ಖರ್ಗೆ ಮೇಲೆ ವ್ಯರ್ಥ ಆರೋಪ ಸಲ್ಲ: ಮಲ್ಲಪ್ಪ ಹೊಸಮನಿ

ಚಿತ್ತಾಪುರ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸದು. ಡೆತ್ ನೋಟ್ ಕೂಲಂಕುಷವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ. ಸುಳ್ಳು ಹೇಳುವ ಬಿಜೆಪಿಯವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜಕೀಯ ದುರುದ್ದೇಶದಿಂದ ವ್ಯರ್ಥ ಆರೋಪ, ಹೋರಾಟ ಮುಂದುವರಿಸಿದರೆ ನಾವು ಬಿಜೆಪಿ ನಾಯಕರ ವಿರುದ್ಧ ಧರಣಿ ಮಾಡಲು ಸಿದ್ಧರಿದ್ದೆವೆ ಎಂದು ಭಾರತೀಯ ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸ್ಮನಿ ಇಂಗನಕಲ್ ಹೇಳಿದರು. ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿನ್ ಆತ್ಮಹತ್ಯೆ ಕುರಿತು ಸಮಗ್ರ ತನಿಖೆ […]

Continue Reading

ಪಿಎಸ್‌ಐ ಆನಂದ ಕಾಶಿ ಸೇವೆ ಮೆಚ್ಚಿ ರಾಜ್ಯಪಾಲರಿಂದ ಪ್ರಶಂಸಾ ಪತ್ರ

ಚಿತ್ತಾಪುರ: ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಚಂದ್ರಶೇಖರ ಕಾಶಿ ಅವರ ಪುತ್ರ ಆನಂದ ಕಾಶಿ ಪಿಎಸ್‌ಐ ಆಗಿ ರಾಜಭವನಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಗೌರವಾನ್ವಿತ ರಾಜ್ಯಪಾಲರಾದ ತಾವರಚಂದ್ ಗೆಹ್ಲೋಟ್ ಅವರು ಪ್ರಶಂಸಾ ಪತ್ರ ನೀಡಿ ಶುಭ ಹಾರೈಸಿದ್ದಾರೆ. ಬೆಂಗಳೂರು ವಿಧಾನಸೌಧ ಪೊಲೀಸ್ ಠಾಣೆಯ ಪಿಎಸ್‌ಐ ಆನಂದ ಕಾಶಿ ಅವರಿಗೆ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಪ್ರಶಂಸಾ ಪತ್ರ ನೀಡಿ ಶುಭ ಹಾರೈಸಿದ್ದಾರೆ. ರಾಜಭವನಕ್ಕೆ ಸಂಬಂಧಿಸಿದ ಕಾರ್ಯಗಳಿಗೆ ಮಾಡಿದ ಪ್ರಯತ್ನಗಳು ಮತ್ತು ಕೆಲಸಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. […]

