ಕ್ಷೇತ್ರದ ಗ್ರಾಮೀಣ ಅಭಿವೃದ್ದಿಗೆ 150 ಕೋಟಿ ರೂ ವೆಚ್ಚದ ಕ್ರಿಯಾಯೋಜನೆ ಸಿದ್ದ: ಸಚಿವ ಪ್ರಿಯಾಂಕ್ ಖರ್ಗೆ

ಚಿತ್ತಾಪುರ: ಕ್ಷೇತ್ರದ ಗ್ರಾಮೀಣ ಭಾಗದ ಹಳ್ಳಿಗಳ ಅಭಿವೃದ್ಧಿಗೆ 150 ಕೋಟಿ ರೂ ವೆಚ್ಚದ ಕ್ರಿಯಾಯೋಜನೆ ಈಗಾಗಲೆ ಸಿದ್ದವಾಗಿದೆ. ಇದರ ಅಡಿಯಲ್ಲಿ 87 ಹಳ್ಳಿಗಳಿಗೆ ಅಗತ್ಯ ಅನುದಾನ ಲಭ್ಯವಾಗಲಿದೆ, ಮುಂದಿನ 15 ದಿನಗಳಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ‌ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಅಮೃತ್ ಯೋಜನೆಯಡಿಯಲ್ಲಿ ಚಿತ್ತಾಪುರ ಹಾಗೂ ವಾಡಿ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಗೆ ಅಡಿಗಲ್ಲು, ಚಿತ್ತಾಪುರ ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ಕ್ರೀಡಾಂಗಣ […]

Continue Reading

ಪಾಕಿಸ್ತಾನದ ದಾಳಿಯಲ್ಲಿ ಹುತಾತ್ಮರಾದ ಯೋಧ ಮುರಳಿ ನಾಯಕಗೆ ಭಾವಪೂರ್ಣ ಶ್ರದ್ಧಾಂಜಲಿ

ಚಿತ್ತಾಪುರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಭಾರಿ ಶೆಲ್ ದಾಳಿಯಲ್ಲಿ ಆಂಧ್ರ ಪ್ರದೇಶದ ಸೈನಿಕ ಮುರಳಿ ನಾಯಕ್ ಹುತಾತ್ಮರಾಗಿದ್ದಾರೆ, ಈ ಹಿನ್ನೆಲೆಯಲ್ಲಿ ಪಟ್ಟಣದ ಚಿತಾವಲಿ ವೃತ್ತದಿಂದ ಸಂಜೆ ಕ್ಯಾಂಡಲ್ ಮಾರ್ಚ್ ಮೆರವಣಿಗೆ ಕಪಡಾ ಬಜಾರ್, ಜನತಾ ವೃತ್ತ, ಭುವನೇಶ್ವರಿ ವೃತ್ತ, ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣದ ರಸ್ತೆ, ಬಸವೇಶ್ವರ ವೃತ್ತದ ಮೂಲಕ ಲಾಡ್ಜಿಂಗ್ ಕ್ರಾಸ್ ಸಮೀಪ ಸಮಾವೇಶಗೊಂಡು ಒಂದು ನಿಮಿಷ ಮೌನಾಚರಣೆ ಮಾಡಿ ಮೃತಯೋಧರ ಆತ್ಮಕ್ಕೆ ಶಾಂತಿ ಕೋರಲಾಯಿತು. ಪುರಸಭೆ […]

Continue Reading

ವಾಡಿ: ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಪ್ರಯುಕ್ತ ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಬಿಜೆಪಿ ಮುಖಂಡರು ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಹೇಮರೆಡ್ಡಿ ಮಲ್ಲಮ್ಮ ಅವರು ಸೂರ್ಯ-ಚಂದ್ರ ಇರುವವರೆಗೂ ಸಮಾಜಕ್ಕೆ ಅನ್ನದ ಕೊರತೆ ಬರಬಾರದು ಎಂದು ಶಿವನಿಂದ ವರ ಪಡೆದ ಮಹಾತಾಯಿ ಎಂದರು. ಅವರ ತತ್ವಾದರ್ಶಗಳೊಂದಿಗೆ ಬದುಕು ಸಾಗಿಸಿದರೆ ಆತ್ಮದ ಉನ್ನತಿ ಸಾಧ್ಯ. ಶ್ರೀಮಂತಿಕೆ ಅಂದರೆ ಹಣ, ಚಿನ್ನವಲ್ಲ ಪರಸ್ಪರ ಪ್ರೀತಿ, ಗೌರವದಿಂದ ಕಾಣುವುದು. ಮಾನವೀಯ […]

