ನಿಸ್ವಾರ್ಥ ಸೇವೆಯಿಂದ ಸಮಾಜ ಪರಿವರ್ತಿಸಲು ಸಾಧ್ಯ

ಸುದ್ದಿ ಸಂಗ್ರಹ ಶಹಬಾದ ಸಮಾಜದಲ್ಲಿ ಪ್ರತಿಯೊಬ್ಬರು ನಿಸ್ವಾರ್ಥ ಸೇವೆ ಸಲ್ಲಿಸಿದಾಗ ಮಾತ್ರ ಸಮಾಜ ಪರಿವರ್ತಿಸಲು ಸಾಧ್ಯ ಎಂದು ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಹನುಮಂತಪ್ಪ ಬಿ ಸೇಡಂಕರ ಹೇಳಿದರು. ನಗರದ ಹೈ.ಕ ಶಿಕ್ಷಣ ಸಂಸ್ಥೆಯ ಎಸ್.ಎಸ್ ಮರಗೋಳ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಇಂದು ತೆಗೆದುಕೊಳ್ಳುವ ನಿರ್ಧಾರ, ನಾಳೆ ಸಮಾಜ ಪರಿವರ್ತಿಸುವ ಶಕ್ತಿ ಹೊಂದಿದೆ. ಸೇವಾ ಮನೋಭಾವವು ಬದುಕನ್ನು ಶ್ರೀಮಂತಗೊಳಿಸುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಹೈ.ಕ ಶಿಕ್ಷಣ ಸಂಸ್ಥೆಯ […]

Continue Reading

ಆರ್ಥಿಕ ಬೆಳವಣಿಗೆಗೆ ಮೇಕ್ ಇನ್ ಇಂಡಿಯಾ ಪೂರಕ

ಕಲಬುರಗಿ:  ಭಾರತದಲ್ಲಿ ವಿನ್ಯಾಸ, ತಯಾರಿಕೆ ಮತ್ತು ಜೋಡಣೆಯನ್ನು ಉತ್ತೇಜಿಸಲು, ವ್ಯಾಪಾರ-ವ್ಯವಹಾರ ವೃದ್ಧಿಗೆ  ಭಾರತ ಸರ್ಕಾರವು ಪ್ರಾರಂಭಿಸಿದ ಮೇಕ್ ಇನ್ ಇಂಡಿಯಾ ಯೋಜನೆ ಪೂರಕವಾಗಿದೆ ಎಂದು ಜಿಲ್ಲಾ ಸಣ್ಣ ಕೈಗಾರಿಕೆಗಳ ಮಾಲೀಕರ ಸಂಘದ ಅಧ್ಯಕ್ಷ ಭೀಮಾಶಂಕರ ಪಾಟೀಲ ಹೇಳಿದರು. ನಗರದ ಹೊಸ ಜೇವರ್ಗಿ ರಸ್ತೆಯ ಗೆಟ್ಸ್ ಡಿಗ್ರಿ ಕಾಲೇಜಿನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ಮೇಕ್ ಇನ್ ಇಂಡಿಯಾದ ದಶಮಾನೋತ್ಸವ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಮಾತನಾಡಿ, ಉತ್ಪಾದನೆಯಲ್ಲಿ ಹೂಡಿಕೆ ಹೆಚ್ಚಿಸುವುದು, […]

