ಕಾರ್ಮಿಕರಿಗೆ ಸೇವಾ ಭದ್ರತೆ, ಸೂಕ್ತ ವೇತನ ದೊರೆಯಲಿ

ಕಲಬುರಗಿ: ಬೆವರು ಹರಿಸಿ, ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಕಾಯಕ ಜೀವಿಗಳ ಕೊಡುಗೆ ಸಮಾಜ ಮರೆಯುವಂತಿಲ್ಲ. ಅವರಿಗೆ ಸೇವಾ ಭದ್ರತೆ, ಸೂಕ್ತ ವೇತನ ನೀಡಬೇಕು ಎಂದು ಕಾರ್ಮಿಕ ಮುಖಂಡ ಡಾ.ಸುನೀಲಕುಮಾರ ಎಚ್.ವಂಟಿ ಹೇಳಿದರು. ನಗರದ ಜಗತ್ ವೃತ್ತದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಪುತ್ತಳಿಯ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ವಿಶ್ವ ಕಾರ್ಮಿಕರ ದಿನಾಚರಣೆ’ಯಲ್ಲಿ ಕಾರ್ಮಿಕರಿಗೆ ಸತ್ಕರಿಸಿ, ಮಾತನಾಡಿದರು. ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ ಪಾಟೀಲ್ ಮಾತನಾಡಿ, ‘ನಮಿಸುವ ಕೈಗಳಿಗಿಂತ, ದುಡಿಯುವ ಕೈಗಳು ಶ್ರೇಷ್ಟ’ವಾಗಿವೆ. […]

Continue Reading

ರಾತ್ರಿ ವೇಳೆ ಮನೆಗಳಿಗೆ ಕನ್ನ, ಐಷಾರಾಮಿ ಜೀವನ: ಪಾಪ ಪರಿಹಾರಕ್ಕೆ ಸಮಾಜ ಸೇವೆ ಮಾಡುತ್ತಿದ್ದ ಕಳ್ಳನ ಬಂಧನ

ಕಲಬುರಗಿ: ಕದ್ದ ಹಣವನ್ನು ಜಾತ್ರೆಗಳಲ್ಲಿ ಸಾಮೂಹಿಕ ಭೋಜನಕ್ಕೆ, ಮದ್ಯ ಮತ್ತು ಮನರಂಜನೆಗಾಗಿ ಖರ್ಚು ಮಾಡುತ್ತಿದ್ದ ಕಳ್ಳನನ್ನು ಕಲಬುರಗಿಯ ಅಶೋಕ್ ನಗರ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯ ಭಾಗ್ಯವಂತಿ ನಗರದ ನಿವಾಸಿ ಶಂಕರಗೌಡ ನೀಡಿದ ದೂರಿನ ಆಧಾರದ ಮೇಲೆ, ಏಪ್ರಿಲ್ 13 ರಂದು ತಮ್ಮ ಕುಟುಂಬದೊಂದಿಗೆ ಹೊರ ಹೋಗಿದ್ದರು. ಆ ಸಮಯದಲ್ಲಿ ಕಳ್ಳರು 343 ಗ್ರಾಂ ಚಿನ್ನಾಭರಣ, 14.5 ಲಕ್ಷ ರೂ. ನಗದು, 10,000 ರೂ. ಮೌಲ್ಯದ 40 ಗ್ರಾಂ ಬೆಳ್ಳಿ ವಸ್ತುಗಳನ್ನು ಕದ್ದಿದ್ದಾರೆ ಎಂದು ಕಲಬುರಗಿ ಪೊಲೀಸ್ ಆಯುಕ್ತ […]

Continue Reading

ಹೆಚ್ಚುವರಿ ಎಸ್‌ಪಿ ವಿರುದ್ಧ ಸಿಎಂ ಗರಂ: ವೇದಿಕೆಯಲ್ಲೆ ತರಾಟೆ

ಬೆಳಗಾವಿ: ಕಾಂಗ್ರೆಸ್‌ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು ವೇದಿಕೆ ಪ್ರವೇಶಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿ ವೇದಿಕೆ ಮೇಲೆಯೆ ಧಾರವಾಡದ ಹೆಚ್ಚುವರಿ ಎಸ್‌ಪಿ ನಾರಾಯಣ ಭರಮನಿ ವಿರುದ್ಧ ಗರಂ ಆದ ಪ್ರಸಂಗ ಬೆಳಗಾವಿಯಲ್ಲಿ ನಡೆದಿದೆ. ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್‌ ಪ್ರತಿಭಟನಾ ಸಭಾ ಆಯೋಜಿಸಿತ್ತು. ಸಿಎಂ ಮಾತನಾಡುವಾಗ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು. ಈ ವೇಳೆ ಸಂಯಮ ಕಳೆದುಕೊಂಡ ಸಿಎಂ ಹೆಚ್ಚುವರಿ ಎಸ್‌ಪಿಯನ್ನು ತರಾಟೆಗೆ ತೆಗೆದುಕೊಂಡರು. ಆಗಿದ್ದು ಏನು ?ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ […]

