ಸ್ವಾವಲಂಬನೆ, ಘನತೆಯ ಬದುಕಿಗೆ ಸಾಕ್ಷರತೆ ಅಗತ್ಯ

ಕಲಬುರಗಿ: ಸಾಕ್ಷರತೆಯು ಪ್ರತಿಯೊಬ್ಬರ ಜೀವನದಲ್ಲೂ ಪ್ರಮುಖವಾದ ಅಂಶವಾಗಿದೆ, ವ್ಯಕ್ತಿಯನ್ನು ಸಮಾಜದಲ್ಲಿ ಘನತೆ ಹಾಗೂ ಸ್ವಾವಲಂಬನೆಯಿಂದ ಬದಕಲು ಸಹಾಯ ಮಾಡುತ್ತದೆ. ಸಾಕ್ಷರತೆಯು ಉದ್ಯೋಗ ಮತ್ತು ಶೈಕ್ಷಣಿಕ ಅವಕಾಶಗಳನ್ನು ಕಲ್ಪಿಸಿಕೊಟ್ಟು, ಜನರನ್ನು ಬಡತನ ಮತ್ತು ನಿರುದ್ಯೋಗದಿಂದ ಹೊರಬರಲು ಸಹಾಯ ಮಾಡುತ್ತದೆ. ಆದ್ದರಿಂದ ಪ್ರತಿಯೊಬ್ಬರು ಶಿಕ್ಷಣ ಪಡೆದು ಸುಶಿಕ್ಷಿತರಾಗಬೇಕು ಎಂದು ಉಪನ್ಯಾಸಕ, ಸಮಾಜ ಸೇವಕ ಎಚ್.ಬಿ ಪಾಟೀಲ್ ಹೇಳಿದರು.  ನಗರದ ಆಳಂದ ರಸ್ತೆಯ ಶಿವ ನಗರದ ಮಲ್ಲಿನಾಥ ಮಹಾರಾಜ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಬೆಳಿಗ್ಗೆ ಜರುಗಿದ “ಅಂತಾರಾಷ್ಟ್ರೀಯ ಸಾಕ್ಷರತಾ […]

Continue Reading

ಹೋಗಿ ಮೋದಿ, ಶಾ ಹತ್ತಿರ ಕೇಳು: ಕಷ್ಟ ಹೇಳಲು ಬಂದಿದ್ದ ಯುವ ರೈತನ ವಿರುದ್ಧ ಖರ್ಗೆ ಆಕ್ರೋಶ

ಕಲಬುರಗಿ: ಅತಿವೃಷ್ಠಿಯಿಂದ ನಾನು ಬೆಳೆದಿದ್ದ ಬೆಳೆ ಹಾಳಾಗಿದೆ ಎಂದು ತನ್ನ ಕಷ್ಟವನ್ನು ಹೇಳಿಕೊಳ್ಳಲು ಬಂದಿದ್ದ ಯುವ ರೈತನ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರಗಿಯ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಬಂದಿದ್ದ ಯುವಕ ಅತಿವೃಷ್ಠಿಯಿಂದ 4 ಎಕರೆಯಲ್ಲಿ ಬೆಳೆದಿದ್ದ ತೊಗರಿ ಬೆಳೆ ಹಾಳಾಗಿದೆ ಸರ್ ಎಂದು ಹೇಳಿದ್ದಾನೆ. ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು, ಯುವಕನಿಗೆ ನೀನು ಎಷ್ಟು ಎಕರೆಯಲ್ಲಿ ಬೆಳೆ ಬೆಳೆದಿದ್ದಿಯಾ ಎಂದು ಪ್ರಶ್ನಿಸುತ್ತಾರೆ. ಅದಕ್ಕೆ ಯುವಕ 4 ಎಕರೆಯಲ್ಲಿ ಬೆಳೆ ಬೆಳೆದಿದ್ದೆ […]

