ರಾಷ್ಟ್ರದ ಅಭಿವೃದ್ಧಿಗೆ ರೈಲು ಸಾರಿಗೆಯ ಕೊಡುಗೆ ಅನನ್ಯ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿಕೃಷಿ ಮತ್ತು ಕೈಗಾರಿಕೆಗಳ ಅಭಿವೃದ್ಧಿ, ವ್ಯಾಪಾರ-ವ್ಯವಹಾರಗಳ ವಿಸ್ತರಣೆ, ಉದ್ಯೋಗಾವಕಾಶಗಳ ಹೆಚ್ಚಳ, ಸರ್ಕಾರಕ್ಕೆ ಆದಾಯ, ಪ್ರವಾಸೋದ್ಯಮಕ್ಕೆ ಉತ್ತೇಜನ ಸೇರಿದಂತೆ ಮುಂತಾದ ಕ್ಷೇತ್ರಗಳ ಬೆಳವಣಿಗೆಗೆ ಪೂರಕವಾಗಿ ಸೇವೆ ಸಲ್ಲಿಸುವ ಮೂಲಕ ರೈಲು ಸಾರಿಗೆಯು ರಾಷ್ಟ್ರದ ಅಭಿವೃದ್ಧಿಗೆ ತನ್ನದೆಯಾದ ಅನನ್ಯ ಕೊಡುಗೆ ನೀಡುತ್ತಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಬಳಿಯಿರುವ ರಿಪಬ್ಲಿಕ್ ಇಂಗ್ಲೀಷ್ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಭಾರತೀಯ ರೈಲು […]

Continue Reading

ದೇಶದ ಸಂಸ್ಕೃತಿ, ಸಂಪ್ರದಾಯ ಉಳಿಸಿ, ಬೆಳೆಸುವುದು ಅಗತ್ಯ: ಡಾ.ಡಿ.ಬಿ ಬಿರಾದಾರ

ಸುದ್ದಿ ಸಂಗ್ರಹ ಕಲಬುರಗಿವಿವಿಧತೆಯಲ್ಲಿ ಏಕತೆ ಸಾರುವ ನಮ್ಮ ದೇಶದ ಹಿರಿಮೆ, ಉಡುಗೆ-ತೊಡುಗೆ, ಆಚಾರ-ವಿಚಾರ, ಸಂಸ್ಕೃತಿ, ಸಂಪ್ರದಾಯ ಉಳಿಸಿ, ಬೆಳೆಸುವುದು ಅಗತ್ಯವಾಗಿದೆ ಎಂದು ನಿವೃತ್ತ ಪ್ರಾಧ್ಯಾಪಕ ಡಾ.ಡಿ.ಬಿ ಬಿರಾದಾರ ಹೇಳಿದರು. ನಗರದ ಹೊಸ ಜೇವರ್ಗಿ ರಸ್ತೆಯ ಗೆಟ್ಸ್ ವಿಜ್ಞಾನ ಮತ್ತು ವಾಣಿಜ್ಯ ಡಿಗ್ರಿ ಕಾಲೇಜಿನಲ್ಲಿ ಗುರುವಾರ ಜರುಗಿದ ಎಥ್ನಿಕ್ ಡೇ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ದೇಶದ ಸಂಸ್ಕೃತಿ, ಸಂಪ್ರದಾಯ ಇಡಿ ವಿಶ್ವದಲ್ಲೇ ಶ್ರೇಷ್ಟವಾಗಿದೆ. ವಿದೇಶಿ ಸಂಸ್ಕೃತಿಗೆ ಮಾರುಹೋಗಿ ನಮ್ಮತನ ಮರೆಯಬಾರದು ಎಂದರು. ಚಿಂತಕ ಡಾ.ರಾಜಶೇಖರ ಪಾಟೀಲ […]

