ಭೀಮಾತೀರದ ಬಾಗಪ್ಪ ಹರಿಜನ್ ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ವಿಜಯಪುರ: ಭೀಮಾತೀರದ ಬಾಗಪ್ಪ ಹರಿಜನ್ ಹತ್ಯೆ ಪ್ರಕರಣದ ಹಂತಕರಾದ ಪಿಂಟ್ಯಾ ಅಗರಖೇಡ್ ಸೇರಿದಂತೆ ನಾಲ್ವರನ್ನು ಗಾಂಧಿಚೌಕ ಪೊಲೀಸರು ಬಂಧಿಸಿದ್ದಾರೆ. ಎ -1 ಆರೋಪಿ ಪ್ರಕಾಶ ಅಲಿಯಾಸ್ ಪಿಂಟ್ಯಾ ಅಗರಖೇಡ್ (25), ಎ-2 ರಾಹುಲ್ ತಳಕೇರಿ (20), ಎ-3 ಗದಿಗೆಪ್ಪ ಅಲಿಯಾಸ್ ಮಣಿಕಂಠ ದನಕೊಪ್ಪ (27), ಎ-4 ಸುದೀಪ್ ಕಾಂಬಳೆ (23) ಬಂಧಿತ ಆರೋಪಿಗಳು. ಎಸ್ಪಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ್ ಮಾರಿಹಾಳ, ಎಎಸ್ಪಿ ಹಟ್ಟಿ, ಡಿವೈಎಸ್ಪಿ ಬಸವರಾಜ ಎಲಿಗಾರ್, ಸಿಪಿಐ ಪ್ರದೀಪ್ ತಳಕೇರಿ, ಪಿಎಸ್‌ಐ ರಾಜು ನೇತೃತ್ವದಲ್ಲಿ […]

Continue Reading

ಗುರುಪಾದೇಶ್ವರ ಕಾಲೇಜಿನಲ್ಲಿ ಸ್ಕಾಲರ್‌’ಶಿಪ್ ಪ್ರವೇಶ ಪರೀಕ್ಷೆ 16ಕ್ಕೆ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಶ್ರೀ ಗುರುಪಾದೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಫೆ.16ರಂದು ಸ್ಕಾಲರ್‌ಪ್ ಪ್ರವೇಶ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಗುರುಪಾದೇಶ್ವರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ವಾದಿರಾಜ ವ್ಯಾಸಮುದ್ರ ತಿಳಿಸಿದ್ದಾರೆ. ಬೆಳಗ್ಗೆ 11 ರಿಂದ 12ರವರೆಗೆ ಪರೀಕ್ಷೆ ನಡೆಯಲಿದೆ. ಬಹು ಆಯ್ಕೆಯ ಮಾದರಿ ಪ್ರಶ್ನೆ ಪತ್ರಿಕೆ ಇರಲಿದೆ. ಕನ್ನಡ ಹಾಗೂ ಆಂಗ್ಲ ಭಾಷೆಯಲ್ಲಿ ಪಿಸಿಎಂಬಿ ವಿಷಯಗಳಿಂದ ತಲಾ 10 ಪ್ರಶ್ನೆಗಳು ನೀಡಲಾಗುವುದು. ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಟಾಪ್ 10 […]

Continue Reading

ಬುರ್ರ ಕಥೆ ಕಲಾವಿದೆ ಬಸ್ಸಮ್ಮ ಅವರಿಗೆ ಜನಪದ ಲೋಕ ಪ್ರಶಸ್ತಿ ಪ್ರಧಾನ

ಚಿತ್ತಾಪುರ: ಮಹಿಳಾ ಜನಪದ ಲೋಕೋತ್ಸವ ಸಮಾರಂಭದಲ್ಲಿ ರಾಮತೀರ್ಥ ಗ್ರಾಮದ ಬುರ್ರ ಕಥೆ ಕಲಾವಿದೆ ಬಸ್ಸಮ್ಮ ಅವರಿಗೆ ಜನಪದ ಲೋಕತ್ಸವ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ರಾಮನಗರದ ಜನಪದ ಲೋಕದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಿಳಾ ಜನಪದ ಲೋಕೋತ್ಸವ ಸಮಾರಂಭದಲ್ಲಿ ಚಿತ್ತಾಪುರ ತಾಲೂಕಿನ ರಾಮತೀರ್ಥ ಗ್ರಾಮದ ಬುರ್ರ ಕಥೆ ಕಲಾವಿದೆ ಬಸ್ಸಮ್ಮ ಅವರಿಗೆ ಜನಪದ ಲೋಕತ್ಸವ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ನಿರ್ಮಲಾನಂದ […]

