ವಾಡಿ: ಬಿಜೆಪಿ ರಾಜ್ಯ ನಾಯಕರ ಜನ್ಮ ದಿನದ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜೆ

ವಾಡಿ: ಪಟ್ಟಣದ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಬಿಜೆಪಿ ರಾಜ್ಯ ನಾಯಕರು, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣಸ್ವಾಮಿ ಮತ್ತು ಕೇಂದ್ರ ರೈಲ್ವೆ ಜಲಶಕ್ತಿ ಸಚಿವ ವಿ ಸೋಮಣ್ಣ ಅವರ ಜನ್ಮದಿನದ ಪ್ರಯುಕ್ತ ರವಿವಾರ ಶಕ್ತಿ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಿ ಪ್ರಸಾದ ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ರಾಜ್ಯದ ಪ್ರತಿಯೊಬ್ಬ ಕಾರ್ಯಕರ್ತರ ಮನದಲ್ಲಿ ಪಕ್ಷ ಸಂಘಟನೆಯ ಬಗ್ಗೆ, ಸ್ವಾಭಿಮಾನದ ಬಗ್ಗೆ ಕಿಚ್ಚನ್ನು ಮೂಡಿಸುವಲ್ಲಿ ಚಲುವಾದಿ ನಾರಾಯಣಸ್ವಾಮಿ […]

Continue Reading

‘ಶಕ್ತಿ’ಗೆ ಶಕ್ತಿ ತುಂಬಿದ ಮಹಿಳೆಯರು: ಬಸ್‌ಗೆ ಪೂಜೆ, ಸಂಭ್ರಮಾಚರಣೆ

ಚಿತ್ತಾಪುರ: ರಾಜ್ಯದಲ್ಲಿ ‘ಶಕ್ತಿ’ ಯೋಜನೆಯಡಿ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರು 500 ಕೋಟಿ ಸಲ ಸಂಚರಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಸೋಮವಾರ ಸಂಭ್ರಮಾಚರಣೆ ಮಾಡಲಾಯಿತು. ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆಯಡಿ ಎರಡು ವರ್ಷಗಳ ಅವಧಿಯಲ್ಲಿ ಮಹಿಳೆಯರು, ವಿದ್ಯಾರ್ಥಿಗಳು ಪ್ರಯಾಣದ 500 ಕೋಟಿಗೂ ಹೆಚ್ಚು ಮಹಿಳೆಯರು ಉಚಿತ ಪ್ರಯಾಣ ಮಾಡಿರುವುದರಿಂದ ಬಸ್ ನಿಲ್ದಾಣದಲ್ಲಿ ಸಾರಿಗೆ ಬಸ್’ಗೆ ತಳಿರು ತೋರಣಗಳಿಂದ ಸಿಂಗರಿಸಿ, ಪೂಜೆ ಸಲ್ಲಿಸಿ ಸಿಹಿಹಂಚುವ ಮೂಲಕ ಕಾಂಗ್ರೆಸ್ ಮುಖಂಡರು ಸಂಭ್ರಮಾಚರಣೆ ಆಚರಿಸಿದರು. […]

Continue Reading

ವಾಡಿ: ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಶಿವಶರಣ ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಮುಖಂಡರು ಪುಷ್ಪ ನಮನ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಹನ್ನೆರಡನೆ ಶತಮಾನದ ಕ್ರಾಂತಿಯಲ್ಲಿ ಶಿವಶರಣ ಹಡಪದ ಅಪ್ಪಣ್ಣನವರು ಮುಂಚೂಣಿಯಲ್ಲಿದ್ದರು. ಶರಣ ಕಾಯಕ ಬದುಕು ಯುವ ಪೀಳಿಗೆಗೆ ದಾರಿದೀಪವಾಗಬೇಕು. ಶರಣರು ಯಾತಕ್ಕಾಗಿ ಹೋರಾಟ ಮಾಡಿದರು, ಅದರ ಉದ್ದೇಶ ಬಗ್ಗೆ ಇಂದು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕಿದೆ. ಅವರ ವಚನವನ್ನು ಆಳವಾಗಿ ಅಧ್ಯಯನ ಮಾಡಿದಾಗ ಮಾತ್ರ ಇವೆಲ್ಲವೂ ಸಾಧ್ಯವಾಗುವುದು. ಕಾಯಕ ನಿಷ್ಠೆಗೆ ಹೆಸರಾದ ಹಡಪದ […]

