ರಾಷ್ಟ್ರದ ಅಭಿವೃದ್ಧಿಗೆ ರೆಡ್‌ಕ್ರಾಸ್ ಸಂಸ್ಥೆಯ ಕೊಡುಗೆ ಅನನ್ಯ: ಎಚ್.ಬಿ ಪಾಟೀಲ

ಕಲಬುರಗಿ: ಸಮಾಜದಲ್ಲಿ ಕಂಡುಬರುವ ವಿವಿಧ ಸಮಸ್ಯೆಗಳಿಗೆ ಪರಿಹಾರ, ನೈಸರ್ಗಿಕ ವಿಪತ್ತುಗಳ ನಿರ್ವಹಣೆ, ಜನಜಾಗೃತಿ ಕಾರ್ಯಕ್ರಮ, ತೊಂದರೆಯಲ್ಲಿರುವ ಜನರಿಗೆ ಸಹಾಯ ಸೇರಿದಂತೆ ಅನೇಕ ಜನಪರ ಕಾರ್ಯಗಳನ್ನು ನಿರಂತರವಾಗಿ ಮಾಡುವ ಮೂಲಕ ರೆಟ್’ಕ್ರಾಸ್ ಸಂಸ್ಥೆ ರಾಷ್ಟ್ರದ ಅಭಿವೃದ್ಧಿಗೆ ತನ್ನದೆಯಾದ ಅನನ್ಯ ಕೊಡುಗೆ ನೀಡುತ್ತಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳೀದರು. ನಗರದ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ, ನ್ಯೂ ರಾಘವೇಂದ್ರ ಕಾಲೋನಿಯ ವಿವೇಕಾನಂದ ಕೋಚಿಂಗ್ ಸೆಂಟರ್’ನಲ್ಲಿ ಏರ್ಪಡಿಸಿದ್ದ ‘ವಿಶ್ವ ರೆಡ್‌ಕ್ರಾಸ್ ಸಂಸ್ಥೆ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಈ […]

Continue Reading

ಮದುವೆ ಊಟ ಸೇವಿಸಿದ 100ಕ್ಕೂ ಹೆಚ್ಚು ಜನ ಅಸ್ವಸ್ಥ

ಚಿತ್ರದುರ್ಗ: ಮದುವೆ ಊಟ ಸೇವಿಸಿದ 100ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಮಲ್ಲಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮವಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಲ್ಲಿಹಳ್ಳಿ ಗ್ರಾಮದ ಪ್ರಭುಲಿಂಗಪ್ಪ ಪುತ್ರನ ವಿವಾಹ ಸಂಭ್ರಮದಲ್ಲಿ ಘಟನೆ ನಡೆದಿದೆ. ಗವಿರಂಗಾಪುರ ಬೆಟ್ಟದಲ್ಲಿ ರವಿವಾರ ಮದುವೆ ನಡೆದಿತ್ತು. ಮದುವೆಗೆ ಹಾಜರಾದವರಿಗೆ ರವಿವಾರ ರಾತ್ರಿಯಿಂದಲೇ ಹೊಟ್ಟೆನೋವು ಶುರುವಾಗಿದೆ. ಸೋಮವಾರ ಬೆಳಗ್ಗೆ ವಾಂತಿಬೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ರೀರಾಂಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ರೋಗಿಗಳು ದಾಖಲಾಗಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ […]