Continue Reading

ಮಾನವನ ದೇಹಕ್ಕೆ ಎಳೆನೀರು ಸಂಜೀವಿನಿಯಂತೆ

ಕಲಬುರಗಿ: ಮಾನವನ ದೇಹದ ಬೆಳವಣಿಗೆಗೆ ಗಾಳಿ, ನೀರು, ಆಹಾರ ಅತ್ಯವಶ್ಯಕ. ದೇಹಕ್ಕೆ ಬರುವ ರೋಗಗಳಲ್ಲಿ ಆಹಾರ ಸಂಬಂಧಿತ ಕಾಯಿಲೆಗಳು ಪ್ರಮುಖ. ವ್ಯಕ್ತಿ ಯಾವುದೆ ಕಾಯಿಲೆಗೆ ತುತ್ತಾದಾಗ ಆಹಾರ, ನೀರು ಸೇವನೆ ಅಸಾಧ್ಯವಾದಾಗ ಎಳೆನೀರು ಸೇವಿಸಿದರೆ ನೈಸರ್ಗಿಕ ಗ್ಲೂಕೋಸ್ ದೊರೆಯುತ್ತದೆ. ಇದು ಸಂಜೀವಿನಿಯಂತೆ ಕಾರ್ಯನಿರ್ವಹಿಸುತ್ತದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಜರುಗಿದ ‘ವಿಶ್ವ ತೆಂಗು ದಿನಾಚರಣೆ’ಯಲ್ಲಿ ತೆಂಗಿನ ಗಿಡ […]

Continue Reading

ಸದೃಢ ಆರೋಗ್ಯಕ್ಕಾಗಿ ಸಮತೋಲಿತ ಆಹಾರದ ಸೇವನೆ ಅಗತ್ಯ: ಡಾ.ಅನುಪಮಾ

ಕಲಬುರಗಿ: ಸದೃಢ ಆರೋಗ್ಯಕ್ಕಾಗಿ ಎಲ್ಲರು ಸಮತೋಲಿತ ಆಹಾರ ಸೇವಿಸುವುದು ಅಗತ್ಯವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಸೋಮವಾರ ಏರ್ಪಡಿಸಿದ್ದ ‘ರಾಷ್ಟ್ರೀಯ ಪೋಷಕಾಂಶ ಸಪ್ತಾಹ ಕಾರ್ಯಕ್ರಮ’ ಉದ್ಘಾಟಿಸಿ ಅವರು ಮಾತನಾಡಿದ ಅವರು, ಯಾವುದೆ ರಾಷ್ಟ್ರದ ಅಭಿವೃದ್ದಿಯಲ್ಲಿ ಆರೋಗ್ಯ ಭರಿತ, ಸದೃಢ ಮಾನವ ಸಂಪನ್ಮೂಲ ತುಂಬಾ ಅವಶ್ಯಕ. ಮಗುವಿದ್ದಾಗಲೇ ಅದಕ್ಕೆ ಎಲ್ಲಾ ಪೋಷಕಾಂಶಗಳುಳ್ಳ ಸಮತೋಲಿತ ಆಹಾರ ನೀಡಬೇಕು. ಇದರಿಂದ ಆ […]

Continue Reading

ನೇತ್ರದಾನ ಮಾಡುವುದು ಅಗತ್ಯ: ಡಾ.ಕೇಶ್ವಾರ

ಕಲಬುರಗಿ: ಕಣ್ಣುಗಳು ದಾನ ಮಾಡುವುದು ಒಂದು ಶ್ರೇಷ್ಠ ಕಾರ್ಯ. ಹುಟ್ಟು ಕುರುಡರಾಗಿ ಅಥವಾ ಅಪಘಾತದಿಂದ ದೃಷ್ಟಿ ಕಳೆದುಕೊಂಡವರಿಗೆ ಕಣ್ಣು ದಾನ ಮಾಡುವ ಮೂಲಕ ಅವರಿಗೆ ದೃಷ್ಟಿ ಭಾಗ್ಯ ನೀಡಬಹುದು ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಜರುಗಿದ “41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ” ಕಾರ್ಯಕ್ರಮವನ್ನು ಮಹಿಳೆಯೊಬ್ಬರ ಕಣ್ಣು ಪರೀಕ್ಷಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸಾವಿನ ನಂತರವು […]

