ವಾಡಿಯಲ್ಲಿ ಜನಸಂಪರ್ಕ ಸಭೆ ನಡೆಸಲು ಒತ್ತಾಯ

ಸುದ್ದಿ ಸುದ್ದಿ ಸಂಗ್ರಹ ವಾಡಿ ಪಟ್ಟಣದ ವ್ಯಾಪ್ತಿಯ ಜನರ ಕುಂದು ಕೊರತೆಗಳನ್ನು ಅರಿತು ಬಗೆಹರಿಸಲು ಜಿಲ್ಲಾಧಿಕಾರಿಗಳು ಪಟ್ಟಣದಲ್ಲಿ ಜನಸಂಪರ್ಕ ಸಭೆ ನಡೆಸಲು ಸಮಯ ನೀಡಬೇಕು ಎಂದು ಸ್ಥಳೀಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಒತ್ತಾಯಾಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಫೌಜಿಯಾ ಬಿ.ತರನ್ನುಮ್ ಅವರಿಗೆ ಪತ್ರ ಬರೆದಿರುವ ಅವರು, ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಬೃಹತ್ ಸಿಮೆಂಟ್ ಕಂಪನಿ ಹಾಗೂ ಜಂಕ್ಷನ್ ರೈಲ್ವೆ ನಿಲ್ದಾಣ ಇರುವ ದೊಡ್ಡ ನಗರವಾಗಿದೆ. ಅಷ್ಟೆ ದೊಡ್ಡ ಪ್ರಮಾಣದಲ್ಲಿ ಜನರು ವಿವಿಧ ಸಮಸ್ಯೆಗಳಿಂದ […]

Continue Reading

ಲಿಂ.ಗೌರಮ್ಮ ತಾಯಿಯವರ ಪುಣ್ಯಸ್ಮರಣೋತ್ಸವ: ಉಚಿತ ನೇತ್ರ ತಪಾಸಣೆ, ಮಾತೋಶ್ರೀ ಪ್ರಶಸ್ತಿ ಪ್ರದಾನ

ಸುದ್ದಿ ಸಂಗ್ರಹ ಚಿತ್ತಾಪುರನಾಲವಾರದ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಅನ್ನಪೂರ್ಣೇಶ್ವರಿಯಂದೆ ಗೌರವಿಸಲ್ಪಡುತ್ತಿದ್ದ, ಪ್ರಸ್ತುತ ಪೀಠಾಧಿಪತಿ ಪರಮಪೂಜ್ಯ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಜನ್ಮದಾತೆ ಲಿಂ.ಗೌರಮ್ಮ ತಾಯಿಯವರ ಪುಣ್ಯಸ್ಮರಣೋತ್ಸವ ಹಾಗೂ ಮಾತೋಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಮಾ.26ರಂದು ಗುರುವಾರ ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಶ್ರೀಮಠದ ವಕ್ತಾರ ಮಹಾದೇವ ಗಂವ್ಹಾರ ತಿಳಿಸಿದ್ದಾರೆ. ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಪಾವನ ಸಾನಿಧ್ಯದಲ್ಲಿ ನಡೆಯುವ ಈ ಸಮಾರಂಭದಲ್ಲಿ ಮಾಜಿ ಮಂತ್ರಿಗಳು, ಶರಣತತ್ವ ಪ್ರಸಾರಕ್ಕಾಗಿ ಶ್ರಮಿಸುತ್ತಿರುವ ಹಿರಿಯ ಮುತ್ಸದ್ಧಿ ಲೀಲಾದೇವಿ ಆರ್ ಪ್ರಸಾದ್ ಅವರಿಗೆ ಪ್ರಸಕ್ತ […]

