ಉದ್ಯೋಗಾಕಾಂಕ್ಷಿ ಹೋರಾಟಗಾರರ ಏಕಾಏಕಿ ಬಂಧನಕ್ಕೆ ಎಐಡಿವೈಓ ಖಂಡನೆ

ಸುದ್ದಿ ಸಂಗ್ರಹ ಶಹಾಬಾದಧಾರವಾಡ ಉದ್ಯೋಗಾಕಾಂಕ್ಷಿಗಳ ಹೋರಾಟದ ಕರೆ ಹಿನ್ನೆಯಲ್ಲಿ ಬುಧವಾರ ಬೆಳಗ್ಗೆ ಏಕಾಏಕಿ ಬಂಧಿಸಿದ ಉದ್ಯೋಗಾಕಾಂಕ್ಷಿ ಹೋರಾಟ ಸಮಿತಿಯ ರಾಜ್ಯ ಸಂಚಾಲಕ ಸಿದ್ದಲಿಂಗ ಬಾಗೆವಾಡಿ, ಸಹ ಸಂಚಾಲಕ ಭವಾನಿಶಂಕರ್ ಎಸ್ ಗೌಡ, ಚನ್ನಬಸವ ಜಾನೇಕಲ್, ಎಐಡಿವೈಓ ರಾಜ್ಯ ಅಧ್ಯಕ್ಷ ಶರಣಪ್ಪ ಉದ್ಬಾಳ್, ಎಐಕೆಕೆಎಂಎಸ್ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ಜಡಗಣ್ಣನವರ್, ಎಐಡಿವೈಓ ರಾಜ್ಯ ಉಪಾಧ್ಯಕ್ಷ ಜಗನ್ನಾಥ ಎಸ್.ಎಚ್, ಉದ್ಯೋಗಾಕಾಂಕ್ಷಿ ಪಾಲಾಕ್ಷ ಕೆ ಸೇರಿದಂತೆ ಅನೇಕರನ್ನು ಬಂಧಿಸಲಾಗಿದೆ. ಈ ಕೂಡಲೆ ಅವರನ್ನು ಬಿಡುಗಡೆ ಮಾಡಬೇಕು ಎಂದು ಎಐಡಿವೈಓ ಜಿಲ್ಲಾ ಉಪಾಧ್ಯಕ್ಷ ಸಿದ್ಧಚೌದ್ರಿ […]

Continue Reading

ವ್ಯಕ್ತಿಯ ಬೆಳವಣಿಗೆಗೆ ಮಾನವ ಹಕ್ಕುಗಳು ಅವಶ್ಯಕ: ಎಚ್.ಬಿ ಪಾಟೀಲ್

ಸುದ್ದಿ ಸಂಗ್ರಹ ಕಲಬುರಗಿ ಯಾವುದೆ ಒಬ್ಬ ವ್ಯಕ್ತಿಯು ಬದುಕಿ, ಬಾಳಬೇಕಾದರೆ ಆತನಿಗೆ ಜೀವಿಸುವ ಸ್ವಾತಂತ್ರ್ಯ, ಅಭಿವ್ಯಕ್ತಿ ಶಿಕ್ಷಣ, ರಕ್ಷಣೆ, ಸಮಾನತೆಯಂತಹ ಮಾನವ ಹಕ್ಕುಗಳು ದೊರೆಯಬೇಕು. ವ್ಯಕ್ತಿಗಳಲ್ಲಿ ಮಾನವೀಯತೆ ಉಳಿದು, ಬೆಳೆಯಲು ಮತ್ತು ವ್ಯಕ್ತಿಯು ಬೆಳವಣಿಗೆಯಾಗಬೇಕಾದರೆ ಮಾನವ ಹಕ್ಕುಗಳು ಅವಶ್ಯಕ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ‘ವಿಶ್ವ ಮಾನವ ಹಕ್ಕುಗಳ […]

