ಕಂಪ್ಯೂಟರ್ ಜ್ಞಾನದಿಂದ ಉದ್ಯೋಗಾವಕಾಶಗಳು ಹೆಚ್ಚಳ

ಕಲಬುರಗಿ: ವಿದ್ಯಾರ್ಥಿಗಳು ಯಾವುದೆ ಪದವಿ, ಕೋರ್ಸ್ ಮಾಡುವುದರ ಜೊತೆಗೆ ಕಂಪ್ಯೂಟರ ಶಿಕ್ಷಣ ಪಡೆಯಬೇಕು. ಇದರಿಂದ ಸಾಕಷ್ಟು ಉದ್ಯೋಗಾವಕಾಶ ಲಭ್ಯವಾಗುತ್ತವೆ. ಕಂಪ್ಯೂಟರಯಿಲ್ಲದ ಕ್ಷೇತ್ರ ನಾವಿಂದು ಊಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಶಿಕ್ಷಣ ತಜ್ಞ ಡಾ.ಸುನೀಲಕುಮಾರ ಎಚ್.ವಂಟಿ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನ ಸಕ್ಸಸ್ ಕಂಪೂಟರ ತರಬೇತಿ ಸಂಸ್ಥೆಯಲ್ಲಿ ಜರುಗಿದ ಸಂಸ್ಥೆಯಲ್ಲಿ ತರಬೇತಿ ಪಡೆದು ಕಂಪ್ಯೂಟರ್ ಕೋರ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿದ ಅವರು, ಪ್ರಸ್ತುತ ಕಂಪ್ಯೂಟರ ಜ್ಞಾನವಿಲ್ಲದಿದ್ದರೆ ಅನಕ್ಷರಸ್ಥ ಎಂಬ ಸ್ಥಿತಿಗೆ ಬಂದಿರುವುದು ಕಂಪ್ಯೂಟರ್‌ನ ಮಹತ್ವ […]

Continue Reading

ಈರುಳ್ಳಿ ಬೀಜ ಮಾರಾಟ ಮಾಡಿ ಕೋಟ್ಯಂತರ ರೂ ಆದಾಯ ಗಳಿಸಿದ ಬೀದರ್​ ರೈತ

ಬೀದರ್​: ಕೃಷಿಯಲ್ಲಿ ದುಡಿಮೆ ಹೆಚ್ಚು, ಕೆಲವು ಸಂದರ್ಭಗಳಲ್ಲಿ ಲಾಭಕ್ಕಿಂತ ಖರ್ಚು ಹೆಚ್ಚು ಎಂಬುದು ಕೆಳಿದ್ದೆವೆ. ಆದರೆ ಬೀದರ್​ ರೈತ ಕೃಷಿಯಿಂದಲೆ ಐದು ತಿಂಗಳಲ್ಲಿ ಈರುಳ್ಳಿ ಬೀಜ ಮಾರಾಟ ಮಾಡಿ ಭರ್ಜರಿ ಲಾಭ ಗಳಿಸುತ್ತಿದ್ದಾರೆ. ಈ ಪ್ರಗತಿಪರ ರೈತನ ಕೃಷಿಯ ಚಾಣಾಕ್ಷತನಕ್ಕೆ ಅಧಿಕಾರಿಗಳು ಮತ್ತು ರೈತರು ಫಿದಾ ಆಗಿದ್ದಾರೆ. ಜಿಲ್ಲೆಯ ಹುಮನಾಬಾದ ತಾಲೂಕಿನ ಹಳ್ಳಿಖೇಡ್ ಗ್ರಾಮದ ರೈತ ದೀಲಿಪಕುಮಾರ ನೇಮಿನಾಥ ಅವರು ತಮ್ಮ 40 ಎಕರೆ ಜಮೀನಿನಲ್ಲಿ ಈರುಳ್ಳಿ ಬೀಜೋತ್ಪಾದನೆಯಲ್ಲಿ ತೊಡಗಿಸಿಕೊಂಡಿದ್ದು, 5 ತಿಂಗಳಿಗೆ ಒಂದು ಕೋಟಿಗೂ ಅಧಿಕ […]

