ವಾಡಿ: ಬಿಜೆಪಿ ಕಚೇರಿಯಲ್ಲಿ ಶಶೀಲ್ ನಮೋಶಿ ಅವರಿಗೆ ಸನ್ಮಾನ

ವಾಡಿ: ಪಟ್ಟಣದ ಬಿಜೆಪಿ ಮಹಾಶಕ್ತಿ ಕೇಂದ್ರದ ಕಚೇರಿಗೆ ಆಗಮಿಸಿದ ವಿಧಾನ ಪರಿಷತ್ ಸದಸ್ಯರು ಹಾಗೂ ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಶೀಲ್ ಜಿ ನಮೋಶಿ ಅವರನ್ನು ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಸನ್ಮಾನಿಸಿ, ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ, ಮುಖಂಡರಾದ ಶರಣಗೌಡ ಚಾಮನೂರ, ಹರಿ ಗಲಾಂಡೆ, ಶಿವಶಂಕರ ಕಾಶೆಟ್ಟಿ, ಶಿವರಾಮ ಜಾಧವ, ರಾಜಶೇಖರ ದೂಪದ, ಮಲ್ಲಿಕಾರ್ಜುನ ಸಾತಖೇಡ, ಅಯ್ಯಣ್ಣ ದಂಡೋತಿ, ಪ್ರೇಮ ರಾಠೋಡ, ಯಂಕಮ್ಮ ಗೌಡಗಾಂವ, […]

Continue Reading

ಸಾಹಸದ ಸಂಕೇತ ರಾಣಿ ಚೆನ್ನಮ್ಮ: ನಮೋಶಿ

ವಾಡಿ: ಬಿಜೆಪಿ ಕಛೇರಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸಲಾಯಿತು. ವಿಧಾನ ಪರಿಷತ್ ಸದಸ್ಯ ಹಾಗೂ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಶೀಲ್ ಜಿ ನಮೋಶಿ ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ ಭಾರತದ ಇತಿಹಾಸದಲ್ಲಿ ನಮ್ಮ ವೀರತ್ವದ ಸಂಕೇತ ಎಂದರು. ರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಕಿತ್ತೂರು ಚೆನ್ನಮ್ಮ 15ನೇ ವಯಸ್ಸಿನಲ್ಲೇ ರಾಜಾ ಮಲ್ಲಸರ್ಜ ಎಂಬ ದೇಸಾಯಿ ಮನೆತನದವರನ್ನು ವಿವಾಹವಾದರು. ನಂತರ ಕಿತ್ತೂರು ರಾಣಿ ಚನ್ನಮ್ಮ ಎಂಬ ಕರೆಯಲ್ಪಟ್ಟರು, ಅವರು […]

Continue Reading

ಚಿತ್ತಾಪುರ: ಆರ್‌ಎಸ್‌ಎಸ್ ಅಳವಡಿಸಿದ್ದ ಬ್ಯಾನರ್, ಭಗವಾಧ್ವಜ ತೆರವು

ಚಿತ್ತಾಪುರ: ದಿ.19 ರಂದು ರವಿವಾರ ಪಟ್ಟಣದಲ್ಲಿ ಪಥ ಸಂಚಲನ ಕಾರ್ಯಕ್ರಮ ಆಯೋಜನೆ ಮಾಡಿದ ಆರ್‌ಎಸ್‌ಎಸ್‌ ಕಾರ್ಯಕರ್ತರು ಮುಖ್ಯ ಬೀದಿಗಳಲ್ಲಿ ಅಳವಡಿಸಿದ್ದ ಬಂಟಿಂಗ್ಸ್, ಭಗವಾಧ್ವಜ ಮತ್ತು ಕಟೌಟ್‌ಗಳನ್ನು ಶುಕ್ರವಾರ ರಾತ್ರಿ ಪುರಸಭೆ ಆಡಳಿತವು ಪೊಲೀಸ್ ಬಿಗಿ ಭದ್ರತೆಯಲ್ಲಿ ತೆರವುಗೊಳಿಸಿದೆ. ಬ್ಯಾನರ್ ಮತ್ತು ಕಟೌಟ್ ತೆರವು ಮಾಡುತ್ತಿರುವ ವಿಷಯ ತಿಳಿಯುತ್ತಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಲಾಡ್ಜಿಂಗ್ ಕ್ರಾಸ್‌ಗೆ ದೌಡಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪಥ ಸಂಚಲನಕ್ಕೆ ಅನುಮತಿ ಕೋರಿ ಬಂದಿರುವ ಅರ್ಜಿ ಕುರಿತು ವರದಿ ನೀಡುವಂತೆ […]

Continue Reading

ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ ಖಂಡಿಸಿ: ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ

ಸುದ್ದಿ ಸಂಗ್ರಹ ಶಹಾಬಾದ ಸರ್ಕಾರಿ ಸ್ಥಳಗಳಲ್ಲಿ ಹಾಗೂ ಶಾಲೆಗಳ ಜಾಗದಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿರ್ಬಂಧಿಸುವಂತೆ ಕೋರಿ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ದುಷ್ಕರ್ಮಿಗಳು ಕರೆ ಮಾಡಿ ಬೆದರಿಸುತ್ತಿರುವುದುನ್ನು ಖಂಡಿಸಿ ಶುಕ್ರವಾರ ಬೆಳಗ್ಗೆ ನಗರದ ವಾಡಿ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರೆ 150ರ ಮೇಲೆ ಬ್ಲಾಕ್ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ಮಾಡಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.    ಕಲಬುರಗಿ ಕಾಡಾ ಅಧ್ಯಕ್ಷ ಡಾ.ಎಮ್.ಎ ರಶೀದ ಮತ್ತು ಜಿ.ಪಂ ಮಾಜಿ ಸದಸ್ಯ ಶಿವಾನಂದ ಪಾಟೀಲ್ ಮಾತನಾಡಿ, […]

Continue Reading

ಸಚಿವ ಪ್ರಿಯಾಂಕ್ ಖರ್ಗೆ ಬೆಂಬಲಿಸಿ ಚಿತ್ತಾಪುರ ಬಂದ್

ಚಿತ್ತಾಪುರ: ಸಾರ್ವಜನಿಕ ಸ್ಥಳಗಳಲ್ಲಿ ಆರೆಸ್ಸೆಸ್ಚಟುವಟಿಕೆಗಳನ್ನು ನಿಷೇಧಿಸುವಂತೆ ಸಚಿವ ಪ್ರಿಯಾಂಕ್ಖರ್ಗೆ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವಹಿನ್ನೆಲೆಯಲ್ಲಿ ಅವರಿಗೆ ಬೆದರಿಕೆ ಕರೆಗಳು ಬಂದಿರುವ ಬೆನ್ನಲ್ಲೇ ಸಚಿವ ಖರ್ಗೆ ಅವರನ್ನು ಬೆಂಬಲಿಸಿ, ಕಾಂಗ್ರೆಸ್ ಮುಖಂಡರು ಚಿತ್ತಾಪುರ ಬಂದ್ ಮಾಡಲಾಯಿತು, ಚಿತ್ತಾಪುರ ಬಂದ್’ಗೆ ಉತ್ತಮ ಸ್ಪಂದನೆ ವ್ಯಕ್ತವಾಯಿತು. , ಬ್ಲಾಕ್ ಕಾಂಗ್ರೆಸ್ ವತಿಯಿಂದ ಕರೆ ನೀಡಿದ್ದ ಬಂದ್ ಕರೆಗೆ ಉತ್ತಮ ಸ್ಪಂದನೆ ದೊರಕಿದೆ. ಚಿತ್ತಾಪುರ ಪಟ್ಟಣದಲ್ಲಿರುವ ಬಹುತೇಕ ಅಂಗಡಿಗಳು ಸ್ವಯಂಪ್ರೇರಿತವಾಗಿ ಮುಚ್ಚಿದ್ದವು. ಅಲ್ಲದೆ ಯಾವುದೆ ಬಸ್ ಗಳು ರಸ್ತೆಗೆ ಇಳಿಯಲಿಲ್ಲ. ಬಂದ್‌ ಕರೆ […]

Continue Reading

ಕ್ರೀಡಾಕೂಟದಲ್ಲಿ ಬಾಲಕಿಯರ ಅಪ್ರತಿಮ ಸಾಧನೆ: ಚಂದರ್ ಚವ್ಹಾಣ

ಚಿತ್ತಾಪುರ: ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 14 ವರ್ಷದ ಬಾಲಕಿಯರ ಕಬ್ಬಡಿ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗಿಯ ಮಟ್ಟಕ್ಕೆ ಆಯ್ಕೆಯಾಗಿ ಸಾಧನೆಗೈದಿದ್ದಾರೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ಚಂದರ್ ಚವ್ಹಾಣ ಹೇಳಿದರು. ಮಕ್ಕಳ ಸಾಧನೆಗೆ ಶಾಲೆಯ ಮುಖ್ಯಗುರು ಸಂತೋಷಕುಮಾರ, ದೈಹಿಕ ಶಿಕ್ಷಕಿ ರಮಾಬಾಯಿ, ಶಿಕ್ಷಕರಾದ ಜಯಲಕ್ಷ್ಮಿ ಮತ್ತು ಶಿವರಾಜ್ ಪಾಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ.

Continue Reading

ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ

ಕಲಬುರಗಿ: ಜೇವರ್ಗಿ ಪಟ್ಟಣದ ಕೋರ್ಟ್ ಎದುರುಗಡೆಯಿರುವ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜ್’ನಲ್ಲಿ ಶನಿವಾರ ಜರುಗಿದ “ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ” ಕಾರ್ಯಕ್ರಮವನ್ನು ಪ್ರತಿಭಾನ್ವಿತ ವಿದ್ಯಾರ್ಥಿನಿ ಸಾಕ್ಷತಾ ಬಿರಾದಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರಾದ ಯಶವಂತ ಗಾಣಿಗೇರ್, ಶಾರದಾ ಆಲಗೂರ್, ಎಚ್.ಬಿ ಪಾಟೀಲ್, ರಾಜಶೇಖರ ಹಿರೇಗೌಡ ಮತ್ತು ಶಿವರುದ್ರ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Continue Reading