Continue Reading

ದೇಶದ ಅಭಿವೃದ್ಧಿಯಲ್ಲಿ ಉದ್ಯಮಗಳ ಪಾತ್ರ ಅನನ್ಯ

ಕಲಬುರಗಿ: ಉದ್ಯಮಗಳು ಸರಕುಗಳನ್ನು ಉತ್ಪಾದಿಸಿ ಸೇವೆಗಳನ್ನು ನೀಡುತ್ತವೆ. ಸರ್ಕಾರಕ್ಕೆ ತೆರಿಗೆ ಪಾವತಿಸುತ್ತವೆ. ಗ್ರಾಹಕರಿಗೆ ಅಗತ್ಯ ಸರಕುಗಳು ಪೂರೈಸುತ್ತವೆ. ಉದ್ಯೋಗ ನೀಡುವುದು ಸೇರಿದಂತೆ ಮತ್ತಿತರ ಕೊಡುಗೆ ನೀಡುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಉದ್ಯಮಗಳು ಅನನ್ಯವಾದ ಪಾತ್ರ ವಹಿಸಿವೆ ಎಂದು ಉದ್ಯಮಿ ಹಾಗೂ ಸಮಾಜ ಸೇವಕ ಕೇದರನಾಥ ಕುಲಕರ್ಣಿ ಹೇಳಿದರು. ನಗರದ ಸ್ವಾರಗೇಟ್’ನ ‘ರೇವಣಸಿದ್ದೇಶ್ವರ ಮಿನರಲ್ ವಾಟರ್ ಪ್ಲಾಂಟ್’ನ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಜರುಗಿದ ‘ವಿಶ್ವ ಉದ್ಯಮಿಗಳ ದಿನಾಚರಣೆ’ಯಲ್ಲಿ ಮಾತನಾಡಿದರು. ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ […]

Continue Reading

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಸಾಧನೆ ಅಪಾರ: ಎಚ್.ಬಿ ಪಾಟೀಲ

ಕಲಬುರಗಿ: ಭಾರತ ಚಂದ್ರಯಾನ-3ರ ವಿಕ್ರಮ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಪಾದಾರ್ಪಣೆ ಮಾಡುವುದು ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ಅಪಾರವಾದ ಸಾಧನೆ ಮಾಡುತ್ತಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಶಿವ ನಗರದ ಮಲ್ಲಿನಾಥ ಮಹಾರಾಜ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಜರುಗಿದ ‘ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಭೂಮಿಯ ಏಕೈಕ ನೈಸರ್ಗಿಕ ಉಪಗ್ರಹವಾದ ಚಂದ್ರ, ಚಂದ್ರನಲ್ಲಿರುವ ವಾತಾವರಣ ಸೇರಿದಂತೆ ಅಲ್ಲಿನ ಮಾಹಿತಿಯ ಬಗ್ಗೆ ವ್ಯಾಪಕವಾಗಿ ಸಂಶೋಧನೆ […]

Continue Reading

ಹಿರಿಯರನ್ನು ಗೌರವಿಸುವ ಸಂಸ್ಕೃತಿ ಬೆಳೆಯಲಿ

ಕಲಬುರಗಿ: ಪಾಶ್ಯಾತ್ಯ ಸಂಸ್ಕೃತಿಯ ಪ್ರಭಾವದಿಂದ ಹಿರಿಯರಿಗೆ ಗೌರವ ನೀಡುವ, ಆರೈಕೆ ಮಾಡುವ ಜವಾಬ್ದಾರಿ ಕಡಿಮೆಯಾಗುತ್ತಿರುವದು ವಿಷಾದನೀಯ ಸಂಗತಿ ಎಂದು ನಿವೃತ್ತ ಕೃಷಿ ಅಧಿಕಾರಿ ಹಾಗೂ ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆ ಮತ್ತು ಶಿವಾ ಮಂದಿರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಏರ್ಪಡಿಸಲಾಗಿದ್ದ ‘ವಿಶ್ವ ಹಿರಿಯ ನಾಗರಿಕರ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸದೃಢ ರಾಷ್ಟ್ರ ನಿರ್ಮಾಣಕ್ಕೆ ಹಿರಿಯರ ಸಲಹೆ, ಸೂಚನೆ, ಮಾರ್ಗದರ್ಶನ ತುಂಬಾ […]