Continue Reading

ಮಹಿಳಾ ಸಬಲೀಕರಣಕ್ಕೆ ನಾಂದಿ ಹಾಡಿದ ಬಸವಣ್ಣ: ಡಾ.ಭಾಗಿರತಿ ಎಚ್

ಸುದ್ದಿ ಸಂಗ್ರಹ ಕಲಬುರಗಿ ವಿಶ್ವಗುರು ಬಸವಣ್ಣನವರು 800 ವರ್ಷಗಳ ಹಿಂದೆಯೇ ಅನುಭವ ಮಂಟಪ ಸ್ಥಾಪಿಸಿ, ಮಹಿಳೆಯರಿಗೆ ಸ್ವಾತಂತ್ರ್ಯ, ಸಮಾನ ಅವಕಾಶ, ಹಕ್ಕುಗಳು, ಆತ್ಮಗೌರವ ನೀಡುವುದು, ಲಿಂಗ ಸಮಾನತೆ, ಜಾತಿ ಪದ್ಧತಿಯ ನಿರ್ಮೂಲನೆಯಂತಹ ಕ್ರಾಂತಿಕಾರಕ ಕಾರ್ಯಗಳನ್ನು ಮಾಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ನಾಂದಿ ಹಾಡಿದ್ದಾರೆ ಎಂದು ಪ್ರಗತಿಪರ ಮಹಿಳಾ ಚಿಂತಕಿ ಡಾ.ಭಾಗಿರತಿ ಎಚ್ ಗುಡ್ಡೆವಾಡಿ  ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಶೆಟ್ಟಿ ಕಾಂಪೆಕ್ಸ್ ಎದುರುಗಡೆಯ ಶಾರದಾ ವಿವೇಕ ಮಹಿಳಾ‌ ಪದವಿ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ […]

Continue Reading

ಸಂವಿಧಾನ ಮುಸ್ಲಿಮರಿಗೆ ರಕ್ಷಾ ಕವಚವಾಗಿ ನಿಂತಿದೆ: ಡಾ.ಫಾರುಕ್ ಮಣ್ಣೂರ

ಸುದ್ದಿ ಸಂಗ್ರಹ ಶಹಾಬಾದ ಡಾ.ಬಿ.ಆರ್ ಅಂಬೇಡ್ಕರ್ ಅವರು ರೂಪಿಸಿದ ಭಾರತದ ಸಂವಿಧಾನ ದೇಶದ ಅಲ್ಪಸಂಖ್ಯಾತರಿಗೆ ಕೇವಲ ಒಂದು ಕಾನೂನಿನ ಪುಸ್ತಕವಲ್ಲ, ಅದು ಅವರ ಹಕ್ಕುಗಳ ಭದ್ರಕೋಟೆಯಾಗಿ ಮತ್ತು ರಕ್ಷಣಾ ಕವಚವಾಗಿ ನಿಂತಿದೆ ಎಂದು ಮಣ್ಣೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ.ಫಾರುಕ್ ಮಣ್ಣೂರ ಹೇಳಿದರು. ನಗರದ ವಾರ್ಡ ನಂ.27 ಬಡಾವಣೆಯ ಜಯಂತ್ಯೋತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ ರವರ 135ನೇ ಜಯಂತಿಯ ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದ 25ರಿಂದ 28ನೇ ವಿಧಿಯ ಪ್ರಕಾರ ಪ್ರತಿಯೊಬ್ಬ ನಾಗರಿಕನಿಗೂ […]

