ಕೋಲಿ ಸಮಾಜದ ಸಂಘಟನೆ ಬಲಪಡಿಸಲು ಲಚ್ಚಪ್ಪ ಜಮಾದಾರ ಸಲಹೆ

ಚಿತ್ತಾಪುರ: ಕೋಲಿ ಸಮಾಜದ ಸರ್ವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಾಜದ ಸಂಘಟನೆಗೆ ಶ್ರಮಿಸಬೇಕು ಎಂದು ಕರ್ನಾಟಕ ರಾಜ್ಯ ಕೋಲಿ, ಕಬ್ಬಲಿಗ ಎಸ್.ಟಿ‌ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಲಚ್ಚಪ್ಪ ಜಮಾದಾರ ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ಭೇಟಿಯಾದ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಾಜದ ಜನರಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಸಾಂಸ್ಕೃತಿಕವಾಗಿ ಅರಿವು, ಜಾಗ್ರತೆ ಮೂಡಿಸುವ ಕೆಲಸ ಮಾಡಬೇಕು. ಸಮಾಜದ ಮೇಲೆ ನಡೆಯುವ ದಬ್ಬಾಳಿಕೆ, ದೌರ್ಜನ್ಯ, ಅನ್ಯಾಯವನ್ನು ತಡೆಗಟ್ಟಲು ಪ್ರಬಲ ಹೋರಾಟ ರೂಪಿಸಬೇಕು. ಸಮಾಜದ ಜನರಿಗೆ ನ್ಯಾಯ ಕೊಡಿಸಲು ಚಳುವಳಿ ರೂಪಿಸಿ ಧ್ವನಿ […]

Continue Reading

ಅಭಿವೃದ್ದಿ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತ ದೇವಯ್ಯ ಗುತ್ತೇದಾರರಿಗೆ ಕಸಾಪದಿoದ ಸನ್ಮಾನ

ಕಲಬುರಗಿ: ಅಭಿವೃದ್ದಿ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತ ವಿಜಯ ಕರ್ನಾಟಕ ದಿನಪತ್ರಿಕೆ ಸ್ಥಾನಿಕ ಸಂಪಾದಕ ದೇವಯ್ಯ ಗುತ್ತೇದಾರ ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ್ ಇಲಾಖೆ ವತಿಯಿಂದ ಕೊಡಮಾಡಿದ ಅಭಿವೃದ್ದಿ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತ ದೇವಯ್ಯ ಗುತ್ತೇದಾರ ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹಾಗೂ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ಭುವನೇಶ್ವರಿ ಭಾವಚಿತ್ರ ನೀಡಿ, ಕನ್ನಡ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು.‌

Continue Reading

ಕ್ರೀಡಾ ಪತ್ರಿಭೆಗಳ ಗುರುತಿಸಿ, ಪ್ರೋತ್ಸಾಹಿಸುವುದು ಅಗತ್ಯ

ಕಲಬುರಗಿ: ಕ್ರೀಡಾ ಕ್ಷೇತ್ರದಲ್ಲಿ ಎಲೆಮರೆ ಕಾಯಿಯಂತೆ ಅನೇಕ ಪ್ರತಿಭಾವಂತರಿದ್ದಾರೆ. ಅವರನ್ನು ಗುರುತಿಸಿ ಸೂಕ್ತ ತರಬೇತಿ ನೀಡಿ, ಸಾಧನೆಗೆ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಧರ್ಮಾರಾಜ ಜವಳಿ ಹೇಳಿದರು. ನಗರದ ಗಂಗಾ ನಗರದ ವಿವೇಕಾನಂದ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟಕ್ಕೆ ಪಾರಿವಾಳ ಹಾರಿಬಿಡುವ ಮೂಲಕ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ಉಪನ್ಯಾಸಕ ಎಚ್.ಬಿ ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ, ಕ್ರೀಡಾ ಚಟುವಟಿಕೆಗಲ್ಲಿಯೂ ಭಾಗವಹಿಸಬೇಕು. ಕ್ರೀಡೆಗಳಲ್ಲಿ ತೊಡಗುವುದರಿಂದ […]

Continue Reading

ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಪತ್ರಿಕಾ ರಂಗದ ಮೇಲಿದೆ ಗುರುತರ ಜವಾಬ್ದಾರಿ: ಡಾ. ಶಿವರಂಜನ ಸತ್ಯಂಪೇಟೆ