Continue Reading

ಗಿಡ-ಮರಗಳು ನೆಟ್ಟು, ಸಂರಕ್ಷಿಸುವುದು ಎಲ್ಲರ ಹೊಣೆ

ಸುದ್ದಿ ಸಂಗ್ರಹ ಚಿತ್ತಾಪುರಗಿಡ-ಮರಗಳು ನೆಡುವುದು, ಅರಣ್ಯನಾಶ ತಡೆಯುವುದು, ಕಾಗದದ ಮಿತ ಬಳಕೆ ಮತ್ತು ಪರಿಸರ ಜಾಗೃತಿ ಮೂಡಿಸುವ ಮೂಲಕ ಪ್ರತಿಯೊಬ್ಬ ನಾಗರಿಕನು ಅರಣ್ಯ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಬಹುದು ಎಂದು ಉಪವಲಯ ಅರಣ್ಯ ಅಧಿಕಾರಿ ಜಟ್ಟೆಪ್ಪ ನಾವಿ ಹೇಳಿದರು. ಸಮೀಪದ ಮಾಡಬೂಳ ಗ್ರಾಮದ ಪ್ರಾದೇಶಿಕ ಅರಣ್ಯ ವಲಯದ ಸಸ್ಯಕ್ಷೇತ್ರದಲ್ಲಿ ಪ್ರಾದೇಶಿಕ ಅರಣ್ಯ ವಲಯ ಮತ್ತು ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ಸಂಯುಕ್ತಾಶ್ರಯದಲ್ಲಿ ಶನಿವಾರ ಏರ್ಪಡಿಸಿದ್ದ “ಅಂತಾರಾಷ್ಟ್ರೀಯ ಅರಣ್ಯ ದಿನಾಚರಣೆ” ಉದ್ಘಾಟಿಸಿ ಮಾತನಾಡಿದ ಅವರು, ಗಿಡ-ಮರಗಳು ಪರಿಸರ […]

Continue Reading

ಸ್ತ್ರೀ ಕುಲಕ್ಕೆ ಮಾದರಿ ಹೇಮರೆಡ್ಡಿ ಮಲ್ಲಮ್ಮ: ಜೇಮಸಿಂಗ್ ಮಹಾರಾಜ

ಸುದ್ದಿ ಸಂಗ್ರಹ ಶಹಾಬಾದ್ಸ್ತ್ರೀ ಕುಲಕ್ಕೆ ಮಾದರಿಯಾಗಿ, ಸಮಾಜದ ಉದ್ಧಾರಕ್ಕಾಗಿ, ಭಕ್ತಿಯ ಸಾಕಾರ ಮೂರ್ತಿಯಾಗಿರುವ ಮಲ್ಲಮ್ಮಳ ಜೀವನ ಪ್ರತಿಯೊಬ್ಬರಿಗೂ ಆದರ್ಶಪ್ರಾಯ ಎಂದು ಮಠದ ಪೀಠಾಧಿಪತಿ ಜೇಮಸಿಂಗ್ ಮಹಾರಾಜ ಹೇಳಿದರು. ತಾಲೂಕಿನ ಮಹಾನಗರ ಯಲ್ಲಾಲಿಂಗ ಪುಣ್ಯಾಶ್ರಮದಲ್ಲಿ 35ನೇ ಜಾತ್ರಾ ಮಹೋತ್ಸವ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ‘ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ’ರ ಪುರಾಣ ಪ್ರವಚನ ಶ್ರೀಮಠದ ಪೀಠಾಧಿಪತಿ ಜೇಮಸಿಂಗ್ ಮಹಾರಾಜ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸದ್ಗುರುಗಳ ಕೃಪೆಯಿಂದ ಭಕ್ತಿ ಮತ್ತು ಧರ್ಮದ ಹಾದಿಯಲ್ಲಿ ನಡೆಯುವುದು ಜೀವನದ ಮುಖ್ಯ ಉದ್ದೇಶವಾಗಬೇಕು ಎಂದರು. […]

Continue Reading

ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್ ವಿತರಣೆ

ಸುದ್ದಿ ಸಂಗ್ರಹ ಕಲಬುರಗಿ ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್ ಸೋಮವಾರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಚಾರ್ಯ ರವೀಂದ್ರಕುಮಾರ ಸಿ. ಬಟಗೇರಿ, ಸರ್ಕಾರಿ ನೌಕರರ ಸಂಘದ ತಾಲೂಕಾ ಘಟಕದ ನಿರ್ದೇಶಕ ಲಿಂಗರಾಜ ಹಿರೇಗೌಡ, ಉಪನ್ಯಾಸಕರಾದ ಅಸ್ಮಾ‌ ಜಬೀನ್, ಮಲ್ಲಿಕಾರ್ಜುನ ದೊಡ್ಡಮನಿ, ನಯಿಮಾ‌ ನಾಹಿದ್, ಶಂಕ್ರೆಪ್ಪ ಹೊಸದೊಡ್ಡಿ, ಎಚ್.ಬಿ ಪಾಟೀಲ್, ಮಲ್ಲಪ್ಪ ರಂಜಣಗಿ, ಪ್ರದಸ ಪ್ರೇಮಾ ಸುರಪುರ, ದ್ವಿದಸ ರಾಮಚಂದ್ರ ಚವ್ಹಾಣ, ಅತಿಥಿ ಉಪನ್ಯಾಸಕರಾದ ವಿರೇಶ್ ಗೋಗಿ, ಶರಣು ಸುರಪುರ, […]