Continue Reading

ವಿಶ್ವದ ಅಭಿವೃದ್ಧಿಗೆ ರೆಡ್‌ಕ್ರಾಸ್‌ ಕೊಡುಗೆ ಅಪಾರ: ಎಚ್.ಬಿ ಪಾಟೀಲ

ಕಲಬುರಗಿ: ಸಮಾಜಮುಖಿ ಕಾರ್ಯಗಳನ್ನು ಕಳೆದ ಅನೇಕ ವರ್ಷಗಳಿಂದ ಮಾಡುವ ಮೂಲಕ ರೆಡ್’ಕ್ರಾಸ್ ಸಂಸ್ಥೆಯು ವಿಶ್ವದ ಅಭಿವೃದ್ಧಿಗೆ ತನ್ನದೆಯಾದ ಅಪಾರ ಕೊಡುಗೆ ನೀಡುತ್ತಿದೆ ಎಂದು ಕಿರಿಯ ರೆಡ್’ಕ್ರಾಸ್ ಘಟಕದ ಕೌನ್ಸಲರ್ ಎಚ್.ಬಿ ಪಾಟೀಲ ಹೇಳಿದರು . ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಾಲೇಜಿನ ಕಿರಿಯ ರೆಡ್ ಕ್ರಾಸ್ ಘಟಕದ ವತಿಯಿಂದ ಗುರುವಾರ ಏರ್ಪಡಿಸಿದ್ದ ‘ವಿಶ್ವ ರೆಡ್‌ಕ್ರಾಸ್ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ನೈಸರ್ಗಿಕ ವಿಪತ್ತು ನಿರ್ವಹಣೆ, ಜನಜಾಗೃತಿ ಕಾರ್ಯಕ್ರಮ, ರಕ್ತದಾನ, ಪ್ರವಾಹ, ಸಂಕಷ್ಟದಲ್ಲಿರುವ ಜನರಿಗೆ […]

Continue Reading

ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಲಂಬಾಣಿ ಎಂದು ಬರೆಯಿಸಲು ಬಂಜಾರ ಸಮಾಜ ಮನವಿ

ಚಿತ್ತಾಪುರ: ಪರಿಶಿಷ್ಟ ಜಾತಿಗಳ ಸಮೀಕ್ಷೆಯಲ್ಲಿಪ್ರತಿಯೊಂದು ಕುಟುಂಬ ಭಾಗವಹಿಸುವ ಮೂಲಕಲಂಬಾಣಿ ಎಂದು ಬರೆಯಿಸಬೇಕು ಎಂದು ಬಂಜಾರಸಮಾಜದ ತಾಲೂಕು ಅಧ್ಯಕ್ಷ ಭೀಮಸಿಂಗ್ ಚವ್ಹಾಣ ಮತ್ತು ತಾಲೂಕು ಯುವ ಅಧ್ಯಕ್ಷ ಜಗದೀಶ ಚವ್ಹಾಣ ಮನವಿ ಮಾಡಿದ್ದಾರೆ. 1 ಜುಲೈ 2024 ರಂದು ಸುಪ್ರೀಂಕೋರ್ಟ್ ತೀರ್ಪಿನಂತೆ ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನದಾಸ್ ಏಕ ಸದಸ್ಯ ವಿಚಾರಣೆ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಮೇ.5 ರಿಂದ 17 […]

