಜ್ಞಾನ, ಸಮಯದ ಸದುಪಯೋಗಕ್ಕೆ ಬೇಸಿಗೆ ಶಿಬಿರಗಳು ಪೂರಕವಾಗುತ್ತವೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಹೊರವಲಯದ ಉಪಳಾಂವ ಗ್ರಾಮದ ಶ್ರೀರಾಮ ಕನ್ನಡ ಕಾನ್ವೆಂಟ್ ಶಾಲೆಯಲ್ಲಿ ಜರುಗಿದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಬೇಸಿಗೆ ದಿನಗಳಲ್ಲಿ ವಿದ್ಯಾರ್ಥಿಗಳು ಬಿಸಿಲಿನಲ್ಲಿ ಸುತ್ತಾಡಿ ಆರೋಗ್ಯ ಹಾಳುಮಾಡಿಕೊಳ್ಳುತ್ತಾರೆ. ಮಕ್ಕಳು ಮೊಬೈಲ್, ಟಿ.ವಿ ವೀಕ್ಷಣೆಯಲ್ಲಿಯೇ […]

Continue Reading

ಮಹಿಳೆಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಮಹಿಳೆಯರು ತಮ್ಮ ಆರೋಗ್ಯದಲ್ಲಿ ಏನಾದರೂ ಸಮಸ್ಯೆಯಿದ್ದರೆ ಮುಜುಗರ ಪಡದೆ ತಜ್ಞ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ, ಸಲಹೆ ಪಡೆದು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಮಹಿಳೆಯರಿಗೆ ಸಲಹೆ ನೀಡಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಅಂತಾರಾಷ್ಟ್ರೀಯ ಮಹಿಳಾ ಆರೋಗ್ಯ ಸಂರಕ್ಷಣಾ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ತಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಯಾವುದೆ ಸಮಸ್ಯೆಯಿದ್ದರೆ, ಮುಜುಗರ, ಹಿಂಜರಿಕೆಯ ಮನೋಭಾವದಿಂದ […]

Continue Reading

ಕಾಖಂಡಕಿ ಜಾತ್ರಾ ಸಂಭ್ರಮದಲ್ಲಿ ತನಾರತಿ ಹರಕೆ ತೀರಿಸಿದ ಸಹಸ್ರಾರು ಭಕ್ತರು

ಯಡ್ರಾಮಿ: ನಾಡಿನ ವಿಶಿಷ್ಟ ಉತ್ಸವಗಳಲ್ಲಿ ಒಂದಾದ ತನಾರತಿ ಉತ್ಸವವು ಬಾದಮಿ ಅಮಾವಾಸ್ಯೆಯ ದಿನದಂದು ತಾಲೂಕಿನ ಕಾಖಂಡಕಿ ಕ್ಷೇತ್ರದಲ್ಲಿ ಸಹಸ್ರಾರು ಭಕ್ತರ ಮಧ್ಯೆ ಭಕ್ತಿಭಾವದಿಂದ ನೆರವೇರಿತು. ಸದ್ಗುರು ಮಲ್ಲಾರಾಧ್ಯರ ಹಾಗೂ ಕೋರಿಸಿದ್ಧೇಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ನಾಲವಾರ- ಕಾಖಂಡಕಿ ಮಠಗಳ ಒಡೆಯರಾದ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ನಡೆದ ಉತ್ಸವದಲ್ಲಿ ನಾಡಿನ-ಪರನಾಡಿನ ಸಹಸ್ರಾರು ಸದ್ಭಕ್ತರು ಇಷ್ಟಾರ್ಥ ಪೂರೈಸಿದ ಮಹಾಗುರುವಿಗೆ ತನಾರತಿ ಹರಕೆ ತೀರಿಸಿ ಭಕ್ತಿ ಭಾವ ಮೆರೆದರು. ಬುಧವಾರ ನಸುಕಿನ ಜಾವ ಪೀಠಾಧಿಪತಿ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು […]

Continue Reading

ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ನೌಕರರ ಸಂಘ ಖಂಡನೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್‌ ಅವರ ಬಗ್ಗೆ ಇತ್ತೀಚೆಗೆ ವಿಧಾನ ಪರಿಷತ್‌ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ ಅವರ ಅವಹೇಳನಕಾರಿ ಹೇಳಿಕೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾ ಘಟಕತೀವ್ರವಾಗಿ ಖಂಡಿಸಿದೆ. ಈ ರೀತಿಯ ಹೇಳಿಕೆಯಿಂದ ಸರ್ಕಾರಿ ಅಧಿಕಾರಿ-ನೌಕರರ ಆತ್ಮಸ್ಥೆರ್ಯ ಕುಸಿಯುವಂತಾಗುತ್ತದೆ. ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್‌ ಅವರು ಜಿಲ್ಲೆಯ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ.

