ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಸಾಧನೆಯ ಶಿಖರಕ್ಕೆರಲು ಸಾಧ್ಯ: ಡಾ.ಶಿವಶರಣಪ್ಪ ಗೌಡಪ್ಪ

ಚಿತ್ತಾಪುರ: ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಮತ್ತು ನಿರಂತರ ಪ್ರಯತ್ನದ ಫಲವಾಗಿ ಜೀವನದಲ್ಲಿ ಸಾಧನೆಯ ಶಿಖರಕ್ಕೆರಲು ಸಾಧ್ಯ ಎಂದು ಕಲಬುರಗಿ ಕೃಷಿ ಮಹಾವಿದ್ಯಾಲಯದ ಡೀನ್ ಡಾ.ಶಿವಶರಣಪ್ಪ ಗೌಡಪ್ಪ ಹೇಳಿದರು. ತಾಲೂಕಿನ ಭಾಗೋಡಿ ಗ್ರಾಮದ ಶಾಂತಲಿಂಗೇಶ್ವರ ಮಠದಲ್ಲಿ ಯುವ ಕೃಷಿ ವೈಭವದ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಸಮಯ ಪ್ರಜ್ಞೆ, ದೈರ್ಯ, ಆತ್ಮವಿಶ್ವಾಸ ಇರಬೇಕು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವುಮೂಡಿಸುವ ಕೆಲಸ ಮಾಡಬೇಕು, ಶಿಕ್ಷಕರು ಮಾರ್ಗದರ್ಶನ ಮಾಡಬೇಕು […]

Continue Reading

ರಾಷ್ಟ್ರ ಧ್ವಜ ದೇಶದ ಸಾರ್ವಭೌಮತೆಯ ಸಂಕೇತ

ಕಲಬುರಗಿ: ಕೇಸರಿ, ಬಿಳಿ, ಹಸಿರು ಬಣ್ಣ ಮತ್ತು ನಡುವೆ ಅಶೋಕ ಚಕ್ರವಿರುವ ಭಾರತ ದೇಶದ ತ್ರಿವರ್ಣ ಧ್ವಜವು ಭಾರತದಲ್ಲಿರುವ ಎಲ್ಲರಿಗೂ ಒಂದೆಯಾಗಿರುವ ಹೆಮ್ಮೆಯ, ಗೌರವ, ಸಮಾನತೆ ಹಾಗೂ ಸಾರ್ವಭೌಮತೆ ಸಾರುವ ಚಿಹ್ನೆಯಾಗಿದೆ. ಅದನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದು ಪ್ರಾಚಾರ್ಯ ರವೀಂದ್ರಕುಮಾರ ಸಿ ಬಟಗೇರಿ ಹೇಳಿದರು. ಜಿಲ್ಲೆಯ ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್’ಎಸ್’ಎಸ್ ಘಟಕದ ವತಿಯಿಂದ ಮಂಗಳವಾರ ಜರುಗಿದ ‘ರಾಷ್ಟ್ರ ಧ್ವಜ ಅಂಗೀಕಾರ ದಿನಾಚರಣೆ’ ಕಾರ್ಯಕ್ರಮದಲ್ಲಿ ಧ್ವಜಾ ಅರಳಿಸಿ, ನಂತರ […]

