ಕ್ಷಯರೋಗದ ವಿರುದ್ಧ ಹೋರಾಡಲು ಬಿಸಿಜಿ ಲಸಿಕೆ ಪಡೆಯುವುದು ಅಗತ್ಯ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಕ್ಷಯರೋಗದ ವಿರುದ್ಧ ಹೋರಾಡಲು ಬಿಸಿಜಿ ಲಸಿಕೆ ಪಡೆಯುವುದು ಅಗತ್ಯವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಜರುಗಿದ ‘ಟಿಬಿ ಸೋಲಿಸಿ, ದೇಶ ಗೆಲ್ಲಿಸಿ’ ಬಿಸಿಜಿ ಲಸಿಕಾಕರಣ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ಎರಡು ವಾರ ಅಥವಾ ಹೆಚ್ಚಿನ ಅವಧಿಯ ಕೆಮ್ಮು, ಕಫದ ಜೊತೆಗೆ ರಕ್ತ ಕಾಣಿಸುವುದು, ವಿಶೇಷವಾಗಿ ರಾತ್ರಿ ಸಮಯದಲ್ಲಿ ಜ್ವರ ಬರುವುದು, ತೂಕದ ಇಳಿಕೆ, ರಾತ್ರಿ […]

Continue Reading

ಅರ್ಥಪೂರ್ಣ ಜೀವನ ನಮ್ಮದಾಗಲಿ: ಶರಣಯ್ಯ ಸ್ವಾಮಿ

ಕಲಬುರಗಿ: ಪ್ರತಿಯೊಬ್ಬರು ತಮ್ಮಿಂದ ಸಾಧ್ಯವಾದಷ್ಟು ಸಮಾಜದ ಒಳಿತಿಗಾಗಿ ನಿಸ್ವಾರ್ಥ ಸೇವೆ ಸಲ್ಲಿಸಬೇಕೆಂಬ ಮನೋಭಾವನೆ ಮೈಗೂಡಿಸಿಕೊಂಡರೆ ಸುಂದರ ಸಮಾಜ, ದೇಶ ರೂಪುಗೊಳ್ಳಲು ಸಾಧ್ಯವಾಗುತ್ತದೆ. ಅಂತಹ ಅರ್ಥಪೂರ್ಣ ಜೀವನ ನಮ್ಮದಾಗಲಿ ಎಂದು ನೀಲೂರನ ಬಂಗಾರ ಜಡೆ ನೀಲಕಂಠೇಶ್ವರ ಹಿರೇಮಠದ ಪೂಜ್ಯ ಶರಣಯ್ಯ ಸ್ವಾಮಿ ಆಶಯ ವ್ಯಕ್ತಪಡಿಸಿದರು. ನಗರದ ಅಫಜಲಪುರ ತಾಲೂಕಿನ ನೀಲೂರ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನ ಆವರಣದಲ್ಲಿ ಕಲಬುರಗಿಯ ಸುಜಯ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ‘ಶ್ರೀ ಸಾಯಿ ಪ್ರಸಾದ ಎಂಎಸ್’ಡಬ್ಲ್ಯೂ ಕಾಲೇಜ್’ನ ಸಮಾಜ ಕಾರ್ಯದ ಒಂದು ವಾರ ಶಿಬಿರದ […]

Continue Reading

ನಗುವಿನಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಗುಂಡಣ್ಣ ಡಿಗ್ಗಿ

ಕಲಬುರಗಿ: ನಗುವದರಿಂದ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಹೃದಯಘಾತವಾಗುವ ಸಂಭವನೀಯತೆ ಕಡಿಮೆಯಾಗುತ್ತದೆ. ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ. ಮಾನಸಿಕವಾಗಿ ನೆಮ್ಮದಿ, ವ್ಯಕ್ತಿಯ ಆಯಸ್ಸು ಹೆಚ್ಚಾಗುತ್ತದೆ ಎಂದು ಖ್ಯಾತ ಹಾಸ್ಯ ಕಲಾವಿದ ಗುಂಡಣ್ಣ ಡಿಗ್ಗಿ ಹೇಳಿದರು. ಅಫಜಲಪುರ ತಾಲೂಕಿನ ನೀಲೂರ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗ ಮತ್ತು ಸುಜಯ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ ಇವುಗಳ ವತಿಯಿಂದ ಜರುಗಿದ ‘ವಿಶ್ವ ನಗುವಿನ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ಅವಿಭಕ್ತ ಕುಟುಂಬವಿದ್ದ […]