Continue Reading

ಅತಿವೃಷ್ಟಿ ಪೀಡಿತ ಪ್ರದೇಶ ಘೋಷಣೆಗೆ ಆಗ್ರಹ

ಸುದ್ದಿ ಸಂಗ್ರಹ ಶಹಾಬಾದ ಅತಿಯಾದ ಮಳೆಯಿಂದ ರೈತರು ಬೆಳೆದ ತೊಗರಿ, ಹೆಸರು, ಉದ್ದು ಸೇರಿದಂತೆ ಇತರ ಎಲ್ಲಾ ಬೆಳೆಗಳು ಸಂಪೂರ್ಣ ನಷ್ಟವಾಗಿದೆ, ಹೀಗಾಗಿ ಕಲಬುರಗಿ ಜಿಲ್ಲೆಯು ಅತಿವೃಷ್ಟಿ ಪೀಡಿತ ಜಿಲ್ಲೆ ಎಂದು ಘೋಷಿಸಿ ಪರಿಹಾರ ನೀಡಬೇಕು ಎಂದು ಶಹಾಬಾದ್ ಮಂಡಲ ಅಧ್ಯಕ್ಷ ನಿಂಗಣ್ಣ ಹುಳುಗೋಳ್ಕರ್ ಆಗ್ರಹಿಸಿದರು.  ನಗರದ ಬಸವೇಶ್ವರ ವೃತ್ತದಲ್ಲಿ ಬುಧುವಾರ ಬಿಜೆಪಿ ಪಕ್ಷ, ರೈತ ಮೋರ್ಚಾದ ವತಿಯಿಂದ ಅತಿವೃಷ್ಟಿ ಪೀಡಿತ ಪ್ರದೇಶ ಘೋಷಣೆಗೆ ಆಗ್ರಹಿಸಿ ಪ್ರತಿಭಟನೆಯಲ್ಲಿ ಮಾತನಾಡಿ, ರೈತರಿಗೆ ಸೇರಬೇಕಾದ ಹಳೆಯ ಪರಿಹಾರ ಬಾಕಿಯನ್ನು ಬಿಡುಗಡೆ […]

Continue Reading

ಆಯುರ್ವೇದ ಸಮಗ್ರ ಆರೋಗ್ಯ ಪದ್ದತಿ: ಡಾ.ಸದಾನಂದ ಪಾಟೀಲ

ಕಲಬುರಗಿ: ಸರ್ವ ಕಾಯಿಲೆಗೆ ಮದ್ದನ್ನು ನೀಡುವ ಆಯುರ್ವೇದ ಪದ್ಧತಿ ಸಮಗ್ರ ಆರೋಗ್ಯ ವ್ಯವಸ್ಥೆಯಾಗಿದ್ದು, ಎಲ್ಲರು ಆಯುರ್ವೇದ ಪದ್ಧತಿಯತ್ತ ಮುಖ ಮಾಡಬೇಕಾದದ್ದು ಇಂದಿನ ಅಗತ್ಯವಾಗಿದೆ ಎಂದು ಖ್ಯಾತ ಆಯುರ್ವೇದ ತಜ್ಞ ವೈದ್ಯ ಡಾ.ಸದಾನಂದ ಪಾಟೀಲ ಅಭಿಮತ ವ್ಯಕ್ತಪಡಿಸಿದರು. ನಗರದ ಶಹಾಬಾದ್ ರಿಂಗ್ ರಸ್ತೆಯ ಸಮೀಪದ ಚರಕ ಆಯುರ್ವೇದ ಆಸ್ಪತ್ರೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಜರುಗಿದ ‘10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ’ ಮತ್ತು ‘ಧನ್ವಂತರಿ ಜಯಂತಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಆಧುನಿಕ ಒತ್ತಡ […]

Continue Reading

ಪೌರ ಕಾರ್ಮಿಕರಿಗೆ ಸೇವಾ ಭದ್ರತೆಯ ಸೌಲಭ್ಯಗಳು ದೊರೆಯಲಿ

ಕಲಬುರಗಿ: ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವುದು, ಸೂಕ್ತ ವೇತನ, ಸರ್ಕಾರಿ ಸೌಲಭ್ಯಗಳು ದೊರೆಯಬೇಕು ಎಂದು ಹಿರಿಯ ಪೌರ ಕಾರ್ಮಿಕ ತಾರಾಚಂದ ರಾಠೋಡ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಏರ್ಪಡಿಸಲಾಗಿದ್ದ ‘ರಾಜ್ಯ ಪೌರ ಕಾರ್ಮಿಕರ ದಿನಾಚರಣೆ’ಯಲ್ಲಿ ಗೌರವ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಕಸ ವಿಲೇವಾರಿ, ಸ್ವಚ್ಚತೆ ಮಾಡುವ ಕಾರ್ಯ ನಿರ್ವಹಿಸುತ್ತಿರುವ ಕಾಯಕ ಜೀವಿಗಳಾದ ಪೌರ ಕಾರ್ಮಿಕರು ಸ್ವಚ್ಚತೆಯ ರಾಯಭಾರಿಗಳು. ಅವರ […]