Continue Reading

ಅಕ್ರಮ ಸಾಗಾಟ: ಅಕ್ಕಿ ಸಹಿತ ವಾಹನ ಜಪ್ತಿ

ಚಿತ್ತಾಪುರ: ಕಾಳಸಂತೆಯಲ್ಲಿ ಮಾರಾಟ ಮಾಡಲು ಪಡಿತರ ಅಕ್ಕಿಯನ್ನು ಅಕ್ರಮವಾಗಿ ವಾಹನದಲ್ಲಿ ಸಾಗಿಸುತ್ತಿರುವ ಖಚಿತ ಮಾಹಿತಿ ಆಧರಿಸಿ ಪಿಎಸ್ಐ ಶ್ರೀಶೈಲ ಅಂಬಾಟಿ ಮತ್ತು ಸಿಬ್ಬಂದಿ ದಾಳಿ ಮಾಡಿ ಅಕ್ಕಿ ಸಹಿತ ವಾಹನ ಜಪ್ತಿ ಮಾಡಿದರು. 50 ಕೆ.ಜಿ ತೂಕದ 49 ಪ್ಲಾಸ್ಟಿಕ್ ಚೀಲಗಳಲ್ಲಿದ್ದ 83,300 ಮೌಲ್ಯದ 24 ಕ್ವಿಂಟಾಲ್ 50 ಕೆ.ಜಿ ಅಕ್ಕಿ ವಶಕ್ಕೆ ಪಡೆಯಲಾಗಿದೆ. ವಾಹನ ಜಪ್ತಿ ಮಾಡಿಕೊಂಡು ಹೈದರಾಬಾದ್‌ ಮೂಲಕ ಶಾಣುನಾಯಕ ಲಕ್ಷ್ಮಣನಾಯಕ ಹಾಗೂ ಮಶಾಕ ಸಲೀಂ ದಂಡೋತಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದರು. ಫುಡ್ […]

Continue Reading

ಚಿತ್ತಾಪುರ: ಜು.10 ರಂದು ಗುರುವಂದನೆ

ಚಿತ್ತಾಪುರ: ಪಟ್ಟಣದ ಶ್ರೀ ಸಿದ್ಧವೀರೇಶ್ವರ ಪೆದ್ದು ಮಠದಲ್ಲಿ ಜು.10 ರಂದು ಗುರುವಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ಶರಣು ಊಡಗಿ ತಿಳಿಸಿದ್ದಾರೆ. ದಿಗ್ಗಾಂವ ಪಂಚಗೃಹ ಹಿರೇಮಠದ ಶ್ರೀ ಸಿದ್ಧವೀರ ಶಿವಾಚಾರ್ಯರು ಶ್ರೀ ಸಿದ್ಧವೀರ ಶಿವಾಚಾರ್ಯ ಸಾನ್ನಿಧ್ಯದಲ್ಲಿ ಕರ್ತೃ ಗದ್ದುಗೆ, ಶಿವಲಿಂಗಕ್ಕೆ ರುದಾಭಿಷೇಕ,‌ ವಿಶೇಷ ಪೂಜೆ, ಬಿಲ್ವಾರ್ಚನೆ ನಡೆಯಲಿದೆ. ನಂತರ ಸಿದ್ಧವೀರ ಶ್ರೀಗಳಿಗೆ ಗುರುಪಾದ ಪೂಜೆ, ಗುರುವಂದನೆ ಜರುಗಲಿದೆ. ಹಲವು ಕಲಾವಿದರು ಹಾಗೂ ಭಕ್ತರಿಗೆ ಗುರುರಕ್ಷೆ ನೀಡಿ ಗೌರವಿಸಲಾಗುವುದು ಎಂದು ಹೇಳಿದ್ದಾರೆ