Continue Reading

ತೊನಸನಳ್ಳಿ(ಎಸ್): ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆ ಅನಾವರಣ‌

ಸುದ್ದಿ ಸಂಗ್ರಹ ಶಹಾಬಾದ್ತಾಲೂಕಿನ ತೊನಸನಳ್ಳಿ(ಎಸ್) ಗ್ರಾಮದಲ್ಲಿ ಸಂವಿಧಾನದ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆಯನ್ನು ಶಾಸಕ ಬಸವರಾಜ ಮತ್ತಿಮೂಡ ಅನಾವರಣ ಗೊಳಿಸಿದರು. ಕಾರ್ಯಕ್ರಮದಲ್ಲಿ ತಹಸೀಲ್ದಾರ ನೀಲಪ್ರಭಾ ಬಬಲಾದ ಮಾತನಾಡಿ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಮೂರ್ತಿ ಸ್ಥಾಪನೆ ಮಾಡಿದರೆ ಸಾಲದು ಅವರ ವಿಚಾರಗಳು ಅಳವಡಿಸಿಕೊಂಡು ಜೀವನ ಸಾಗಿಸಿದರೆ ಮಾತ್ರ ಅಂಬೇಡ್ಕರ ವಾದಿಯಾಗಲು ಸಾಧ್ಯ ಎಂದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರು ದೇಶದ ಮಹಿಳೆಯರಿಗೆ ಸ್ವಾತಂತ್ರ್ಯ ಮತ್ತು ಸಮಾನತೆಯ ಅವಕಾಶ ಕೊಟ್ಟಿದ್ದಾರೆ, ಶಿಕ್ಷಣಕ್ಕೆ ಮಹತ್ವ ಕೊಟ್ಟಾಗ […]

Continue Reading

ಸಿದ್ಧೇಶ್ವರ ಸ್ವಾಮಿಜಿ ಕೊಡುಗೆ ಅನನ್ಯ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ಆಧ್ಯಾತ್ಮಿಕ ಪ್ರವಚನದ ಮೂಲಕ ಅಸಂಖ್ಯಾತ ಜನರ ಮನಸ್ಸನ್ನು ಸುಧಾರಿಸಿ ಎರಡನೆ ವಿವೇಕಾನಂದ, ‘ನಡೆದಾಡುವ ದೇವರು’, ‘ಜೇಬಿಲ್ಲದ ಅಂಗಿಯ ರಾಷ್ಟ್ರ ಸಂತ’ ಸಿದ್ಧೇಶ್ವರ ಸ್ವಾಮೀಜಿಯವರ ಕೊಡುಗೆ ಅನನ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು.  ಜಿಲ್ಲೆಯ ಜೇವರ್ಗಿ ಪಟ್ಟಣದ ಶಾಂತನಗರದ ದ್ರೋಣ ಕೋಚಿಂಗ್ ಕೇಂದ್ರದಲ್ಲಿ  ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ಸಿದ್ಧೇಶ್ವರ ಸ್ವಾಮಿಜಿಯ ತೃತೀಯ ಲಿಂಗೈಕ್ಯ ಸಂಸ್ಮರೋತ್ಸವ’ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದ ಅವರು, ಪೂಜ್ಯರು ದೇಶ-ವಿದೇಶಗಳಲ್ಲಿ […]