ವಾಡಿ ಪಟ್ಟಣದಲ್ಲಿ ಒಂದು ವಾರದಿಂದ ನೀರು ಸರಬರಾಜು ಮಾಡದ ಪುರಸಭೆ: ನೀರಿಗಾಗಿ ನಿವಾಸಿಗರ ಪರದಾಟ

ವಾಡಿ: ಪಟ್ಟಣದ ಕೆಲವು ವಾರ್ಡಗಳಲ್ಲಿ ಕಳೆದ ಒಂದು ವಾರದಿಂದ ಪುರಸಭೆ ನೀರು ಸರಬರಾಜು ಮಾಡದಿರುವುದರಿಂದ ವಾರ್ಡ್ ನಿವಾಸಿಗರು ನೀರಿಗಾಗಿ ಪರದಾಡುವಂತಾಗಿದೆ. ಈ ಬಗ್ಗೆ ಪುರಸಭೆ ಮುಖ್ಯಾಧಿಕಾರಿಗೆ ಕರೆ ಮಾಡಿದರೆ ಮೊಬೈಲ್ ಸ್ವಿಚ್ ಆಫ್, ಪುರಸಭೆ ಅಧಿಕಾರಿಗಳಿಗೆ ಕೇಳಿದರೆ ಅದೆ ಹಳೆ ಉತ್ತರ ಮೋಟಾರ್ ಸಮಸ್ಯೆ ಎನ್ನುತ್ತಾರೆ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೀತಿ ನೀರಿನ ಸಮಸ್ಯೆ ಬರಬಾರದು ಎಂದು ಇಂಗಳಗಿಯಿಂದ ಎಸಿಸಿ ಕಂಪನಿಯ ಪೈಪ್ ಲೈನಿಗೆ ಸಂಪರ್ಕ ಕಲ್ಪಿಸುವ ಸಲುವಾಗಿ 50 […]

Continue Reading

ಸಿಜೆಐ ಮೇಲೆ ಶೂ ಎಸೆದ ವಕೀಲನ ವಿರುದ್ಧ ಕಠಿಣ ಕ್ರಮಕ್ಕೆ ಸಂಜಯ ಬುಳಕರ್ ಆಗ್ರಹ

ಚಿತ್ತಾಪುರ: ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿಯವರ ಮೇಲೆ ವಕೀಲನೊಬ್ಬ ಶೂ ಎಸೆಯುವ ಪ್ರಯತ್ನ ಮಾಡಿರುವ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಂವಿಧಾನ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ಸಂಜಯ ಬುಳಕರ ನೇತೃತ್ವದಲ್ಲಿ ಬುಧವಾರ ಪ್ರತಿಭಟಸಿದ ಮುಖಂಡರು ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು ಗ್ರೇಡ್-2 ತಹಸೀಲ್ದಾರ್ ರಾಜಕುಮಾರ ಮರತೂರ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಸಂಜಯ ಬುಳಕರ ಮಾತನಾಡಿ, ದೇಶದ ಸರ್ವೋಚ್ಚ ನ್ಯಾಯಮೂರ್ತಿಗಳ ಮೇಲೆ ಕೋರ್ಟ್ […]

Continue Reading

ಯಲ್ಲಮ್ಮ ದೇವಿ ಜಾತ್ರೆ, ಪಲ್ಲಕ್ಕಿ ಉತ್ಸವ

ಚಿತ್ತಾಪುರ: ಸೀಗಿ ಹುಣ್ಣಿಮೆಯಂದು ಪಟ್ಟಣದ ಐತಿಹಾಸಿಕ ಕ್ಷೇತ್ರ ನಾಗಾವಿಯಲ್ಲಿರುವ ಯಲ್ಲಮ್ಮ ದೇವಿಯ ಜಾತ್ರೆ ನಿಮಿತ್ತ ಪಲ್ಲಕ್ಕಿ ಉತ್ಸವವು ಶ್ರದ್ಧಾಭಕ್ತಿ, ಸಂಭ್ರಮ, ಸಡಗರ, ಹರ್ಷೋದ್ಘಾರದೊಂದಿಗೆ ಅದ್ದೂರಿಯಾಗಿ ಜರುಗಿತು. ಪಟ್ಟಣದ ಸರಾಫ್ ಲಚ್ಚಪ್ಪ ನಾಯಕ ಅವರ ಮನೆಯಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷ ಹಾಗೂ ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರ ಉಪಸ್ಥಿತಿಯಲ್ಲಿ ಮಂಗಳವಾರ ಮಧ್ಯಾಹ್ನ ವಿಶ್ವೇಶ್ವರ ಪೂಜೆ, ಗುರುಪೂಜೆ, ದೇವಿಯ ಪಲ್ಲಕ್ಕಿ ಪೂಜೆ ಜರುಗಿತು, ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ತಹಸೀಲ್ದಾರ್ ಅವರು ಮಂಗಳಾರತಿ ಮಾಡಿ ಪಲ್ಲಕ್ಕಿ ಹೊತ್ತುಕೊಂಡು ಉತ್ಸವದ […]

Continue Reading