Continue Reading

ಕಲಬುರಗಿ: ಸಂಚಾರಿ ಪೊಲೀಸರಿಗೆ ಎ.ಸಿ ಹೆಲ್ಮೆಟ್

ಕಲಬುರಗಿ: ಸುಡುವ ಬಿಸಿಲಿನಲ್ಲಿ ಪ್ರಮುಖ ವೃತ್ತಗಳಲ್ಲಿ ವಾಹನಗಳ ಸಂಚಾರ ನಿಯಂತ್ರಿಸುವ ಸಂಚಾರಿ ಪೊಲೀಸ್ ಸಿಬ್ಬಂದಿಗೆ ಪ್ರಾಯೋಗಿಕವಾಗಿ ಹವಾನಿಯಂತ್ರಿತ (ಎ.ಸಿ) ಹೆಲ್ಮೆಟ್‌ಗಳನ್ನು ನೀಡಲಾಗಿದೆ. ಇದರ ಜೊತೆಗೆ ಅತ್ಯಾಧುನಿಕ ಸೌಕರ್ಯಗಳ ಉಪಕರಣಗಳನ್ನು ಕಲ್ಪಿಸಲಾಗಿದೆ. ಇಲ್ಲಿನ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ತಲಾ 10 ಎ.ಸಿ ಹೆಲ್ಮೆಟ್ ಹಾಗೂ ಮಾಲಿನ್ಯ ತಡೆಯುವ ಮಾಸ್ಕ್‌ಗಳು,140 ಮಿಂಚುವ ಜಾಕೆಟ್ ಮತ್ತು 150 ಲೈಟ್ ಬ್ಯಾಟೊನ್‌ಗಳನ್ನು ವಿತರಣೆ ಮಾಡಲಾಯಿತು. ನಂತರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ ಮಾತನಾಡಿ, ಹವಾನಿಯಂತ್ರಿತ ಹೆಲ್ಮೆಟ್‌ಗಳು ನಮ್ಮ ಸಂಚಾರಿ ಸಿಬ್ಬಂದಿಗೆ ಬೇಸಿಗೆಯ ಬಿಸಿಲಿನಿಂದ […]

Continue Reading

ಕ್ಷಯರೋಗದ ವಿರುದ್ಧ ಹೋರಾಡಲು ಬಿಸಿಜಿ ಲಸಿಕೆ ಪಡೆಯುವುದು ಅಗತ್ಯ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಕ್ಷಯರೋಗದ ವಿರುದ್ಧ ಹೋರಾಡಲು ಬಿಸಿಜಿ ಲಸಿಕೆ ಪಡೆಯುವುದು ಅಗತ್ಯವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಜರುಗಿದ ‘ಟಿಬಿ ಸೋಲಿಸಿ, ದೇಶ ಗೆಲ್ಲಿಸಿ’ ಬಿಸಿಜಿ ಲಸಿಕಾಕರಣ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ಎರಡು ವಾರ ಅಥವಾ ಹೆಚ್ಚಿನ ಅವಧಿಯ ಕೆಮ್ಮು, ಕಫದ ಜೊತೆಗೆ ರಕ್ತ ಕಾಣಿಸುವುದು, ವಿಶೇಷವಾಗಿ ರಾತ್ರಿ ಸಮಯದಲ್ಲಿ ಜ್ವರ ಬರುವುದು, ತೂಕದ ಇಳಿಕೆ, ರಾತ್ರಿ […]

Continue Reading

ಅರ್ಥಪೂರ್ಣ ಜೀವನ ನಮ್ಮದಾಗಲಿ: ಶರಣಯ್ಯ ಸ್ವಾಮಿ

ಕಲಬುರಗಿ: ಪ್ರತಿಯೊಬ್ಬರು ತಮ್ಮಿಂದ ಸಾಧ್ಯವಾದಷ್ಟು ಸಮಾಜದ ಒಳಿತಿಗಾಗಿ ನಿಸ್ವಾರ್ಥ ಸೇವೆ ಸಲ್ಲಿಸಬೇಕೆಂಬ ಮನೋಭಾವನೆ ಮೈಗೂಡಿಸಿಕೊಂಡರೆ ಸುಂದರ ಸಮಾಜ, ದೇಶ ರೂಪುಗೊಳ್ಳಲು ಸಾಧ್ಯವಾಗುತ್ತದೆ. ಅಂತಹ ಅರ್ಥಪೂರ್ಣ ಜೀವನ ನಮ್ಮದಾಗಲಿ ಎಂದು ನೀಲೂರನ ಬಂಗಾರ ಜಡೆ ನೀಲಕಂಠೇಶ್ವರ ಹಿರೇಮಠದ ಪೂಜ್ಯ ಶರಣಯ್ಯ ಸ್ವಾಮಿ ಆಶಯ ವ್ಯಕ್ತಪಡಿಸಿದರು. ನಗರದ ಅಫಜಲಪುರ ತಾಲೂಕಿನ ನೀಲೂರ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನ ಆವರಣದಲ್ಲಿ ಕಲಬುರಗಿಯ ಸುಜಯ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ‘ಶ್ರೀ ಸಾಯಿ ಪ್ರಸಾದ ಎಂಎಸ್’ಡಬ್ಲ್ಯೂ ಕಾಲೇಜ್’ನ ಸಮಾಜ ಕಾರ್ಯದ ಒಂದು ವಾರ ಶಿಬಿರದ […]

