ಕಾರಲ್ಲಿ ಇಬ್ಬರು ಬಾಲಕಿಯರಿದ್ದರು, ಕಣ್ಣೀರಿಡುತ್ತಾ ಓಡಿ ಬಂದ ವಿದ್ಯಾರ್ಥಿನಿ: ಕಿಡ್ನ್ಯಾಪ್‌ಗೆ ನಡೆಯಿತಾ ಯತ್ನ ?

ಹಾಸನ: ಕಾರಲ್ಲಿ ಇಬ್ಬರು ಬಾಲಕಿಯರಿದ್ದರು, ಕಾರಲ್ಲಿದ್ದವರು ನನ್ನನ್ನೂ ಕಿಡ್ನ್ಯಾಪ್‌ ಮಾಡಲು ಯತ್ನಿಸಿದ್ದರು ಎಂದು ಶಾಲಾ ವಿದ್ಯಾರ್ಥಿನಿಯೊಬ್ಬಳು ಅಳುತ್ತ ಓಡಿ ಶಾಲೆಗೆ ಬಂದ ಪ್ರಸಂಗ ಆಲೂರು ತಾಲೂಕಿನ ಹಂಚೂರು ಗ್ರಾಮದಲ್ಲಿ ನಡೆದಿದೆ. ಶಾಲೆಗೆ ಓಡಿ ಬಂದ ವಿದ್ಯಾರ್ಥಿನಿ, ಬಿಳಿ ಬಣ್ಣದ ಮಾರುತಿ ಓಮ್ನಿಯಲ್ಲಿ ಬಂದವರು ಅಪಹರಣಕ್ಕೆ ಯತ್ನಿಸಿದ್ದರು, ಕಾರಿನಲ್ಲಿ ಮತ್ತಿಬ್ಬರು ವಿದ್ಯಾರ್ಥಿನಿಯರು ಇದ್ದರು ಎಂದು ಹೇಳಿಕೊಂಡಿದ್ದಾಳೆ. ಈ ವೇಳೆ ಗಾಬರಿಯಿಂದ ಬಾಲಕಿ ಬ್ಯಾಗ್‌ ಸಹ ಎಸೆದು ಬಂದಿದ್ದಾಳೆ. ಈ ಮಾಹಿತಿಯನ್ನು ಶಾಲಾ ಮುಖ್ಯ ಶಿಕ್ಷಕರು ಪೊಲೀಸರಿಗೆ ತಿಳಿಸಿದ್ದಾರೆ. ಬಳಿಕ […]

Continue Reading

ಕರ್ತವ್ಯ ಲೋಪ: ಧಾರವಾಡ ಜಿ.ಪಂ ಯೋಜನಾಧಿಕಾರಿ ಅಮಾನತು

ಧಾರವಾಡ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಧಾರವಾಡ ಜಿ.‌ಪಂ ಯೋಜನಾಧಿಕಾರಿ ರೇಖಾ ಡೊಳ್ಳಿನ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕಾರ್ಯದರ್ಶಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ರೇಖಾ ಅವರು ಕಾನೂನು ಬಾಹಿರವಾಗಿ ಕೋಟಿ ಕೋಟಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಜಿಲ್ಲಾ ಮಟ್ಟದ ಅನುದಾನ ಪ್ರಸ್ತಾವನೆ ಸಲ್ಲಿಸುವಾಗ ಕಾನೂನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ರಾಜೀವ್ ಗಾಂಧಿ ಚೈತನ್ಯ ಯೋಜನೆಯಡಿ ಗ್ರಾಮೀಣ ಜನರಿಗೆ ಕೌಶಲ್ಯ ಕೊಡುವ ಯೋಜನೆ ಇತ್ತು. 2017-18ರಲ್ಲಿ ಈ ಯೋಜನೆಯ ಕಾರ್ಯಕ್ರಮಕ್ಕೆ ಕೈಗೊಂಡ ಅಭಿಯಾನದ […]

