ಶಹಾಬಾದ: ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ

ಸುದ್ದಿ ಸಂಗ್ರಹ ಶಹಾಬಾದರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಯೋಜನೆ ಎಂಬ ವಂಚನೆಯ ಮುಖವಾಡದ ಅಡಿಯಲ್ಲಿ, ಸರ್ಕಾರವು ರಾಜ್ಯದಾದ್ಯಂತ 40 ಸಾವಿರಕ್ಕೂ ಹೆಚ್ಚು ಶಾಲೆಗಳನ್ನು ವಿಲೀನಗೊಳಿಸುತ್ತಿದೆ ಎಂದು ಎಐಡಿಎಸ್ಓ ಜಿಲ್ಲಾ ಕೌನ್ಸಿಲ್ ಅಧ್ಯಕ್ಷ ತುಳಜರಾಮ ಎನ್.ಕೆ ಹೇಳಿದರು. ನಗರದ ಬಸವೇಶ್ವರ ವೃತ್ತದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು, ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಯೋಜನೆ ಅಡಿಯಲ್ಲಿ ಶಹಾಬಾದ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತರನಳ್ಳಿ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯೆಂದು ಗುರುತಿಸಲಾಗಿದೆ. ಸರಕಾರಿ […]

Continue Reading

ಡಾ.ಬಿ.ಆರ್ ಅಂಬೇಡ್ಕರ್’ರ 69ನೇ ಮಹಾಪರಿನಿರ್ವಾಣ ದಿನ: ಸಂವಿಧಾನ ಶಿಲ್ಪಿಗೆ ಗಣ್ಯರಿಂದ ನಮನ

ಸುದ್ದಿ ಸಂಗ್ರಹ ಶಹಾಬಾದ್ ನಗರದ ಚವ್ಹಾಣ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣದಿನ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮುಖ್ಯಗುರು ಸವಿತಾ ಬೆಳಗುಂಪಿ, ಸಂಸ್ಥೆಯ ಸದಸ್ಯ ಸುಧಾರಾಣಿ ಚವ್ಹಾಣ್, ಪ್ರಮುಖರಾದ ಆರತಿ ವೆಂಕಟೇಶ, ಸುಜಾತ ಕುಂಬಾರ, ನಿರ್ಮಲಾ ಬಿರಾದರ, ಚೈತ್ರಾ, ಮಂಜುಳಾ, ಸಂಜನ ಮತ್ತು ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಇದ್ದರು.

Continue Reading

ಮಕ್ಕಳು ಜೀವನದಲ್ಲಿ ಉತ್ತಮ ಮೌಲ್ಯ ಅಳವಡಿಸಿಕೊಳ್ಳಬೇಕು

ಸುದ್ದಿ ಸಂಗ್ರಹ ಶಹಾಬಾದವಿದ್ಯಾರ್ಥಿಗಳು ಶಿಸ್ತು, ಸಂಯಮ, ಸಂಸ್ಕಾರದಂತಹ ಉತ್ತಮ ಮೌಲ್ಯ ರೂಢಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಬೇಕು ಎಂದು ಸಂತ ಥಾಮಸ್ ಚರ್ಚನ ಪಾದರ ಜೆರಾಲ್ಡ್ ಸಾಗರ ಹೇಳಿದರು. ನಗರದ ಮೌಂಟ್ ಕಾರ್ಮೆಲ್ ಕಾನ್ವೆಂಟ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮೌಲ್ಯಗಳಿಲ್ಲದ ಜೀವನ ವ್ಯರ್ಥ ಆದ್ದರಿಂದ ಪ್ರತಿಯೊಬ್ಬರು ಕೆಲವೊಂದು ಮೌಲ್ಯಗಳನ್ನಾದರು ಜೀವನದಲ್ಲಿ ಅಳವಡಿಸಿಕೊಂಡಾಗ ಜೀವನ ಸಾರ್ಥಕವಾಗುತ್ತದೆ. ಮೌಲ್ಯಗಳು ಜೀವನದ ಆಧಾರಸ್ತಂಭಗಳು. ಮಾನವೀಯ ಮೌಲ್ಯಗಳು ಇಂದಿನ ದಿನದಲ್ಲಿ ಬಹಳ ಅವಶ್ಯಕವಾಗಿದ್ದು, ಅವುಗಳನ್ನು ಅಳವಡಿಸಿಕೊಂಡು ಬೇರೆಯವರಿಗೆ ಆದರ್ಶವಾಗಿರಬೇಕು […]

Continue Reading

ಹಳೆ ಪಿಂಚಣಿ ಯೋಜನೆ ಜಾರಿ ಸಂಬಂಧ ಸರ್ಕಾರಕ್ಕೆ ವಾರದೊಳಗೆ ವರದಿ ಸಲ್ಲಿಸುವ ಭರವಸೆ: ಬಸವರಾಜ ಬಳೂಂಡಗಿ