Continue Reading

ಅಗ್ನಿಶಾಮಕರು ಸಮಾಜದ ರಕ್ಷಕರು: ಅಂಕುಶ್ ಆಳಂದೆ

ಕಲಬುರಗಿ: ಬೆಂಕಿ ಅವಗಡ, ಭೂಕಂಪ, ಅತಿವೃಷ್ಟಿ, ನೆರೆ ಹಾವಳಿ, ಪ್ರವಾಹದಂತಹ ತುರ್ತು ಸಂದರ್ಭದಲ್ಲಿ ಜೀವದ ಹಂಗನ್ನು ತೊರೆದು ಸಾರ್ವಜನಿಕರ ಜೀವ ರಕ್ಷಿಸುವ ಅಗ್ನಿಶಾಮಕರು ಸಮಾಜದ ಕಾವಲುಗಾರ ಹಾಗೂ ರಕ್ಷಕರಾಗಿದ್ದಾರೆ. ಅವರಿಗೆ ಸಾರ್ವಜನಿಕ ಸುರಕ್ಷತೆ, ಸಮಾಜದ ರಕ್ಷಣೆಯೆ ಪ್ರಮುಖವಾಗಿದೆ ಎಂದು ಅಗ್ನಿಶಾಮಕ ಠಾಣಾಧಿಕಾರಿ ಅಂಕುಶ್ ಎ ಆಳಂದೆ ಅಭಿಪ್ರಾಯಪಟ್ಟರು. ನಗರದ ಅಗ್ನಿಶಾಮಕ ಠಾಣೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ ಮತ್ತು ಅಗ್ನಿಶಾಮಕ ಠಾಣೆಯ ಜಂಟಿ ಆಶ್ರಯದಲ್ಲಿ ರವಿವಾರ ಏರ್ಪಡಿಸಿದ್ದ್ ‘ಅಂತಾರಾಷ್ಟ್ರೀಯ ಅಗ್ನಿಶಾಮಕರ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಡಿಸೆಂಬರ್ […]

Continue Reading

ಭೂಮಿಗೆ ಗಂಗೆಯನ್ನು ಹರಿಸಿದ ಭಗೀರಥ ಮಹರ್ಷಿ: ಎಚ್.ಬಿ ಪಾಟೀಲ

ಕಲಬುರಗಿ: ಭಾರತ ಅನೇಕ ಮಹನೀಯರ, ಶರಣರ, ಋಷಿ-ಮುನಿಗಳ ತವರೂರಾಗಿದೆ. ಇದರಲ್ಲಿ ಭಗೀರಥ ಮಹರ್ಷಿ ಕೇವಲ ರಾಜ ಮಾತ್ರನಾಗಿರದೆ, ಭಕ್ತಿಯ ಸಂಪನ್ನರಾಗಿದ್ದರು. ಅವರು ಘೋರವಾದ ತಪ್ಪಸ್ಸು ಮಾಡಿ ಭೂಮಿಗೆ ಗಂಗೆಯನ್ನು ಹರಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿರುವ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ‘ಭಗೀರಥ ಮಹರ್ಷಿ ಜಯಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ನಾವು ನುಡಿಗಟ್ಟಾಗಿ ಬಳಸುವ ‘ಭಗೀರಥ ಪ್ರಯತ್ನ’ ಎಂಬ […]