Continue Reading

ಪೋಷಕಾಂಶಗಳ ಆಗರವಾದ ದ್ವಿದಳ ಧಾನ್ಯಗಳನ್ನು ಸೇವಿಸಿ: ಡಾ.ಪ್ರಮೋದ ಗುಂಡಗುರ್ತಿ

ಕಲಬುರಗಿ: ತೊಗರಿ ಬೇಳೆ, ಕಡಲೆಕಾಳು ಸೇರಿದಂತೆ ಸುಮಾರು 22 ತರಹದ ದ್ವಿದಳ ಧಾನ್ಯಗಳಿವೆ. ವಿಶೇಷವಾಗಿ ಬಾಣಂತಿಯರು ಮತ್ತು ಮಕ್ಕಳಲ್ಲಿ ಕಂಡುಬರುತ್ತಿರುವ ಅಪೌಷ್ಠಿಕತೆ ಹೋಗಲಾಡಿಸಲು ದ್ವಿದಳ ಧಾನ್ಯ ಉತ್ತಮ ಆರೋಗ್ಯಕ್ಕಾಗಿ ಮತ್ತು ರೋಗ ನಿರೋಧಕ ಶಕ್ತಿಗಾಗಿ ಬೇಕಾದ ಪ್ರೋಟಿನ್, ಫೈಬರ್ ಪ್ರಮಾಣ ಹೆಚ್ಚಾಗಿರುವದರಿಂದ ಅವುಗಳನ್ನು ಸೇವಿಸುವ ಮೂಲಕ ಅಪೌಷ್ಠಿಕತೆ ನಿರ್ಮೂಲನೆ ಮಾಡಲು ಪ್ರಯತ್ನಿಸಬೇಕಾಗಿದೆ ಎಂದು ಆಯುರ್ವೇದ ಮತ್ತು ಪ್ರಕೃತಿ ಚಿಕಿತ್ಸೆ ತಜ್ಞ ಡಾ.ಪ್ರಮೋದ ಗುಂಡಗುರ್ತಿ ಸಲಹೆ ನೀಡಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ […]

Continue Reading

ಜೀತ ಪದ್ದತಿ ಅಮಾನವಿಯ ಮತ್ತು ಶಿಕ್ಷಾರ್ಹ ಅಪರಾಧ

ಕಲಬುರಗಿ: ಬಡವರನ್ನು ಶೋಷಣೆ ಮಾಡುವ ಜೀತ ಪದ್ದತಿ ಅಮಾನವೀಯ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ. ಅದರ ಸಂಪೂರ್ಣ ನಿರ್ಮೂಲನಗೆ ಎಲ್ಲರ ಸಹಕಾರ ಅಗತ್ಯ ಎಂದು ಸಾಮಾಜಿಕ ಕಾರ್ಯಕರ್ತ ಶಿವಕುಮಾರ ಬಿರಾದಾರ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿನ ಸ್ವಾತಿ ಮತ್ತು ಶಿವಾ ಪ್ರೌಢಶಾಲೆಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ ಜೀತ ಪದ್ದತಿಯ ನಿರ್ಮೂಲನೆ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬ್ರಿಟಿಷರ ಆಡಳಿತ, ಬಡತನ, ನಿರುದ್ಯೋಗ, ಅನಕ್ಷರತೆಯಂತಹ ಕಾರಣಗಳಿಂದ ದಾರಿದ್ರ್ಯಉಂಟಾಗುವ ಮೂಲಕ ತುಂಬಾ ಕಷ್ಟ […]