Continue Reading

ಕಲಬುರಗಿ: ಜಿ.ಪಂ ಸಿಇಒ ಕೈ ಸೇರಲಿದೆ ಹಾಸ್ಟೆಲ್‌ ಅವ್ಯವಸ್ಥೆ ವರದಿ

ಕಲಬುರಗಿ: ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕಳಪೆ ಊಟ ಪೂರೈಕೆ, ಕಾಟ್, ಬೆಡ್ ಇಲ್ಲದಿರುವುದು, ಮೆನು ಪ್ರಕಾರ ಊಟ, ಉಪಾಹಾರ ನೀಡದಿರುವುದು, ಶುಚಿ ಕಿಟ್ ನೀಡದಿರುವುದು, ಶೌಚಾಲಯ ಸ್ವಚ್ಛತೆ ಕಾಯ್ದುಕೊಳ್ಳದೆ ಅಸಡ್ಡೆ ತೋರಿಸುವಂತಹ ಹಾಸ್ಟೆಲ್‌ ವಾರ್ಡನ್‌ಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಮುಂದಾಗಿದೆ. ಈ ಸಂಬಂಧ ಹಾಸ್ಟೆಲ್ ಪರಿಸ್ಥಿತಿ ಯಥಾವತ್ ವರದಿ ನೀಡುವುದಕ್ಕಾಗಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಭಂವರ್ ಸಿಂಗ್ ಮೀನಾ ಅವರು ಪ್ರತಿ ಹಾಸ್ಟೆಲ್‌ಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಿದ್ದಾರೆ. […]

Continue Reading

ರಾಷ್ಟ್ರದ ಅಭಿವೃದ್ಧಿಗೆ ಯುವಕರ ಪಾತ್ರ ಮಹತ್ತರವಾಗಿದೆ: ಎಚ್.ಬಿ ಪಾಟೀಲ

ಕಲಬುರಗಿ: ರಾಷ್ಟ್ರದ ಅಭಿವೃದ್ಧಿಗೆ ಯುವಕರ ಪಾತ್ರ ಮಹತ್ತರವಾಗಿದೆ. ಯುವಕರು ವಿಶ್ವದ ಭವಿಷ್ಯ, ದೇಶದ ಪ್ರಗತಿಗೆ ಯುವಶಕ್ತಿ ಬಳಸಿಕೊಳ್ಳಬೇಕು ಎಂದು ಉಪನ್ಯಾಸಕ ಹಾಗೂ ಸಮಾಜ ಸೇವಕ ಎಚ್.ಬಿ ಪಾಟೀಲ ಹೇಳಿದರು. ಜೇವರ್ಗಿ ಪಟ್ಟಣದ ಕೋರ್ಟ್ ಸಮೀಪದ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ‘ಅಂತಾರಾಷ್ಟ್ರೀಯ ಯುವ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಗೆ ಯುವಕರ ಪಾತ್ರ ಮುಖ್ಯವೆಂದು ಸಾರಲು ಈ ದಿನಾಚರಣೆ ಪೂರಕವಾಗಿದೆ. ಯುವಕರನ್ನು ಒಗ್ಗೂಡಿಸುವುದು, ಸಾಮಾಜಿಕ-ಆರ್ಥಿಕ […]

Continue Reading

ಕಲಬುರಗಿ: ಕಾರು-ಬಸ್ ಮಧ್ಯೆ ಭೀಕರ ಅಪಘಾತ, ತಂದೆ-ಮಗ ಸ್ಥಳದಲ್ಲೇ ಸಾವು

ಕಲಬುರಗಿ: ಬಸ್ ಮತ್ತು ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬುರ (ಕೆ) ಗ್ರಾಮದ ಬಳಿ ಇಂದು ಸಂಜೆ ನಡೆದಿದೆ. ಘಟನೆಯಲ್ಲಿ ಸೋಮಶೇಖರ್ (55), ಪ್ರಕಾಶ್ (28) ಮೃತ ದುರ್ದೈವಿಗಳಾಗಿದ್ದು, ಮೃತರು ಬಾಗಲಕೋಟೆ ಜಿಲ್ಲೆಯವರಾಗಿದ್ದು, ಕಾರಿನಲ್ಲಿದ್ದ ತಂದೆ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿದಾರೆ‌. ಕಲಬುರಗಿ ಕಡೆಯಿಂದ ಬಾಗಲಕೋಟೆಯ ಬಿಳಗಿ ಕಡೆಗೆ ಹೋಗುತ್ತಿರುವ ಸಂದರ್ಭದಲ್ಲಿ ಎದುರಿಗೆ ಬಂದ ಎನ್‌ಇಕೆಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಅವಘಡ ಸಂಭವಿಸಿದೆ. ಬಸ್ ಡಿಕ್ಕಿ […]