Continue Reading

ಶಹಾಬಾದ: ಇಂದಿರಾ ಕ್ಯಾಂಟೀನ್ ಉದ್ಘಾಟನೆ

ಸುದ್ದಿ ಸಂಗ್ರಹ ಶಹಾಬಾದ ತಾಲೂಕಿನ ಜನಸಾಮಾನ್ಯರಿಗೆ ಕೂಲಿ ಕಾರ್ಮಿಕರಿಗೆ ಮತ್ತು ಆಸ್ಪತ್ರೆಯ ರೋಗಿಗಳಿಗೆ ಅನುಕೂಲವಾಗುವ ಸ್ಥಳದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲಾಗಿದೆ, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನಗರಸಭೆ ಪೌರಾಯುಕ್ತ ಡಾ.ಕೆ ಗುರುಲಿಂಗಪ್ಪ ಹೇಳಿದರು. ನಗರದಲ್ಲಿ ಸೋಮವಾರ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತ ಅವರು, 2024-25ನೇ ಸಾಲಿನಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲಾಗಿದೆ. ಪೌರಾಡಳಿತ ಇಲಾಖೆ ಬೆಂಗಳೂರುನಿಂದ ನೇರವಾಗಿ ಗುತ್ತಿ ಬಸವೇಶ್ವರ ಏಜೆನ್ಸಿಯವರು ನಿರ್ವಹಣೆ ಮಾಡಲಿದ್ದಾರೆ ಎಂದರು. ಕಾಡಾ ಅಧ್ಯಕ್ಷ ಡಾ.ಎಂ.ಎ ರಶೀದ್ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದರು. […]

Continue Reading

ಭ್ರಷ್ಟಾಚಾರ ಮುಕ್ತ ಭಾರತ ಸಾಮೂಹಿಕ ಜವಾಬ್ದಾರಿ: ಎಚ್.ಬಿ ಪಾಟೀಲ್

ಸುದ್ದಿ ಸಂಗ್ರಹ ಕಲಬುರಗಿ ಭ್ರಷ್ಟಾಚಾರ ಮುಕ್ತ ಭಾರತದ ನಿರ್ಮಾಣ ಸಾಮೂಹಿಕ ಜವಾಬ್ದಾರಿಯಾಗಿದೆ ಎಂದು ಉಪನ್ಯಾಸಕ, ಸಮಾಜ ಸೇವಕ ಎಚ್.ಬಿ ಪಾಟೀಲ್ ಮಾರ್ಮಿಕವಾಗಿ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ್ಲಿನ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಬೆಳಿಗ್ಗೆ ಏರ್ಪಡಿಸಿದ್ದ “ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನಾಚರಣೆ”ಯಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಪ್ರತಿಜ್ಞೆ ವಿಧಿ ಬೋಧಿಸಿ, ನಂತರ ಮಾತನಾಡಿದ ಅವರು, ನಮ್ಮ ದೇಶದ ಎಲ್ಲಾ ಕ್ಷೇತ್ರಗಳಿಗೆ ವ್ಯಾಪಿಸಿದ ಬೃಹತ್ ಪಿಡುಗಾದ ಭ್ರಷ್ಟಾಚಾರದ ಪರಿಣಾಮ […]

Continue Reading

ಶಹಾಬಾದ: ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ

ಸುದ್ದಿ ಸಂಗ್ರಹ ಶಹಾಬಾದರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಯೋಜನೆ ಎಂಬ ವಂಚನೆಯ ಮುಖವಾಡದ ಅಡಿಯಲ್ಲಿ, ಸರ್ಕಾರವು ರಾಜ್ಯದಾದ್ಯಂತ 40 ಸಾವಿರಕ್ಕೂ ಹೆಚ್ಚು ಶಾಲೆಗಳನ್ನು ವಿಲೀನಗೊಳಿಸುತ್ತಿದೆ ಎಂದು ಎಐಡಿಎಸ್ಓ ಜಿಲ್ಲಾ ಕೌನ್ಸಿಲ್ ಅಧ್ಯಕ್ಷ ತುಳಜರಾಮ ಎನ್.ಕೆ ಹೇಳಿದರು. ನಗರದ ಬಸವೇಶ್ವರ ವೃತ್ತದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು, ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಯೋಜನೆ ಅಡಿಯಲ್ಲಿ ಶಹಾಬಾದ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತರನಳ್ಳಿ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯೆಂದು ಗುರುತಿಸಲಾಗಿದೆ. ಸರಕಾರಿ […]