Continue Reading

ಡಿಜಿಟಲ್ ತಂತ್ರಜ್ಞಾನದಿಂದ ಯುವಕರಿಗೆ ಉದ್ಯೋಗವಕಾಶ: ವಾಸುದೇವ ಚವ್ಹಾಣ‌

ಸುದ್ದಿ ಸಂಗ್ರಹ ಶಹಾಬಾದ ಇಂದಿನ ಆಧುನಿಕ ಯುಗವು ಡಿಜಿಟಲ್ ತಂತ್ರಜ್ಞಾನಗಳ ಯುಗವಾಗಿದ್ದು, ಡಿಜಿಟಲ್ ತಂತ್ರಜ್ಞಾನ ಕೇವಲ ಕಲಿಕೆಗೆ ಸೀಮಿತವಾಗದೆ, ಅಪಾರ ಉದ್ಯೋಗಾವಕಾಶಗಳಗಣಿಯಾಗಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ವಾಸುದೇವ ಚವ್ಹಾಣ ಹೇಳಿದರು. ಮಂಗಳವಾರ ನಗರದ ಹೈ-ಕ ಶಿಕ್ಷಣ ಸಂಸ್ಥೆಯ ಎಸ್‌.ಎಸ್ ಮರಗೋಳ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದಲ್ಲಿ ‘ಯುವಕರಿಗೆ ಡಿಜಿಟಲ್ ಉದ್ಯೋಗ ಅವಕಾಶಗಳು’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಅವರು, ವಿದ್ಯಾರ್ಥಿಗಳು ಕೇವಲ ಪದವಿ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೆ, ಮಾರುಕಟ್ಟೆಯ […]

Continue Reading

17 ಪ್ರಕರಣ: 31.41 ಲಕ್ಷ ಮೌಲ್ಯದ ಸ್ವತ್ತು ಜಪ್ತಿ

ಸುದ್ದಿ ಸಂಗ್ರಹ ಕಲಬುರಗಿಶಹಾಬಾದ್ ಮತ್ತು ಆಳಂದ ಉಪವಿಭಾಗದ ವಿವಿಧಪೊಲೀಸ್ ಠಾಣೆಗಳ ವ್ಯಾಪ್ತಿಯ 17 ಕಳವು ಪ್ರಕರಣಗಳನ್ನು ಭೇದಿಸಿರುವ ಜಿಲ್ಲಾ ಪೊಲೀಸರು, 6 ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು 31.41 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಕುಖ್ಯಾತ ಮನೆಗಳ್ಳರ ಬಂಧನ: ಕಾಳಗಿ ಪೊಲೀಸ್ ಠಾಣೆ ವ್ಯಾಪ್ತಿಯ ಟೆಂಗಳಿ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣ ಭೇದಿಸಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆಳಂದ ತಾಲೂಕಿನ ಕಮಸರನಾಯಕ ತಾಂಡಾದ ಅಪ್ಪಾಜಿ ಗಂಗಾರಾಮ ಚವ್ಹಾಣ (22) ಹಾಗೂ ಮಿಥುನ ಲಕ್ಷ್ಮಣ […]

Continue Reading

ಪಾರ್ಕಿನ್ಸನ್ ಕಾಯಿಲೆಯ ಬಗ್ಗೆ ಮುಂಜಾಗ್ರತೆ ವಹಿಸುವುದು ಅಗತ್ಯ: ಡಾ.ರಾಜಶೇಖರ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ಅನುವಂಶೀಯತೆ, ಪರಿಸರದ ಅಂಶಗಳು, ವಯಸ್ಸು, ಅತಿಯಾದ ಒತ್ತಡ, ಅನಾರೋಗ್ಯಕರ ಜೀವನಶೈಲಿ, ಜಡತ್ವ ಸೇರಿದಂತೆ ಇನ್ನಿತರ ಕಾರಣಗಳಿಂದ ಪಾರ್ಕಿನ್ಸನ್ ಕಾಯಿಲೆ ಬರುತ್ತದೆ ಎಂದು ವೈದ್ಯ ಡಾ.ರಾಜಶೇಖರ ಪಾಟೀಲ ಸಲಹೆ ನೀಡಿದರು. ನಗರದ ಆಳಂದ ರಸ್ತೆಯ, ಸಂತೋಷ ಕಾಲೋನಿ ಕ್ರಾಸ್ ಸಮೀಪದ ‘ಬಸವಗಂಗಾ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಪಾರ್ಕಿನ್ಸನ್ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ನೇರವಾಗಿ ಕೇಂದ್ರ ನರಮಂಡಲದ ಮೇಲೆ ದುಷ್ಪರಿಣಾಮ ಬೀರುವ ಮೂಲಕ ಮೆದಳು, ದೇಹದ ಚಲನೆಗೆ ತೊಂದರೆಯುನ್ನುಂಟು […]