Continue Reading

ದಂಡೋತಿಯಲ್ಲಿ ಸಂಭ್ರಮದ ಎಳ್ಳು ಅಮಾವಾಸ್ಯೆ ಆಚರಣೆ

ಸುದ್ದಿ ಸಂಗ್ರಹ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮಲ್ಲಪ್ಪ  ಜರ್ಕಿ ಅವರ ಹೊಲದಲ್ಲಿ ಸಂಭ್ರಮದಿಂದ ಎಳ್ಳು ಅಮಾವಾಸ್ಯೆ ಆಚರಿಸಲಾಯಿತು. ಎತ್ತುಗಳಿಗೆ ಸಿಂಗರಿಸಿ, ಹೊಲಕ್ಕೆ ಎತ್ತಿನ ಬಂಡಿಯೊಂದಿಗೆ ತೆರೆಯಲಾಯಿತು. ಉಪನ್ಯಾಸಕ ಎಚ್.ಬಿ ಪಾಟೀಲ್, ಕಸಾಪ ಕಾಳಗಿ ಅಧ್ಯಕ್ಷ ಸಂತೋಷ ಕುಡಳ್ಳಿ, ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್. ಬಿರಾದಾರ, ರೈತರಾದ ಮಲ್ಲಪ್ಪ ಗೋಣಿ, ಫಯಾಜ್ ಶಹಬಾದ್,  ಇಬ್ರಾಹಿಂ ಪಟೇಲ್, ತಯಾಬ್, ಶಿವುಕುಮಾರ್, ಮೈಲಾರಿ ಸೇರಿದಂತೆ ಅನೇಕರು ಇದ್ದರು.

Continue Reading

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಧ್ವನಿಯಾದ ಮಕ್ಕಳ ಅಣಕು ವಿಧಾನಸಭಾ ಅಧಿವೇಶನ

ಸುದ್ದಿ ಸಂಗ್ರಹ ಚಿತ್ತಾಪುರಚಟುವಟಿಕೆ ಮೂಲಕ ಪಠ್ಯದ ಕಲಿಕಾoಶ ಮಾಡಿಸಿದಾಗ ಕಲಿಕೆಯು ಮಕ್ಕಳಲ್ಲಿ ಶಾಶ್ವತವಾಗಿ ಮನದಟ್ಟಾಗುತ್ತದೆ ಎಂದು ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೊಂಡಗಿ ಹೇಳಿದರು. ಸಮೀಪದ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಚುನಾವಣೆ ಸಾಕ್ಷರತಾ ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಅಣಕು ವಿಧಾನಸಭಾ ಅಧಿವೇಶನವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ಪ್ರತಿಭೆ ಇದೆ, ಕ್ರಿಯಾಶೀಲ ಶಿಕ್ಷಕರಿಂದ ಮಾತ್ರ ಮಕ್ಕಳ ಪ್ರತಿಭೆ ಅನಾವರಣವಾಗಲು ಸಾಧ್ಯ ಎಂದರು. ಕಾವ್ಯ (ಸಭಾಪತಿ): ಸಭಾಪತಿ ಪಾತ್ರ […]

Continue Reading

ಸೈಬರ್‌ ಅಪರಾಧದ ಬಗ್ಗೆ ಜಾಗೃತಿ ವಹಿಸಿ: ಡಿವೈಎಸ್‌ಪಿ ಶಂಕರಗೌಡ ಪಾಟೀಲ್

ಸುದ್ದಿ ಸಂಗ್ರಹ ಚಿತ್ತಾಪುರ ಸೈಬರ್ ಅಪರಾಧ ಮತ್ತು ವಂಚನೆಗಳ ಬಗ್ಗೆ ವಿದ್ಯಾರ್ಥಿಗಳು, ಯುವಕರು ಮತ್ತು ಸಾರ್ವಜನಿಕರು ಜಾಗೃತಿ ವಹಿಸಬೇಕು ಎಂದು ಡಿವೈಎಸ್‌ಪಿ ಶಂಕರಗೌಡ ಪಾಟೀಲ್‌ ಹೇಳಿದರು. ತಾಲೂಕಿನ ಮಾಡಬೂಳ ಕ್ರಾಸ್‌’ನಲ್ಲಿ ಮಾಡಬೂಳ ಪೊಲೀಸ್ ಠಾಣೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೈಬರ್ ವಂಚನೆ ತಡೆಗಟ್ಟಲು ಕ್ಲಿಷ್ಟಕರವಾದ ಪಾಸ್‌ವರ್ಡ್ ಬಳಸಬೇಕು. ಅಪರಿಚಿತ ಲಿಂಕ್’ಗಳನ್ನು ಕ್ಲಿಕ್ ಮಾಡಬಾರದು. ಆ್ಯಂಟಿ ವೈರಸ್ ಸಾಫ್ಟ್‌ವೇರ್ ಅಳವಡಿಸಬೇಕು. ಆನ್‌’ಲೈನ್‌ನಲ್ಲಿ ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವಾಗ ಜಾಗರೂಕತೆ ವಹಿಸಬೇಕು ಎಂದರು. ವಾಹನಗಳ […]

Continue Reading