Continue Reading

ಡಾ.ಬಿ.ಆರ್ ಅಂಬೇಡ್ಕರ್’ರ 69ನೇ ಮಹಾಪರಿನಿರ್ವಾಣ ದಿನ: ಸಂವಿಧಾನ ಶಿಲ್ಪಿಗೆ ಗಣ್ಯರಿಂದ ನಮನ

ಸುದ್ದಿ ಸಂಗ್ರಹ ಶಹಾಬಾದ್ ನಗರದ ಚವ್ಹಾಣ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣದಿನ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮುಖ್ಯಗುರು ಸವಿತಾ ಬೆಳಗುಂಪಿ, ಸಂಸ್ಥೆಯ ಸದಸ್ಯ ಸುಧಾರಾಣಿ ಚವ್ಹಾಣ್, ಪ್ರಮುಖರಾದ ಆರತಿ ವೆಂಕಟೇಶ, ಸುಜಾತ ಕುಂಬಾರ, ನಿರ್ಮಲಾ ಬಿರಾದರ, ಚೈತ್ರಾ, ಮಂಜುಳಾ, ಸಂಜನ ಮತ್ತು ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಇದ್ದರು.

Continue Reading

ಮಕ್ಕಳು ಜೀವನದಲ್ಲಿ ಉತ್ತಮ ಮೌಲ್ಯ ಅಳವಡಿಸಿಕೊಳ್ಳಬೇಕು

ಸುದ್ದಿ ಸಂಗ್ರಹ ಶಹಾಬಾದವಿದ್ಯಾರ್ಥಿಗಳು ಶಿಸ್ತು, ಸಂಯಮ, ಸಂಸ್ಕಾರದಂತಹ ಉತ್ತಮ ಮೌಲ್ಯ ರೂಢಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಬೇಕು ಎಂದು ಸಂತ ಥಾಮಸ್ ಚರ್ಚನ ಪಾದರ ಜೆರಾಲ್ಡ್ ಸಾಗರ ಹೇಳಿದರು. ನಗರದ ಮೌಂಟ್ ಕಾರ್ಮೆಲ್ ಕಾನ್ವೆಂಟ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮೌಲ್ಯಗಳಿಲ್ಲದ ಜೀವನ ವ್ಯರ್ಥ ಆದ್ದರಿಂದ ಪ್ರತಿಯೊಬ್ಬರು ಕೆಲವೊಂದು ಮೌಲ್ಯಗಳನ್ನಾದರು ಜೀವನದಲ್ಲಿ ಅಳವಡಿಸಿಕೊಂಡಾಗ ಜೀವನ ಸಾರ್ಥಕವಾಗುತ್ತದೆ. ಮೌಲ್ಯಗಳು ಜೀವನದ ಆಧಾರಸ್ತಂಭಗಳು. ಮಾನವೀಯ ಮೌಲ್ಯಗಳು ಇಂದಿನ ದಿನದಲ್ಲಿ ಬಹಳ ಅವಶ್ಯಕವಾಗಿದ್ದು, ಅವುಗಳನ್ನು ಅಳವಡಿಸಿಕೊಂಡು ಬೇರೆಯವರಿಗೆ ಆದರ್ಶವಾಗಿರಬೇಕು […]

Continue Reading

ಹಳೆ ಪಿಂಚಣಿ ಯೋಜನೆ ಜಾರಿ ಸಂಬಂಧ ಸರ್ಕಾರಕ್ಕೆ ವಾರದೊಳಗೆ ವರದಿ ಸಲ್ಲಿಸುವ ಭರವಸೆ: ಬಸವರಾಜ ಬಳೂಂಡಗಿ