Continue Reading

ಜಾಗತಿಕ ತಲ್ಲಣಗಳಿಗೆ ಬುದ್ಧನ ಶಾಂತಿ ಸಂದೇಶ ಅಗತ್ಯ: ಎಚ್.ಬಿ ಪಾಟೀಲ

ಕಲಬುರಗಿ: ಹಿಂಸೆ, ಅನ್ಯಾಯ, ಅಶಾಂತಿ, ಶೋಷಣೆ, ಭಯೋತ್ಪಾದನೆಯಂತಹ ಜಾಗತಿಕ ತಲ್ಲಣಗಳಿಂದ ಬಳಲುತ್ತಿರುವ ಪ್ರಸ್ತುತ ಸಮಾಜಕ್ಕೆ ಮಹಾತ್ಮ ಗೌತಮ ಬುದ್ಧ ಅವರು ಸಾವಿರಾರು ವರ್ಷಗಳ ಹಿಂದೆಯೇ ನೀಡಿರುವ ಹಾಗೂ ಅವುಗಳನ್ನು ಆಚರಿಸಿ ತೋರಿಸಿರುವ ತತ್ವಗಳು ಔಷಧಿಯಂತೆ ಕಾರ್ಯ ಮಾಡುತ್ತವೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ವಿವೇಕಾನಂದ ಕೋಚಿಂಗ್ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಜರುಗಿದ ‘ಮಹಾತ್ಮ ಗೌತಮ ಬುದ್ಧರ 2569ನೇ ಪೂರ್ಣಿಮೆ’ಯಲ್ಲಿ ಬುದ್ಧವಂದನೆ ಸಲ್ಲಿಸಿ ಮಾತನಾಡಿದ […]

Continue Reading

ಶುಶ್ರೂಷಕರು ಆರೋಗ್ಯ ಕ್ಷೇತ್ರದ ಸೇನಾನಿಗಳು

ಕಲಬುರಗಿ: ರೋಗಿಯ ಜೊತೆಗೆ ನಿರಂತರವಾಗಿದ್ದು, ಉಪಚಾರ, ಆರೈಕೆ, ಸೇವೆ ಮಾಡುವ ಮೂಲಕ ಶುಸ್ರೂಷಕರ ಆರೋಗ್ಯ ಕ್ಷೇತ್ರದ ಸೇನಾನಿಗಳಾಗಿದ್ದಾರೆ ಎಂದು ಹಿರಿಯ ಶುಶ್ರೂಷಕಿ ಗಂಗಾಜ್ಯೋಜಿ ಗಂಜಿ ಹೇಳಿದರು ನಗರದ ಶೇಖ್‌ರೋಜಾದ ಶಹಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಏರ್ಪಡಿಸಲಾಗಿದ್ದ ‘ಅಂತರಾಷ್ಟ್ರೀಯ ಶುಶ್ರೂಷಕರ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ವೈದ್ಯಕೀಯ ಕ್ಷೇತ್ರದ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಿ, ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಶುಸ್ರೂಷಕರ ಕೊಡುಗೆ ಅನನ್ಯ. ಸಮಾಜ-ಆರೋಗ್ಯ ಕ್ಷೇತ್ರದ ನಡುವಿನ ಸೇತುವೆಯಾಗಿ […]

Continue Reading

KK ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬಾಂಬ್ ಬೆದರಿಕೆ ಕರೆ: ವ್ಯಕ್ತಿ ಬಂಧನ

ಕಲಬುರಗಿ: ದೆಹಲಿಯಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್‌ (ಕೆಕೆ) ರೈಲಿನಲ್ಲಿ ಬಾಂಬ್ ಇದೆ ಎಂದು ಹುಸಿ ಕರೆ ಮಾಡಿದ ವ್ಯಕ್ತಿಯನ್ನು ಚಿತ್ತಾಪುರ ತಾಲೂಕಿನ ವಾಡಿ ರೈಲ್ವೆ ಠಾಣೆಯ ಪೊಲೀಸರು ರವಿವಾರ ಬಂಧಿಸಿದ್ದಾರೆ. ಉತ್ತರ ಪ್ರದೇಶ ಮೂಲದ ದೀಪ್‌ಸಿಂಗ್ (33) ಬಂಧಿತ ಆರೋಪಿ. ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ, ಚಿತ್ತಾಪುರ ಜೈಲಿನಲ್ಲಿ ಇದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಕೆ ಎಕ್ಸ್‌ಪ್ರೆಸ್ ರೈಲಿನಲ್ಲಿ ಬಾಂಬ್ ಇಟ್ಟಿರುವ ಶಂಕೆ ಇದೆ ಎಂದು ರಾತ್ರಿ 1 ಗಂಟೆ ಸುಮಾರಿಗೆ ರೈಲ್ವೆ ಕಂಟ್ರೋಲ್ ರೂಂ’ಗೆ […]

