ಶಾಂತಿ, ಅಹಿಂಸೆಯ ಸಾಕಾರಮೂರ್ತಿ ವರ್ಧಮಾನ ಮಹಾವೀರ

ಕಲಬುರಗಿ: ಶಾಂತಿ, ತ್ಯಾಗ, ಅಹಿಂಸೆ, ಭ್ರಾತೃತ್ವ ಭಾವನೆ ಎಲ್ಲರಲ್ಲಿಯೂ ಮೂಡಿಸಿ, ಅದರಂತೆ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಸಮಾಜ ಸುಧಾರಣೆಗಾಗಿ ಶ್ರಮಿಸಿದ ವರ್ಧಮಾನ ಮಹಾವೀರರ ಕೊಡುಗೆ ಪ್ರಮುಖವಾಗಿದೆ. ಅವರ ತತ್ವಗಳ ಅನುಸರಣೆಯಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ದೊರೆಯಲು ಸಾಧ್ಯವಾಗುತ್ತದೆ ಎಂದು ಜೈನ ತತ್ವ ಚಿಂತಕ ಜೀನೇಂದ್ರ ಸಾಗರಶೆಟ್ಟಿ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ವರ್ಧಮಾನ ಮಹಾವೀರರ 2624ನೇ ಜಯಂತಿ’ ಕಾರ್ಯಕ್ರಮದಲ್ಲಿ […]

Continue Reading

ಕಲಬುರಗಿ: ಗ್ಯಾಸ್ ಕಟರ್ ಬಳಸಿ ATM ನಿಂದ 18 ಲಕ್ಷ ರೂ ದೋಚಿದ ಖದೀಮರು

ಕಲಬುರಗಿ: ಗ್ಯಾಸ್ ಕಟರ್ ಬಳಸಿ ಕಳ್ಳರು ಎಟಿಎಂನಿಂದ 18 ಲಕ್ಷ ರೂ. ಕದ್ದೊಯಿದಿರುವ ಘಟನೆ ಕಲಬುಗರಿಯ ರಾಮನಗರದ ಬಳಿ ಇರುವ SBI ATM ನಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬ್ಯಾಂಕ್ ಸಿಬ್ಬಂದಿ ATM ಗೆ ಹಣ ಹಾಕಿ ಹೋಗಿದ್ದರು. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ATM ನಲ್ಲಿ ಸೆಕ್ಯೂರಿಟಿ ಇಲ್ಲದನ್ನು ಗಮನಿಸಿದ ಖದೀಮರು ಕನ್ನ ಹಾಕಿದ್ದಾರೆ. ಕಳ್ಳರು ATM ನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಿಗೆ ಬ್ಲಾಕ್ ಸ್ಪ್ರೆ ಮಾಡಿ ಗ್ಯಾಸ್ ಕಟ್ಟರ್‌ನಿಂದ […]

Continue Reading

ಮಾತೃ ಶಕ್ತಿ ಬೃಹತ್ ಮಹಿಳಾ ಜಾಥಾದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿ

ಕಲಬುರಗಿ: ಡಾ.ಬಿ.ಆರ್ ಅಂಬೇಡ್ಕರ್ ಇಂಟಿಗ್ರೇಟೆಡ್ ರಿಸರ್ಚ್ ಇನಸ್ಟಿಟ್ಯೂಟ್, ಬಸವೇಶ್ವರ ಸಮಾಜ ಸೇವಾ ಬಳಗ, ಕಲ್ಯಾಣ ಕರ್ನಾಟಕ ಸೇನೆ, ಸ್ಲಂ ಜನಾಂದೋಲನದ ಜಿಲ್ಲಾ ಘಟಕ, ಕೆಎಚ್‌ಬಿ ಗ್ರೀನ್ ಪಾರ್ಕ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ವಿವಿಧ ಶಾಲಾ-ಕಾಲೇಜುಗಳು, ಸಂಘ-ಸಂಸ್ಥೆಗಳು, ಮಹಿಳಾ ಸಂಘಗಳ ವತಿಯಿಂದ ಡಾ.ಬಾಬಾ ಸಾಹೇಬ್ ಅಂಬೇಡ್ಕರರ 134ನೇ ಜಯಂತಿ ಪ್ರಯುಕ್ತ ‘ಮಾತೃ ಶಕ್ತಿ’ ಬೃಹತ್ ಮಹಿಳಾ ಜಾಥಾದಲ್ಲಿ ಎಲ್ಲರು ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದು ಡಾ.ಸುನೀಲಕುಮಾರ ಎಚ್ ವಂಟಿ ಮತ್ತು ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ […]