Continue Reading

ನಗುವಿನಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಗುಂಡಣ್ಣ ಡಿಗ್ಗಿ

ಕಲಬುರಗಿ: ನಗುವದರಿಂದ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಹೃದಯಘಾತವಾಗುವ ಸಂಭವನೀಯತೆ ಕಡಿಮೆಯಾಗುತ್ತದೆ. ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ. ಮಾನಸಿಕವಾಗಿ ನೆಮ್ಮದಿ, ವ್ಯಕ್ತಿಯ ಆಯಸ್ಸು ಹೆಚ್ಚಾಗುತ್ತದೆ ಎಂದು ಖ್ಯಾತ ಹಾಸ್ಯ ಕಲಾವಿದ ಗುಂಡಣ್ಣ ಡಿಗ್ಗಿ ಹೇಳಿದರು. ಅಫಜಲಪುರ ತಾಲೂಕಿನ ನೀಲೂರ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗ ಮತ್ತು ಸುಜಯ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ ಇವುಗಳ ವತಿಯಿಂದ ಜರುಗಿದ ‘ವಿಶ್ವ ನಗುವಿನ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ಅವಿಭಕ್ತ ಕುಟುಂಬವಿದ್ದ […]

Continue Reading

ಅಗ್ನಿಶಾಮಕರು ಸಮಾಜದ ರಕ್ಷಕರು: ಅಂಕುಶ್ ಆಳಂದೆ

ಕಲಬುರಗಿ: ಬೆಂಕಿ ಅವಗಡ, ಭೂಕಂಪ, ಅತಿವೃಷ್ಟಿ, ನೆರೆ ಹಾವಳಿ, ಪ್ರವಾಹದಂತಹ ತುರ್ತು ಸಂದರ್ಭದಲ್ಲಿ ಜೀವದ ಹಂಗನ್ನು ತೊರೆದು ಸಾರ್ವಜನಿಕರ ಜೀವ ರಕ್ಷಿಸುವ ಅಗ್ನಿಶಾಮಕರು ಸಮಾಜದ ಕಾವಲುಗಾರ ಹಾಗೂ ರಕ್ಷಕರಾಗಿದ್ದಾರೆ. ಅವರಿಗೆ ಸಾರ್ವಜನಿಕ ಸುರಕ್ಷತೆ, ಸಮಾಜದ ರಕ್ಷಣೆಯೆ ಪ್ರಮುಖವಾಗಿದೆ ಎಂದು ಅಗ್ನಿಶಾಮಕ ಠಾಣಾಧಿಕಾರಿ ಅಂಕುಶ್ ಎ ಆಳಂದೆ ಅಭಿಪ್ರಾಯಪಟ್ಟರು. ನಗರದ ಅಗ್ನಿಶಾಮಕ ಠಾಣೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ ಮತ್ತು ಅಗ್ನಿಶಾಮಕ ಠಾಣೆಯ ಜಂಟಿ ಆಶ್ರಯದಲ್ಲಿ ರವಿವಾರ ಏರ್ಪಡಿಸಿದ್ದ್ ‘ಅಂತಾರಾಷ್ಟ್ರೀಯ ಅಗ್ನಿಶಾಮಕರ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಡಿಸೆಂಬರ್ […]

Continue Reading

ಭೂಮಿಗೆ ಗಂಗೆಯನ್ನು ಹರಿಸಿದ ಭಗೀರಥ ಮಹರ್ಷಿ: ಎಚ್.ಬಿ ಪಾಟೀಲ

ಕಲಬುರಗಿ: ಭಾರತ ಅನೇಕ ಮಹನೀಯರ, ಶರಣರ, ಋಷಿ-ಮುನಿಗಳ ತವರೂರಾಗಿದೆ. ಇದರಲ್ಲಿ ಭಗೀರಥ ಮಹರ್ಷಿ ಕೇವಲ ರಾಜ ಮಾತ್ರನಾಗಿರದೆ, ಭಕ್ತಿಯ ಸಂಪನ್ನರಾಗಿದ್ದರು. ಅವರು ಘೋರವಾದ ತಪ್ಪಸ್ಸು ಮಾಡಿ ಭೂಮಿಗೆ ಗಂಗೆಯನ್ನು ಹರಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿರುವ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ‘ಭಗೀರಥ ಮಹರ್ಷಿ ಜಯಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ನಾವು ನುಡಿಗಟ್ಟಾಗಿ ಬಳಸುವ ‘ಭಗೀರಥ ಪ್ರಯತ್ನ’ ಎಂಬ […]

Continue Reading

ಮುಕ್ತ ಪತ್ರಿಕೋದ್ಯಮಕ್ಕೆ ಬೆಂಬಲ ನೀಡುವುದು ಅಗತ್ಯ: ಎಚ್.ಬಿ ಪಾಟೀಲ

ಕಲಬುರಗಿ: ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳ ಚಟುವಟಿಕೆ ಬಗ್ಗೆ ನಿಗಾ ವಹಿಸಿ, ದೇಶದ ಸಮಸ್ಯೆಗಳ ಬಗ್ಗೆ ಮೇಲಿಂದ ಮೇಲೆ ಬೆಳಕು ಚೆಲ್ಲಿ, ಅದಕ್ಕೆ ಪರಿಹಾರ ಹುಡುಕುವಂತೆ ಮಾಡಿ ಸ್ವಸ್ಥ, ಸಧೃಢ ರಾಷ್ಟ್ರ ನಿರ್ಮಾಣಕ್ಕೆ ‘ಮಾಧ್ಯಮ ರಂಗ’ ತನ್ನದೆಯಾದ ಅದ್ವಿತೀಯ ಕೊಡುಗೆಯನ್ನು ನೀಡುತ್ತಿದೆ. ಸಮಾಜಕ್ಕೆ ಸ್ವತಂತ್ರ, ನಿರ್ಭೀತ, ನ್ಯಾಯಯುತ ಪತ್ರಿಕೋದ್ಯಮ ಅಗತ್ಯ. ಪತ್ರಿಕೋದ್ಯಮವು ಮುಕ್ತವಾಗಿ ಕಾರ್ಯನಿರ್ವಹಿಸಲು ಬೆಂಬಲ ನೀಡುವುದು ಅವಶ್ಯಕ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತ ವ್ಯಕ್ತಪಡಿಸಿದರು. ನಗರದ ಖಾದ್ರಿ ಚೌಕ್‌ನಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ […]

Continue Reading

ದೇಶದ ಐಕ್ಯತೆಗಾಗಿ ಮೋದಿ ಸರ್ಕಾರ ಏನೆ ಕ್ರಮ ಕೈಗೊಂಡರು ಬೆಂಬಲ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ದೇಶದ ಐಕ್ಯತೆಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಏನೇ ನಿರ್ಧಾರಗಳನ್ನು ಅಥವಾ ಕ್ರಮಗಳನ್ನು ಕೈಗೊಂಡರೂ ಅದಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದರು. ಪಹಲ್ಗಾಮ್ ಉಗ್ರ ದಾಳಿ ವಿಚಾರವಾಗಿ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ದೇಶಕ್ಕಾಗಿ ಏನೆ ನಿರ್ಧಾರ ಕೈಗೊಂಡರು ಬೆಂಬಲಿಸುತ್ತೆವೆ. ಆದರೆ ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳಬೇಕು ಎಂದರು. ಕೇವಲ ಭಾಷಣ […]

Continue Reading