Continue Reading

ದೇಶದ ಸ್ವಾತಂತ್ರ್ಯದಲ್ಲಿ ಕ್ವಿಟ್‌ ಇಂಡಿಯಾ ಚಳುವಳಿಯ ಪಾತ್ರ ಪ್ರಮುಖ

ಕಲಬುರಗಿ: ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡಲು ಅಸಂಖ್ಯಾತ ಭಾರತಿಯರು ನಿರಂತರ ಹೋರಾಟ ಮಾಡಬೇಕಾಯಿತು. ಸ್ವಾತಂತ್ರ್ಯಕ್ಕಾಗಿ ಜರುಗಿದ ಸಾಕಷ್ಟು ಹೋರಾಟಗಳಲ್ಲಿ ‘ಕ್ವಿಟ್‌ ಇಂಡಿಯಾ ಚಳುವಳಿ, ಪ್ರಮುಖವಾಗಿದೆ. ‘ಮಾಡು ಇಲ್ಲವೆ ಮಡಿ, ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ ಎಂಬ ಘೋಷಣೆಯೊಂದಿಗೆ ಜರುಗಿದ ಚಳುವಳಿ ಜನಸಾಮಾನ್ಯರ ಚಳುವಳಿಯಾಗಿದ್ದರಿಂದ ಮುಂದೆ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಡುವಲ್ಲಿ ತನ್ನದೆಯಾದ ಪ್ರಮುಖ ಪಾತ್ರ ವಹಿಸಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ಅಫಜಲಪುರ ತಾಲೂಕಿನ ಗೊಬ್ಬೂರ(ಕೆ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ […]

Continue Reading

ಬೀದರ: ಸೆ.7 ರಂದು ದ್ವಿತೀಯ ಅಖಿಲ ಕರ್ನಾಟಕ ಗಜಲ್ ಸಮ್ಮೇಳನ

ಕಲಬುರಗಿ: ಅಖಿಲ ಕರ್ನಾಟಕ ದ್ವಿತೀಯ ಗಜಲ್ ಸಾಹಿತ್ಯ ಸಮ್ಮೇಳನವನ್ನು ಸೆಪ್ಟೆಂಬರ್ 7 ರಂದು ರವಿವಾರ ಬೀದರ ನಗರದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಗಜಲ್ ಸಮ್ಮೇಳನದ ರೂವಾರಿ ಆಗಿರುವ ಕರ್ನಾಟಕ ಗಜಲ್ ಅಕಾಡೆಮಿ ಕಾರ್ಯದರ್ಶಿ ಮಹಿಪಾಲರೆಡ್ಡಿ ಸೇಡಂ ತಿಳಿಸಿದ್ದಾರೆ. ಕಳೆದ ವರ್ಷ ಕಲಬುರಗಿಯ ವಿಶ್ವವಿದ್ಯಾಲಯದಲ್ಲಿ ಪ್ರಥಮ ಗಜಲ್ ಸಾಹಿತ್ಯ ಸಮ್ಮೇಳನ ನಡೆಸಲಾಗಿತ್ತು, ಈ ಬಾರಿ ಕರ್ನಾಟಕದ ಮುಕುಟಪ್ರಾಯ ಎನಿಸಿರುವ ಧರಿನಾಡಿನಲ್ಲಿ ದ್ವಿತೀಯ ಗಜಲ್ ಸಾಹಿತ್ಯ ಸಮ್ಮೇಳನ ನಡೆಸಲಾಗುತ್ತಿದ್ದು, ಸಮ್ಮೇಳನಾಧ್ಯಕ್ಷರಾಗಿ ಕನ್ನಡದ ಹಿರಿಯ ಕವಿ, ಬಹುಭಾಷಾ ವಿದ್ವಾಂಸರು ಮತ್ತು ಗಜಲ್ […]

