ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಾಗರ ಪಂಚಮಿ ಹಬ್ಬ ಆಚರಣೆ

ಚಿತ್ತಾಪುರ: ಹಿಂದೂ ಧರ್ಮದ ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿ ಹಬ್ಬವನ್ನು ನಮ್ಮ ಶಾಲೆಯಲ್ಲಿ ಶಾಲಾ ಶಿಕ್ಷಕಿಯರು ಮತ್ತು ವಿದ್ಯಾರ್ಥಿನಿಯರು ನಾಗರ ಮೂರ್ತಿಗೆ ಹಾಲನ್ನು ಎರೆಯು ಮೂಲಕ ಹಬ್ಬದ ಪರಂಪರೆಯನ್ನು ಶಾಲೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಸಹ ಕಾರ್ಯದರ್ಶಿ ಮತ್ತು ಮುಖ್ಯಗುರು ಪ್ರೀಯಾಂಕ, ಜಂಟಿ ಕಾರ್ಯದರ್ಶಿ ಬಸವರಾಜ ಪಿ.ಬಿ, ಶಿಕ್ಷಕರಾದ ಮಹಾದೇವ, ದೇವೆನ್, ಕಾಶೀಮ್ ಅಲೀ, ಸಲೀಮ್, ಅಶ್ವಿನಿ, ಶ್ರೀಮತಿ.ವಸಂತ , ನಂಧೂರಕರ್, ಅಮ್ರೀನ್ ಬೇಗಂ, ಅಂಬಿಕಾ, ಅಂಕಿತ, ಬಸಮ್ಮ, ಸಾಧನ ಶಿಲ್ಪಿ, ಬಸಮ್ಮ […]

Continue Reading

ವಾಡಿ ಪಟ್ಟಣದಲ್ಲಿ ಕಲುಷಿತ ನೀರು ಪೂರೈಕೆ: ವೀರಣ್ಣ ಯಾರಿ ಆಕ್ರೋಶ

ವಾಡಿ: ಪಟ್ಟಣದಲ್ಲಿ ಮತ್ತೆ ರಾಡಿ ನೀರು ಪೂರೈಕೆಯಾಗುತ್ತಿರುವದರಿಂದ ಸಾರ್ವಜನಿಕರು ಅನಿವಾರ್ಯವಾಗಿ ಕಲುಷಿತ ನೀರನ್ನೆ ಬಳಸುವ ಪರಿಸ್ಥಿತಿ ಮುಂದುವರೆದಿದೆ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಪುರಸಭೆ ಕಾರ್ಯವೈಖರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಇದನ್ನು ಗಂಭೀರವಾಗಿ ಪರಿಗಣಿಸಿ, ಸಾರ್ವಜನಿಕ ಹಿತಾಸಕ್ತಿಗಾದರೂ ಕ್ರಮಕೈಗೊಳ್ಳಿ ಎಂದು ಸುಮಾರು ಸಲ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರದ ಮೂಲಕ ಗಮನಕ್ಕೆ ತಂದರು ಇದುವರೆಗೆ ಅದೆ ಪರಿಸ್ಥಿತಿ ಮುಂದುವರೆದಿದೆ. ಶಾಶ್ವತ ಕುಡಿಯುವ ನೀರಿನ ಯೋಜನೆಯಡಿ ನೀರು ಶುದ್ಧೀಕರಣ ಘಟಕ ನಿರ್ಮಾಣವಾದರು ಸಹ ಇಲ್ಲಿನ ಅಧಿಕಾರಿಗಳ ಬೇಜವಾಬ್ದಾರಿಯಿಂದ ನೀರು […]

