ಚುನಾವಣಾ ಚಾಣಕ್ಯ ಅಮಿತ್‌ ಶಾ ಭವಿಷ್ಯ ಮತ್ತೆ ನಿಜವಾಯಿತು

ನವದೆಹಲಿ: ಚುನಾವಣಾ ಚಾಣಕ್ಯ ಅಮಿತ್‌ ಶಾ ಭವಿಷ್ಯ ಮತ್ತೆ ನಿಜವಾಗಿದ್ದು ಎನ್‌ಡಿಎ ಮೈತ್ರಿಕೂಟ 180ಕ್ಕೂ ಹೆಚ್ಚು ಸ್ಥಾನಗಳು ಗೆಲ್ಲುವತ್ತ ಮುಖ ಮಾಡಿದೆ. ನ.8 ರಂದು ಪೂರ್ಣಿಯಾದಲ್ಲಿ ಮಾತನಾಡಿದ ಅಮಿತ್‌ ಶಾ, ಒಂದು ಕಡೆ ಚುದುರಿದ ಘಟ್‌ಬಂಧನ್‌ ಇದ್ದರೆ ಮತ್ತೊಂದು ಕಡೆ ಐದು ಪಾಂಡವರಂತಿರುವ ಎನ್‌ಡಿಎ ಇದೆ. ಈಗಾಗಲೇ ಬಿಹಾರ ಅರ್ಧದಷ್ಟು ಜನ ಮತ ಚಲಾಯಿಸಿದ್ದು ಎನ್‌ಡಿಎ 160ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೆ ಸರ್ಕಾರ ರಚನೆ ಮಾಡಲಿದೆ ಎಂದು ಹೇಳಿದ್ದರು. ಇದಕ್ಕೂ ಮೊದಲು ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ […]

Continue Reading

ಬಂಧಿತ ಉಗ್ರ, ವೈದ್ಯ ಆದಿಲ್‌ಗೆ ಸಿಗುತ್ತಿತ್ತು ತಿಂಗಳಿಗೆ 5 ಲಕ್ಷ ರೂ. ಸಂಬಳ

ನವದೆಹಲಿ: ಶ್ರೀನಗರದಲ್ಲಿ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯನ್ನು ಬೆಂಬಲಿಸುವ ಪೋಸ್ಟರ್‌ಗಳನ್ನು ಹಾಕಿ ಬಂಧನಕ್ಕೆ ಒಳಗಾಗಿ ಫರಿದಾಬಾದ್‌ ಟೆರರ್‌ ಗ್ಯಾಂಗ್‌ ಬಗ್ಗೆ ಬಾಯ್ಬಿಟ್ಟ ಕಾಶ್ಮೀರಿ ವೈದ್ಯ ಆದಿಲ್ ಅಹ್ಮದ್ ರಾಥರ್‌ಗೆ ತಿಂಗಳಿಗೆ 5 ಲಕ್ಷ ರೂ. ಸಂಬಳ ಸಿಗುತ್ತಿತ್ತು. ದಕ್ಷಿಣ ಕಾಶ್ಮೀರದ ಖಾಜಿಗುಂಡ್ ನಿವಾಸಿಯಾಗಿರುವ ಆದಿಲ್ ಅಹ್ಮದ್ ರಾಥರ್ ಅಕ್ಟೋಬರ್ 2024 ರವರೆಗೆ ಅನಂತನಾಗ್‌ನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ (ಜಿಎಂಸಿ) ಹಿರಿಯ ರೆಸಿಡೆಂಟ್‌ ಆಗಿ ಕೆಲಸ ಮಾಡಿದ್ದ. ಬಳಿಕ ಈ ವರ್ಷದ ಮಾರ್ಚ್‌ನಲ್ಲಿ ಉತ್ತರ ಪ್ರದೇಶದ ಸಹರಾನ್‌ಪುರಕ್ಕೆ ತೆರಳಿದ್ದನು. ಮೊದಲು […]