Continue Reading

ನರೋಣಾ ಕ್ಷೇಮಲಿಂಗೇಶ್ವರ ಇತಿಹಾಸ ಭಾರತೀಯ ಪಠ್ಯಕ್ಕೆ ಸೇರ್ಪಡೆಗೊಳ್ಳಲಿ: ಮುಡಬಿ ಗುಂಡೇರಾವ

ಕಲಬುರಗಿ: ಅಯೋಧ್ಯ ನಗರದಂತೆ ನರೋಣಾ ಕ್ಷೇಮಲಿಂಗೇಶ್ವರರ ಇತಿಹಾಸ ಭಾರತೀಯ ಪಠ್ಯಕ್ಕೆ ಸೇರ್ಪಡೆಗೊಳಿಸುವುದರಿಂದ ಈ ಕ್ಷೇತ್ರದ ಮಹಿಮೆ ದೇಶದೆಲ್ಲೆಡೆ ಪಸರಿಸಲು ಸಾಧ್ಯವಾಗುತ್ತದೆ ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಅಭಿಪ್ರಾಪಯಟ್ಟರು. ಆಳಂದ ತಾಲೂಕಿನ ನರೋಣಾ ಗ್ರಾಮದ ಐತಿಹಾಸಿಕ ಸುಕ್ಷೇತ್ರ ಕ್ಷೇಮಲಿಂಗೇಶ್ವರ ದೇವಸ್ಥಾನದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-6ರಲ್ಲಿ ಮಾತನಾಡಿದ ಅವರು, ಶ್ರೀ ರಾಮನು ರಾವಣನನ್ನು ಸಂಹರಿಸಿ, ಪಾಪ ಪರಿಹಾರಕ್ಕಾಗಿ ಕೋಟಿ ಲಿಂಗ ಸ್ಥಾಪನೆಯ ಗುರಿಯನ್ನಿಟ್ಟುಕೊಂಡು ದೇಶದಾದ್ಯಂತ […]

Continue Reading

ನಾಡಿನ ಇತಿಹಾಸ ಸಾರುವ ಚಿಂಚನಸೂರಿನ ಮಹೇಶ್ವರ ದೇವಾಲಯ: ಮುಡಬಿ ಗುಂಡೇರಾವ

ಕಲಬುರಗಿ: ಅಪರೂಪದ ವಾಸ್ತುಶಿಲ್ಪ ಶೈಲಿಯುಳ್ಳ, ಕಲೆ-ಸಾಹಿತ್ಯ, ಸಂಸ್ಕೃತಿ, ಭವ್ಯ ಪರಂಪರೆಯನ್ನು ಸಾರುವ ಚಿಂಚನಸೂರಿನ ಮಹೇಶ್ವರ ದೇವಾಲಯದ ಇತಿಹಾಸ ಅದಮ್ಯ ಹಾಗೂ ಅದ್ಭುತವಾಗಿದೆ. ಎಳು ಊರುಗಳಿಂದ ಕೂಡಿರುವ ಮತ್ತು ನಾಡಿನ ರಕ್ಷಣೆ ಮಾಡಿದ ವೀರ-ಶೂರರ ಇತಿಹಾಸವುಳ್ಳದಾಗಿದೆ. ಇಂತಹ ಸ್ಮಾರಕಗಳ ರಕ್ಷಣೆಗೆ ಪ್ರತಿಯೊಬ್ಬರು ಮುಂದಾಗಬೇಕು ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಅಭಿಪ್ರಾಯಪಟ್ಟರು. ಚಿಂಚನಸೂರ್‌ನ ಗ್ರಾಮದ ಐತಿಹಾಸಿಕ ಹಾಗೂ ಪ್ರಾಚೀನ ಮಹೇಶ್ವರ ದೇವಾಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ […]

Continue Reading

ಕವಲಗಾ(ಬಿ) ಪಿಡಿಓ ಪ್ರೀತಿರಾಜ್ ಅಮಾನತು

ಕಲಬುರಗಿ: ತಾಲೂಕಿನ ಕವಲಗಾ(ಬಿ) ಗ್ರಾಮದ ಪಂಪ್ ಆಪರೇಟರ್ ಗುರುಸಿದ್ದಯ್ಯ ಸ್ಥಾವರಮಠ ಎಂಬುವವರ ವೇತನ ಬಿಡುಗಡೆ ಮಾಡಲು ಹಾಗೂ ಸೇವೆಗೆ ಮರು ನೇಮಕ ಮಾಡಿಕೊಳ್ಳಲು 17 ಸಾವಿರ ಲಂಚ ಪಡೆದ ಆರೋಪದ ಮೇರೆಗೆ ಲೋಕಾಯುಕ್ತ ದಾಳಿಗೆ ಒಳಗಾಗಿದ್ದ ಪಿಡಿಓ ಪ್ರೀತಿರಾಜ್ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ ಸಿಂಗ್ ಮೀನಾ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಲೋಕಾಯುಕ್ತ ದಾಳಿಯಾಗಿರುವುದರಿಂದ ಕೆಸಿಎಸ್‌ಆ‌ರ್ ನಿಯಮಾವಳಿಗಳ ಅನ್ವಯ ಶಿಸ್ತು ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತ ಸಂಸ್ಥೆಯ ಪೊಲೀಸ್ ಇನ್‌ಸ್ಪೆಕ್ಟರ್ ಅರುಣಕುಮಾ‌ ಮುರಗುಂಡಿ ಅವರು ತಾ.ಪಂ ಇಒ […]