Continue Reading

ಆಲ್ಝೈಮರ್ಸ್ ಕಾಯಿಲೆ ಬಗ್ಗೆ ಜಾಗೃತಿ ಅಗತ್ಯ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಆಲ್ಝೈಮರ್ಸ್ ಕಾಯಿಲೆ ಎಂದರೆ ಮೆದುಳಿನ ನರದ ವ್ಯವಸ್ಥೆಯಲ್ಲಿನ ಅಸ್ವಸ್ಥತೆಯಾಗಿದ್ದು, ಇದು ಕ್ರಮೇಣ ನೆನಪಿನ ಶಕ್ತಿ, ಆಲೋಚನೆ ಮತ್ತು ತಿಳುವಳಿಕೆಯ ಸಾಮರ್ಥ್ಯವನ್ನು ನಾಶಪಡಿಸುತ್ತದೆ. ಇದು ಅಂತಿಮವಾಗಿ ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹದಗೆಡಿಸುತ್ತದೆ. ಈ ಕಾಯಿಲೆಗೆ ಪ್ರಸ್ತುತ ಯಾವುದೆ ಚಿಕಿತ್ಸೆ ಇಲ್ಲ. ಆದರೆ ರೋಗ ಲಕ್ಷಣಗಳನ್ನು ನಿರ್ವಹಿಸಲು ಔಷಧಿ ಮತ್ತು ಆರೈಕೆ ಲಭ್ಯವಿದೆ. ಇದರ ಬಗ್ಗೆ ಜಾಗೃತಿ ಅಗತ್ಯವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದಲ್ಲಿರುವ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ […]

Continue Reading

ಆರೋಗ್ಯಕರ ಜೀವನ ಶೈಲಿಯಿಂದ ಕಾಯಿಲೆಗಳು ದೂರ: ಡಾ.ಅಂಕಿತ್ ಕದರ್ಗಿ

ಕಲಬುರಗಿ: ಎಲ್ಲರು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಂಡರೆ ಕಾಯಿಲೆಗಳಿಂದ ದೂರವಿರಬಹುದಾಗಿದೆ. ಆರೋಗ್ಯವೇ ಮನುಷ್ಯನ ದೊಡ್ಡ ಸಂಪತ್ತಾಗಿದ್ದು, ಅದನ್ನು ಕಾಪಾಡಿಕೊಳ್ಳಬೇಕು ಎಂದು ತಜ್ಞ ವೈದ್ಯ ಡಾ.ಅಂಕಿತ್ ಆರ್ ಕದರ್ಗಿ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಕೆ.ಎಚ್.ಬಿ ಗ್ರೀನ್ ಪಾರ್ಕನ ಹನುಮಾನ ದೇವಸ್ಥಾನದ ಆವರಣದಲ್ಲಿ ಆಯುಸಿಂಕ್ ಮೆಡಿಕಲ್ ಕಂಪನಿ ಮತ್ತು ಬಡಾವಣೆಯ ಜಂಟಿ ಆಶ್ರಯದಲ್ಲಿ ಭಾನುವಾರ ಏರ್ಪಡಿಸಿದ್ದ ಒಂದು ದಿನದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಆರೋಗ್ಯ ಕಳೆದುಕೊಂಡು ಬೇರೆಲ್ಲಾ ಸಂಪತ್ತು ಗಳಿಸಿದರೂ ವ್ಯರ್ಥ. ಪ್ರಸ್ತುತ ದಿನಗಳಲ್ಲಿ […]