Continue Reading

ಮುಕ್ತ ಪತ್ರಿಕೋದ್ಯಮಕ್ಕೆ ಬೆಂಬಲ ನೀಡುವುದು ಅಗತ್ಯ: ಎಚ್.ಬಿ ಪಾಟೀಲ

ಕಲಬುರಗಿ: ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳ ಚಟುವಟಿಕೆ ಬಗ್ಗೆ ನಿಗಾ ವಹಿಸಿ, ದೇಶದ ಸಮಸ್ಯೆಗಳ ಬಗ್ಗೆ ಮೇಲಿಂದ ಮೇಲೆ ಬೆಳಕು ಚೆಲ್ಲಿ, ಅದಕ್ಕೆ ಪರಿಹಾರ ಹುಡುಕುವಂತೆ ಮಾಡಿ ಸ್ವಸ್ಥ, ಸಧೃಢ ರಾಷ್ಟ್ರ ನಿರ್ಮಾಣಕ್ಕೆ ‘ಮಾಧ್ಯಮ ರಂಗ’ ತನ್ನದೆಯಾದ ಅದ್ವಿತೀಯ ಕೊಡುಗೆಯನ್ನು ನೀಡುತ್ತಿದೆ. ಸಮಾಜಕ್ಕೆ ಸ್ವತಂತ್ರ, ನಿರ್ಭೀತ, ನ್ಯಾಯಯುತ ಪತ್ರಿಕೋದ್ಯಮ ಅಗತ್ಯ. ಪತ್ರಿಕೋದ್ಯಮವು ಮುಕ್ತವಾಗಿ ಕಾರ್ಯನಿರ್ವಹಿಸಲು ಬೆಂಬಲ ನೀಡುವುದು ಅವಶ್ಯಕ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತ ವ್ಯಕ್ತಪಡಿಸಿದರು. ನಗರದ ಖಾದ್ರಿ ಚೌಕ್‌ನಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ […]

Continue Reading

ದೇಶದ ಐಕ್ಯತೆಗಾಗಿ ಮೋದಿ ಸರ್ಕಾರ ಏನೆ ಕ್ರಮ ಕೈಗೊಂಡರು ಬೆಂಬಲ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ದೇಶದ ಐಕ್ಯತೆಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಏನೇ ನಿರ್ಧಾರಗಳನ್ನು ಅಥವಾ ಕ್ರಮಗಳನ್ನು ಕೈಗೊಂಡರೂ ಅದಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದರು. ಪಹಲ್ಗಾಮ್ ಉಗ್ರ ದಾಳಿ ವಿಚಾರವಾಗಿ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ದೇಶಕ್ಕಾಗಿ ಏನೆ ನಿರ್ಧಾರ ಕೈಗೊಂಡರು ಬೆಂಬಲಿಸುತ್ತೆವೆ. ಆದರೆ ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳಬೇಕು ಎಂದರು. ಕೇವಲ ಭಾಷಣ […]

Continue Reading

ಕಾರ್ಮಿಕರಿಗೆ ಸೇವಾ ಭದ್ರತೆ, ಸೂಕ್ತ ವೇತನ ದೊರೆಯಲಿ

ಕಲಬುರಗಿ: ಬೆವರು ಹರಿಸಿ, ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಕಾಯಕ ಜೀವಿಗಳ ಕೊಡುಗೆ ಸಮಾಜ ಮರೆಯುವಂತಿಲ್ಲ. ಅವರಿಗೆ ಸೇವಾ ಭದ್ರತೆ, ಸೂಕ್ತ ವೇತನ ನೀಡಬೇಕು ಎಂದು ಕಾರ್ಮಿಕ ಮುಖಂಡ ಡಾ.ಸುನೀಲಕುಮಾರ ಎಚ್.ವಂಟಿ ಹೇಳಿದರು. ನಗರದ ಜಗತ್ ವೃತ್ತದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಪುತ್ತಳಿಯ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ವಿಶ್ವ ಕಾರ್ಮಿಕರ ದಿನಾಚರಣೆ’ಯಲ್ಲಿ ಕಾರ್ಮಿಕರಿಗೆ ಸತ್ಕರಿಸಿ, ಮಾತನಾಡಿದರು. ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ ಪಾಟೀಲ್ ಮಾತನಾಡಿ, ‘ನಮಿಸುವ ಕೈಗಳಿಗಿಂತ, ದುಡಿಯುವ ಕೈಗಳು ಶ್ರೇಷ್ಟ’ವಾಗಿವೆ. […]