Continue Reading

ಪ್ರಥಮ ಸ್ವಾತಂತ್ರ್ಯ ಹೋರಾಟಗಾರ ಮಂಗಲಪಾಂಡೆ

ಕಲಬುರಗಿ: ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಥಮ ಬಾರಿಗೆ ಧ್ವನಿ ಎತ್ತುವ ಮೂಲಕ ಮಂಗಲಪಾಂಡೆ ಸ್ವಾತಂತ್ರ್ಯ ಚಳುವಳಿಗೆ ನಾಂದಿ ಹಾಡಿದ ಅಪ್ರತಿಮ ದೇಶಭಕ್ತರು ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಶಿವ ನಗರದ ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಮಂಗಲಪಾಂಡೆ ಸ್ಮರಣೋತ್ಸವ’ದಲ್ಲಿ ಮಾತನಾಡಿದ ಅವರು, ವ್ಯಾಪರಕ್ಕಾಗಿ ಭಾರತಕ್ಕೆ ಆಗಮಿಸಿದ ಬ್ರೀಟಿಷರು ಒಡೆದಾಳುವ ನೀತಿಯ ಮೂಲಕ ಸುಮಾರು 250 ವರ್ಷಗಳ ಕಾಲ ಆಡಳಿತ ಮಾಡಿ […]

Continue Reading

ಗಂಡಸರಿಗೆ ಸೀರೆ ಧರಿಸಿ ನರೇಗಾ ಕೂಲಿ ಕೆಲಸ, ಅಧಿಕಾರಿಯಿಂದ ಹಣ ಲಪಟಾಯಿಸುವ ಸಂಚು

ಯಾದಗಿರಿ: ಹಣ ಎಗರಿಸಲು ಮೈ ತುಂಬ ಸೀರೆ ಧರಿಸಿದಪುರುಷರು, ನರೇಗಾ ಕೂಲಿ ಕೆಲಸಕ್ಕೆ ಮುಂದಾಗಿದ್ದಾರೆ.ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿಇಂತಹದೊಂದು ಘಟನೆ ನಡೆದಿದೆ. ಮಲ್ಹಾರ ಗ್ರಾಮದಲ್ಲಿಯೇ ಕೂಲಿ ಕಾರ್ಮಿಕರ ಹೆಸರಿನಲ್ಲಿಗೊಲ್ಮಾಲ್ ಮಾಡುವ ಹುನ್ನಾರ ಕೆಲ ಪುರುಷರುಅಧಿಕಾರಿಗಳ ಕುಮ್ಮಕ್ಕಿನಿಂದ ಸೀರೆ ಧರಿಸಿ ಕೂಲಿಗೆದುಡಿಯಲು ಮುಂದಾಗಿದ್ದಾರೆ. ಪೂಜಾರಿ ಎಂಬಾತನ ಹೊಲದ ಬಳಿ ನಾಲೆ ಹೂಳೆತ್ತುವಕಾಮಗಾರಿಯಲ್ಲಿ ನಕಲಿ ಪೋಟೋ NMMS ಮಾಡಿಬಿಲ್ ಎತ್ತುವ ಸಂಚು ರೂಪಿತವಾಗಿದೆ. ಕಾರ್ಮಿಕರ ಕೆಲಸದ ಹಾಜರಾತಿ ಪೊಟೋ ಅಪ್ಲೋಡ್ಮಾಡಬೇಕಾದ ಅಧಿಕಾರಿಗಳು ಆದರೆ ಮಹಿಳೆಯರಹೆಸರಿನಲ್ಲಿ ಕೆಲಸ ಮಾಡದೇ ಪುರುಷರು ಸೀರೆ […]

