ಚಿತ್ತಾಪುರ: ಬಸವೇಶ್ವರ ಜಯಂತಿ ಆಚರಣೆ

ಸುದ್ದಿ ಸಂಗ್ರಹ ಚಿತ್ತಾಪುರತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಕಚೇರಿಯಲ್ಲಿ ಸಾಂಸ್ಕೃತಿಕ ನಾಯಕ ಬಸವೇಶ್ವರರ 893ನೇ ಜಯಂತಿ ಆಚರಿಸಲಾಯಿತು. ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಅಧ್ಯಕ್ಷ ದೇವಿಂದ್ರ ಅರಣಕಲ್ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಿಎಲ್​ಡಿ ಬ್ಯಾಂಕ್​ ಅಧ್ಯಕ್ಷ ಭೀಮಣ್ಣ ಸಾಲಿ, ಬಸವ ಭವನ ನಿರ್ಮಾಣ ಸಮಿತಿಯ ಅಧ್ಯಕ್ಷ ರಮೇಶ ಪಾಟೀಲ ಮರಗೋಳ, ತಾ.ಪಂ ಮಾಜಿ ಅಧ್ಯಕ್ಷ ಜಗಣ್ಣಗೌಡ ರಾಮತೀರ್ಥ, ಮುಖಂಡರಾದ ಶಾಂತಣ್ಣ ಚಾಳಿಕಾರ, ನಾಗುಗೌಡ ಅಲ್ಲೂರು, ಭೀಮಣ್ಣ ಹೊತಿನಮಡಿ, […]

Continue Reading

ಸಂಭ್ರಮದ ಬಸವೇಶ್ವರ ಜಯಂತಿ ಆಚರಣೆ

ಸುದ್ದಿ ಸಂಗ್ರಹ ಚಿತ್ತಾಪುರತಾಲೂಕು ಆಡಳಿತದ ವತಿಯಿಂದ ಪ್ರಜಾಸೌಧ ಆವರಣದಲ್ಲಿ ಸಾಂಸ್ಕೃತಿಕ ನಾಯಕ ಬಸವೇಶ್ವರರ 893ನೇ ಜಯಂತಿ ಸಂಭ್ರಮದಿಂದ ಆಚರಿಸಲಾಯಿತು. ತಹಸೀಲ್ದಾರ್ ನಾಗಯ್ಯ ಹಿರೇಮಠ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ತಾಲೂಕು ಆಡಳಿತ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಬಸವ ಜಯಂತಿ ಉತ್ಸವ ಆಚರಣೆ ಸಮಿತಿ ಸಹಯೋಗದಲ್ಲಿ ರೈತರ ಜೋಡೆತ್ತುಗಳೊಂದಿಗೆ ಬಸವೇಶ್ವರರ ಭಾವಚಿತ್ರದ ಅದ್ದೂರಿ ಮರವಣಿಗೆಗೆ ಹಿರೇಮಠ ಚಾಲನೆ ನೀಡಿದರು. ಹೂವಿನಿಂದ ಅಲಂಕೃತ ಸಾರೋಟದಲ್ಲಿ ಬಸವೇಶ್ವರ ಭಾವಚಿತ್ರವಿಟ್ಟು ಸಾಗಿದ ಮೆರವಣಿಗೆಯು ಪಟ್ಟಣದ ರೈಲ್ವೆ ನಿಲ್ದಾಣ, ನಾಗಾವಿ, ಜನತಾ, […]

Continue Reading

ಬಸವ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಅವಮಾನ: ಬಿಜೆಪಿ ಖಂಡನೆ

ವಾಡಿ: ಪಟ್ಟಣದ ಪುರಸಭೆ ಆಡಳಿತ ಮಂಡಳಿ ಬಸವ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಸಾಂಸ್ಕೃತಿಕ ನಾಯಕ ಬದಲು ಸಂಕೃತಿಕ ನಾಯಕ ಎಂದು ಉಲ್ಲೇಖಿಸಿ ಸಮಾಜ ಸುಧಾರಕ ಬಸವಣ್ಣ ಅವರಿಗೆ ಅವಮಾನಿಸಿದೆ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ, ಅಸಮಧಾನ ವ್ಯಕ್ತಪಡಿಸಿದ್ದಾರೆ. ಸಮಾಜ ಸುಧಾರಕರ ಹೆಸರುಗಳನ್ನು ತಪ್ಪಾಗಿ ಉಲ್ಲೇಖಿಸಿ, ಅವರ ಸಾಮಾಜಿಕ, ಸಾಂಸ್ಕೃತಿಕ ಹೋರಾಟಕ್ಕೆ ಮಾಡುವ ದೊಡ್ಡ ಅಪಮಾನ ಇದಾಗಿದೆ ಎಂದರು. ಬಸವಣ್ಣನವರು 12ನೇ ಶತಮಾನದಲ್ಲಿ ಕರ್ನಾಟಕದಲ್ಲಿ ನಡೆಸಿದ ಸಾಂಸ್ಕೃತಿಕ ಮತ್ತು ಸಾಮಾಜಿಕ ಕ್ರಾಂತಿಯು ಭಾರತದ ಇತಿಹಾಸದಲ್ಲೆ ಅತ್ಯಂತ ಪ್ರಮುಖ […]