Continue Reading

98ನೇ ವಸಂತಕ್ಕೆ ಕಾಲಿಟ್ಟ ಎಲ್‌.ಕೆ ಅಡ್ವಾಣಿಗೆ ಮೋದಿ ಶುಭ ಹಾರೈಕೆ

ನವದೆಹಲಿ: 98ನೇ ವಸಂತಕ್ಕೆ ಕಾಲಿಟ್ಟ ಮಾಜಿ ಉಪ ಪ್ರಧಾನಿ ಎಲ್.ಕೆ ಅಡ್ವಾಣಿ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಶುಭ ಹಾರೈಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಅಡ್ವಾಣಿಯವರು ಒಬ್ಬ ಮೇದಾವಿ ರಾಜಕಾರಣಿಯಾಗಿದ್ದಾರೆ. ಅವರ ಜೀವನ ಭಾರತದ ಪ್ರಗತಿಗಾಗಿ ಸಮರ್ಪಿತವಾಗಿದೆ. ದೇಶಕ್ಕಾಗಿ ಅವರು ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ ಎಂದು ಅವರ ಸೇವೆಯನ್ನು ಸ್ಮರಿಸಿದ್ದಾರೆ. ಅವರ ಕೊಡುಗೆಗಳು ಭಾರತದ ಪ್ರಜಾಪ್ರಭುತ್ವ ಮತ್ತು ಸಾಂಸ್ಕೃತಿಕ ಕೇತ್ರದಲ್ಲಿ ಅಳಿಸಲಾಗದ ಗುರುತನ್ನು ಉಳಿಸಿವೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಪ್ರಧಾನಿಗಳು […]

Continue Reading

ಕನ್ನಡಿಗರಿಗೆ ಕನ್ನಡದಲ್ಲೆ ರಾಜ್ಯೋತ್ಸವ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ: ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಕನ್ನಡದಲ್ಲೇ ಎಕ್ಸ್‌ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಇಂದು ನಾವು ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೆವೆ ಎಂದು ತಿಳಿಸಿದ್ದಾರೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೆವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕದ ಜನರು ಸಂತೋಷ ಮತ್ತು ಆರೋಗ್ಯದಿಂದ […]

Continue Reading

ಮೊಂಥಾ ಎಫೆಕ್ಟ್: 100ಕ್ಕೂ ಹೆಚ್ಚು ರೈಲುಗಳು, 35 ವಿಮಾನಗಳ ಹಾರಾಟ ರದ್ದು

ನವದೆಹಲಿ: ಮೊಂಥಾ ಚಂಡಮಾರುತ ಅಪ್ಪಳಿಸಿದ ಹಿನ್ನೆಲೆ ಭಾರತೀಯ ರೈಲ್ವೆ 100ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಿದೆ. ಜೊತೆಗೆ 30ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗಿವೆ. ಚಂಡಮಾರುತದ ಮುನ್ನೆಚ್ಚರಿಕೆ ಕ್ರಮವಾಗಿ, ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ಭಾರತೀಯ ರೈಲ್ವೆ 100ಕ್ಕೂ ಹೆಚ್ಚು ರೈಲು ಸೇವೆಗಳನ್ನು ರದ್ದುಗೊಳಿಸಿದೆ. ಜೊತೆಗೆ ಹಲವಾರು ರೈಲುಗಳ ಮಾರ್ಗದಲ್ಲಿಯೂ ಬದಲಾವಣೆ ಮಾಡಿದ್ದು, ಕೆಲವು ರೈಲುಗಳ ಸಮಯವನ್ನು ಮರುನಿಗದಿಪಡಿಸಿದೆ. ಆಂಧ್ರಪ್ರದೇಶ ಕರಾವಳಿ ಪ್ರದೇಶಗಳಾದ ಕಾಕಿನಾಡ, ಭೀಮಾವರಂ, ವಿಜಯವಾಡ, ರಾಜಮಂಡ್ರಿ ಮತ್ತು ವಿಶಾಖಪಟ್ಟಣಂ ಕಡೆ ಭೂಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆ […]