Continue Reading

ಸರ್ಕಾರದ ಕಚೇರಿಗಳು ಜನಸ್ನೇಹಿಯಾಗಿರಬೇಕು: ಸಚಿವ ಪ್ರಿಯಾಂಕ್ ಖರ್ಗೆ

ಚಿತ್ತಾಪುರ: ಸರ್ಕಾರಿ ಕಚೇರಿಗಳು ಜನಸ್ನೇಹಿಯಾಗಿರಬೇಕು. ಅಂದಾಗ ಮಾತ್ರ ಒಳ್ಳೆಯ ಆಡಳಿತ ಕೊಡಲು ಸಾಧ್ಯವಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು. ಪಟ್ಟಣದಲ್ಲಿ 18.41 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಪ್ರಜಾಸೌಧ ಕಟ್ಟಡ ಮತ್ತು ವಿವಿಧ ಯೋಜನೆಗಳಡಿ 517 ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿ ಮಾತನಾಡಿದ ಅವರು, ಈ‌ ಹಿಂದೆ ಮಿನಿ ವಿಧಾನಸೌಧ ಎಂದು ಕರೆಯುತ್ತಿದ್ದ ಕಟ್ಟಡಗಳಿಗೆ ಈಗ ಪ್ರಜಾ ಸೌಧ ಎಂದು ಹೆಸರಿಸಲಾಗುತ್ತಿದೆ. ಕಾರಣ ಆಡಳಿತ ಜನರಿಗೆ […]

Continue Reading

ಮಣ್ಣು ಮತ್ತು ಎತ್ತುಗಳ ಗೌರವದ ಪ್ರತೀಕವಾದ ಮಣ್ಣೆತ್ತಿನ ಹಬ್ಬ: ಎಚ್.ಬಿ ಪಾಟೀಲ

ಚಿತ್ತಾಪುರ: ಮಾನವ ಮತ್ತು ಮಣ್ಣಿಗೆ ಅವಿನಾಭಾವ ಸಂಬಂಧವಿದೆ. ರೈತರು ಕೃಷಿ ಮಾಡಿ ಆಹಾರ ಬೆಳೆಯಲು ಮಣ್ಣು ಅವಶ್ಯಕವಾಗಿದೆ. ಎತ್ತುಗಳು ರೈತನ ಪ್ರಮುಖ ಸಾಧನಗಳಾಗಿವೆ. ಮಣ್ಣು ಮತ್ತು ಎತ್ತುಗಳಿಗೆ ಗೌರವ ಸಲ್ಲಿಸುವುದು ಮಣ್ಣೆತ್ತಿನ ಅಮವಾಸ್ಯೆ ಮುಂಗಾರಿನ ಹಬ್ಬವಾಗಿದೆ ಎಂದು ಕಜಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಬಿ ಪಾಟೀಲ್ ಹೇಳಿದರು. ಮಣ್ಣೆತ್ತಿನ ಅಮವಾಸ್ಯೆ ಪ್ರಯುಕ್ತ ಬುಧವಾರ ಜರುಗಿದ ಶೆಳ್ಳಗಿ ಗ್ರಾಮದ ವೃತ್ತಿ ಕುಂಬಾರರಾದ ಬಸವರಾಜ ಕುಂಬಾರ ಅವರಿಗೆ ಸತ್ಕಾರ, ಮಣ್ಣೆತ್ತುಗಳಿಗೆ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಸತ್ಕರಿಸಿ ಮಾತನಾಡಿದ ಅವರು, ರೈತ […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ ಜ್ಯೋಶಿ ಮುಖರ್ಜಿ ಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಜನಸಂಘದ ಸಂಸ್ಥಾಪಕ ಜಗನ್ನಾಥ ಜ್ಯೋಶಿ ಅವರ ಜನ್ಮದಿನಾಚರಣೆ ಹಾಗೂ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನದ ನಿಮಿತ್ಯ ಪಕ್ಷದ ಕಚೇರಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರ ನಿಸ್ವಾರ್ಥ ದೇಶ ಸೇವೆಯನ್ನು ಬಿಜೆಪಿ ಮುಖಂಡರು ಸ್ಮರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ ಮಾತನಾಡಿ, ಜಗನ್ನಾಥರಾವ್ ಜೋಶಿ ಹಾಗೂ ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ಜನಸಂಘದ ಕಾಲದಿಂದ ಪಕ್ಷದ ಬೆಳವಣಿಗೆಗೆ ಕಾರಣಿಕರ್ತರು ಎಂದರು. ಜ್ಯೋಶಿ […]