Continue Reading

ಆನ್‌ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ: ಒರ್ವ ಬಂಧನ

ಕೋಲಾರ: ಆನ್‌ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಕೋಲಾರ ಸೈಬರ್ ಅಪರಾಧ ಹಾಗೂ ಮಾದಕ ವಸ್ತುಗಳ ನಿಯಂತ್ರಣ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ನಗರದಲ್ಲಿ ನಡೆದಿದೆ. ಮುಳಬಾಗಿಲು ನಗರದ ನೂಕಲಬಂಡೆಯ ನಿವಾಸಿ ಸೈಯದ್ ಸಾದಿಕ್ ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ. ಆರೋಪಿ ಸಾರ್ವಜನಿಕರಿಂದ ನಗದು ರೂಪದಲ್ಲಿ ಹಾಗೂ ಆನ್‌ಲೈನ್‌ನಲ್ಲಿ ವರ್ಗಾವಣೆ ಮಾಡಿಸಿಕೊಂಡು ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ಅಪ್ಲಿಕೇಶನ್‌ಗಳ ಮೂಲಕ ಐಪಿಎಲ್ […]

Continue Reading

ಕಲಬುರಗಿ SBI ಎಟಿಎಂ ದರೋಡೆ ಪ್ರಕರಣದ ಆರೋಪಿಗಳ ಕಾಲಿಗೆ ಗುಂಡೇಟು ಕೊಟ್ಟು ಬಂಧನ

ಕಲಬುರಗಿ: ನಗರದ ರಿಂಗ್ ರಸ್ತೆಯ SBI ಎಟಿಎಂ ಧ್ವಂಸಗೊಳಿಸಿ ದರೋಡೆ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಸಬರ್ಬನ್ ಠಾಣೆಯ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಹರಿಯಾಣ ಮೂಲದ ದರೋಡೆ ಪ್ರಕರಣದ ಆರೋಪಿಗಳಾದ ತಸ್ಲೀಮ್ (28) ಮತ್ತು ಷರೀಫ್ ( 22) ಗಾಯಗೊಂಡವರು. ಜಿಮ್ಸ್ ಆವರಣದ ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಲಬುರಗಿಯ ಬೇಲೂರ ಕ್ರಾಸ್ ಕೈಗಾರಿಕಾ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಆರೋಪಿಗಳನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಆ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ […]

Continue Reading

225 ಪ್ರಕರಣದಲ್ಲಿ 345 ಆರೋಪಿಗಳ ಬಂಧನ: 7 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಜಪ್ತಿ

ವಿಜಯಪುರ: ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 7 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದು, 225 ಕೇಸ್‌ನಲ್ಲಿದ್ದ 345 ಆರೋಪಿಗಳನ್ನು ಬಂಧಿಸಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಬೇಧಿಸಿ, ಚಿನ್ನ, ಬೆಳ್ಳಿ ಹಾಗೂ ಇನ್ನಿತರ ವಸ್ತುಗಳು ಸೇರಿದಂತೆ ಒಟ್ಟು 7 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು ಸಂಬಂಧಪಟ್ಟ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಒಟ್ಟು 5,145.02 ಗ್ರಾಂ ಚಿನ್ನದ ಆಭರಣ ಮತ್ತು 1,723 ಗ್ರಾಂ ಬೆಳ್ಳಿ ಆಭರಣ, 1,06,72,000 ರೂ. ಮೌಲ್ಯದ 73 […]

Continue Reading

ರಾಷ್ಟ್ರದ ಅಭಿವೃದ್ಧಿಯಲ್ಲಿ ಪಂಚಾಯತರಾಜ್ ವ್ಯವಸ್ಥೆಯ ಪಾತ್ರ ಅನನ್ಯ

ಕಲಬುರಗಿ: ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ಮುಟ್ಟಿಸುವ ಬಹುದೊಡ್ಡ ಜವಾಬ್ದಾರಿ ಮಾಡುವ ಮೂಲಕ ರಾಷ್ಟ್ರದ ಅಭಿವೃದ್ಧಿಯಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯು ಅನನ್ಯ ಕೊಡುಗೆ ನೀಡುತ್ತಿದೆ ಎಂದು ಗ್ರಾ.ಪಂ ಮಾಜಿ ಅಧ್ಯಕ್ಷ ಓಂಕಾರ ವಠಾರ ಅಭಿಮತಪಟ್ಟರು. ನಗರದ ಖಾದ್ರಿ ಚೌಕ್‌ನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ರಾಷ್ಟ್ರೀಯ ಪಂಚಾಯತ ರಾಜ್ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಅಧಿಕಾರ ವಿಕೇಂದ್ರಿಕರಣದ ಪ್ರಮುಖ ಧ್ಯೇಯದೊಂದಿಗೆ ಉದಯಿಸಿದ ಪಂಚಾಯತ್ ರಾಜ್ ಪದ್ಧತಿಯು […]