Continue Reading

ಭಂಕೂರ: ಡಾ.ಅಂಬೇಡ್ಕರ್‌ ಜಯಂತೋತ್ಸವ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಸುದ್ದಿ ಸಂಗ್ರಹ ಶಹಾಬಾದ್ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಸುರೇಶ್ ಮೆಂಗನ್ ಅವರ ಅಧ್ಯಕ್ಷತೆಯಲ್ಲಿ ಭಂಕೂರ ಗ್ರಾಮದ ಬುದ್ಧ ಬಸವ ಡಾ.ಬಿ.ಆರ್ ಅಂಬೇಡ್ಕರ್ ಜಯಂತೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು ಎಂದು ಭರತ್ ಧನ್ನಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಯಂತೋತ್ಸವ ಸಮಿತಿಯ ಗೌರವಾಧ್ಯಕ್ಷ ಶಿವಲಿಂಗಪ್ಪ ಗುಜ್ಜನ್, ಅಧ್ಯಕ್ಷ ನಾಗರಾಜ್ ಕೆ ಧನ್ನಾ, ಉಪಾಧ್ಯಕ್ಷ ಸಿದ್ದಾರ್ಥ್ ಧನ್ನಾ, ಸುನಿಲ್ ಕಟ್ಟಿಮನಿ, ನಾಗರಾಜ್ ವಗ್ಗನ್, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಸರಡಗಿ, ಸಹ ಕಾರ್ಯದರ್ಶಿ ತೇಜಶ್ ಧನ್ನಾ, ಸಹ […]

Continue Reading

ದೇಶದ ರಕ್ಷಣೆಯಲ್ಲಿ ಸಿಆರ್‌ಪಿಎಫ್ ಕೊಡುಗೆ ಅನನ್ಯ‌

ಸುದ್ದಿ ಸಂಗ್ರಹ ಕಲಬುರಗಿಕೇಂದ್ರೀಯ ಮೀಸಲು ಪೊಲೀಸ್ ಪಡೆಯು ದೇಶದ ಪ್ರಮುಖ ಆಂತರಿಕ ಭದ್ರತಾ ಪಡೆಯಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವುದು, ದಂಗೆ ಅಥವಾ ಭಯೋತ್ಪಾದನೆ ನಿಗ್ರಹ, ನಕ್ಸಲ್ ವಿರೋಧಿ ಕಾರ್ಯಾಚರಣೆ ಮತ್ತು ಚುನಾವಣೆ ಸಂದರ್ಭದಲ್ಲಿ ಭದ್ರತೆ ಒದಗಿಸುವ ಮೂಲಕ ದೇಶದ ರಕ್ಷಣೆಯಲ್ಲಿ ಅನನ್ಯವಾದ ಪಾತ್ರ ವಹಿಸಿದೆ ಎಂದು ಸಿಆರ್‌ಪಿಎಫ್ ಮಾಜಿ ಮುಖ್ಯ ಪೇದೆ ಚಂದ್ರಕಾಂತ ಭದ್ರಪೆ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ […]

Continue Reading

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಇಲ್ಲ, ವದಂತಿಗೆ ಕಿವಿಗೊಡಬೇಡಿ: ಆಹಾರ ಇಲಾಖೆ

ಸುದ್ದಿ ಸಂಗ್ರಹ ಬೆಂಗಳೂರು ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಇಲ್ಲ. ವದಂತಿಗಳಿಗೆ ಯಾರು ಕಿವಿಗೊಡಬಾರದು ಎಂದು ಆಹಾರ ಇಲಾಖೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ. ರಾಜ್ಯದ ವಿವಿಧ ಆಟೋ ಗ್ಯಾಸ್ ಬಂಕ್‌ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿ ಹರಡುತ್ತಿದೆ. ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು ಬಂಕ್‌ಗಳ ಮುಂದೆ ಸುದೀರ್ಘ ಸರದಿ ಸಾಲಿನಲ್ಲಿ ನಿಲ್ಲುತ್ತಿರುವ ಅಂಶ ಸರ್ಕಾರದ ಗಮನಕ್ಕೆ ಬಂದಿದೆ. ಈ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಕೇವಲ ವದಂತಿಗಳಾಗಿದ್ದು, […]

Continue Reading