Continue Reading

ಅರಳಿ ಮರ ಆಕ್ಸಿಜನ್, ಆರೋಗ್ಯದ ಆಗರ 

ಕಲಬುರಗಿ: ಕೆಲವು ಜಾತಿಯ ಮರಗಳ ಎಲೆ, ಬೇರು ಮತ್ತು ತೊಗಟೆಯ ಕಷಾಯವನ್ನು ಭೇದಿ, ವಾಂತಿ, ಹಲ್ಲುನೋವು, ದಮ್ಮು ಇತ್ಯಾದಿ ರೋಗಗಳಿಗೆ ಉಪಯೋಗಿಸುತ್ತಾರೆ. ಇದು ಆಕ್ಸಿಜನ್, ಆರೋಗ್ಯದ ಆಗರವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಸಂತೋಷ ಕಾಲೋನಿಯ ದಕ್ಷಿಣಮುಖಿ ಅಂಜನೇಯ ದೇವಸ್ಥಾನದ ಆವರಣದ ಅರಳಿ ಮರದ ಕಟ್ಟೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ಅರಳಿ ಮರದ ಮಹತ್ವದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅರಳಿ ಮರದ ಎಲೆಯನ್ನು ದನ-ಕರು, ಆಡು, ಕುರಿಗಳಿಗೆ ಮೇವಾಗಿ […]

Continue Reading

ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಉಪ್ಪಿನ ಸತ್ಯಾಗ್ರಹ ಪ್ರಮುಖವಾದದ್ದು

ಕಲಬುರಗಿ: ದೇಶದ ಸ್ವಾತಂತ್ರ ಚಳುವಳಿ ಇತಿಹಾಸದಲ್ಲಿ ಮುಖ್ಯವಾಗಿದೆ. ಮಹಾತ್ಮ ಗಾಂಧೀಜಿಯವರು ಬ್ರಿಟಿಷರ ಆಡಳಿತ ಕಾಲದಲ್ಲಿ ಉಪ್ಪಿನ ಮೇಲೆ ವಿಧಿಸಿದ ತೆರಿಗೆಯನ್ನು ವಿರೋಧಿಸಿ ತಮ್ಮ ಅನುಯಾಯಿಗಳೊಂದಿಗೆ ಸಬರಮತಿ ಆಶ್ರಮದಿಂದ ಸಮುದ್ರ ದಡದಲ್ಲಿರುವ ದಂಡಿಯವರೆಗಿನ 240 ಮೈಲಿ ಕಾಲ್ನಡಿಗೆಯಲ್ಲಿ ಕ್ರಮಿಸಿ 1930ರ ಎಪ್ರಿಲ್ 6ರಂದು ಉಪ್ಪನ್ನು ತಯಾರಿಸಿ, ಬ್ರಿಟಿಷರಿಗೆ ಬಿಸಿ ಮುಟ್ಟಿಸುವ ಮೂಲಕ ದೇಶದ ಸ್ವಾತಂತ್ರ ಚಳುವಳಿಯಲ್ಲಿ ಪ್ರಮುಖ ಸ್ಥಾನ ಪಡೆದಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ವಿವೇಕಾನಂದ ಕೋಚಿಂಗ್ ಸೆಂಟರ್’ನಲ್ಲಿ ಬಸವೇಶ್ವರ […]

Continue Reading

ಯುವಕರು ಕೃಷಿಯತ್ತ ಮುಖ ಮಾಡಲಿ

ಕಲಬುರಗಿ: ಯುವಕರು ದೇಶದ ಅಮೂಲ್ಯ ಆಸ್ತಿ, ಕೃಷಿ ದೇಶದ ಬೆನ್ನೆಲಬು, ಸರ್ಕಾರ ಎಲ್ಲರಿಗೂ ನೌಕರಿ ನೀಡಲು ಸಾಧ್ಯವಿಲ್ಲ ಹೀಗಾಗಿ ಯುವಕರು ಕೃಷಿ ಕ್ಷೇತ್ರದಲ್ಲಿ ಆಸಕ್ತಿಯಿಂದ ದುಡಿಮೆ ಮಾಡಿದರೆ, ಹೆಚ್ಚಿನ ಇಳುವರಿ ಪಡೆದು ಉತ್ತಮ ಲಾಭ ಪಡೆಯಲು ಸಾಧ್ಯವಿದೆ. ಆದ್ದರಿಂದ ಯುವಕರು ಕೃಷಿಯತ್ತ ಮುಖ ಮಾಡಬೇಕಾಗಿದೆ ಎಂದು ಪ್ರಗತಿಪರ, ಸಾಧಕ ರೈತ ಚನ್ನವೀರಯ್ಯ ಕುಂಬಾರಮಠ ಹೇಳಿದರು. ಆಳಂದ ತಾಲೂಕಿನ ನರೋಣಾ ಗ್ರಾಮದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸತ್ಕಾರ ಸ್ವೀಕರಿಸಿ […]

