ಕುಂತಳ ನಾಡಿನ ಕಿರೀಟ ಭೈರಾಮಡಗಿ: ಮುಡುಬಿ ಗುಂಡೇರಾವ

ಕಲಬುರಗಿ: ಪ್ರಾಚೀನ ಕರ್ನಾಟಕದ ಆಡಳಿತದ ಘಟಕವಾಗಿದ್ದ ಕುಂತಳ ನಾಡಿನ ಪ್ರಮುಖ ಧಾರ್ಮಿಕ, ಶೈಕ್ಷಣಿಕ, ವಾಣಿಜ್ಯ ಕೇಂದ್ರವಾಗಿ ಮೆರೆದ ಭೈರಾಮಡಗಿಯು ಕುಂತಳ ನಾಡಿನ ಕಿರೀಟವಾಗಿ ಇತಿಹಾಸದಲ್ಲಿ ವಿಜ್ರಂಭಿಸಿದೆ ಎಂದು ಸಂಶೋಧಕ-ಸಾಹಿತಿ ಮುಡುಬಿ ಗುಂಡೇರಾವ ಹೇಳಿದರು. ಜಿಲ್ಲೆಯ ಅಫಜಲಪುರ ತಾಲೂಕಿನ ಭೈರಾಮಡಗಿಯ ಐತಿಹಾಸಿಕ ಕಾಲಭೈರೇಶ್ವರ ದೇವಾಲಯದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-22ರಲ್ಲಿ ವಿಶೇಷ ಉಪನ್ಯಾಸ ನೀಡುತ್ತ ಮಾತನಾಡಿದ ಅವರು, ಗ್ರಾಮದಲ್ಲಿ ದೊರೆಯುವ ವೀರಗಲ್ಲುಗಳು, ಮಹಾಸತಿಗಲ್ಲುಗಳು, ಶಿಲ್ಪಗಳು, ಚದುರಿಬಿದ್ದ ದೇವಾಲಯದ ಸ್ಥಂಭಗಳು, […]

Continue Reading

ಮದುವೆಯಾದ ಮೂರೇ ತಿಂಗಳಲ್ಲಿ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ

ರಾಯಚೂರು: ತಾಲೂಕಿನ ಗುರ್ಜಾಪುರ ಬಳಿಯ ಕೃಷ್ಣಾ ನದಿಯ ಬ್ರಿಜ್‌ ಕಂ ಬ್ಯಾರೇಜ್‌ ಮೇಲೆ ಫೋಟೋ ತೆಗೆಸಿಕೊಳ್ಳುತ್ತಿದ್ದ ವ್ಯಕ್ತಿಯನ್ನು ಆತನ ಪತ್ನಿಯೇ ಶನಿವಾರ ನದಿಗೆ ತಳ್ಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮೂರು ತಿಂಗಳ ಹಿಂದೆಯಷ್ಟೆ ಮದುವೆಯಾಗಿರುವ ನವದಂಪತಿ ಸೇತುವೆ ಮಾರ್ಗದಿಂದ ತೆರಳುವ ಸಂದರ್ಭದಲ್ಲಿ ಬ್ಯಾರೇಜ್‌ ಮೇಲೆ ಮೇಲೆ ನಿಂತು ಫೋಟೋ ತೆಗೆಸಿಕೊಳ್ಳಲು ನಿರ್ಧರಿಸಿದ್ದಾರೆ. ಮೊದಲು ಪತ್ನಿಯ ಫೋಟೋ ತೆಗೆದ ಪತಿ ಬಳಿಕ ತನ್ನ ಫೋಟೋ ತೆಗೆಯುವಂತೆ ಪತ್ನಿಗೆ ಹೇಳಿದ್ದಾನೆ. ಸೇತುವೆ ಕಟ್ಟೆಯ ಮೇಲೆ ನಿಲ್ಲಿಸಿ ಸಮೀಪದಿಂದ ಪೋಟೋ […]