Continue Reading

ವಾಡಿ: ರಾಷ್ಟ್ರ ಧ್ವಜದೊಂದಿಗೆ ಕಾರ್ಗಿಲ್ ವಿಜಯೋತ್ಸವ

ವಾಡಿ: ಪಟ್ಟಣದ ಮೌಲಾನಾ ಅಬ್ದುಲ್ ಕಲಾಂ ಅಜಾದ್ ವೃತ್ತದಲ್ಲಿ ಬಿಜೆಪಿ ಪಕ್ಷದ ಮುಖಂಡರು ಶನಿವಾರ 26ನೇ ಕಾರ್ಗಿಲ್ ವಿಜಯ ದಿನಾಚರಣೆ ನಿಮಿತ್ಯ ರಾಷ್ಟ್ರ ಧ್ವಜದೊಂದಿಗೆ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಪ್ರತಿ ವರ್ಷ ಜು.26 ರಂದು ನಾವೆಲ್ಲರು ಸ್ಮರಿಸಿ, ಗೌರವಿಸಬೇಕಾದ ದಿನ. ಶತ್ರುರಾಷ್ಟ್ರ ದಾಳಿಯಿಂದ ಸದಾ ನಮ್ಮ ತಾಯ್ನಾಡಿನಲ್ಲಿ ನಾವುಗಳು, ಕೆಚ್ಚೆದೆಯ ನಮ್ಮ ವೀರಸೈನಿಕರ ತ್ಯಾಗ, ಬಲಿದಾನದ ಫಲವಾಗಿ ಇಂದು ಸುರಕ್ಷಿತವಾಗಿದ್ದೆವೆ ಎಂದರು. ನಾವು ಕಾರ್ಗಿಲ್ ಯುದ್ಧವನ್ನು ಮರೆಯಲು ಸಾಧ್ಯವಿಲ್ಲ. ಈ […]

Continue Reading

ಬರವಣಿಗೆಯಿಂದ ಸಮಾಜಪರ ಕೆಲಸ ಮಾಡಿದ್ದರು

ಚಿತ್ತಾಪುರ: ದಿ.ನಾಗಯ್ಯಸ್ವಾಮಿ ಅಲ್ಲೂರ ಅವರು ಪತ್ರಕರ್ತರಾಗಿ ಬರವಣಿಗೆಯಿಂದ ಸಮಾಜಪರ ಕೆಲಸ ಮಾಡಿದ್ದರು ಎಂದು ಜ್ಞಾನಜ್ಯೋತಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಬಸವರಾಜ ಹೊಟ್ಟಿ ಹೇಳಿದರು. ತಾಲೂಕಿನ ಅಳ್ಳೊಳ್ಳಿ ಗ್ರಾಮದ ಜ್ಞಾನಜ್ಯೋತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಹಿರಿಯ ಪತ್ರಕರ್ತ ಹಾಗೂ ಸಾಹಿತಿ ದಿ. ನಾಗಯ್ಯಸ್ವಾಮಿ ಅಲ್ಲೂರವರ 54ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಮಾಜಿಕ ಕಳಕಳಿ, ಸಾಮರಸ್ಯ, ಪ್ರತಿಭೆಗೆ ಪ್ರೋತ್ಸಾಹಿಸುವ ಮನಸ್ಸು ದಿ.ನಾಗಯ್ಯಸ್ವಾಮಿ ಅಲ್ಲೂರ ಅವರಿಗೆ ಇತ್ತು ಎಂದರು. ಕಾರ್ಯಕ್ರಮದ ಮೂಲಕ ದಿ.ನಾಗಯ್ಯಸ್ವಾಮಿ ಅಲ್ಲೂರ’ರವರ ಸಾಧನೆಗಳನ್ನು ಸ್ಮರಿಸಿ, […]