Continue Reading

ಶಾಂತಿಯುತ ವಾತಾವರಣ ನಿರ್ಮಾಣ ಸರ್ವರ ಜವಾಬ್ದಾರಿ: ಎಚ್.ಬಿ ಪಾಟೀಲ

ಕಲಬುರಗಿ: ಪ್ರತಿಯೊಬ್ಬರು ಸೃಷ್ಟಿಕೃತನ ಮಕ್ಕಳು, ನಾವೆಲ್ಲರು ಒಂದೆ ಎಂಬ ಭಾವನೆ ಮೂಡಬೇಕು. ಎಲ್ಲೆಡೆ ಶಾಂತಿಯುತ ವಾತಾವರಣ ನಿರ್ಮಾಣ ಮಾಡುವುದು ಸರ್ವರ ಜವಾಬ್ದಾರಿಯಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ಕಮಲಾಪುರ ತಾಲೂಕಿನ ಮಹಾಗಾಂವ ಕ್ರಾಸ್ ಸಮೀಪದ ಚಿಗುರು ನಿರ್ಗತಿಕ ಮತ್ತು ಅನಾಥ ಮಕ್ಕಳ ನಿಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಭಾನುವಾರ ಜರುಗಿದ ‘ಅಂತಾರಾಷ್ಟ್ರೀಯ ಶಾಂತಿ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಇಂದು ಇಡಿ ಜಗತ್ತೆ ಶಾಂತಿಯ ಮಂತ್ರ ಪಠಿಸಬೇಕಾಗಿದೆ. ಭಯೋತ್ಪಾದನೆ, ವೈಷಮ್ಯ, […]

Continue Reading

ಬಿದಿರಿನಿಂದ ಆರ್ಥಿಕ ಸದೃಢತೆ ಸಾಧ್ಯ: ಎಚ್.ಬಿ ಪಾಟೀಲ

ಕಲಬುರಗಿ: ಬಹುಪಯೋಗಿಯಾದ ಬಿದರಿನಿಂದ ಆರ್ಥಿಕವಾಗಿ ಸದೃಢವಾಗಲು ಸಾಧ್ಯ, ರೈತರು ಇದರ ಬಗ್ಗೆ ಚಿತ್ತ ಹರಿಸುವುದು ಅಗತ್ಯವಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ವಿಶ್ವ ಬಿದಿರು ದಿನಾಚರಣೆ’ಯನ್ನು ಬಿದಿರಿನ ಗಿಡಗಳಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಬಿದಿರು ಅರಣ್ಯ ಬೆಳೆಯಾಗಿದ್ದು, ಬುಟ್ಟಿ, ಪೀಠೋಪಕರಣಗಳ ತಯಾರಿಕೆ, ಕೃಷಿ ಉಪಕರಣಗಳ ತಯಾರಿಕೆ, ಮನೆ ನಿರ್ಮಾಣಕ್ಕೆ ಸಲಕರಣೆ, ಜೊತೆಗೆ […]

Continue Reading

ಜಲ ಸಂರಕ್ಷಣೆ, ಸೂಕ್ತ ನಿರ್ವಹಣೆ ಅಗತ್ಯ: ಎಚ್.ಬಿ ಪಾಟೀಲ್

ಕಲಬುರಗಿ: ಸಕಲ ಜೀವರಾಶಿಗಳಿಗೆ ಆಸರೆಯಾದ ಜಲವನ್ನು ಹಾಳು ಮಾಡದೆ, ಸಂರಕ್ಷಣೆ ಮತ್ತು ಸೂಕ್ತ ನಿರ್ವಹಣೆ ಮಾಡಬೇಕು ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಆಳಂದ ರಸ್ತೆಯ ಶಿವ ನಗರದಲ್ಲಿನ ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ವಿಶ್ವ ಜಲ ಮೇಲ್ವಿಚಾರಣೆ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಾಗತಿಕ ನೀರಿನ ಬಿಕ್ಕಟ್ಟಿನ ಬಗ್ಗೆ ಜಾಗೃತಿ ಮೂಡಿಸುವುದು, ಜಲ ಸಂರಕ್ಷಣೆಯ ಬಗ್ಗೆ ಕ್ರಮ ತೆಗೆದುಕೊಳ್ಳಲು ಜನರನ್ನು ಪ್ರೋತ್ಸಾಹಿಸುವ ಕಾರ್ಯ ಇನ್ನೂ ಹೆಚ್ಚಿನ ಮಟ್ಟದಲ್ಲಿ […]

Continue Reading