ಕಲಬುರಗಿ: ಪತ್ರಿಕೆಗಳು ಸಮಾಜಮುಖಿ, ಅಭಿವೃದ್ಧಿ, ವೈಚಾರಿಕತೆ, ಮೌಲ್ಯಯುತ, ಧನಾತ್ಮಕ ವಿಷಯದ ಬಗ್ಗೆ ಸುದ್ದಿ ಬಿತ್ತರಿಸಿದರೆ ಮಾತ್ರ ಸಾಮಾಜಿಕ ಸ್ವಾಸ್ಥ್ಯಕಾಪಾಡಲು ಸಾಧ್ಯವಾಗುತ್ತದೆ. ಇಂತಹ ಗುರುತರ ಜವಾಬ್ದಾರಿ ಪತ್ರಿಕೆ, ಪತ್ರಕರ್ತರ ಮೇಲಿದೆ ಎಂದು ಹಿರಿಯ ಪತ್ರಕರ್ತ ಡಾ. ಶಿವರಂಜನ ಸತ್ಯಂಪೇಟೆ ಅಭಿಮತಪಟ್ಟರು. ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿಪೂರ್ವ ಕಾಲೇಜ್’ನ ಎನ್.ಎಸ್.ಎಸ್ ಘಟಕದ ವತಿಯಿಂದ ಜರುಗುತ್ತಿರುವ ವಾರ್ಷಿಕ ವಿಶೇಷ ಶಿಬಿರದ ನಾಲ್ಕನೇ ದಿನವಾದ ಬುಧವಾರ ಶಕಾಪೂರ ಗ್ರಾಮದ ವಿಶ್ವರಾಧ್ಯ ತಪೋವನ ಮಠದ ಆವರಣದಲ್ಲಿ ಏರ್ಪಡಿಸಿದ್ದ ‘ಸಾಮಾಜಿಕ ಸ್ವಾಸ್ಥ್ಯಕಾಪಾಡುವಲ್ಲಿ […]

Continue Reading

ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಯುವಕ, ಅರಣ್ಯ ಇಲಾಖೆ ಸಿಬ್ಬಂದಿ ಶಾಕ್

ತುಮಕೂರು: ಯುವಕನೋರ್ವ ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ನಡೆದಿದೆ. ಚಿರತೆಯೊಂದು ಹಲವು ದಿನಗಳಿಂದ ರಂಗಾಪುರ ಗ್ರಾಮದ ಸುತ್ತಮುತ್ತ ಕಾಣಿಸಿಕೊಳ್ಳುತ್ತಿರುವದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ಇಂದು ಪುರಲೆಹಳ್ಳಿ ರಸ್ತೆಯಲ್ಲಿರುವ ಕುಮಾರ ಎಂಬವರ ಮನೆಯ ಬಳಿ ಚಿರತೆ ಕಾಣಿಸಿಕೊಂಡಿದೆ. ಈ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಲಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಬಲೆ ಬಿಟ್ಟು ಚಿರತೆ ಸೆರೆಹಿಡಿಯುವ ಸಲುವಾಗಿ ಸಕಲ ಸಲಕರಣೆಗಳೊಂದಿಗೆ ಬಂದಿದ್ದರು. ಆದರೆ ಚಿರತೆ ಸೆರೆಹಿಡಿಯಲಾಗದೆ […]

Continue Reading

ಸರಳ ಸ್ವಭಾವದ ರಾಷ್ಟ್ರೀಯ ಸಂತ ಸಿದ್ದೇಶ್ವರ ಶ್ರೀಗಳು: ಶಿವರಾಜ ಅಂಡಗಿ

ಕಲಬುರಗಿ: ಆಧ್ಯಾತ್ಮದ ಬಗ್ಗೆ ಆಳವಾದ ಅಧ್ಯಯನ ಚಿಂತನೆ ನಡೆಸಿರುವ ಶ್ರೇಷ್ಠ ಅನುಭವಿ ಶ್ರೀಗಳು ಅತ್ಯಂತ ಸರಳ ಸಜ್ಜನಿಕೆಯ ಸಹಕಾರ ಮೂರ್ತಿಯ ಸಿದ್ದೇಶ್ವರ ಶ್ರೀಗಳು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ಹೇಳಿದರು. ನಗರದ ಬಡೆಪೂರ ಕಾಲೋನಿಯ ಎಸ್‌ಬಿಐ ಗ್ರಾಹಕ ಸೇವಾ ಕೇಂದ್ರದಲ್ಲಿ ಸಿದ್ದೇಶ್ವರ ಶ್ರೀಗಳ ದ್ವಿತೀಯ ಪುಣ್ಯಸ್ಮರಣೆ ನಿಮಿತ್ಯ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನದು, ತನ್ನದೆಂಬ ಮಮಕಾರ ತೊರಿದ ವಿಜಾಪೂರದ ಸಿದ್ದೇಶ್ವರ ಶ್ರೀಗಳು ಸಂತರಷ್ಟೇ ಅಲ್ಲದೇ ಜ್ಞಾನೋಪಸಾಕರು ಹೀಗಾಗಿ ಇವರಿಗೆ […]