Continue Reading

ಭಾರತದ ನವೋದಯ ಧೃವತಾರೆ ರಾಜಾ ರಾಮ್ ಮೋಹನರಾಯ

ಕಲಬುರಗಿ: ಹತ್ತೊಂಬತ್ತನೆ ಶತಮಾನ ಭಾರತದ ಬೌದ್ಧಿಕ, ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಬೆಳವಣಿಗೆಯ ಸುಧಾರಣೆಯಲ್ಲಿ ಅದ್ವೀತಿಯ ಪಾತ್ರ ವಹಿಸಿದ ರಾಜಾ ರಾಮ್ ಮೋಹನರಾಯರು, ‘ಭಾರತದ ನವೋದಯ ಧೃವತಾರೆ’ಯಾಗಿದ್ದಾರೆ. ಅವರು ಶ್ರೇಷ್ಟ ಸಮಾಜ ಸುಧಾರಕರು ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ರಾಜಾ ರಾಮ್ ಮೋಹನರಾಯ್’ರ 253ನೇ ಜನ್ಮದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, […]

Continue Reading

ವೈದ್ಯಕೀಯ ತುರ್ತು ಸೇವೆ ಜೀವ ರಕ್ಷಕ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಯಾವುದೆ ರೀತಿಯ ಅಪಘಾತ, ದೇಹವು ಅನಾರೋಗ್ಯಕ್ಕೆ ತುತ್ತಾಗಿ ಶೂಚನೀಯ ಸ್ಥಿತಿಗೆ ತಲುಪುವ ಸಂದರ್ಭದಲ್ಲಿ ಆಸ್ಪತ್ರೆಗೆ ತೆರಳುವುದಕ್ಕಿಂತ ಮುಂಚಿತವಾಗಿ ಮಾಡುವ ಪ್ರಥಮ ಚಿಕಿತ್ಸೆ, ಅಂಬುಲೆನ್ಸನಲ್ಲಿಯೇ ಚಿಕಿತ್ಸೆ ನೀಡುತ್ತಾ ಅತ್ಯಂತ ವೇಗವಾಗಿ ಆಸ್ಪತ್ರೆಗೆ ತೆರಳಿ, ಅಲ್ಲಿನ ವೈದ್ಯರು ನೀಡುವ ತುರ್ತು ಚಿಕಿತ್ಸೆ ರೋಗಿಯ ಜೀವ ರಕ್ಷವಾಗಿ ಕಾರ್ಯನಿರ್ವಹಿಸುತ್ತದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಜರುಗಿದ ‘ಅಂತಾರಾಷ್ಟ್ರೀಯ ತುರ್ತು ವೈದ್ಯಕೀಯ […]

Continue Reading

ಶಹಾಪುರ: ಲೋಕಾಯುಕ್ತ ಡಿವೈಎಸ್ಪಿಯಿಂದ ಅಹವಾಲು ಸ್ವೀಕಾರ

ಶಹಾಪುರ: ಯಾರಾದರೂ ನಾವು ಲೋಕಾಯುಕ್ತರು ಎಂದು ನಿಮ್ಮ ಮೊಬೈಲ್’ಗೆ ಕರೆ ಮಾಡಿದಲ್ಲಿ ಪ್ರತ್ಯುತ್ತರ ನೀಡಬೇಡಿ. ತಕ್ಷಣವೇ ನಮ್ಮ ಕಾರ್ಯಾಲಯಕ್ಕೆ ತಿಳಿಸಿದಲ್ಲಿ ಅಗತ್ಯ ಕ್ರಮ ಕೈಗೊಳ್ಳುತ್ತೆವೆ ಎಂದು ಲೋಕಾಯುಕ್ತ ಡಿವೈಎಸ್ಪಿ ಜೆ.ಎಚ್ ಇನಾಮದಾರ ಹೇಳಿದರು. ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾಹಿತಿ ನೀಡಿದ ಅವರು, ಸಂಬಂಧಪಟ್ಟ ಇಲಾಖೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಲ್ಲದೆ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕಾನೂನು ವ್ಯಾಪ್ತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಉಮಾಕಾಂತ ಹಳ್ಳೆ, […]