Continue Reading

ಕಲ್ಯಾಣ ಕರ್ನಾಟಕ ಪತ್ರಕರ್ತ ಪ್ರಶಸ್ತಿಗೆ ಆಯ್ಕೆ

ಸೇಡಂ: ಬೊಮ್ಮನಳ್ಳಿ ಸುದ್ದಿ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ಕಲ್ಯಾಣ ಕರ್ನಾಟಕ ಪತ್ರಕರ್ತ ಪ್ರಶಸ್ತಿಗೆ ಇಬ್ಬರು ಪತ್ರಕರ್ತರನ್ನು ಹಾಗೂ ಲಿಂ.ಶಿವಯ್ಯ ಮಠಪತಿ ಅವರ ಸ್ಮರಣಾರ್ಥ ಕೊಡುವ ಪ್ರಶಸ್ತಿಗೆ ಶೈಕ್ಷಣಿಕ ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ. ಬೊಮ್ಮನಳ್ಳಿ ಸುದ್ದಿ ಸಂಪಾದಕ ಸ್ಥಾಪಿಸಿರುವ ಯುವ ಪತ್ರಕರ್ತ ವೀರಭದ್ರ ಮಾಮನಿ ಸ್ಮರಣಾರ್ಥ 16ನೇ ವರ್ಷದ ಕಲ್ಯಾಣ ಕರ್ನಾಟಕ ಪತ್ರಕರ್ತ ಪ್ರಶಸ್ತಿಗೆ ಕಲಬುರಗಿ ದೃಶ್ಯಮಾಧ್ಯಮ ವರದಿಗಾರ ಅರುಣಕುಮಾರ ಕದಂ ಹಾಗೂ ಬೀದರಿನ ಪತ್ರಕರ್ತ ಅಪ್ಪಾರಾವ ಸೌದಿ ಅವರನ್ನು […]

Continue Reading

ಬೆಳಗುಂಪಾ: ಅಭಿನವ ಪರ್ವತೇಶ್ವರ ಶ್ರೀಗಳಿಗೆ ಗುರುವಂದನೆ

ಚಿತ್ತಾಪುರ: ತಾಲೂಕಿನ ಸುಕ್ಷೇತ್ರ ಬೆಳಗುಂಪಾದ ಅಭಿನವ ಪರ್ವತೇಶ್ವರ ಶಿವಾಚಾರ್ಯರಿಗೆ ಶ್ರೀ ಮಠದ ಭಕ್ತರಿಂದ ಗುರುಪೂರ್ಣಿಮೆ ಪ್ರಯುಕ್ತ ಗುರುವಾರ ಗುರುವಂದನೆ ಜರುಗಿತು. ಈ ಸಂದರ್ಭದಲ್ಲಿ ರೇವಯ್ಯ ಮಠಪತಿ, ಎಚ್.ಬಿ ಪಾಟೀಲ, ಶಿವಯೋಗೆಪ್ಪಾ ಎಸ್. ಬಿರಾದಾರ, ರೇವಣಸಿದ್ದಯ್ಯ ಹೊಸಮಠ, ಶಿವರಾಜ ಮಾಲಿ ಪಾಟೀಲ, ಉಮಾಕಾಂತ ಗಂಗಾಣಿ, ಸುಗಯ್ಯ ಹಿರೇಮಠ, ಬಾಬುರಾವ ಶೀಲವಂತ, ಹಣಮಂತರಾವ ಬಿರಾದಾರ, ನಾಗೇಶ ಶಿವಗೋಳ, ಬಸವರಾಜ ಕುಲಕರ್ಣಿ, ಚನ್ನಬಸವ ರೆಡ್ಡಿ ಸೇರಿದಂತೆ ಅನೇಕರು ಇದ್ದರು.

Continue Reading

ಅಭಿವೃದ್ಧಿಯಲ್ಲಿ ಅಂಕಿ ಅಂಶಗಳ ಪಾತ್ರ ಪ್ರಮುಖ

ಕಲಬುರಗಿ: ರಾಷ್ಟ್ರದ ಸಾಮಾಜಿಕ, ಆರ್ಥಿಕ ಸಮಸ್ಯೆಗಳಿಗೆ ನಿಖರವಾದ ಮಾಹಿತಿಯನ್ನು ನೀಡುವ ಮೂಲಕ ಅವುಗಳಿಗೆ ಪರಿಹಾರ ದೊರಕಿಸಿಕೊಡುವಲ್ಲಿ ಅಂಕಿ-ಅಂಶಗಳು ಪ್ರಮುಖ ಪಾತ್ರ ನಿರ್ವಹಿಸುತ್ತಿವೆ ಎಂದು ಗುವಿವಿ ಅರ್ಥಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ.ವಾಸುದೇವ ಸೇಡಂ ಎಚ್ ಅಭಿಮತಪಟ್ಟರು. ಜಿಲ್ಲೆಯ ಅಫಜಲಪುರ ತಾಲೂಕಿನ ಚಿನ್ಮಯಗಿರಿಯ ಮಹಾಂತೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಏರ್ಪಡಿಸಿದ್ದ ‘ವಿಶ್ವ ಸಂಖ್ಯಾಶಾಸ್ತ್ರ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಸಂಖ್ಯಾಶಾಸ್ತ್ರವು ರಾಷ್ಟ್ರದ ಸಂಪನ್ಮೂಲಗಳ ಸದ್ಬಳಕೆಯ ಬಗ್ಗೆ ವಿವರಣೆ ನೀಡುತ್ತದೆ. […]