Continue Reading

ಮಾರ್ಚ್‌ ವೇಳೆಗೆ 3,500 ಹುದ್ದೆ ಭರ್ತಿ: ಎಸ್‌ಬಿಐ

ನವದೆಹಲಿ: ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಮುಂದಿನ ಐದು ತಿಂಗಳೊಳಗೆ ಸುಮಾರು 3,500 ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಯೋಜಿಸಿದೆ. ಜೂನ್ ತಿಂಗಳಿನಲ್ಲಿ 505 ಪ್ರೊಬೇಷನರಿ ಅಧಿಕಾರಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿತ್ತು. ಈಗ ಇಷ್ಟೇ ಸಂಖ್ಯೆಯ ಹುದ್ದೆಗಳಿಗೆ ಮತ್ತೆ ನೇಮಕಾತಿ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದ್ದು, ಅರ್ಜಿ ಸ್ವೀಕರಿಸಲಾಗಿದೆ. ದೇಶದಾದ್ಯಂತ ಬ್ಯಾಂಕ್‌ನ ಕಾರ್ಯಾಚರಣೆ ಹೆಚ್ಚಿಸಲು ಮತ್ತು ಗ್ರಾಹಕರಿಗೆ ಉತ್ತಮ ಸೇವೆ ನೀಡಲು ಈ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಬ್ಯಾಂಕ್‌ನ ಉಪ ವ್ಯವಸ್ಥಾಪಕ ನಿರ್ದೇಶಕ (ಮಾನವ ಸಂಪನ್ಮೂಲ ವಿಭಾಗ) ಮತ್ತು ಮುಖ್ಯ ಅಭಿವೃದ್ಧಿ ಅಧಿಕಾರಿ […]

Continue Reading

ಅತಿವೃಷ್ಟಿ: ಮಹಾರಾಷ್ಟ್ರಕ್ಕೆ 1,566.40 ಕೋಟಿ ರೂ. ಕರ್ನಾಟಕಕ್ಕೆ ಕೇವಲ 384 ಕೋಟಿ

ನವದೆಹಲಿ: ಅತಿವೃಷ್ಟಿಯಿಂದ ಹಾನಿಯುಂಟಾಗಿರುವ ಹಿನ್ನೆಲೆ ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವಾಲಯವು ಎಸ್‌ಡಿಆರ್‌ಎಫ್‌ನಿಂದ 2ನೇ ಕಂತಿನ ಹಣ ಬಿಡುಗಡೆ ಮಾಡಿದೆ. ನೈಋತ್ಯ ಮುಂಗಾರಿನಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಮಹಾರಾಷ್ಟ್ರ ಹಾಗೂ ಕರ್ನಾಟಕಕ್ಕೆ ರಾಜ್ಯ ವಿಪತ್ತು ಪರಿಹಾರ ನಿಧಿ ಅಡಿಯಲ್ಲಿ ಒಟ್ಟು 1,950 ಕೋಟಿ ಮುಂಗಡೆಯಾಗಿ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಸ್ವತಃ ಗೃಹ ಸಚಿವ ಅಮಿತ್ ಶಾ ಅವರು ಕನ್ನಡಲ್ಲೇ ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕಕ್ಕೆ ಕೇವಲ 384.40 ಕೋಟಿ ರೂ.ಸಿಕ್ಕಿದ್ದರೆ, ಮಹಾರಾಷ್ಟ್ರಕ್ಕೆ ಬರೋಬ್ಬರಿ 1,566.40 ಕೋಟಿ ರೂ. ನೀಡಲಾಗಿದೆ. […]

Continue Reading

ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ

ನವದೆಹಲಿ: ರೈಲು ಪ್ರಯಾಣ ಪ್ರಿಯರಿಗೆ ರೈಲ್ವೆ ಇಲಾಖೆ ಗುಡ್‌ನ್ಯೂಸ್ ನೀಡಿದೆ. ಇದೀಗ ಬುಕ್ ಆದ ಟಿಕೆಟ್‌ನ ದಿನಾಂಕ ಬದಲಾವಣೆಗೆ ಜನವರಿಯಿಂದ ಅವಕಾಶ ನೀಡಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಇಲ್ಲಿಯವರೆಗೆ ಒಮ್ಮೆ ರೈಲ್ವೆ ಟಿಕೆಟ್ ಬುಕ್ ಮಾಡಿದರೆ ಪ್ರಯಾಣದ ದಿನಾಂಕ ಬದಲಾವಣೆಗೆ ಅವಕಾಶ ಇರಲಿಲ್ಲ. ಆದರೆ ಇದೀಗ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ ಇರಲಿದೆ. ಮೊದಲೆಲ್ಲ ಟಿಕೆಟ್ ಬುಕಿಂಗ್ ಆದರೆ ದಿನಾಂಕ ಬದಲಾವಣೆಗೆ ಮೊದಲಿನ ಬುಕಿಂಗ್ ರದ್ದು ಮಾಡಿ, […]

