ರಾವೂರ: ಜೂ.28 ರಂದು ಜಿಲ್ಲಾ ಮಟ್ಟದ ವಚನ ಕಂಠಪಾಠ ಸ್ಪರ್ಧೆ

ಚಿತ್ತಾಪುರ: ವಚನ ಪಿತಾಮಹ ಡಾ.ಫ.ಗು ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ವತಿಯಿಂದ ಜಿಲ್ಲಾ ಮಟ್ಟದ ವಚನ ಕಂಠಪಾಠ ಸ್ಪರ್ಧೆ ಜೂ.28 ರಂದು ಶನಿವಾರ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಸಂಯೋಜಕ ಸಿದ್ದಲಿಂಗ ಬಾಳಿ ತಿಳಿಸಿದ್ದಾರೆ. ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಕನಿಷ್ಠ 5 ವಚನ ಮೇಲ್ಪಟ್ಟು ಹೇಳುವವರು ಭಾಗವಹಿಸಬೇಕು. ಅಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳು ಹೇಳುವ ವಚನಗಳನ್ನು ಬರೆದು […]

Continue Reading

ಬಾಲಕಾರ್ಮಿಕತೆ ನಿಯಂತ್ರಣಕ್ಕೆ ಜನಜಾಗೃತಿ ಅವಶ್ಯಕ: ಸಿದ್ದಲಿಂಗ ಬಾಳಿ

ಸುದ್ದಿ ಸಂಗ್ರಹ ರಾವೂರ ಕಲಿಯುವ ವಯಸ್ಸಿನಲ್ಲಿ ಮಕ್ಕಳ ದುಡಿಮೆ ಆತoಕಾರಿ ಬೆಳವಣಿಗೆಯಾಗಿದೆ. ಬಾಲಕಾರ್ಮಿಕ ಪದ್ಧತಿ ನಿಯಂತ್ರಣಕ್ಕೆ ಕಠಿಣ ಕಾನೂನು ಕ್ರಮ ಹಾಗೂ ಜನಜಾಗೃತಿ ಅವಶ್ಯಕ ಎಂದು ಶಿಕ್ಷಕ ಸಿದ್ದಲಿಂಗ ಬಾಳಿ ಹೇಳಿದರು. ಶಹಾಬಾದ್ ತಾಲೂಕಿನ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ “ವಿಶ್ವ ಬಾಲಕಾರ್ಮಿಕ ವಿರೋಧಿ ದಿನ” ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಬೆಳೆಯುವ ವಯಸ್ಸಿನಲ್ಲಿ ಮಕ್ಕಳಿಗೆ ಶಿಕ್ಷಣ, ಆಟ, ವಿರಾಮ, ಆಹಾರ ಎಲ್ಲಾ ರೀತಿಯ ಹಕ್ಕಗಳನ್ನು ಪಡೆಯಬೇಕು ಇಲ್ಲವಾದರೆ ಅವರ ಬೆಳವಣಿಗೆ ಕುಂಠಿತವಾಗುತ್ತದೆ. ಬಡತನ […]

Continue Reading

ಅತ್ಯಾಚಾರ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಬಂಜಾರ ಸಮಾಜ ಆಗ್ರಹ

ಚಿತ್ತಾಪುರ: ಲಂಬಾಣಿ ಸಮಾಜದ ಬಾಲಕಿಯ ಮೇಲೆ ಅತ್ಯಾಚಾರ, ಮಾರಣಾಂತಿಕ ಹಲ್ಲೆ ನಡೆಸಿದ ವಸೀಮ್ ಶೇಖ್ ಮೌಲಾ ಇತನನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಿ ನ್ಯಾಯ ಒದಗಿಸಬೇಕು ಎಂದು ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ತಾಲೂಕು ಯುವ ಅಧ್ಯಕ್ಷ ಜಗದೀಶ ಚವ್ಹಾಣ ಆಗ್ರಹಿಸಿದ್ದಾರೆ. ಪಟ್ಟಣದ ತಹಸೀಲ್ ಕಚೇರಿಯಲ್ಲಿ ಸೋಮವಾರ ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು, ಆರೋಪಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದರಿ ಅಪರಾದಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು. ಸಂತ್ರಸ್ತೆಯ […]