Continue Reading

ಮೋದಿ ಆಡಳಿತಕ್ಕೆ 11 ವರ್ಷ: ಬಿಜೆಪಿ ಮುಖಂಡರ ಸಂಭ್ರಮ

ವಾಡಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್’ಡಿಎ ಮೈತ್ರಿಕೂಟದ 11 ವರ್ಷ ಆಡಳಿತದ ಸಾಧನೆಯನ್ನು ನೆನೆದ ಬಿಜೆಪಿ ಮುಖಂಡರು ಪಕ್ಷದ ಕಛೇರಿಯ ಆವರಣದಲ್ಲಿ ಸಸಿ ನೆಟ್ಟು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಜಗತ್ತು ಮೆಚ್ಚಿದ ವಿಶ್ವನಾಯಕ, ದಣಿವರಿಯದೆ ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿರುವ, ದಕ್ಷ ಆಡಳಿತಗಾರ, ಸಮರ್ಥ ನಾಯಕತ್ವ, ಸ್ಪಂದನಶೀಲ ಪ್ರಧಾನಿಯಾಗಿ 11 ವರ್ಷ ಪೂರೈಸಿದ ನಮ್ಮೆಲ್ಲರ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಮ್ಮೆಲ್ಲರಿಂದ ಅಭಿನಂದನೆಗಳು. 2014ರ ಮೇ 26ರಂದು ಪ್ರಧಾನಿಯಾಗಿ […]

Continue Reading

ಭಾಗೋಡಿ: ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಂದ ಪತ್ನಿ

ಚಿತ್ತಾಪುರ: ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿರುವ ಘಟನೆ ಶುಕ್ರವಾರ ಬೆಳಗಿನ ಜಾವ ಭಾಗೋಡಿ ಗ್ರಾಮದಲ್ಲಿ ನಡೆದಿದೆ. ತಿಪ್ಪಣ್ಣ ಅಲಿಯಾಸ್ ಕುಪೇಂದ್ರ (30) ಕೊಲೆಯಾಗಿರುವ ವ್ಯಕ್ತಿಯಾಗಿದ್ದು, ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಬಾರದು ಎಂದು ಶಾಂತಮ್ಮ ಮತ್ತು ಆಕೆಯ ಪ್ರಿಯಕರ ಸೇರಿ ಕುಪೇಂದ್ರನನ್ನು ತಲೆದಿಂಬಿನಿಂದ ಉಸಿರು ಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆರೋಪಿ ಶಾಂತಮ್ಮನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪ್ರಿಯಕರ ಪರಾರಿಯಾಗಿದ್ದಾನೆ, ಆತನನ್ನು ಆದಷ್ಟು ಬೇಗನೆ ಬಂಧಿಸಲಾಗುವುದು ಎಂದು ಪಿಎಸ್‌ಐ ಶ್ರೀಶೈಲ್ ಅಂಬಾಟಿ ತಿಳಿಸಿದ್ದಾರೆ. ತಲೆದಿಂಬಿನಿಂದ […]

Continue Reading