Continue Reading

ಎಲ್‌ಪಿಜಿ ಸಿಲಿಂಡರ್ ಡೆಲಿವರಿಗಾಗಿ ಬರಲಿದೆ ಹೊಸ ವ್ಯವಸ್ಥೆ: ಇದು ಗ್ರಾಹಕರಿಗೆ ಖುಷಿ ಕೊಡುವ ವಿಚಾರ

ನವದೆಹಲಿ: ಎಲ್‌ಪಿಜಿ ಸಿಲಿಂಡರ್‌ ವಿತರಣೆಯಲ್ಲಿ ವಿಳಂಬವನ್ನು ತಪ್ಪಿಸಲು ಕೇಂದ್ರ ಸರಕಾರ ಮುಂದಾಗಿದ್ದು, ಇದಕ್ಕಾಗಿ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳ ನಡುವೆ ಏಕೀಕೃತ ವಿತರಣಾ ವ್ಯವಸ್ಥೆ ಜಾರಿಗೊಳಿಸಲು ಚಿಂತನೆ ನಡೆಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ನಿಯಂತ್ರಣ ಮಂಡಳಿಯು ಹೊಸ ‘ಎಲ್‌ಪಿಜಿ ಇಂಟರ್‌- ಆಪರೆಬಲ್‌ ಸರ್ವೀಸ್ ಡೆಲಿವರಿ ಫ್ರೇಮ್‌ವರ್ಕ್’ ಪರಿಕಲ್ಪನೆಯಡಿ ಈ ಉಪಕ್ರಮ ಜಾರಿಗೊಳಿಸಲು ಮುಂದಾಗಿದ್ದು, ಇದರ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸುತ್ತಿದೆ. ಪ್ರಸ್ತಾವಿತ ನೀತಿಯ ಅಡಿಯಲ್ಲಿ, ಮೂರು ಸರಕಾರಿ ಸ್ವಾಮ್ಯದ ಕಂಪನಿಗಳಾದ ಇಂಡೇನ್‌, ಭಾರತ್‌ ಗ್ಯಾಸ್‌ […]

Continue Reading

ನ.15 ರಿಂದ ಹೊಸ ಟೋಲ್ ನಿಯಮ: ಫಾಸ್ಟ್‌ಟ್ಯಾಗ್ ಇಲ್ಲದವರಿಗೆ‌ ಗುಡ್‌ನ್ಯೂಸ್‌, UPI ಪಾವತಿದಾರರಿಗೆ ಭಾರಿ ರಿಯಾಯಿತಿ

ನವದೆಹಲಿ: ಟೋಲ್ ಪಾವತಿಗಳಿಗೆ ಸಂಬಂಧಿಸಿದಂತೆ ಡಿಜಿಟಲ್‌ ಪಾವತಿಯನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ ಮತ್ತೊಂದು ಹೊಸ ನಿಯಮ ಪರಿಚಯಿಸಿದೆ. ಇದರಿಂದ ಫಾಸ್ಟ್‌ಟ್ಯಾಗ್‌ ಹೊಂದಿಲ್ಲದವರು ಯುಪಿಐ ಪಾವತಿ ಮೂಲಕವೂ ರಿಯಾಯಿತಿ ಗಳಿಸಬಹುದಾಗಿದೆ. ನವೆಂಬರ್‌ 15ರಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ ಹೊಂದದಿರುವ ವಾಹನಗಳು ನವೆಂಬರ್ 15ರಿಂದ ನಗದು ರೂಪದಲ್ಲಿ ಟೋಲ್ ಶುಲ್ಕ ಪಾವತಿಸಲು ಬಯಸಿದರೆ ಅವು ಎರಡುಪಟ್ಟು ಹೆಚ್ಚು ಹಣ ಪಾವತಿಸಬೇಕಾಗುತ್ತದೆ. ಆದರೆ ಯುಪಿಐ ರೂಪದಲ್ಲಿ ಶುಲ್ಕ ಪಾವತಿಸುವವರಿಗೆ ನಿಗದಿಗಿಂತ 1.25 ಪಟ್ಟು ಅಧಿಕ […]

Continue Reading