Continue Reading

ವಾಡಿ: ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಕೇಂದ್ರ ರೈಲ್ವೆ ಸಚಿವರಿಗೆ ಮನವಿ

ವಾಡಿ: ಪಟ್ಟಣದ ರೈಲ್ವೆ ನಿಲ್ದಾಣದ ತ್ವರಿತ ಕಾಮಗಾರಿ ಅಭಿವೃದ್ಧಿಗೆ ಬಿಜೆಪಿ ಮುಖಂಡರು ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು. ಕಲಬುರಗಿ ನಗರಕ್ಕೆ ಆಗಮಿಸಿದ ಕೇಂದ್ರ ರೈಲ್ವೆ ಸಚಿವರನ್ನು ಮಾಜಿ ಲೋಕಸಭಾ ಸದಸ್ಯ ಡಾ.ಉಮೇಶ್ ಜಾಧವ ಅವರೊಂದಿಗೆ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ, ವಾಡಿ ಬಿಜೆಪಿ‌ ಮಹಾಶಕ್ತಿ ಕೇಂದ್ರ ಅಧ್ಯಕ್ಷ ವೀರಣ್ಣ ಯಾರಿ ಮತ್ತು ಮುಖಂಡ ಸುಭಾಷ್ ವರ್ಮಾ ಅವರು ಕಲಬುರಗಿ ನಗರದ ಪ್ರವಾಸಿ ಮಂದಿರದಲ್ಲಿ ವಾಡಿ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ […]

Continue Reading

ಯಡ್ರಾಮಿ: ಮಧ್ಯರಾತ್ರಿ ಸುರಿಯುತ್ತಿರುವ ಮಳೆಯಲ್ಲಿ ರಥ ಎಳೆದ ಭಕ್ತರು

ಯಡ್ರಾಮಿ: ತಾಲೂಕಿನ ಕಾಖಂಡಕಿ ಗ್ರಾಮದ ಮಲ್ಲಾರಾಧ್ಯರ ಹಾಗೂ ಕೋರಿಸಿದ್ದೇಶ್ವರ ಶಿವಯೋಗಿಗಳ ಭಕ್ತರು ಸುರಿಯುತ್ತಿರುವ ಭಾರಿ ಮಳೆಯ ನಡುವೆಯೂ ರಥವನ್ನು ಎಳೆದರು. ಬುಧವಾರ ಸಂಜೆ ನಡೆಯಬೇಕಿದ್ದ ರಥೋತ್ಸವವು ಮಳೆಯ ಕಾರಣದಿಂದ ಮುಂದೂಡಲಾಗಿತ್ತು. ಮಳೆ ನಿಲ್ಲುವ ಯಾವ ಲಕ್ಷಣವೂ ಕಾಣದಿದ್ದಾಗ ಭಕ್ತರು ನಾಲವಾರ ಹಾಗೂ ಕಾಖಂಡಕಿ ಮಠಗಳ ಪೀಠಾಧಿಪತಿ ಸಿದ್ಧತೋಟೇಂದ್ರ ಶಿವಾಚಾರ್ಯರ ಅಪ್ಪಣೆ ಪಡೆದು ಸದ್ಗುರು ಮಲ್ಲಾರಾಧ್ಯರ ಹಾಗೂ ಕೋರಿಸಿದ್ದೇಶ್ವರ ಶಿವಯೋಗಿಗಳ, ಸಿದ್ಧತೋಟೇಂದ್ರ ಶಿವಾಚಾರ್ಯರ ಜೈಕಾರ ಹಾಕುತ್ತಾ ಮಧ್ಯರಾತ್ರಿ ಸುರಿಯುತ್ತಿರುವ ಭಾರಿ ಮಳೆಯಲ್ಲಿಯೇ ರಥವನ್ನು ಎಳೆದರು. ನಡೆದಾಡಲು ಕಷ್ಟವಾಗಿರುವ ಕೆಸರು […]