Continue Reading

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಸಹಾಯಕ ಆಯುಕ್ತ ಪ್ರಭುರೆಡ್ಡಿ‌

ಸುದ್ದಿ ಸಂಗ್ರಹ ಚಿತ್ತಾಪುರಬೇಸಿಗೆ ಶುರುವಾಗುತ್ತಿದ್ದಂತೆ ನೀರಿನ ಸಮಸ್ಯೆ ಹೆಚ್ಚುತ್ತದೆ. ಹೀಗಾಗಿ ತಾಲೂಕಿನ ಯಾವ ಯಾವ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎನ್ನುವ ಕುರಿತು ಮುನ್ನೆಚ್ಚರಿಕೆ ವಹಿಸಿ ಎಂದು ಸೇಡಂ ಸಹಾಯಕ ಆಯುಕ್ತ ಪ್ರಭುರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಪ್ರಜಾಸೌಧದ ಸಭಾಂಗಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಹಮ್ಮಿಕೊಳ್ಳಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇರುತ್ತವೆ, ಅಧಿಕಾರಿಗಳು ಕೂಡಲೆ ಎಲ್ಲೆಲ್ಲಿ ಕುಡಿಯುವ ನೀರಿನ ಸಮಸ್ಯೆಗಳಿವೆ ಎನ್ನುವ ಬಗ್ಗೆ ಪಟ್ಟಿಮಾಡಿಕೊಂಡು […]

Continue Reading

ವಾಡಿ: ಬಿಜೆಪಿ ಕಚೇರಿಯಲ್ಲಿ ಬಲಿದಾನ ದಿನಾಚರಣೆ

ಸುದ್ದಿ ಸಂಗ್ರಹ ಚಿತ್ತಾಪುರಪಟ್ಟಣದ ಬಿಜೆಪಿ ಕಚೇರಿಯಲ್ಲಿ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರಾದ ಸುಖದೇವ್‌ ಥಾಪರ್, ಭಗತ್‌ ಸಿಂಗ್‌, ಶಿವರಾಮ್ ರಾಜಗುರು ಅವರ ಪುಣ್ಯತಿಥಿ ಪ್ರಯುಕ್ತ ಬಲಿದಾನ ದಿನಾ ಆಚರಿಸಲಾಯಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಸ್ವಾಭಿಮಾನದಿಂದ ಸಾವಿನ ಕುಣಿಕೆ ಏರಿದಕೆಚ್ಚೆದೆಯ ವೀರರಾದ ಭಗತ್‌‌ ಸಿಂಗ್‌‌, ರಾಜಗುರು ಮತ್ತು ಸುಖದೇವ ಅವರು ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿದ್ದರು ಎಂದರು. ಇವರು ಹೇಗಾದರೂ ಸರಿ ಬ್ರಿಟಿಷರನ್ನು ದೇಶದಿಂದ ಓಡಿಸಬೇಕೆಂದು ಕ್ರಾಂತಿಕಾರಿ ಹೋರಾಟ ಮಾಡುತ್ತಿದ್ದರು. 1929ರಲ್ಲಿ ಸೆಂಟ್ರಲ್ ಲೆಜಿಸ್ಲೇಟಿವ್ ಅಸೆಂಬ್ಲಿಯ […]

Continue Reading

ಒಳ ಮೀಸಲಾತಿ ವಿರೋಧಿಸಿ ಮಾ.24ರಂದು ಬೆಂಗಳೂರು ಚಲೋ‌

ಸುದ್ದಿ ಸಂಗ್ರಹ ಚಿತ್ತಾಪುರಒಳಮೀಸಲಾತಿ ಜಾರಿ ವಿರೋಧಿಸಿ ಮತ್ತು ಹಳೆ ಮೀಸಲಾತಿ ನಿಯಮದಂತೆ ನೇಮಕಾತಿ ನಡೆಸಲು ಒತ್ತಾಯಿಸಿ ಮಾರ್ಚ್ 24ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಮೀಸಲಾತಿ ಸಂರಕ್ಷಣಾ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಡಿ ಚವ್ಹಾಣ್ ಹೇಳಿದರು. ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯೋಗದ ವರದಿ ಅಸಂಬದ್ಧವಾಗಿದೆ, ಈ ವರದಿಯಿಂದ ಭೋವಿ, ಬಂಜಾರ, ಕೊರಮ, ಕೊರಚ, ಛಲವಾದಿ, ಚರ್ಮಕಾರ ಸೇರಿದಂತೆ ಹಲವು ಸೂಕ್ಷ್ಮ ಜಾತಿಗಳಿಗೆ ಅನ್ಯಾಯವಾಗುತ್ತಿದೆ, […]