Continue Reading

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ

ಸುದ್ದಿ ಸಂಗ್ರಹ ಶಹಾಬಾದ ಪರಿಸರ ಸಂಕ್ಷಣೆ ಮತ್ತು ನೈಸರ್ಗಿಕ ಸಮತೋಲನ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಸಾಮೂಹಿಕ ಜವಾಬ್ದಾರಿ ಪ್ರದರ್ಶಿಸಬೇಕು ಎಂದು ಸಂತ ಥಾಮಸ್ ಶಾಲೆಯ ಫಾದರ ಜೇರಾಲ್ಡ ಸಾಗರ ಹೇಳಿದರು. ನಗರದ ಸಂತ ಥಾಮಸ್ ಶಾಲೆಯಲ್ಲಿ ಶನಿವಾರ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದಿನ ದಿನಗಳಲ್ಲಿದ್ದ ಪರಿಸರ ಕಾಳಜಿ ಇಂದಿನ ಯುವಕರಲ್ಲಿ ಉಳಿದಿಲ್ಲ. ವರ್ಷದಿಂದ ವರ್ಷಕ್ಕೆ ಮಳೆ ಕಡಿಮೆಯಾಗುತ್ತಿದ್ದು ಯುವಕರು ಪರಿಸರದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಿದೆ ಎಂದರು. ಕೆನರಾ ಬ್ಯಾಂಕಿನ ಅಧಿಕಾರಿ ಪ್ರತೀಕ […]

Continue Reading

ನಾಡಿಗೆ ಕೆಂಪೇಗೌಡರ ಕೊಡುಗೆ ಅನನ್ಯ

ಕಲಬುರಗಿ: ದೇಶದ ಹೆಮ್ಮೆಯ ಬೆಂಗಳೂರಿನ ನಿರ್ಮಾತೃ ಕೆಂಪೇಗೌಡ ಅವರು ನೂರಾರು ವರ್ಷಗಳ ಹಿಂದೆ ಉತ್ತಮ ರಸ್ತೆಗಳ ನಿರ್ಮಾಣ, ಅನೇಕ ಕೆರೆ-ಬಾವಿಗಳ ನಿರ್ಮಿಸುವುದು ಸೇರಿದಂತೆ ಅನೇಕ ಜನಪರ ಕೆಲಸಗಳನ್ನು ಮಾಡುವ ಮೂಲಕ ನಾಡಿಗೆ ತಮ್ಮದೆಯಾದ ಅನನ್ಯ ಕೊಡುಗೆ ನೀಡಿದ್ದಾರೆ ಎಂದು ಪ್ರಾಚಾರ್ಯ ರವೀಂದ್ರಕುಮಾರ ಸಿ.ಬಟಗೇರಿ ಹೇಳಿದರು. ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ನಮನ ಸಲ್ಲಿಸಿ ಮಾತನಾಡಿದ ಅವರು, ಇಂದು ಬೆಂಗಳೂರನ್ನು ಜಾಗತಿಕ ಮಟ್ಟದಲ್ಲಿ […]