Continue Reading

ಚಿತ್ರ ಕಲೆಗಳು ಸಂಸ್ಕೃತಿ, ಪರಂಪರೆ, ಇತಿಹಾಸದ ಕರುಹುಗಳು

ಕಲಬುರಗಿ: ಒಂದು ಚಿತ್ರ ಸಾವಿರ ಶಬ್ದಗಳಿಗೆ ಸಮಾನ ಎಂಬ ಮಾತು ಚಿತ್ರಕಲೆಯ ಮಹತ್ವ ಸಾರುತ್ತದೆ. ಚಿತ್ರಕಲೆಯು ಸಂಸ್ಕೃತಿ, ಪರಂಪರೆ, ಇತಿಹಾಸದ ಕುರುಹು ಒದಗಿಸುತ್ತವೆ ಎಂದು ಅಂತಾರಾಷ್ಟ್ರೀಯ ಖ್ಯಾತ ಚಿತ್ರ ಕಲಾವಿದ ಡಾ.ಸುಬ್ಬಯ್ಯ ಎಂ.ನೀಲಾ ಅಭಿಪ್ರಾಯಪಟ್ಟರು. ನಗರದ ಮಹಾಲಕ್ಷ್ಮಿ ನಗರದಲಳ ನೀಲಾ ಆರ್ಟ್ ಗ್ಯಾಲರಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಸಂಜೆ ಜರುಗಿದ ‘ಸ್ವತಂತ್ರ ಚಿತ್ರ ಕಲಾವಿದರ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಚಿತ್ರಕಲೆಯು ಘಟನೆ ಸಂದರ್ಭದ ನೈಜತೆಯನ್ನು ಕಟ್ಟಿಗೆ ಕಟ್ಟುವ ಹಾಗೆ ನೀಡುತ್ತದೆ. ಇದು ಶಾಶ್ವತವಾದ […]

Continue Reading

ಬಾಯಿ ಆರೋಗ್ಯದಿಂದ ದೇಹದ ಆರೋಗ್ಯ ಸಾಧ್ಯ

ಕಲಬುರಗಿ: ಸಾಮಾನ್ಯವಾಗಿ ಯಾವುದೆ ಕಾಯಿಲೆಯ ಲಕ್ಷಣ ಕಂಡುಬಂದು ಆಸ್ಪತ್ರೆಗೆ ತೆರಳಿದಾಗ ವೈದ್ಯರು ಮೊದಲು ಬಾಯಿಯನ್ನು ಪರಿಶೀಲಿಸುವರು. ಹಲ್ಲುಗಳು, ನಾಲಿಗೆ, ಗಂಟಲು ಸೇರಿದಂತೆ ಬಾಯಿಯ ಆರೋಗ್ಯದಲ್ಲಿ ಏರು-ಪೇರಾದಾಗ ಅದರ ಪರಿಣಾಮ ದೇಹದ ಇತರೆ ಭಾಗಗಳಿಗೆ ಕೂಡಾ ಆಗುತ್ತದೆ. ಆದ್ದರಿಂದ ಬಾಯಿಯ ಆರೋಗ್ಯ ಕಾಪಾಡಿಕೊಳ್ಳುವುದು ಅಗತ್ಯವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ಯುಪಿಎಚ್‌ಸಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಜರುಗಿದ ‘ವಿಶ್ವ ಬಾಯಿ ಆರೋಗ್ಯ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಹಲ್ಲುಗಳ ರಕ್ಷಣೆಗ ದಿನಕ್ಕೆ […]

Continue Reading