Continue Reading

ರಾಷ್ಟ್ರದ ಅಭಿವೃದ್ಧಿಯಲ್ಲಿ ಛಾಯಾಗ್ರಾಹಕರ ಕೊಡುಗೆ ಅನನ್ಯ

ಕಲಬುರಗಿ: ಛಾಯಾಗ್ರಾಹಕರು ಅಲ್ಲಿನ ಸ್ಥಿತಿ-ಗತಿಯ ನೈಜ ಚಿತ್ರಣ ನೀಡುವ ಕಾರ್ಯ ನಿರ್ವಹಿಸುವ ಕೊಡುಗೆ ರಾಷ್ಟ್ರದ ಅಭಿವೃದ್ಧಿಗೆ ಅನನ್ಯವಾಗಿದೆ ಎಂದು ಹಿರಿಯ ಛಾಯಾಗ್ರಾಹಕ ಬಸವರಾಜ ವೈ ತೊನಸಳ್ಳಿ ಹೇಳಿದರು. ನಗರದ ನೆಹರು ಗಂಜ್‌ನ ಬಸ್ ನಿಲ್ದಾಣ ಸಮೀಪದ ನ್ಯೂ ದೇವಿ ಫೋಟೋ ಸ್ಟುಡಿಯೋದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಐತಿಹಾಸಿಕ 5,500ನೇ ಕಾರ್ಯಕ್ರಮ ಜರುಗಿದ ‘188ನೇ ವಿಶ್ವ ಛಾಯಾಗ್ರಾಹಕರ ದಿನಾಚರಣೆ’ಯಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಒಂದು ಚಿತ್ರ ಸಾವಿರ ಶಬ್ದಗಳಿಗೆ ಸಮಾನ. ವ್ಯಕ್ತಿ ಹಾಗೂ ವರ್ಣಿಸಲಾಗದ ದೃಶ್ಯವನ್ನು […]

Continue Reading

ರುದ್ರಾಕ್ಷಿ ಧಾರಣೆಯಿಂದ ಆಧ್ಯಾತ್ಮಿಕ, ಭೌತಿಕ ಲಾಭ: ಚರಲಿಂಗ ಶ್ರೀ

ಕಲಬುರಗಿ: ರುದ್ರಾಕ್ಷಿ ಪವಿತ್ರ ವಸ್ತುವಾಗಿದ್ದು, ಇದನ್ನು ಧರಿಸುವುದರಿಂದ ಆಧ್ಯಾತ್ಮಿಕ ಮತ್ತು ಭೌತಿಕ ಪ್ರಯೋಜನ ಪಡೆಯಬಹುದು, ರಕ್ತದೊತ್ತಡ ಮತ್ತು ಚರ್ಮದ ಸಮಸ್ಯೆಗಳಿಗೆ ಪರಿಹಾರ ಇದರಲ್ಲಿದೆ. ಇದು ಆಧ್ಯಾತ್ಮಿಕ ಪ್ರಗತಿಗೆ ಸಹಾಯ ಮಾಡುತ್ತದೆ‌ ಎಂದು ಗದ್ದುಗೆ ಮಠದ ಪೂಜ್ಯ ಚರಲಿಂಗ ಮಹಾಸ್ವಾಮಿಗಳು ಹೇಳಿದರು. ನಗರದ ಬಿಲಗುಂದಿ ಪೆಟ್ರೋಲ್ ಪಂಪ್ ಎದುರುಗಡೆಯ ಬಡೆಪೂರ ಕಾಲೋನಿಯ ಭಕ್ತರ ಮನೆಗಳಿಗೆ ಹೋಗಿ ರುದ್ರಾಕ್ಷಿ ಧಾರಣೆ ಕಾರ್ಯಕ್ರಮ ಮತ್ತು ಸದ್ಭಾವನ ಪಾದಯಾತ್ರೆ ಪ್ರಾರಂಭಿಸಿ ಮಾತನಾಡಿದ ಅವರು, ಧ್ಯಾನ ಮತ್ತು ಪ್ರಾರ್ಥನೆಗಳಿಗೆ ರುದ್ರಾಕ್ಷಿ ಬಳಸಲಾಗುತ್ತದೆ. ನಕರಾತ್ಮಕ ಶಕ್ತಿಗಳಿಂದ […]

Continue Reading