Continue Reading

ಸಹಕಾರಿ ಚಳುವಳಿಯ ಯಶಸ್ವಿಗೆ ಜನರ ಸಕ್ರಿಯ ಭಾಗವಹಿಸುವಿಕೆ ಅಗತ್ಯ

ಕಲಬುರಗಿ: ಭಾರತದಲ್ಲಿ ಸಹಕಾರಿ ಚಳುವಳಿ ಆರಂಭವಾಗಿ ಶತಮಾನ ಕಳೆದರು ಕೂಡಾ ಅದರ ತತ್ವ, ಆಶಯ ಜನಸಾಮಾನ್ಯರಿಗೆ ಮುಟ್ಟುತ್ತಿಲ್ಲ. ‘ತಾನು ಎಲ್ಲರಿಗಾಗಿ, ಎಲ್ಲರೂ ತನಗಾಗಿ’ ಎಂಬ ಸಹಕಾರದ ತತ್ವದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಹಕಾರಿ ಸಂಘಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಅವುಗಳ ಸದುಪಯೋಗ ಪಡೆದುಕೊಂಡು ಸಹಕಾರಿ ಚಳುವಳಿಯ ಯಶಸ್ವಿಯಲ್ಲಿ ಸಕ್ರಿಯವಾಗಿ ಭಾಗವಹಿಸುವಿಕೆ ಅಗತ್ಯವಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ಜಿಲ್ಲೆಯ ಶಹಾಬಾದ ತಾಲೂಕಿನ ಭಂಕೂರ್‌ನ ಕೆರಿಯಮ್ಮ ದೇವಸ್ಥಾನದ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಅಂತಾರಾಷ್ಟ್ರೀಯ […]

Continue Reading

ಅರಣ್ಯ ಇಲಾಖೆಯಲ್ಲಿ 540 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಖಂಡ್ರೆ

ಕಲಬುರಗಿ: ಅರಣ್ಯ ಇಲಾಖೆಯಲ್ಲಿ 6000 ಹುದ್ದೆಗಳು ಖಾಲಿ ಇದ್ದು, ಅದರಲ್ಲಿ 540 ಹುದ್ದೆಗಳ ಭರ್ತಿ ಆರಂಭವಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 540 ಹುದ್ದೆಗಳ ಜೊತೆಗೆ 340 ಹುದ್ದೆಗಳ ನೇಮಕಾತಿಗೆ ಮುಂದಾಗಲಾಗುವುದು ಎಂದರು.‌ ಮಲೆಮಹದೇಶ್ವರ ಬೆಟ್ಟದಲ್ಲಿ ಹುಲಿಗಳ ಸಾವು ಪ್ರಕರಣ ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಹುಲಿಗಳಿಗೆ ವಿಷಪ್ರಾಷನ ಮಾಡಿದ್ದು ವರದಿಯಲ್ಲಿ ಗೊತ್ತಾಗಿದೆ. ಪ್ರಮುಖವಾಗಿ ಕರ್ತವ್ಯ ಲೋಪ ಆರೋಪದ ಮೇಲೆ ಇಬ್ಬರು ಅಧಿಕಾರಿಗಳ ಸಸ್ಪೆಂಡ್ ಮಾಡಿದ್ದೆವೆ.‌ ಓರ್ವ ಅಧಿಕಾರಿ ಅಮಾನತಿಗೆ ಡಿಪಿಎಆರ್‌ ಇಲಾಖೆಗೆ […]

Continue Reading

200 ರೂ. ವಂಚಿಸಿದ ಆರೋಪಿಯನ್ನು 30 ವರ್ಷಗಳ ನಂತರ ಬಂಧಿಸಿದ ಶಿರಸಿ ಪೊಲೀಸರು

ಕಾರವಾರ: ಕಳೆದ 30 ವರ್ಷಗಳ ಹಿಂದೆ ನೌಕರಿ ನೀಡುವುದಾಗಿ ನಂಬಿಸಿ 200 ರೂ. ವಂಚನೆ ಮಾಡಿದ್ದ ಆರೋಪಿಯನ್ನು ಶಿರಸಿ ಗ್ರಾಮೀಣ ಪೊಲೀಸರು ತೀವ್ರ ಹುಡುಕಾಟದ ನಂತರ ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣದಲ್ಲಿ ವಂಚನೆಯ ಮೊತ್ತಕ್ಕಿಂತ ಪ್ರಕರಣದ ಗಂಭೀರತೆ ಮತ್ತು ಕಾಲಾವಧಿ ಗಮನ ಸೆಳೆಯುತ್ತಿದೆ. ಘಟನೆ ಹಿನ್ನಲೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 30 ವರ್ಷಗಳ ಹಿಂದೆ ವ್ಯಕ್ತಿಯೊಬ್ಬರಿಗೆ ಉದ್ಯೋಗ ಕೊಡುವುದಾಗಿ ಭರವಸೆ ನೀಡಿ ಆರೋಪಿ 200 ರೂ. ತೆಗೆದುಕೊಂಡಿದ್ದನು. ಆದರೆ ನೌಕರಿ […]