ಸುದ್ದಿ ಸಂಗ್ರಹ ಕಲಬುರಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆಯ ಪಿಂಚಣಿ ಯೊಜನೆ ಜಾರಿಗೊಳಿಸುವ ಸಂಬಂಧ ಸರ್ಕಾರ ರಚಿಸಿರುವ ಸಮಿತಿಯು ಈಗಾಗಲೆ ವರದಿ ಸಿದ್ಧಪಡಿಸಿದೆ, ಒಂದು ವಾರದೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸುವ ಭರವಸೆ ನೀಡಲಾಗಿದೆ. ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಅಭಿನಂದನೆ ಸಲ್ಲಿಸುತ್ತದೆ ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ 2006 ರಿಂದ ಜಾರಿಯಲ್ಲಿರುವ ಹೊಸ ಪಿಂಚಣಿ ಯೋಜನೆ (ಎನ್‍ಪಿಎಸ್) ಹೋಗಲಾಡಿಸಿ, ಈ ಹಿಂದಿನ […]

Continue Reading

ಸಂವಿಧಾನದ ಅನುಷ್ಠಾನ, ಪಾಲನೆಯಲ್ಲಿ ವಕೀಲರ ಪಾತ್ರ ಅನನ್ಯ: ಬಸವರಾಜ ಬಿರಾದಾರ

ಕಲಬುರಗಿ: ದೇಶದ ರಕ್ಷಾ ಕವಚವಾದ ಸಂವಿಧಾನದ ಆಶಯಗಳು, ತತ್ವಗಳನ್ನು ಅನುಷ್ಠಾನ ಮತ್ತು ಪಾಲನೆ ಮಾಡುವುದರಲ್ಲಿ ವಕೀಲ್‌ರ ಪಾತ್ರ ಅನನ್ಯ ಎಂದು ಹಿರಿಯ ವಕೀಲ್ ಬಸವರಾಜ ಬಿರಾದಾರ ಅಭಿಪ್ರಾಯಪಟ್ಟರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢ ಶಾಲೆಯ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಬೆಳಿಗ್ಗೆ ಏರ್ಪಡಿಸಿದ್ದ ‘ರಾಷ್ಟ್ರೀಯ ವಕೀಲರ ಮತ್ತು ವಿಶ್ವ ವಿಶೇಷ ಚೇತನರ ದಿನಾಚರಣೆ’ಯಲ್ಲಿ ಗೌರವ ಸ್ವೀಕರಿಸಿ, ಮಾತನಾಡಿದ ಅವರು, ದೇಶದಲ್ಲಿನ ಎಂತಹ ದೊಡ್ಡ ವ್ಯಕ್ತಿಯಾಗಿದ್ದು, ಆ ವ್ಯಕ್ತಿ ತಪ್ಪು ಮಾಡಿದರೆ […]

Continue Reading

ಪರಿಸರ ಮಾಲಿನ್ಯ ತಡೆಗೆ ಸಾಮೂಹಿಕ ಪ್ರಯತ್ನ ಅಗತ್ಯ: ಎಚ್.ಬಿ ಪಾಟೀಲ

ಕಲಬುರಗಿ: ವಿವಿಧ ಮಾಲಿನ್ಯಗಳಿಂದ ಪರಿಸರ ತತ್ತರಿಸಿ ಹೋಗಿದೆ. ಮಾಲಿನ್ಯ ನಿಯಂತ್ರಣ ನೀತಿ-ನಿಯಮ, ಸರ್ಕಾರ, ಕೆಲವು ಸಂಸ್ಥೆಗಳು, ಪರಿಸರ ಪ್ರೇಮಿಗಳಿಂದ ಮಾತ್ರ ಸಾಧ್ಯವಿಲ್ಲ. ಎಲ್ಲೆಡೆ ವ್ಯಾಪಕವಾಗಿ ಗಿಡಗಳನ್ನು ನೆಟ್ಟು ಪೋಷಿಸುವುದು, ಸ್ವಚ್ಛತೆ ಕಾಪಾಡುವುದು, ಪರಿಸರ ಸ್ನೇಹಿ ವಾತಾವರಣ ನಿರ್ಮಿಸುವ ಮೂಲಕ ಮಾಲಿನ್ಯ ನಿಯಂತ್ರಣಕ್ಕೆ ಸಾಮೂಹಿಕ ಪ್ರಯತ್ನ ಅಗತ್ಯ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಹೊಸ ಜೇವರ್ಗಿ ರಸ್ತೆಯಲ್ಲಿನ ಗೆಟ್ಸ್ ಡಿಗ್ರಿ ಕಾಲೇಜ್’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನಾಚರಣೆ’ […]

Continue Reading