Continue Reading

ಚಿತ್ತಾಪುರ: ವಿದ್ಯಾನಿಕೇತನ ಪ್ರೌಢ ಶಾಲೆಗೆ ಸಹನಾ ಬಳ್ಳಾ ಟಾಪರ್

ಚಿತ್ತಾಪುರ: ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಹನಾ ಬಳ್ಳಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 611 ಅಂಕ ಪಡೆದಿದ್ದಾಳೆ. ಸಂಧ್ಯಾಕಾಲ ಪತ್ರಿಕೆಯ ವರದಿಗಾರ ಚಂದ್ರಶೇಖರ ಬಳ್ಳಾ ಅವರ ಪುತ್ರಿ ಸಹನಾ ಬಳ್ಳಾ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ 611 (ಶೇ.97.76) ಅಂಕ ಪಡೆಯುವ ಮೂಲಕ ವಿದ್ಯಾನಿಕೇತನ ಪ್ರೌಢ ಶಾಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾಳೆ. ಮಗಳು ಸಹನಾಗೆ ಸಿಹಿ ತಿನ್ನಿಸಿ ಪೋಷಕರು ಸಂಭ್ರಮಿಸಿದ್ದಾರೆ. 2024-25ನೇ ಸಾಲಿನ ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಹಾಜರಾದ ಒಟ್ಟು 54 ವಿದ್ಯಾರ್ಥಿಗಳಲ್ಲಿ 53 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ. 20 ವಿದ್ಯಾರ್ಥಿಗಳು […]

Continue Reading

ಚಿತ್ತಾಪುರದಲ್ಲಿ ಅಪರಿಚಿತ ವ್ಯಕ್ತಿಯ ಕೊಲೆ: ಎಸ್ಪಿ ಭೇಟಿ, ಪರಿಶೀಲನೆ

ಚಿತ್ತಾಪುರ: ಪಟ್ಟಣದ ಹಳೆಯ ಕೋರ್ಟ್ ಎದುರುಗಡೆಯ ಲಕ್ಷ್ಮಿ ಅಟೋ ಮೊಬೈಲ್ ಅಂಗಡಿ ಸಮೀಪ ಅಪರಿಚಿತ ವ್ಯಕ್ತಿಯ ಕೊಲೆಯಾದ ವಿಷಯ ತಿಳಿಯುತ್ತಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಡಿಶನಲ್ ಎಸ್ಪಿ ಮಹೇಶ ಮೇಘಣ್ಣವರ್, ಡಿವೈಎಸ್ಪಿ ಶಂಕರಗೌಡ ಪಾಟೀಲ, ಸಿಪಿಐ ಚಂದ್ರಶೇಖರ ತಿಗಡಿ, ಪಿಎಸ್‌ಐ ಶ್ರೀಶೈಲ್ ಅಂಬಾಟಿ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಇದ್ದರು. ಘಟನೆಯ ಬಗ್ಗೆ ತಿಳಿಯುತ್ತಲೇ ಪತ್ತೆ ಕಾರ್ಯ ಕೈಗೊಳ್ಳಲಾಗಿದೆ, ಲಾಡ್ಡಿಂಗ್ ಕ್ರಾಸ್ ಸಮೀಪದ ಎಲ್ಲಾ ಸಿಸಿ […]

Continue Reading

ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ: ದಿಗ್ಗಾಂವ ಶ್ರೀ

ಚಿತ್ತಾಪುರ: ಮನೆಯೇ ಮೊದಲ ಪಾಠ ಶಾಲೆ, ಜನನಿ ತಾನೆ ಮೊದಲ ಗುರು ಹೀಗಾಗಿ ಮಕ್ಕಳಿಗೆ ಬಾಲ್ಯದಿಂದಲೆ ಸಂಸ್ಕಾರ, ಪರಂಪರೆ, ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸಬೇಕು. ಸಂಸ್ಕಾರ ಎಂಬ ಆಹಾರ ನೀಡಿ ಬೆಳೆಯುವಂತೆ ಮಾಡಬೇಕು ಎಂದು ದಿಗ್ಗಾಂವ ಪಂಚಗೃಹ ಹಿರೇಮಠದ ಪೀಠಾಧಿಪತಿ ಸಿದ್ಧವೀರ ಶಿವಾಚಾರ್ಯರು ಹೇಳಿದರು. ತಾಲೂಕಿನ ಸನ್ನತಿ ಗ್ರಾಮದಲ್ಲಿ ಶ್ರೀ ಗುರು ಸೋಮೇಶ್ವರ ವೈದಿಕ ಜ್ಯೋತಿ ಗುರುಕುಲದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಂಗಮ ವಟುಗಳಿಗೆ ಬೇಸಿಗೆ ಸಂಸ್ಕಾರ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಭಾರತೀಯ ಪರಂಪರೆ, ಸಂಸ್ಕೃತಿ, ಆಚಾರ-ವಿಚಾರದ […]