Continue Reading

ಬೆದರಿಕೆ ಹಾಕಿದ್ದಕ್ಕೆ ಪತಿಯನ್ನು ಕೊಂದ ಪತ್ನಿ: ಕೊಲೆ ಸುಳಿವು ಕೊಟ್ಟ ಖಾರದಪುಡಿ

ತುಮಕೂರು: ಜಿಲ್ಲೆ ತಿಪಟೂರು ತಾಲೂಕಿನ ಶಂಕರ್ ಮೂರ್ತಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಾಪತ್ತೆಯಾಗಿದ್ದ ಶಂಕರ್ ಮೂರ್ತಿ ಮೃತ ದೇಹ ನೊಣವಿನಕೆರೆ ಬಳಿ ಪತ್ತೆಯಾಗಿದೆ, ಪತ್ನಿಯೇ ಕೊಲೆ ಮಾಡಿ ಗಂಡ ಕಾಣೆಯಾಗಿದ್ದಾನೆ ಎಂದು ದೂರು ನೀಡಿ ನಾಟಕವಾಡಿರುವುದು ಬಟಾಬಯಲಾಗಿದೆ. ನಾಪತ್ತೆಯಾದ ಐದು ದಿನಗಳ ನಂತರ ಶಂಕರ್ ಮೂರ್ತಿ (51) ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ, ಪತ್ನಿ ಸುಮಂಗಲಾ ತನ್ನ ಸಂಬಂಧಿ ನಾಗರಾಜನೊಂದಿಗೆ ಸೇರಿಕೊಂಡು ಶಂಕರ್ ಮೂರ್ತಿಯನ್ನು ಕೊಲೆ ಮಾಡಿದ್ದಾಳೆ. ಬಳಿಕ ಶವವನ್ನು ಗೋಣಿ ಚೀಲದಲ್ಲಿ ತುಂಬಿಕೊಂಡು […]

Continue Reading

ಸಂಗೀತಕ್ಕಿದೆ ರೋಗ ನಿವಾರಣಾ ಶಕ್ತಿ

ಕಲಬುರಗಿ: ಸುಮಧುರ ಸಂಗೀತ ಆಲಿಸುವದರಿಂದ ಮಾನಸಿಕ ಒತ್ತಡದಿಂದ ಮುಕ್ತಗೊಳಿಸಿ, ಮನಸಿಗೆ ನೆಮ್ಮದಿ ದೊರೆಯತ್ತದೆ. ರೋಗ ನಿವಾರಣೆ ಮಾಡುವ ಶಕ್ತಿ ಸಂಗೀತಕ್ಕಿದೆ, ಇದು ವೈಜ್ಞಾನಿಕ ನಿರೂಪಣೆಯಾಗಿದ್ದು ಸಂಗೀತದ ಮಹತ್ವ ತೋರಿಸುತ್ತದೆ ಎಂದು ಖ್ಯಾತ ಗಾಯಕ, ಕಲಾವಿದ ಶರಣು ಕಾಂಬಳೆ ಅಭಿಮತಪಟ್ಟರು. ನಗರದ ಆಳಂದ ಚೆಕ್ ಪೋಸ್ಟ್ ಸಮೀಪದ ಗಾನಗಂಧರ್ವ ಸಂಗೀತ ಪಾಠಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ರವಿವಾರ ಜರುಗಿದ ‘ವಿಶ್ವ ಸಂಗೀತ ದಿನಾಚರಣೆ’ಯನ್ನು ಹಾರ್ಮೋನಿಯಂ ನುಡಿಸಿ, ಗೀತೆಯನ್ನು ಹಾಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕ […]