Continue Reading

ರಾವೂರ: ಜೂ.28 ರಂದು ಜಿಲ್ಲಾ ಮಟ್ಟದ ವಚನ ಕಂಠಪಾಠ ಸ್ಪರ್ಧೆ

ಚಿತ್ತಾಪುರ: ವಚನ ಪಿತಾಮಹ ಡಾ.ಫ.ಗು ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ವತಿಯಿಂದ ಜಿಲ್ಲಾ ಮಟ್ಟದ ವಚನ ಕಂಠಪಾಠ ಸ್ಪರ್ಧೆ ಜೂ.28 ರಂದು ಶನಿವಾರ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಸಂಯೋಜಕ ಸಿದ್ದಲಿಂಗ ಬಾಳಿ ತಿಳಿಸಿದ್ದಾರೆ. ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಕನಿಷ್ಠ 5 ವಚನ ಮೇಲ್ಪಟ್ಟು ಹೇಳುವವರು ಭಾಗವಹಿಸಬೇಕು. ಅಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳು ಹೇಳುವ ವಚನಗಳನ್ನು ಬರೆದು […]

Continue Reading

ಬಾಲಕಾರ್ಮಿಕತೆ ನಿಯಂತ್ರಣಕ್ಕೆ ಜನಜಾಗೃತಿ ಅವಶ್ಯಕ: ಸಿದ್ದಲಿಂಗ ಬಾಳಿ

ಸುದ್ದಿ ಸಂಗ್ರಹ ರಾವೂರ ಕಲಿಯುವ ವಯಸ್ಸಿನಲ್ಲಿ ಮಕ್ಕಳ ದುಡಿಮೆ ಆತoಕಾರಿ ಬೆಳವಣಿಗೆಯಾಗಿದೆ. ಬಾಲಕಾರ್ಮಿಕ ಪದ್ಧತಿ ನಿಯಂತ್ರಣಕ್ಕೆ ಕಠಿಣ ಕಾನೂನು ಕ್ರಮ ಹಾಗೂ ಜನಜಾಗೃತಿ ಅವಶ್ಯಕ ಎಂದು ಶಿಕ್ಷಕ ಸಿದ್ದಲಿಂಗ ಬಾಳಿ ಹೇಳಿದರು. ಶಹಾಬಾದ್ ತಾಲೂಕಿನ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ “ವಿಶ್ವ ಬಾಲಕಾರ್ಮಿಕ ವಿರೋಧಿ ದಿನ” ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಬೆಳೆಯುವ ವಯಸ್ಸಿನಲ್ಲಿ ಮಕ್ಕಳಿಗೆ ಶಿಕ್ಷಣ, ಆಟ, ವಿರಾಮ, ಆಹಾರ ಎಲ್ಲಾ ರೀತಿಯ ಹಕ್ಕಗಳನ್ನು ಪಡೆಯಬೇಕು ಇಲ್ಲವಾದರೆ ಅವರ ಬೆಳವಣಿಗೆ ಕುಂಠಿತವಾಗುತ್ತದೆ. ಬಡತನ […]

Continue Reading

ಅತ್ಯಾಚಾರ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಬಂಜಾರ ಸಮಾಜ ಆಗ್ರಹ

ಚಿತ್ತಾಪುರ: ಲಂಬಾಣಿ ಸಮಾಜದ ಬಾಲಕಿಯ ಮೇಲೆ ಅತ್ಯಾಚಾರ, ಮಾರಣಾಂತಿಕ ಹಲ್ಲೆ ನಡೆಸಿದ ವಸೀಮ್ ಶೇಖ್ ಮೌಲಾ ಇತನನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಿ ನ್ಯಾಯ ಒದಗಿಸಬೇಕು ಎಂದು ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ತಾಲೂಕು ಯುವ ಅಧ್ಯಕ್ಷ ಜಗದೀಶ ಚವ್ಹಾಣ ಆಗ್ರಹಿಸಿದ್ದಾರೆ. ಪಟ್ಟಣದ ತಹಸೀಲ್ ಕಚೇರಿಯಲ್ಲಿ ಸೋಮವಾರ ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು, ಆರೋಪಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದರಿ ಅಪರಾದಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು. ಸಂತ್ರಸ್ತೆಯ […]

Continue Reading