Continue Reading

ಕಲಬುರಗಿ: ಬಾಕಿ ವೇತನ ಪಾವತಿಗೆ 17 ಸಾವಿರ ಲಂಚ, ಲೋಕಾಯುಕ್ತ ಬಲೆಗೆ ಪಿಡಿಒ

ಕಲಬುರಗಿ: ಪಂಪ್ ಆಪರೇಟರ್ ಒಬ್ಬರ ಬಾಕಿ ವೇತನ ಪಾವತಿ ಹಾಗೂ ಮರು ನೇಮಕ ಮಾಡಿಕೊಳ್ಳಲು 17 ಸಾವಿರ ರೂ ಲಂಚದ ಹಣ ಪಡೆಯುತ್ತಿದ್ದ ಆರೋಪದಡಿ ಪಿಡಿಒ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ. . ಕಲಬುರಗಿ ತಾಲೂಕಿನ ಕವಲಗಾ (ಬಿ) ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಪ್ರೀತಿರಾಜ್ ಲಂಚ ಪಡೆದ ಆರೋಪಿ . ಪಂಪ್ ಆಪರೇಟರ್ ಗುರುಸಿದ್ದಯ್ಯ ಅವರು ನೀಡಿದ ದೂರಿನ ಅನ್ವಯ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ . ಗುರುಸಿದ್ದಯ್ಯ ಅವರ ಆರು ತಿಂಗಳ […]

Continue Reading

ದೇವಸ್ಥಾನ ಕಳ್ಳತನ ಪ್ರಕರಣ: ಆರೋಪಿ ಬಂಧನ,1.80 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ

ಚಿತ್ತಾಪುರ: ಬಹಾರಪೇಠ ತಾಂಡಾ ಹಾಗೂ ಆಲೂರು ಗ್ರಾಮದ ದೇವಸ್ಥಾನ ಕಳ್ಳತನ ಮಾಡಿದ ಆರೋಪಿ ಬಂಧಿಸಿ, 1.80 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಹಾರಪೇಠ ತಾಂಡಾ ಹಾಗೂ ಆಲೂರು ಗ್ರಾಮದ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ಕುರಿತು ಎರಡು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿತ್ತು, ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಬೀರಪ್ಪ ಈರಪ್ಪ ಪೂಜಾರಿಯನ್ನು ಗುರುವಾರ ಬಂಧಿಸಿ ಆತನಿಂದ 1,80,500 ಮೌಲ್ಯದ ಬಂಗಾರ, ಬೆಳ್ಳಿ ಆಭರಣ, ನಗದು ಹಣ ಜಪ್ತಿ […]

Continue Reading

ಒಳಮೀಸಲಾತಿ ಜಾರಿ ಮಾಡದೆ ಕಾಲಾಹರಣ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಡಿ.16 ರಂದು ಬೆಳಗಾವಿ ಚಲೋ: ದೀಪಕ್ ಹೊಸ್ಸುರಕರ್