Continue Reading

ಯೋಗಯುಕ್ತ ಜೀವನದಿಂದ ರೋಗ ಮುಕ್ತ ರಾಷ್ಟ್ರ ನಿರ್ಮಾಣ

ಕಲಬುರಗಿ: ಪ್ರತಿಯೊಬ್ಬರು ಜೀವನದಲ್ಲಿ ಯೋಗವನ್ನು ಅಳವಡಿಸಿಕೊಂಡರೆ ರೋಗ ಮುಕ್ತ ದೇಹ, ರಾಷ್ಟ್ರ‌ ನಿರ್ಮಾಣವಾಗುತ್ತದೆ ಎಂದು ಯೋಗ ತರಬೇತಿದಾರ ಚನ್ನಬಸಪ್ಪ ಗಾರಂಪಳ್ಳಿ ಅಭಿಮತಪಟ್ಟರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಅಂತರಾಷ್ಟ್ರೀಯ ಯೋಗ ದಿನಾಚರಣೆ’ ಉದ್ಘಾಟಿಸಿ, ಯೋಗಾಸನದ ವಿವಿಧ ಬಗೆಗಳನ್ನು ಪ್ರಾತ್ಯಕ್ಷಿಯ ಮೂಲಕ ತೋರಿಸಿ, ನಂತರ ಮಾತನಾಡಿದ ಅವರು, ಯೋಗವು ದೈಹಿಕ ಮತ್ತು ಮಾನಸಿಕವಾಗಿ ವ್ಯಕ್ತಿಯನ್ನು ಸದೃಢವಾಗಿರುವಂತೆ ಮಾಡುವ ವೈಜ್ಞಾನಿಕ ಪದ್ದತಿಯಾಗಿದೆ ಎಂದರು. ಉಪನ್ಯಾಸಕ, ಎನ್.ಎಸ್.ಎಸ್ ಅಧಿಕಾರಿ […]

Continue Reading

500 ರೂ. ಲಂಚ ಪಡೆದಿದ್ದ ಗ್ರಾಮ ಲೆಕ್ಕಾಧಿಕಾರಿಗೆ 30 ವರ್ಷಗಳ ಬಳಿಕ ಶಿಕ್ಷೆ

ಬೆಳಗಾವಿ: ಅಣ್ಣ-ತಮ್ಮಂದಿರರ ಜಾಗದ ವಿವಾದದಲ್ಲಿ ಪಹಣಿ ಪತ್ರ ನೀಡಲು 500 ರೂ. ಲಂಚ ಪಡೆದಿದ್ದ ಗ್ರಾಮ ಲೆಕ್ಕಾಧಿಕಾರಿಗೆ 30 ವರ್ಷಗಳ ಬಳಿಕ ಸುಪ್ರೀಂಕೋರ್ಟ್ ಬುಧವಾರ ಒಂದು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸುವ ಮೂಲಕ ಕೆಲ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದೆ. ತಾಲೂಕಿನ ಕಡೋಲಿ‌ ಗ್ರಾಮದ ಲೆಕ್ಕಾಧಿಕಾರಿ ನಾಗೇಶ ಧೋಂಡು ಶಿವಂಗೇಕರ ಎಂಬಾತನಿಗೆ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ್ದು, ಆಪಾದಿತರನ್ನು ಹಿಂಡಲಗಾ ಜೈಲಿಗೆ ರವಾನಿಸಲಾಗಿದೆ. ಕಡೋಲಿಯ ಲಕ್ಷ್ಮಣ ರುಕ್ಕಣ್ಣ ಕಟಾಂಬಳೆ ಇವರ ಸಹೋದರರ ಜಮೀನನ್ನು […]

Continue Reading

ತರಕಾರಿ ಸೇವನೆಯಿಂದ ಸದೃಢ ಆರೋಗ್ಯ

ಕಲಬುರಗಿ: ದೈಹಿಕ, ಮಾನಸಿಕವಾಗಿ ಜೀವಿಸಿ, ಬೆಳವಣಿಗೆ ಹೊಂದಲು, ಆರೋಗ್ಯಕರವಾಗಿರಲು ಆಹಾರವು ಪ್ರಮುಖ ಪಾತ್ರ ವಹಿಸುತ್ತದೆ. ಶುದ್ಧ, ಸ್ವಚ್ಛವಾಗಿರುವ ಹಾಗೂ ಆದಷ್ಟು ಸಾವಯುವ ಪದ್ಧತಿಯ ಮೂಲಕ ಬೆಳೆದ ತರಕಾರಿಗಳ ಸೇವನೆ ಮಾಡುವುದುರಿಂದ ಸದೃಢ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಆಳಂದ ರಸ್ತೆಯ ಟೋಲ್‌ಗೇಟ್ ಸಮೀಪದ ರೈತ ಚಂದ್ರಶ್ಯಾ ಇಟಗಿ ಅವರ ತರಕಾರಿ ತೋಟದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಜರುಗಿದ ‘ವಿಶ್ವ ತರಕಾರಿ ದಿನಾಚರಣೆ’ಯಲ್ಲಿ ತರಕಾರಿ ಬೆಳೆಗಾರ ರೈತ […]

Continue Reading