Continue Reading

ಕುಡಿತದ ಚಟ ಬಿಡಿಸಲು ನಾಟಿ ಔಷಧಿ ಸೇವಿಸಿ ನಾಲ್ವರು ಸಾವು: ನಕಲಿ ವೈದ್ಯ ಅರೆಸ್ಟ್

ಕಲಬುರಗಿ: ಕುಡಿತದ ಚಟ ಬಿಡಿಸಲು ನಕಲಿ ವೈದ್ಯನಿಂದ ಚಿಕಿತ್ಸೆ ಪಡೆದು ನಾಲ್ವರು ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆ ಸೇಡಂ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮಿ, ಗಣೇಶ್ ರಾಠೋಡ, ನಾಗೇಶ್ ಹಾಗೂ ಮನೋಹರ ಮೃತ ದುರ್ದೈವಿಗಳು. ನಕಲಿ ವೈದ್ಯ ಸಾಯಪ್ಪ ಮುತ್ಯಾ ಅಲಿಯಾಸ್ ಫಕೀರಪ್ಪ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮದ್ಯವ್ಯಸನಿಗಳಾಗಿದ್ದ ಲಕ್ಷ್ಮಿ, ಗಣೇಶ ರಾಠೋಡ, ನಾಗೇಶ್ ಹಾಗೂ ಮನೋಹರ ತಮ್ಮ ಕುಟುಂಬಸ್ಥರೊಂದಿಗೆ ಸೇಡಂ ತಾಲೂಕಿನ ಇಮಡಾಪುರ ಗ್ರಾಮಕ್ಕೆ ಬಂದಿದ್ದರು. ಇಮಡಾಪುರ ಗ್ರಾಮದ ಸಾಯಪ್ಪ ಮುತ್ಯಾ ಅಲಿಯಾಸ್ ಫಕೀರಪ್ಪ ಎಂಬ […]

Continue Reading

6 ಜನರಿಂದ ಬಾಲಕಿ ಮೇಲೆ ನಿರಂತರ ಅತ್ಯಾಚಾರ: ಮೂವರು ಕಾಮುಕರ ಬಂಧನ

ಕೋಲಾರ: ಬಾಲಕಿಯೊಬ್ಬಳ ಮೇಲೆ ನಿರಂತರ ಪ್ರತ್ಯೇಕವಾಗಿ 6 ಜನ ಅತ್ಯಾಚಾರವೆಸಗಿರುವುದು ಕೋಲಾರ ಜಿಲ್ಲೆಯ ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ರಾಹುಲ್, ನಾಗೇಶ್ ಮತ್ತು ಪುನೀತ್ ಎಂದು ಗುರುತಿಸಲಾಗಿದೆ. ತಲೆಮರೆಸಿಕೊಂಡಿರುವ ಚೇತನ್, ಕಿರಣ್, ಮಹೇಂದ್ರಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಬಾಲಕಿ ನೀಡಿದ ಹೇಳಿಕೆ ಆಧರಿಸಿ 6 ಜನರ ವಿರುದ್ದ ಜು.18 ರಂದು ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Continue Reading

ಪತ್ರಿಕೆಗಳ ಓದುಗರ ಸಂಖ್ಯೆ ಕುಸಿದಿಲ್ಲ ಬದಲಿಗೆ ಹೆಚ್ಚಾಗಿದೆ

ಚಿತ್ತಾಪುರ: ಪತ್ರಿಕೆಗಳು ಜ್ಞಾನದ ಬುತ್ತಿಯಾಗಿದ್ದು ಮರಳಿ ಪ್ರವರ್ಧಮಾನಕ್ಕೆ ಬರುತ್ತಿವೆ. ಹೀಗಾಗಿ ಪತ್ರಿಕೆಗಳು ಯಾವತ್ತು ಮುಚ್ಚುವುದಿಲ್ಲ. ಓದುಗರ ಸಂಖ್ಯೆ ಕುಸಿದಿಲ್ಲ. ಬದಲಿಗೆ ಹೆಚ್ಚಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಹೇಳಿದರು. ಪಟ್ಟಣದ ತಾ‌.ಪಂ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪತ್ರಿಕೆಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಆದರೆ ಪ್ರಸ್ತುತ ದಿನಗಳಲ್ಲಿ ಅನೇಕ ಸಂಕಷ್ಟ ಹಾಗೂ ಸವಾಲುಗಳು ಎದುರಿಸಲಾತ್ತಿದೆ ಎಂದು […]

Continue Reading