Continue Reading

ರಾತ್ರಿ ವೇಳೆ ಮನೆಗಳಿಗೆ ಕನ್ನ, ಐಷಾರಾಮಿ ಜೀವನ: ಪಾಪ ಪರಿಹಾರಕ್ಕೆ ಸಮಾಜ ಸೇವೆ ಮಾಡುತ್ತಿದ್ದ ಕಳ್ಳನ ಬಂಧನ

ಕಲಬುರಗಿ: ಕದ್ದ ಹಣವನ್ನು ಜಾತ್ರೆಗಳಲ್ಲಿ ಸಾಮೂಹಿಕ ಭೋಜನಕ್ಕೆ, ಮದ್ಯ ಮತ್ತು ಮನರಂಜನೆಗಾಗಿ ಖರ್ಚು ಮಾಡುತ್ತಿದ್ದ ಕಳ್ಳನನ್ನು ಕಲಬುರಗಿಯ ಅಶೋಕ್ ನಗರ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯ ಭಾಗ್ಯವಂತಿ ನಗರದ ನಿವಾಸಿ ಶಂಕರಗೌಡ ನೀಡಿದ ದೂರಿನ ಆಧಾರದ ಮೇಲೆ, ಏಪ್ರಿಲ್ 13 ರಂದು ತಮ್ಮ ಕುಟುಂಬದೊಂದಿಗೆ ಹೊರ ಹೋಗಿದ್ದರು. ಆ ಸಮಯದಲ್ಲಿ ಕಳ್ಳರು 343 ಗ್ರಾಂ ಚಿನ್ನಾಭರಣ, 14.5 ಲಕ್ಷ ರೂ. ನಗದು, 10,000 ರೂ. ಮೌಲ್ಯದ 40 ಗ್ರಾಂ ಬೆಳ್ಳಿ ವಸ್ತುಗಳನ್ನು ಕದ್ದಿದ್ದಾರೆ ಎಂದು ಕಲಬುರಗಿ ಪೊಲೀಸ್ ಆಯುಕ್ತ […]

Continue Reading

ಹೆಚ್ಚುವರಿ ಎಸ್‌ಪಿ ವಿರುದ್ಧ ಸಿಎಂ ಗರಂ: ವೇದಿಕೆಯಲ್ಲೆ ತರಾಟೆ

ಬೆಳಗಾವಿ: ಕಾಂಗ್ರೆಸ್‌ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು ವೇದಿಕೆ ಪ್ರವೇಶಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿ ವೇದಿಕೆ ಮೇಲೆಯೆ ಧಾರವಾಡದ ಹೆಚ್ಚುವರಿ ಎಸ್‌ಪಿ ನಾರಾಯಣ ಭರಮನಿ ವಿರುದ್ಧ ಗರಂ ಆದ ಪ್ರಸಂಗ ಬೆಳಗಾವಿಯಲ್ಲಿ ನಡೆದಿದೆ. ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್‌ ಪ್ರತಿಭಟನಾ ಸಭಾ ಆಯೋಜಿಸಿತ್ತು. ಸಿಎಂ ಮಾತನಾಡುವಾಗ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು. ಈ ವೇಳೆ ಸಂಯಮ ಕಳೆದುಕೊಂಡ ಸಿಎಂ ಹೆಚ್ಚುವರಿ ಎಸ್‌ಪಿಯನ್ನು ತರಾಟೆಗೆ ತೆಗೆದುಕೊಂಡರು. ಆಗಿದ್ದು ಏನು ?ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ […]

Continue Reading