Continue Reading

ಮೇ.27 ರಿಂದ ಅಲ್ದಿಹಾಳ ಮರಿಯಮ್ಮ ದೇವಿಯ ವೈಭವದ ಜಾತ್ರೆ

ಸುದ್ದಿ ಸಂಗ್ರಹ ಶಹಾಬಾದ್ ಮೇ.27 ರಿಂದ 3 ದಿನಗಳ ಕಾಲ ಅಲ್ದಿಹಾಳ ಗ್ರಾಮದ ಶಕ್ತಿ ದೇವತೆ ಮರಿಯಮ್ಮ ದೇವಿ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಪೀಠಾಧಿಪತಿ ರಾಜು ಪೂಜಾರಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿ.27 ರಂದು ಬೆಳಗ್ಗೆ 6 ಗಂಟೆಗೆ ಮರಿಯಮ್ಮ ದೇವಿಯ ಮೂರ್ತಿಗೆ ಮಹಾರುದ್ರಾಭಿಷೇಕ ಹಾಗೂ ವಿವಿಧ ಪೂಜೆಗಳು ನೆರವೇರಲಿವೆ. ನಂತರ ಮಧ್ಯಾಹ್ನ 11 ರಿಂದ ಮಹಾಪ್ರಸಾದ ವಿತರಣೆ. ಸಂಜೆ 6 ಗಂಟೆಗೆ ನಡೆಯುವ ಧರ್ಮಸಭೆಯು ಕಟ್ಟಿಮನಿ ಹಿರೇಮಠ ಸಂಸ್ಥಾನ ಮಠದ ಪೂಜ್ಯ […]

Continue Reading

ಎರಡು ಬೈಕ್​​ಗಳ ಮಧ್ಯೆ ಭೀಕರ ಅಪಘಾತ: ಓರ್ವ ಸಾವು

ಕಾಳಗಿ: ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒರ್ವ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಕಾಳಗಿ–ಕೊಡದೂರ ಮುಖ್ಯರಸ್ತೆಯಲ್ಲಿ ನಡೆದಿದೆ. ತಾಲೂಕಿನ ಮಂಗಲಗಿ ಗ್ರಾಮದ ದಶರಥ ಪೀರಪ್ಪ ಮಡಿವಾಳ (28) ಮೃತಪಟ್ಟ ಸವಾರನಾಗಿದ್ದು, ಅವರ ದೇಹ ಬೆಂಕಿಗೆ ಸುಟ್ಟು ಕರಕಲಾಗಿದೆ. ಸಾಸರಗಾಂವ ಗ್ರಾಮದ ಮಲ್ಲಪ್ಪ ಅಣ್ಣಪ್ಪ ಪೂಜಾರಿ (35), ಅವಿನಾಶ ಮಲ್ಲಪ್ಪ (2) ಗಾಯಗೊಂಡಿದ್ದಾರೆ. ಮೃತ ದಶರಥ ಅವರ ಬೈಕ್ ಕಾಳಗಿಯಿಂದ ಮಂಗಲಗಿ ಕಡೆಗೆ ಹಾಗೂ ಮಲ್ಲಪ್ಪ ಅವರ ಬೈಕ್ ಕೊಡದೂರ ಕಡೆಯಿಂದ ಕಾಳಗಿ […]

Continue Reading

ನಮ್ಮ ನೆಲವೆ ನಮಗೆ ಪ್ರೇರಣೆ: ಮುಡುಬಿ ಗುಂಡೆರಾವ

ಚಿತ್ತಾಪುರ: ಕನ್ನಡ ಸಾರಸ್ವತ ಲೋಕಕ್ಕೆ ಪ್ರಥಮ ಕೃತಿ ‘ಕವಿರಾಜ ಮಾರ್ಗ’ ನೀಡಿದ ಹೆಗ್ಗಳಿಕೆ, ಕಾವೇರಿಯಿಂದ ಗೋದಾವರಿವರೆಗೆ ಕನ್ನಡ ಸಾಮ್ರಾಜ್ಯ ಕಟ್ಟಿದ ರಾಷ್ಟ್ರಕೂಟರ ರಾಜಧಾನಿ ಮಾನ್ಯಖೇಟ, ಹೀಗೆ ಹತ್ತು ಹಲವಾರು ಸಾಧನೆಗೆಳಿಗೆ ಮುನ್ನುಡಿ ಬರೆದವರು ಕಲಬುರಗಿ ನೆಲದವರು ಎಂಬ ಅಭಿಮಾನ ನಮಗಿದೆ. ನಮ್ಮ ನೆಲವೆ ನಮಗೆ ಪ್ರೇರಣೆ ಎಂದು ಸಂಶೋಧಕ-ಸಾಹಿತಿ ಮುಡುಬಿ ಗುಂಡೆರಾವ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಪೇಠಶಿರೂರ ಗ್ರಾಮದ ಮಲ್ಲಿಕಾರ್ಜುನ ದೇವಾಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ […]