ಚಿತ್ತಾಪುರ: ಸುಪ್ರೀಂಕೋರ್ಟಿನ ತೀರ್ಪು ಬಂದು ನಾಲ್ಕು ತಿಂಗಳಾದರೂ ಒಳಮೀಸಲಾತಿ ಜಾರಿ ಮಾಡದೆ ಕಾಲಾಹರಣದ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಡಿ.16 ರಂದು ಬೆಳಗಾವಿಯಲ್ಲಿ ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶ ನಡೆಸಲು ರಾಜ್ಯ ನಾಯಕರು ನಿರ್ಧರಿಸಿದ್ದಾರೆ. ಹೀಗಾಗಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಾದಿಗ ಸಮಾಜದ ಮುಖಂಡ ಹಾಗೂ ನಗರ ಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ದೀಪಕ್ ಹೊಸ್ಸುರಕರ್ ತಿಳಿಸಿದ್ದಾರೆ. ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, […]

Continue Reading

ಸಂಸ್ಕೃತಿ ಸನ್ಮಾನ್ ಹಾಗೂ ಸೀಗಿ ಸಾಹಿತ್ಯ ಪ್ರಶಸ್ತಿಗೆ ಡಾ.ಸ್ವಾಮಿರಾವ ಕುಲಕರ್ಣಿ, ಮಹಿಪಾಲರೆಡ್ಡಿ ಮುನ್ನೂರ ಆಯ್ಕೆ

ಸೇಡಂ: ಸಂಸ್ಕೃತಿ ಪ್ರಕಾಶನ ಟ್ರಸ್ಟ್ ಕೊಡಮಾಡುವ ಸಂಸ್ಕೃತಿ ಸಮ್ಮಾನ್ ಪ್ರಶಸ್ತಿಗೆ ದಾಸ ಸಾಹಿತ್ಯದ ವಿದ್ವಾಂಸ ಹಿರಿಯ ಸಾಹಿತಿ ಡಾ. ಸ್ವಾಮಿರಾವ ಕುಲಕರ್ಣಿ ಹಾಗೂ ಸಿಗಿ ಸಾಹಿತ್ಯ ಪ್ರಶಸ್ತಿಗೆ ಕ್ರಿಯಾಶೀಲ ಬರಹಗಾರ, ಲೇಖಕ, ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರ ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ಪ್ರಕಾಶನ ಟ್ರಸ್ಟ್‌ ಅಧ್ಯಕ್ಷ ಪ್ರಭಾಕರ ಜೋಶಿ ತಿಳಿಸಿದ್ದಾರೆ. ಸಂಸ್ಕೃತಿ ಪ್ರಕಾಶನದ 35ನೇ ವಾರ್ಷಿಕೋತ್ಸವದ ಅಂಗವಾಗಿ ಸಂಸ್ಕೃತಿ ಸಮ್ಮಾನ್‌ ಪ್ರಶಸ್ತಿ ನೀಡಲಾಗುತ್ತಿದೆ. ಸಂಸ್ಕೃತಿ ಪ್ರಕಾಶನದ ಬೆಳ್ಳಿ ಹಬ್ಬದ ಸಂದರ್ಭದಲ್ಲಿ ಕೊಡಲಾಗುತ್ತಿರುವ ಸಂಸ್ಕೃತಿ ಸಮ್ಮಾನ್‌ ಪ್ರಶಸ್ತಿಯನ್ನು ಸಾಹಿತ್ಯ – […]

Continue Reading

ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಬಳೂಂಡಗಿ ಅವರಿಗೆ ಕಸಾಪದಿಂದ ಸನ್ಮಾನ

ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಬಳೂಂಡಗಿ ಹಾಗೂ ರಾಜ್ಯ ಸಮಿತಿಗೆ ಆಯ್ಕೆಯಾದ ಧರ್ಮರಾಜ ಜವಳಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಗೌರವ ಕಾರ್ಯದರ್ಶಿ ಧರ್ಮಣ್ಣ ಎಚ್ ಧನ್ನಿ, ಕೋಶಾಧ್ಯಕ್ಷ ಶರಣರಾಜ ಚಪ್ಪರಬಂದಿ ಅವರು ಸನ್ಮಾನಿಸಿ ಗೌರವಿಸಿದರು.

Continue Reading