ಸುದ್ದಿ ಸಂಗ್ರಹ ಕಲಬುರಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆಯ ಪಿಂಚಣಿ ಯೊಜನೆ ಜಾರಿಗೊಳಿಸುವ ಸಂಬಂಧ ಸರ್ಕಾರ ರಚಿಸಿರುವ ಸಮಿತಿಯು ಈಗಾಗಲೆ ವರದಿ ಸಿದ್ಧಪಡಿಸಿದೆ, ಒಂದು ವಾರದೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸುವ ಭರವಸೆ ನೀಡಲಾಗಿದೆ. ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಅಭಿನಂದನೆ ಸಲ್ಲಿಸುತ್ತದೆ ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ 2006 ರಿಂದ ಜಾರಿಯಲ್ಲಿರುವ ಹೊಸ ಪಿಂಚಣಿ ಯೋಜನೆ (ಎನ್‍ಪಿಎಸ್) ಹೋಗಲಾಡಿಸಿ, ಈ ಹಿಂದಿನ […]

Continue Reading

ಸಂವಿಧಾನದ ಅನುಷ್ಠಾನ, ಪಾಲನೆಯಲ್ಲಿ ವಕೀಲರ ಪಾತ್ರ ಅನನ್ಯ: ಬಸವರಾಜ ಬಿರಾದಾರ

ಕಲಬುರಗಿ: ದೇಶದ ರಕ್ಷಾ ಕವಚವಾದ ಸಂವಿಧಾನದ ಆಶಯಗಳು, ತತ್ವಗಳನ್ನು ಅನುಷ್ಠಾನ ಮತ್ತು ಪಾಲನೆ ಮಾಡುವುದರಲ್ಲಿ ವಕೀಲ್‌ರ ಪಾತ್ರ ಅನನ್ಯ ಎಂದು ಹಿರಿಯ ವಕೀಲ್ ಬಸವರಾಜ ಬಿರಾದಾರ ಅಭಿಪ್ರಾಯಪಟ್ಟರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢ ಶಾಲೆಯ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಬೆಳಿಗ್ಗೆ ಏರ್ಪಡಿಸಿದ್ದ ‘ರಾಷ್ಟ್ರೀಯ ವಕೀಲರ ಮತ್ತು ವಿಶ್ವ ವಿಶೇಷ ಚೇತನರ ದಿನಾಚರಣೆ’ಯಲ್ಲಿ ಗೌರವ ಸ್ವೀಕರಿಸಿ, ಮಾತನಾಡಿದ ಅವರು, ದೇಶದಲ್ಲಿನ ಎಂತಹ ದೊಡ್ಡ ವ್ಯಕ್ತಿಯಾಗಿದ್ದು, ಆ ವ್ಯಕ್ತಿ ತಪ್ಪು ಮಾಡಿದರೆ […]

Continue Reading

ಪರಿಸರ ಮಾಲಿನ್ಯ ತಡೆಗೆ ಸಾಮೂಹಿಕ ಪ್ರಯತ್ನ ಅಗತ್ಯ: ಎಚ್.ಬಿ ಪಾಟೀಲ

ಕಲಬುರಗಿ: ವಿವಿಧ ಮಾಲಿನ್ಯಗಳಿಂದ ಪರಿಸರ ತತ್ತರಿಸಿ ಹೋಗಿದೆ. ಮಾಲಿನ್ಯ ನಿಯಂತ್ರಣ ನೀತಿ-ನಿಯಮ, ಸರ್ಕಾರ, ಕೆಲವು ಸಂಸ್ಥೆಗಳು, ಪರಿಸರ ಪ್ರೇಮಿಗಳಿಂದ ಮಾತ್ರ ಸಾಧ್ಯವಿಲ್ಲ. ಎಲ್ಲೆಡೆ ವ್ಯಾಪಕವಾಗಿ ಗಿಡಗಳನ್ನು ನೆಟ್ಟು ಪೋಷಿಸುವುದು, ಸ್ವಚ್ಛತೆ ಕಾಪಾಡುವುದು, ಪರಿಸರ ಸ್ನೇಹಿ ವಾತಾವರಣ ನಿರ್ಮಿಸುವ ಮೂಲಕ ಮಾಲಿನ್ಯ ನಿಯಂತ್ರಣಕ್ಕೆ ಸಾಮೂಹಿಕ ಪ್ರಯತ್ನ ಅಗತ್ಯ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಹೊಸ ಜೇವರ್ಗಿ ರಸ್ತೆಯಲ್ಲಿನ ಗೆಟ್ಸ್ ಡಿಗ್ರಿ ಕಾಲೇಜ್’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನಾಚರಣೆ’ […]