Continue Reading

ರಾಷ್ಟ್ರದ ಅಭಿವೃದ್ಧಿಗೆ ತಂತ್ರಜ್ಞಾನವೆ ಚಾಲನಾ ಶಕ್ತಿ: ಎಚ್.ಬಿ ಪಾಟೀಲ

ಕಲಬುರಗಿ: ಯಾವದೆ ಒಂದು ರಾಷ್ಟ್ರದ ಅಭಿವೃದ್ಧಿಯು, ಆ ರಾಷ್ಟ್ರದ ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಯನ್ನು ಅವಲಂಬಿಸಿದೆ. ಅಮೇರಿಕಾ, ರಷ್ಯಾ, ಜಪಾನದಂತಹ ಮುಂದುವರೆದ ಮುಂತಾದ ರಾಷ್ಟ್ರಗಳು ಅಭಿವೃದ್ಧಿಯಾಗಿವೆಯೆಂದರೆ, ಅದು ಅಲ್ಲಿನ ತಂತ್ರಜ್ಞಾನದ ಬೆಳವಣಿಗೆ ಮತ್ತು ಅದರ ಅಳವಡಿಕೆಯಿಂದಾಗಿದೆ. ಹೀಗಾಗಿ ಯಾವುದೆ ಒಂದು ರಾಷ್ಟ್ರವು ವೇಗವಾಗಿ ಅಭಿವೃದ್ಧಿ ಹೊಂದಬೇಕಾದರೆ ಅದಕ್ಕೆ ತಂತ್ರಜ್ಞಾನವೇ ಚಾಲನಾ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತ ವ್ಯಕ್ತಪಡಿಸಿದರು. ನಗರದ ಆಳಂದ ರಸ್ತೆಯ, ಖಾದ್ರಿ ಚೌಕ್‌ನಲ್ಲಿರುವ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ […]

Continue Reading

ತಾಯಿಗೆ ಸಮನಾದ ವ್ಯಕ್ತಿ ಬೇರೊಬ್ಬರಿಲ್ಲ: ಎಚ್.ಬಿ ಪಾಟೀಲ

ಕಲಬುರಗಿ: ಒಂಬತ್ತು ತಿಂಗಳು ಹೊತ್ತು, ಹೆತ್ತ, ತನ್ನ ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುವ ಹಾಗೂ ಪೋಷಿಸುವ ತಾಯಿಗೆ ಸಮಾನವಾದ ಮತ್ತೊಬ್ಬ ವ್ಯಕ್ತಿ ಜಗತ್ತಿನಲ್ಲಿ ಯಾರು ಇಲ್ಲ. ವರ್ಣಿಸಲು ಅಸಾಧ್ಯವಾದ, ಅನುಪಮ ವ್ಯಕ್ತಿ ತಾಯಿಯಾಗಿದ್ದಾಳೆ. ಇಡೀ ತನ್ನ ಜೀವನ ಸವೆಸಿ, ಮಕ್ಕಳನ್ನು ದೊಡ್ಡವರನ್ನಾಗಿ ಮಾಡಿದ ತಾಯಿಯನ್ನು ಪೂಜ್ಯನೀಯ ಸ್ಥಾನವನ್ನು ನೀಡಿ, ಆರೈಕೆ ಮಾಡಿ, ಗೌರವಿಸಬೇಕಾದದ್ದು ಪ್ರಸ್ತುತ ದಿನಗಳಲ್ಲಿ ಅತಿ ಅವಶ್ಯಕವಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಹೊರ ವಲಯದ ರಾಣೆಸ್ಪಿರ್ ದರ್ಗಾ ರಸ್ತೆಯಲ್ಲಿನ ನೆಮ್ಮದಿ ವೃದ್ಧಾಶ್ರಮದಲ್ಲಿ […]