Continue Reading

ಕಲಬುರಗಿ: ಲೋಕಾಯುಕ್ತ ಬಲೆಗೆ ಬಿದ್ದ ಎಫ್‌ಡಿಎ, ದಲ್ಲಾಳಿ

ಕಲಬುರಗಿ: ಅಂಗನವಾಡಿ ಕೇಂದ್ರದ ಸಹಾಯಕಿ ಹುದ್ದೆ ಕೊಡಿಸುವುದಾಗಿ 1 ಲಕ್ಷ ಲಂಚಕ್ಕೆ ಬೇಡಿಕೆ ಇರಿಸಿ, ಮುಂಗಡವಾಗಿ 15 ಸಾವಿರ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಥಮ ದರ್ಜೆ ಸಹಾಯಕಿ (ಎಫ್‌ಡಿಎ) ಹಾಗೂ ದಲ್ಲಾಳಿಯೊಬ್ಬರು ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸಂತೋಷ ರಾಮಚಂದ್ರ ಅವರು ನೀಡಿದ ದೂರಿನ ಮೇರೆಗೆ ಲೋಕಾಯುಕ ಪೊಲೀಸರು ದಾಳಿ ಮಾಡಿ ಎಫ್‌ಡಿಎ ಶಿಲ್ಪಾ ಹಾಗೂ ದಲ್ಲಾಳಿ ದೇವಪ್ಪನನ್ನು ಬಂಧಿಸಿದ್ದಾರೆ. ಅಂಗನವಾಡಿ ಕೇಂದ್ರಗಳ ಸಹಾಯಕಿ ಹುದ್ದೆಗೆ ನೇಮಕಾತಿ ಅರ್ಜಿ […]

Continue Reading

ಕಲಬುರಗಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಮೇಘಣ್ಣನವರ್ ಅಧಿಕಾರ ಸ್ವೀಕಾರ

ಕಲಬುರಗಿ: ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಮಹೇಶ್ ಮೇಘಣ್ಣನವರ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಶ್ರೀನಿಧಿ ಅವರು ನೂತನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್‌ ಮೇಘಣ್ಣನವರ್ ಅವರಿಗೆ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು. ಮಹೇಶ್ ಮೇಘಣ್ಣನವರ್ ಅವರು ಈ ಹಿಂದೆ ಬೀದರ್ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಕಲಬುರಗಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.

Continue Reading

ಪ್ರಿಯಾಂಕ್ ಖರ್ಗೆ ಒಬ್ಬ ಪ್ರಬುದ್ಧ ರಾಜಕಾರಣಿ, ಬಿಜೆಪಿಯವರ ಷಡ್ಯಂತ್ರ ಫಲಿಸದು: ಓಂಕಾರೇಶ್ವರ ರೇಶ್ಮಿ

ಚಿತ್ತಾಪುರ: ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆಯವರು ಒಬ್ಬ ಪ್ರಬುದ್ಧ ಹಾಗೂ ಪ್ರಾಮಾಣಿಕ ರಾಜಕಾರಣಿಗಳಾಗಿದ್ದಾರೆ. ಬಿಜೆಪಿಯವರು ನಮ್ಮ ನಾಯಕರ ಮೇಲೆ ಮಾಡುತ್ತಿರುವ ರಾಜಕೀಯ ಷಡ್ಯಂತ್ರ ಫಲಿಸದು ಎಂದು ಕಾಂಗ್ರೆಸ್ ಮುಖಂಡ ಓಂಕಾರೇಶ್ವರ ರೇಶ್ಮಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಗುತ್ತಿಗೆದಾರ ಸಚಿನ ಪ್ರಕರಣದಲ್ಲಿ ನಮ್ಮ ನಾಯಕರನ್ನು ಎಳೆದು ತರುವ ವಿಫಲ ಪ್ರಯತ್ನ ಮಾಡುತ್ತಿದ್ದಾರೆ. ಈ ಪ್ರಕರಣಕ್ಕೂ ನಮ್ಮ ಪ್ರಿಯಾಂಕ್ ಖರ್ಗೆಯವರಿಗೂ ಯಾವುದೇ ಸಂಭಂದವಿಲ್ಲದಿದ್ದರು ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವ […]

Continue Reading

ಶಿಕ್ಷಣ ರತ್ನ ಪ್ರಶಸ್ತಿಗೆ ಸಿದ್ದಲಿಂಗ ಬಾಳಿ ಆಯ್ಕೆ

ಚಿತ್ತಾಪುರ: ಬೆಂಗಳೂರಿನ ಅನೇಲ್ಪ್ ಗ್ರೂಪ್ ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ‘ಶಿಕ್ಷಣರತ್ನ ಪ್ರಶಸ್ತಿ’ಗೆ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯ ಕ್ರಿಯಾಶೀಲ ಸಮಾಜ ವಿಜ್ಞಾನ ಶಿಕ್ಷಕ ಸಿದ್ದಲಿಂಗ ಬಾಳಿ ಆಯ್ಕೆಯಾಗಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಾ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸೂಕ್ತ ಮಾರ್ಗದರ್ಶನ ನೀಡುತ್ತಿರುವ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೈಗೊಳ್ಳುತ್ತಿರುವ ವಿನೂತನ ಚಟುವಟಿಕೆಗಳಿಂದ ಈ ಭಾಗದಲ್ಲಿ ಸೃಜನಶೀಲ ಶಿಕ್ಷಕರೆಂದು ಗುರುತಿಸಿಕೊಂಡಿರುವ ಶಿಕ್ಷಕ ಸಿದ್ದಲಿಂಗ ಬಾಳಿ ಅವರಿಗೆ ನಾಳೆ ಸಂಜೆ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ […]

Continue Reading