Continue Reading

ಸರ್ವೆ ಮಾಡುವಾಗ ಮೊಬೈಲ್ ಸ್ಪೋಟ, ಜಾತಿಗಣತಿ ಕಾರ್ಯಕ್ಕೆ ಅಡೆತಡೆ

ಚಿತ್ತಾಪುರ: ಜಾತಿಗಣತಿ ಮಾಡುವಾಗ ಏಕಾಏಕಿ ಮೊಬೈಲ್ ಸ್ಪೋಟಗೊಂಡಿರುವ ಘಟನೆ ದಂಡೋತಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ದಂಡೋತಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ 9.36ಕ್ಕೆ 42 ps ನಲ್ಲಿ ಶಿಕ್ಷಕ ಜಗನ್ನಾಥ ರಾಠೋಡ ಜಾತಿಗಣತಿ ಕಾರ್ಯ ಮಾಡುವಾಗ ಅವರು ಬಳಸುತ್ತಿದ್ದ ಮೊಬೈಲ್ ಫೋನ್ ಸ್ಫೋಟಗೊಂಡ ಪರಿಣಾಮ ಮೊಬೈಲ್’ಗೆ ಬೆಂಕಿ ತಗುಲಿದೆ. ಬೆಂಕಿ ನಂದಿಸಲು ನಾನಾ ಪ್ರಯತ್ನ ಮಾಡಿದರು ಮೊಬೈಲ್ ಫೋನ್ ಸುಟ್ಟು ಕರಕಲಾಗಿದೆ ಎಂದು ಶಿಕ್ಷಕ ಜಗನ್ನಾಥ ರಾಠೋಡ ಹೇಳಿದ್ದಾರೆ. ಶಿಕ್ಷಕ, ಜಾತಿಣತಿದಾರ ಜಗನ್ನಾಥ ರಾಠೋಡ ಅವರು, ಜಾತಿಗಣತಿ ಕಾರ್ಯ […]

Continue Reading

ಕ್ಷೇತ್ರದ ಗ್ರಾಮೀಣ ಅಭಿವೃದ್ದಿಗೆ 150 ಕೋಟಿ ರೂ ವೆಚ್ಚದ ಕ್ರಿಯಾಯೋಜನೆ ಸಿದ್ದ: ಸಚಿವ ಪ್ರಿಯಾಂಕ್ ಖರ್ಗೆ

ಚಿತ್ತಾಪುರ: ಕ್ಷೇತ್ರದ ಗ್ರಾಮೀಣ ಭಾಗದ ಹಳ್ಳಿಗಳ ಅಭಿವೃದ್ಧಿಗೆ 150 ಕೋಟಿ ರೂ ವೆಚ್ಚದ ಕ್ರಿಯಾಯೋಜನೆ ಈಗಾಗಲೆ ಸಿದ್ದವಾಗಿದೆ. ಇದರ ಅಡಿಯಲ್ಲಿ 87 ಹಳ್ಳಿಗಳಿಗೆ ಅಗತ್ಯ ಅನುದಾನ ಲಭ್ಯವಾಗಲಿದೆ, ಮುಂದಿನ 15 ದಿನಗಳಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ‌ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಅಮೃತ್ ಯೋಜನೆಯಡಿಯಲ್ಲಿ ಚಿತ್ತಾಪುರ ಹಾಗೂ ವಾಡಿ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಗೆ ಅಡಿಗಲ್ಲು, ಚಿತ್ತಾಪುರ ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ಕ್ರೀಡಾಂಗಣ […]

Continue Reading