Continue Reading

ಮಾಡ್ಯಾಳ ಗ್ರಾಮವು ಕುಂತಲ ನಾಡಿನ ಮುಕುಟವಾಗಿದೆ: ಮುಡುಬಿ ಗುಂಡೆರಾವ

ಕಲಬುರಗಿ: ಮಾಡ್ಯಾಳ ಗ್ರಾಮವು ಕುಂತಲ ನಾಡಿನ ಮುಕುಟವಾಗಿವೆ ಮತ್ತು ಗ್ರಾಮದ ದೇಗುಲುಗಳು ಆಲಂದ ಸಾಸಿ ನಾಡಿನ ಚೆರಿತ್ರೆ ತಿಳಿಸಿಕೊಡುತ್ತವೆ ಎಂದು ಸಂಶೋಧಕ ಸಾಹಿತಿ ಮುಡುಬಿ ಗುಂಡೆರಾವ ಅಭಿಮತ ವ್ಯಕ್ತಪಡಿಸಿದರು. ಆಳಂದ ತಾಲೂಕಿನ ಮಾಡ್ಯಾಳ ಗ್ರಾಮದ ಶಂಕರಲಿಂಗ ದೇವಾಲಯದಲ್ಲಿ ಬಸವೇಶ್ವರ ಸೇವಾ ಬಳಗ ಆಯೋಜಿಸಿದ ಜಿಲ್ಲೆಯ ಐತಿಹಾಸಿಕ ಪರಿಚಯಾತ್ಮಕ (19) ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಗ್ರಾಮದಲ್ಲಿನ ಹಲವಾರು ಐತಿಹಾಸಿಕ ದೇಗುಲುಗಳು, ಸ್ಮಾರಕ, ಶಾಸನಗಳು ನಾಡಿನ ಇತಿಹಾಸ ಸಾರುತ್ತಿವೆ, ಇಲ್ಲಿಯ ಒಂದೊಂದು ಕಲ್ಲು ಸಹ ಕನ್ನಡ ಭೂಮಿಯ […]

Continue Reading

ಕಾಖಂಡಕಿ: 27 ರಂದು ಮಲ್ಲಾರಾಧ್ಯರ ಕೋರಿಸಿದ್ಧೇಶ್ವರರ ಜಾತ್ರೋತ್ಸವ

ಚಿತ್ತಾಪುರ: ಯಡ್ರಾಮಿ ತಾಲೂಕಿನ ಶ್ರೀಕ್ಷೇತ್ರ ಕಾಖಂಡಕಿ ಗ್ರಾಮದಲ್ಲಿ ಮೇ.27 ಮತ್ತು 28 ರಂದು ಅತ್ಯಂತ ವಿಜೃಂಭಣೆಯಿಂದ ಸದ್ಗುರು ಮಲ್ಲಾರಾಧ್ಯರ ಹಾಗೂ ಸದ್ಗುರು ಕೋರಿಸಿದ್ದೇಶ್ವರ ಜಾತ್ರಾ ಮಹೋತ್ಸವ ನಡೆಯಲಿದೆ. ನಾಲವಾರ ಹಾಗೂ ಕಾಖಂಡಕಿ ಶ್ರೀಮಠಗಳ ಪೀಠಾಧಿಪತಿ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜರುಗುವ ಜಾತ್ರಾ ಮಹೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಮೇ.27ರ ಬಾದಾಮಿ ಅಮಾವಾಸ್ಯೆಯ ದಿನದಂದು ಸಂಜೆ ನಾಡಿನ ಅನೇಕ ಪೂಜ್ಯ ಮಠಾಧೀಶರ ಸಮ್ಮುಖದಲ್ಲಿ ಶಿವಾನುಭವ ಸಾಂಸ್ಕೃತಿಕ ಸಂಭ್ರಮ ಹಾಗೂ ಪೂಜ್ಯರ ತುಲಾಭಾರ […]

Continue Reading