Continue Reading

ನಾಡಿನ ಇತಿಹಾಸದ ಪುಟ ತೆರೆಯುವ ಬೋಳೆವಾಡ ಸ್ಮಾರಕಗಳು: ಮುಡುಬಿ ಗುಂಡೇರಾವ

ಚಿತ್ತಾಪುರ: ಕನ್ನಡಿಗರ ಶೌರ್ಯ, ಸಾಧನೆ, ಸಾಹಸ, ಪರಾಕ್ರಮತೆ, ತ್ಯಾಗ, ಬಲಿದಾನದ ರೋಚಕ ಇತಿಹಾಸ ಸಾರುವ ಬೋಳವಾಡದ ಸ್ಮಾರಕಗಳ ಬಗ್ಗೆ ಜನಜಾಗೃತಿ ಅವಶ್ಯಕ ಎಂದು ಸಂಶೋಧಕ-ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು.  ಚಿತ್ತಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬೋಳೆವಾಡ ಗ್ರಾಮದ ಭೊಗೇಶ್ವರ ದೇವಾಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-13 ರಲ್ಲಿ ಶನಿವಾರ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರಕೂಟರು ಮತ್ತು ಕಲ್ಯಾಣ ಚಾಲುಕ್ಯರ ಕಾಲದ ವೀರಗಲ್ಲುಗಳು, […]

Continue Reading

ಹೇಮರೆಡ್ಡಿ ಮಲ್ಲಮ್ಮ ಸ್ತ್ರೀಕುಲದ ಅನರ್ಘ್ಯ ರತ್ನ: ಎಚ್.ಬಿ ಪಾಟೀಲ

ಕಲಬುರಗಿ: ಪ್ರಸ್ತುತ ದಿನಗಳಲ್ಲಿ ಸಣ್ಣ ವಿಷಯಕ್ಕೂ ಕೌಟುಂಬಿಕ ಕಲಹದಿಂದಾಗಿ, ಅವಿಭಕ್ತ ಕುಟುಂಬಗಳು ನಾಶವಾಗಿ ಒಡೆದ ಮನಸ್ಸುಗಳಾಗುತ್ತಿವೆ. ಮಹಿಳೆಯರು ಎಲ್ಲವನ್ನು ಸಾಧಿಸಬಹುದೆಂದು ತೋರಿಸಿದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಆದರ್ಶ ವ್ಯಕ್ತಿತ್ವ ಸಮಸ್ತ ಮಹಿಳಾ ಲೋಕಕ್ಕೆ ಮಾದರಿಯಾಗಿದೆ, ಸ್ತ್ರೀಕುಲದ ಅನರ್ಘ್ಯ ರತ್ನವಾಗಿದ್ದಾರೆ ಎಂದು ಶರಣ ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದಿಂದ ಶನಿವಾರ ಜರುಗಿದ ‘ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ 603ನೇ ಜಯಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಲ್ಲಮ್ಮನವರು […]

Continue Reading

ಗೋಪಾಲಕೃಷ್ಣ ಗೋಖಲೆಯವರ 159ನೇ ಜನ್ಮದಿನೋತ್ಸವ

ಕಲಬುರಗಿ: ಸ್ವಾತಂತ್ರ್ಯ ಹೋರಾಟಗಾರ ಹಾಗೂ ಶಿಕ್ಷಣ ತಜ್ಞ ಗೋಪಾಲಕೃಷ್ಣ ಗೋಖಲೆಯವರ 159ನೇ ಜನ್ಮದಿನೋತ್ಸವವನ್ನು ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ನಗರದ ಶಹಾಬಜಾರ ಮಹಾದೇವ ನಗರದಲ್ಲಿನ ಸ್ವಾತಿ ಪ್ರೌಢಶಾಲೆಯಲ್ಲಿ ಶುಕ್ರವಾರ ಆಚರಿಸಲಾಯಿತು. ಗೋಖಲೆಯವರು ದೇಶದ ಸ್ವಾತಂತ್ರ್ಯಕ್ಕೆ ನೀಡಿದ ಕೊಡುಗೆಯ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಲಾಯಿತು. ಈ ಸಂದರ್ಭದಲ್ಲಿ ಉಪನ್ಯಾಸಕ ಎಚ್.ಬಿ ಪಾಟೀಲ, ಸಂಸ್ಥೆಯ ಅಧ್ಯಕ್ಷ ಚನ್ನಬಸಪ್ಪ ಗಾರಂಪಳ್ಳಿ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಶಿಕ್ಷಕಿಯರಾದ ಪೂರ್ಣಿಮಾ ಪಾಟೀಲ, ಪ್ರೀತಿ ಸಣಮನಿ ಹಾಗೂ ವಿದ್ಯಾರ್ಥಿಗಳು ಇದ್ದರು.

Continue Reading