Continue Reading

ರಾವೂರ: ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವ ಇಂದಿನಿಂದ

ಕಲಬುರಗಿ: ಶಹಾಬಾದ ತಾಲೂಕಿನ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವವು ಇಂದು ಹೇಮರೆಡ್ಡಿ ಮಲ್ಲಮ್ಮ ಪುರಾಣದೊಂದಿಗೆ ಪ್ರಾರಂಭವಾಗಲಿದೆ ಎಂದು ಶ್ರೀಮಠದ ಕಾರ್ಯದರ್ಶಿ ಡಾ. ಗುಂಡಣ್ಣ ಬಾಳಿ ಹೇಳಿದರು. ಏಪ್ರಿಲ್ 12 ರಿಂದ 20ರ ವರೆಗೆ ಪ್ರತಿದಿನ ಸಂಜೆ 7.30ಕ್ಕೆ ಯೋಗಿರಾಜ್ ಖಾನಾಪುರ ಅವರಿಂದ ಪುರಾಣ ನಡೆಯಲಿದೆ. ಶ್ರೀಮಠದ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳ ದಿವ್ಯಸಾನಿಧ್ಯದಲ್ಲಿ ಪ್ರತಿದಿನ ನಾಡಿನ ವಿವಿಧ ಪೂಜ್ಯರು, ಗಣ್ಯರು, ರಾಜಕೀಯ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಏಪ್ರಿಲ್ 17 ರಂದು ಪ್ರತಿಭಾ ಪುರಸ್ಕಾರ, 18 ರಂದು ಮುತೈದೆಯರಿಗೆ ಉಡಿ […]

Continue Reading

ಸಮಾಜದ ಸೌಖ್ಯತೆಗೆ ಪೂಜೆ, ದಾಸೋಹ ಮುಖ್ಯ: ನಾಲವಾರ ಶ್ರೀಗಳು

ಜೇವರ್ಗಿ: ಸಮಾಜದಲ್ಲಿನ ಜನರು ಅಹಂ ಅನ್ನು ತೊರೆದು ಪ್ರೀತಿ, ವಿಶ್ವಾಸ, ಭಕ್ತಿಯಿಂದ ಪೂಜೆ ಮತ್ತು ದಾಸೋಹ ಪರಂಪರೆಯನ್ನು ದಿನವಿಡಿ ನಡೆಸಿದರೆ ಬದುಕಿಗೆ ಬೆಲೆ ಬರುತ್ತದೆ. ಮಾಡುವ ಕಾರ್ಯದಲ್ಲಿ ಸ್ವಾರ್ಥ ಮತ್ತು ಅಹಂ ಅನ್ನು ಮುಕ್ತಗೊಳಿಸಿ ನಿಸ್ವಾರ್ಥ ಸೇವೆ ಸಲ್ಲಿಸುವದು ತುಂಬಾ ಮುಖ್ಯ ಎಂದು ನಾಲವಾರ ಕೋರಿಸಿದ್ದೇಶ್ವರ ಸಂಸ್ಥಾನ ಮಠದ ಡಾ. ಸಿದ್ದತೋಟೆಂದ್ರ ಮಹಾಸ್ವಾಮಿಗಳು ನುಡಿದರು. ತಾಲೂಕಿನ ಕಟ್ಟಿ ಸಂಗಾವಿ ಭೀಮಾ ಬ್ರಿಜ್ ಪ್ರಭು ಬಸಯ್ಯ ತಾತನವರ ಜಾತ್ರಾ ಮಹೋತ್ಸವದ ಅಂಗವಾಗಿ ನೆರವೇರಿದ ರಥೋತ್ಸವದ ನಂತರ ನಡೆದ ಧರ್ಮ […]

Continue Reading