Continue Reading

ಬಾಬಾ ಅಮ್ಟೆ ಶ್ರೇಷ್ಟ ಸಾಮಾಜಿಕ ಕಾರ್ಯಕರ್ತ

ಕಲಬುರಗಿ: ಮಹಾತ್ಮ ಗಾಂಧಿಜಿಯವರ ಅನುಯಾಯಿಯಾಗಿ ಅವರ ತತ್ವಗಳನ್ನು ಪ್ರಚುರ ಪಡಿಸಿದ್ದಾರೆ. ಅವರು ಶ್ರೇಷ್ಟ ಸಾಮಾಜಿಕ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಶಿವ ನಗರದಲ್ಲಿರುವ ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನಲ್ಲಿ ಬಸವೇಸ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ ಬಾಬಾ ಅಮ್ಟೆಯವರ 17ನೇ ಸ್ಮರಣೆ’ಯಲ್ಲಿ ಭಾವಚಿತ್ರಕ್ಕೆ ನಮನ ಸಲ್ಲಿಸಿ ಮಾತನಾಡಿದ ಅವರು, ಬಾಬಾ ಅಮ್ಟೆ ಅವರು ಸಮಾಜದಲ್ಲಿರುವ ಕುಷ್ಟರೋಗಿಗಳ ಕಲ್ಯಾಣಕ್ಕಾಗಿ ಸಾಕಷ್ಟು ಶ್ರಮಿಸಿದ್ದಾರೆ. ಅವರಲ್ಲಿರುವ ಸಮಾಜಪರ ಕಾಳಜಿ ಮಾದರಿಯಾಗಿದೆ. ದೇಶದ […]

Continue Reading

ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದು ಮಗಳನ್ನೆ ಕೊಲೆ ಮಾಡಿದ ತಂದೆ

ಬೀದರ್: ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದ ತಂದೆ ದೊಣ್ಣೆಯಿಂದ ಹೊಡೆದು ಮಗಳನ್ನು ಬರ್ಬರ ಹತ್ಯೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರಗೇನ್ ತಾಂಡಾದಲ್ಲಿ ನಡೆದಿದೆ. ಮೋನಿಕಾ ಮೋತಿರಾಮ ಜಾಧವ್ (18) ಕೊಲೆಯಾದ ದುರ್ದೈವಿ. ಮಗಳನ್ನು ಕೊಲೆ ಮಾಡಿದ ತಂದೆ ಮೋತಿರಾಮ ಪರಾರಿಯಾಗಿದ್ದಾನೆ. ಪ್ರೀತಿ-ಪ್ರೇಮದಿಂದ ದೂರವಿರುವಂತೆ ಮಗಳಿಗೆ ತಂದೆ ತಿಳುವಳಿಕೆ ಹೇಳಿದ್ದಾನೆ. ಅಲ್ಲದೆ ನಿನಗೆ ಒಳ್ಳೆಯ ಹುಡುಗನನ್ನು ನೋಡಿ ಮದುವೆ ಮಾಡುತ್ತೆನೆ ಎಂದಿದ್ದಾನೆ. ಈ ವೇಳೆ ತಂದೆಯ ಎದುರು ಮಗಳು ಪ್ರೀತಿ ವಿಷಯ ಪ್ರಸ್ತಾಪಿಸಿದ್ದಲ್ಲದೆ ಅವನನ್ನೆ ಮದುವೆ […]