Continue Reading

ಕನ್ನಡ ನಾಡಿಗೆ ಡಾ.ರಾಜಕುಮಾರ ಕೊಡುಗೆ ಅನನ್ಯ

ಕಲಬುರಗಿ: ನಾಡಿನ ಪ್ರಸಿದ್ಧ ವ್ಯಕ್ತಿಯಾಗಿ, ಮೇರು ನಟ, ಗಾಯಕ, ಕನ್ನಡಪರ ಚಳುವಳಿಯ ಹೋರಾಟಗಾರರಾಗಿ, ಸಮಾಜ ಸೇವಕರಾಗಿ ಐದು ದಶಕಗಳ ಕಾಲ ತಮ್ಮದೆಯಾದ ಅಮೂಲ್ಯ ಸೇವೆ ಸಲ್ಲಿಸಿ ಜನಮಾನಸದಲ್ಲಿ ‘ಅಣ್ಣಾವ್ರ’ ಸ್ಥಾನ ಪಡೆದ ‘ಬಂಗಾರದ ಮನುಷ್ಯ’ ಡಾ.ರಾಜಕುಮಾರ ಅವರದು ಬಹುಮುಖ ವ್ಯಕ್ತಿತ್ವ. ಕನ್ನಡ ನಾಡಿಗೆ ಅವರ ಕೊಡುಗೆ ಅನನ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗುರುವಾರ ಜರುಗಿದ […]

Continue Reading

ಜಾತಿ ವರದಿ ಬಗ್ಗೆ ವೀರಶೈವ ಶಾಸಕರು ಸಿಡಿದೆಳಬೇಕು: ರಂಭಾಪುರಿ ಶ್ರೀ

ಹುಮನಾಬಾದ್‌: ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ಸಮೀಕ್ಷೆಯ ವೀರಶೈವ ಲಿಂಗಾಯತ ಜನಸಂಖ್ಯೆ ಕುರಿತು ಪ್ರಸ್ತಾಪಕ್ಕೆ ಬಂದರೆ ಎಲ್ಲಾ ಪಕ್ಷದ ವೀರಶೈವ ಲಿಂಗಾಯತ ಶಾಸಕರು ವಿರೋಧ ವ್ಯಕ್ತಪಡಿಸಬೇಕು, ಅನ್ಯಾಯದ ವಿರುದ್ಧ ಸಿಡಿದೆಳಬೇಕು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು. ತಾಲೂಕಿನ ಹುಡಗಿ ಗ್ರಾಮದಲ್ಲಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದ ಅವರು, 10 ವರ್ಷದ ಹಿಂದಿನ ವರದಿ ಇದೀಗ ಏಕೆ ಪ್ರಸ್ತಾಪಕ್ಕೆ ಬರುತ್ತಿದೆ ? ಈ ಹಿಂದೆ ಹಾವನೂರು ಆಯೋಗದ ವರದಿ ಹರಿಯುವ ಮೂಲಕ ಭೀಮಣ್ಣ ಖಂಡ್ರೆ […]

Continue Reading

ನಿರಂತರ ಅಧ್ಯಯನ ಉನ್ನತ ಸಾಧನೆ, ವ್ಯಕ್ತಿತ್ವಕ್ಕೆ ಪೂರಕ

ಕಲಬುರಗಿ: ಒಬ್ಬ ವ್ಯಕ್ತಿಯ ಜೀವನದ ದಿಕ್ಕನ್ನು ಬದಲಿಸುವ ಶಕ್ತಿ ಶ್ರೇಷ್ಠ ಗ್ರಂಥಗಳಿವೆ. ಪುಸ್ತಕಗಳು ಸಾಧನೆಯ ದಾರಿ ತಿಳಿಸುವ ಮೂಲಕ ಉನ್ನತ ಸಾಧನೆ, ವ್ಯಕ್ತಿತ್ವ ನಿರ್ಮಾಣಕ್ಕೆ ಪೂರಕವಾಗಿವೆ. ಆದ್ದರಿಂದ ಪುಸ್ತಕಗಳು, ಪತ್ರಿಕೆಗಳನ್ನು ಓದುವ ಉತ್ತಮ ಹವ್ಯಾಸ ಬೆಳೆಸಿಕೊಳ್ಳುವುದು ಅವಶ್ಯಕವಾಗಿದೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ವಿವೇಕಾನಂದ ಕೋಚಿಂಗ್ ಸೆಂಟರ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಪುಸ್ತಕ ದಿನಾಚರಣೆ’ ವಿದ್ಯಾರ್ಥಿಗಳಿಗೆ ವಿವಿಧ ಪುಸ್ತಕಗಳನ್ನು ಉಚಿತವಾಗಿ ವಿತರಿಸಿದ ನಂತರ […]

Continue Reading