Continue Reading

ರಾಮೇಶ್ವರಂ ಕೆಫೆ ಊಟದಲ್ಲಿ ಹುಳ ಪತ್ತೆ ಕೇಸ್: ಮಾಲೀಕ, ಮ್ಯಾನೇಜರ್ ವಿರುದ್ಧ ಎಫ್‌ಐಆರ್

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನ ರಾಮೇಶ್ವರಂ ಕೆಫೆ ಊಟದಲ್ಲಿ ಹುಳ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಫೆ ಮಾಲೀಕ ಹಾಗೂ ಮ್ಯಾನೇಜರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಕರಣದಿಂದ ತಪ್ಪಿಕೊಳ್ಳಲು ಯತ್ನಿಸಿದ್ದ ಕೆಫೆ ಮಾಲೀಕರಾದ ದಿವ್ಯಾ, ರಾಘವೇಂದ್ರರಾವ್ ಹಾಗೂ ಮ್ಯಾನೇಜರ್ ಸುಮಂತ್ ವಿರುದ್ಧ ಸುಳ್ಳು ದೂರು ನೀಡಿ, ಮಾನಹಾನಿ ಮಾಡಿದ ಆರೋಪದಡಿ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿರುವ ರಾಮೇಶ್ವರಂ ಕೆಫೆಯ ಊಟದಲ್ಲಿ ಹುಳ ಪತ್ತೆಯಾಗಿತ್ತು. ಈ ಕುರಿತು ಯುವಕರು ವಿಡಿಯೋ ಮಾಡಿದ್ದರು. ಇದೆ ಸಮಯಕ್ಕೆ ಕೆಫೆಗೆ ಹಣಕ್ಕೆ ಬೇಡಿಕೆಯಿಟ್ಟಿದ್ದ ಕರೆಯೊಂದು […]

Continue Reading

ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅಕಾಲಿಕ ನಿಧನಕ್ಕೆ ಸರಕಾರಿ ನೌಕರರ ಸಂಘ ಶೋಕ ವ್ಯಕ್ತ

ಕಲಬುರಗಿ: ವಿಜಯಪೂರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕ ಬೈಪಾಸ್ ಬಳಿ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರ ಇನ್ನೋವಾ ಕಾರು ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರ ಅಕಾಲಿಕ ನಿಧನಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಯ ಕಲಬುರಗಿ ಅಧ್ಯಕ್ಷ ಬಸವರಾಜ ಬಳೂಂಡಗಿ ಮತ್ತು ಪದಾಧಿಕಾರಿಗಳಾದ ಸುರೇಶ ಶರ್ಮಾ, ಮಹೇಶ ಹೂಗಾರ, ಶ್ರೀಮಂತ ಪಟ್ಟೇದಾರ, ಧರ್ಮರಾಯ ಜವಳಿ, ಚಂದ್ರಕಾಂತ ಏರಿ, ‌ಎಂ.ಬಿ […]

Continue Reading

ಮಹಿಳಾ ದೌರ್ಜನ್ಯದ ವಿರುದ್ಧ ಜಾಗೃತಿ ಅಗತ್ಯ: ಪೂಜಾ ಹೂಗಾರ

ಕಲಬುರಗಿ: ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಜಾಗೃತಿ ಮೂಡಿಸುವುದು, ಅದನ್ನು ನಿಲ್ಲಿಸುವುದು ಮತ್ತು ಮಹಿಳೆಯರಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಯುವ ಚಿಂತಕಿ ಪೂಜಾ ಹೂಗಾರ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಬೆಳಿಗ್ಗೆ ಏರ್ಪಡಿಸಿದ್ದ ‘ಅಂತಾರಾಷ್ಟ್ರೀಯ ಮಹಿಳಾ ದೌರ್ಜನ್ಯ ವಿರೋಧಿ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಅತ್ಯಾಚಾರ, ಕೌಟುಂಬಿಕ ಹಿಂಸೆ ಮತ್ತು ಇತರ ರೀತಿಯ ದೌರ್ಜನ್ಯಗಳು […]

Continue Reading

ಕನ್ನಡ ಉಳಿಸಿ, ಬೆಳೆಸುವ ಕಾರ್ಯ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ: ಮುಡಬಿ ಗುಂಡೇರಾವ

ಕಲಬುರಗಿ: ಸಾವಿರಾರು ವರ್ಷಗಳ ಭವ್ಯವಾದ ಇತಿಹಾಸ, ಪರಂಪರೆಯನ್ನು ಹೊಂದಿರುವ ನಮ್ಮ ಕನ್ನಡ ನಾಡಿನ ನೆಲ, ಜಲ, ಭಾಷೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಯನ್ನು ಉಳಿಸಿ, ಬೆಳೆಸಿ, ಮುಂದಿನ ಜನಾಂಗಕ್ಕೆ ತಲುಪಿಸುವ ಕಾರ್ಯ ಪ್ರತಿಯೊಬ್ಬ ಕನ್ನಡಿಗನ ಆದ್ಯ ಜವಾಬ್ದಾರಿಯಾಗಿದೆ ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ವಿವೇಕಾನಂದ ನಗರದಲ್ಲಿನ ಭೊಗೇಶ್ವರ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ಕನ್ನಡ ರಾಜ್ಯೋತ್ಸವ ಮಾಸಾಚರಣೆಯ ಸರಣಿ ಉಪನ್ಯಾಸಕ ಕಾರ್ಯಕ್ರಮ-20ರಲ್ಲಿ ‘ಕನ್ನಡ ನಾಡು-ನುಡಿಯ ಸಂರಕ್ಷಣೆ ಎಲ್ಲರ […]

Continue Reading