Continue Reading

ಮಾತೆ ರಮಾಬಾಯಿ ಅಂಬೇಡ್ಕರ್‌ರ ಚರಿತ್ರೆ ಪಠ್ಯಕ್ಕೆ ಸೇರ್ಪಡೆಯಾಗಲಿ

ಕಲಬುರಗಿ: ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ದೇಶ ಕಟ್ಟುವ ಕಾರ್ಯಕ್ಕೆ ನಿರಂತರವಾಗಿ ಸಹಕಾರ, ಶ್ರಮವಹಿಸಿದ ಮಾತೆ ರಮಾಬಾಯಿ ಅಂಬೇಡ್ಕರ್ ಅವರ ತ್ಯಾಗ, ಸಾಮಾಜಿಕ ತುಡಿತ, ಕೊಡುಗೆಯನ್ನು ವಿದ್ಯಾರ್ಥಿ ದೆಸೆಯಿಂದಲೇ ಪರಿಚಯಿಸುವ ನಿಟ್ಟಿನಲ್ಲಿ ಅವರ ಚರಿತೆಯನ್ನು ಪಠ್ಯಕ್ಕೆ ಸೇರ್ಪಡೆಯಾಗಬೇಕು. ಸರ್ಕಾರದ ವತಿಯಿಂದ ಜಯಂತಿ ಆಚರಿಸಬೇಕು. ಮರಣೋತ್ತರವಾಗಿ ‘ಭಾರತ ರತ್ನ’ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಸಾಮಾಜಿಕ ಹೋರಾಟಗಾರ, ಚಿಂತಕ ಡಾ.ಸುನೀಲಕುಮಾರ ಎಚ್.ವಂಟಿ ಸರ್ಕಾರಕ್ಕೆ ಒತ್ತಾಸೆ ಮಾಡಿದರು. ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದ ಸಮೀಪದ ಬ್ಯಾಂಕ್ ಕಾಲೋನಿಯ ಉದ್ಯಾನವನದಲ್ಲಿ ಬಸವೇಶ್ವರ ಸಮಾಜ […]

Continue Reading

ಬಹುಮುಖ ಪ್ರತಿಭೆಯ ಮೇರು ಲೇಖಕ ಡಾ.ಕೆ.ಎಸ್ ನಿಸಾರ ಅಹಮ್ಮದ್

ಕಲಬುರಗಿ: ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಲು ಅನೇಕ ಸಾಹಿತಿಗಳು ಶ್ರಮಿಸಿದ್ದಾರೆ. ಉತ್ತಮ ಲೇಖಕ, ಶಿಕ್ಷಕ, ಸಾಹಿತಿಯಾಗಿ ಸಮಾಜಮುಖಿ ಚಿಂತನೆಗಳುಳ್ಳ ಸಾಹಿತ್ಯ ಕೃಷಿ ಮಾಡುವ ಮೂಲಕ ‘ನಿತ್ಯೋತ್ಸವ ಕವಿ’ ಎಂದು ಪ್ರಸಿದ್ಧಿ ಪಡೆದಿರುವ ಡಾ.ಕೆ.ಎಸ್ ನಿಸಾರ ಅಹಮ್ಮದ್ ಅವರು ಬಹುಮುಖ ಪ್ರತಿಭೆಯ ಮೇರು ಲೇಖಕರು ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ಡಾ.ಕೆ.ಎಸ್ ನಿಸಾರ ಅಹಮ್ಮದ್‌ರ 89ನೇ ಜನ್ಮದಿನಾಚರಣೆ’ಯಲ್ಲಿ ಭಾವಚಿತ್ರಕ್ಕೆ ನಮನ […]

Continue Reading

ಆರೋಗ್ಯಕರ ಜೀವನ ಶೈಲಿಯಿಂದ ಕ್ಯಾನ್ಸರ್ ದೂರ

ಕಲಬುರಗಿ: ತಂಬಾಕು, ಮದ್ಯಪಾನ, ರಾಸಾಯನಿಕಯುಕ್ತ ಆಹಾರ ಸೇವನೆ ಮಾಡಿರುವುದು, ಸಮತೋಲಿತ ಆಹಾರ ಸೇವಿಸುವುದು, ತೂಕ ನಿರ್ವಹಣೆ ಮಾಡುವುದು ಸೇರಿದಂತೆ ಮುಂತಾದ ಆರೋಗ್ಯಕರ ಜೀವನ ಶೈಲಿಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ಕ್ಯಾನ್ಸರ್ ರೋಗ ಬರದಂತೆ ತಡೆಯಬಹುದಾಗಿದೆ ಎಂದು ಖ್ಯಾತ ಕುಟುಂಬ ವೈದ್ಯ ಡಾ.ರಾಜಶೇಖರ ಪಾಟೀಲ ಹೇಳಿದರು. ಅಫಜಲಪುರ ತಾಲೂಕಿನ ಟಾಕಳಿಯಲ್ಲಿ ಕಲಬುರಗಿಯ ಸಕ್ಸಸ್ ಕಂಪ್ಯೂಟರ ತರಬೇತಿ ಸಂಸ್ಥೆ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಕ್ಯಾನ್ಸರ್ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ವಯಸ್ಸು, ಲಿಂಗ, ಅನುವಂಶೀಯತೆ, […]

Continue Reading