Continue Reading

ಎಲ್ಲ ಕ್ಷೇತ್ರದಲ್ಲೂ ಮಹಿಳೆಯರ ಸಾಧನೆ ಅನನ್ಯ: ತಹಸೀಲ್ದಾರ್ ನಾಗಯ್ಯ ಹಿರೇಮಠ

ಸುದ್ದಿ ಸಂಗ್ರಹ ಚಿತ್ತಾಪುರಆಧುನಿಕ ತಂತ್ರಜ್ಞಾನ ಯುಗದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿ, ಪುರುಷರ ಸಮಾನಾಗಿ ನಿಂತಿದ್ದಾರೆ ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು. ಪಟ್ಟಣದ ಅಂಬಿಗರ ಚೌಡಯ್ಯ ಭವನದಲ್ಲಿ ತಾಲೂಕು ಆಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಮತ್ತು “ಕಾನೂನು ಅರಿವು” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಪಂಚದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನ ನೀಡಲಾಗಿದ್ದು, ಅದನ್ನು […]

Continue Reading

ಟೆಂಗಳಿ ಮಹಾದ್ವಾರ ದುರಸ್ತಿ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

ಸುದ್ದಿ ಸಂಗ್ರಹ ಕಾಳಗಿತಾಲೂಕಿನ ಟೆಂಗಳಿ ಗ್ರಾಮದ ಐತಿಹಾಸಿಕ ಮಹಾದ್ವಾರದ (ಅಗಸಿ) ದುರಸ್ತಿ ಕಾರ್ಯ ಶೀಘ್ರ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಂಡಗಿ ಪ್ರತಿಷ್ಠಾನದ ಅಧ್ಯಕ್ಷ ಶಿವರಾಜ ಅಂಡಗಿ ಮನವಿ ಪತ್ರ ಸಲ್ಲಿಸಿದರು. ಪಟ್ಟಣದಲ್ಲಿ ನಡೆದ ವಿವಿಧ ಕಾಮಗಾರಿಗಳ ಅಡಿಗಲ್ಲು ಸಮಾರಂಭದ ವೇಳೆ ಸಚಿವರನ್ನು ಭೇಟಿಯಾಗಿ, ಟೆಂಗಳಿ ಗ್ರಾಮದ ಮಹಾದ್ವಾರ ಅವನತಿ ಸ್ಥಿತಿಯಲ್ಲಿ ಇರುವುದರಿಂದ ತಕ್ಷಣವೇ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಮನವಿ ಮಾಡಿದರು. ಮನವಿ ಪತ್ರದಲ್ಲಿ […]

Continue Reading

ಭೀಮ ಗಾಯನ ಹೆಸರಿನಲ್ಲಿ ರಾಜಕೀಯ: ವಿಕ್ರಮ್ ತೇಜಸ್ ಆಕ್ರೋಶ‌

ಸುದ್ದಿ ಸಂಗ್ರಹ ಚಿತ್ತಾಪುರ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಅವರು ಭೇಟಿ ನೀಡಿದ ಹತ್ತು ಊರುಗಳಲ್ಲಿ ಭೀಮ ಗಾಯನ ಕಾರ್ಯಕ್ರಮ ಹಮ್ಮಿಕೊಂಡ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ ಅಂಬೇಡ್ಕರ್ ಅವರು ಭೇಟಿ ನೀಡಿದ ವಾಡಿ ಪಟ್ಟಣ ಮರೆತು ಜಿಲ್ಲಾ ಕೇಂದ್ರದಲ್ಲಿ ಕಾರ್ಯಕ್ರಮ ಆಯೋಜಿಸುವ ಮೂಲಕ ವಾರ್ತಾ ಇಲಾಖೆ ರಾಜಕಾರಣ ಮಾಡಿದೆ ಎಂದು ಡಾ. ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ನಿರ್ಮಾಣ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಕ್ರಮ್ ತೇಜಸ್ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಾಬಾ […]

Continue Reading

ಕಾಳಗಿ ಜನರ ಪ್ರಜಾಸೌಧದ ಕನಸು ನನಸು: ಸಚಿವ ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಕಾಳಗಿತಾಲೂಕಿನ ಜನರ ಬಹುಕಾಲದ ಕನಸಾಗಿದ್ದ ಪ್ರಜಾಸೌಧ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ಹಾಕಲಾಯಿತು, ಮುಂದಿನ ದಿನಗಳಲ್ಲಿ ತಾಲೂಕಿಗೆ ಅಗತ್ಯವಿರುವ ಎಲ್ಲಾ ಸರ್ಕಾರಿ ಕಚೇರಿಗಳನ್ನು ಹಂತವಾಗಿ ಸ್ಥಾಪಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.‌ ಪಟ್ಟಣದ ನೀಲಕಂಠ ಕಾಳೇಶ್ವರ ದೇವಸ್ಥಾನದ ಆವರಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ, ಕಾಳಗಿ ಮತ್ತು ಚಿಂಚೋಳಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ವಿವಿಧ ಇಲಾಖೆ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟಿಸಿ ಮಾತನಾಡಿದ ಅವರು, ಕಾಳಗಿ- ಚಿಂಚೋಳಿ ತಾಲೂಕಿನ ಅಭಿವೃದ್ಧಿಗೆ 60 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ […]

Continue Reading