Continue Reading

ವಾಡಿ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಕೇಂದ್ರ ಸಚಿವರ ಭರವಸೆ

ವಾಡಿ: ಪಟ್ಟಣದ ರೈಲ್ವೆ ನಿಲ್ದಾಣದ ತ್ವರಿತ ಕಾಮಗಾರಿಗೆ ಮತ್ತು ಅಭಿವೃದ್ಧಿಗೆ ಭರವಸೆ ವ್ಯಕ್ತಪಡಿಸಿದ ಕೇಂದ್ರ ರೈಲ್ವೆ ಸಚಿವ ವಿ ಸೋಮಣ್ಣ ಅವರು ಸ್ಥಳೀಯ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಅವರಿಗೆ ಪತ್ರ ಕಳಿಸಿದ್ದಾರೆ. ಕಳೆದ ಜೂನ್ ತಿಂಗಳಲ್ಲಿ ಕಲಬುರಗಿ ನಗರಕ್ಕೆ ಆಗಮಿಸಿದ ಕೇಂದ್ರ ರೈಲ್ವೆ ಸಚಿವರನ್ನು ಲೋಕ ಸಭೆಯ ಮಾಜಿ ಸದಸ್ಯ ಡಾ.ಉಮೇಶ ಜಾಧವ ಅವರೊಂದಿಗೆ, ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ ಹಾಗೂ ಮುಖಂಡ ಸುಭಾಷ್ ವರ್ಮಾ ಅವರೊಂದಿಗೆ ವಾಡಿ ಮಹಾಶಕ್ತಿ ಕೇಂದ್ರದ […]

Continue Reading

ವಾಡಿ: ಬಿಜೆಪಿ ರಾಜ್ಯ ನಾಯಕರ ಜನ್ಮ ದಿನದ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜೆ

ವಾಡಿ: ಪಟ್ಟಣದ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಬಿಜೆಪಿ ರಾಜ್ಯ ನಾಯಕರು, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣಸ್ವಾಮಿ ಮತ್ತು ಕೇಂದ್ರ ರೈಲ್ವೆ ಜಲಶಕ್ತಿ ಸಚಿವ ವಿ ಸೋಮಣ್ಣ ಅವರ ಜನ್ಮದಿನದ ಪ್ರಯುಕ್ತ ರವಿವಾರ ಶಕ್ತಿ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಿ ಪ್ರಸಾದ ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ರಾಜ್ಯದ ಪ್ರತಿಯೊಬ್ಬ ಕಾರ್ಯಕರ್ತರ ಮನದಲ್ಲಿ ಪಕ್ಷ ಸಂಘಟನೆಯ ಬಗ್ಗೆ, ಸ್ವಾಭಿಮಾನದ ಬಗ್ಗೆ ಕಿಚ್ಚನ್ನು ಮೂಡಿಸುವಲ್ಲಿ ಚಲುವಾದಿ ನಾರಾಯಣಸ್ವಾಮಿ […]

Continue Reading

‘ಶಕ್ತಿ’ಗೆ ಶಕ್ತಿ ತುಂಬಿದ ಮಹಿಳೆಯರು: ಬಸ್‌ಗೆ ಪೂಜೆ, ಸಂಭ್ರಮಾಚರಣೆ

ಚಿತ್ತಾಪುರ: ರಾಜ್ಯದಲ್ಲಿ ‘ಶಕ್ತಿ’ ಯೋಜನೆಯಡಿ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರು 500 ಕೋಟಿ ಸಲ ಸಂಚರಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಸೋಮವಾರ ಸಂಭ್ರಮಾಚರಣೆ ಮಾಡಲಾಯಿತು. ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆಯಡಿ ಎರಡು ವರ್ಷಗಳ ಅವಧಿಯಲ್ಲಿ ಮಹಿಳೆಯರು, ವಿದ್ಯಾರ್ಥಿಗಳು ಪ್ರಯಾಣದ 500 ಕೋಟಿಗೂ ಹೆಚ್ಚು ಮಹಿಳೆಯರು ಉಚಿತ ಪ್ರಯಾಣ ಮಾಡಿರುವುದರಿಂದ ಬಸ್ ನಿಲ್ದಾಣದಲ್ಲಿ ಸಾರಿಗೆ ಬಸ್’ಗೆ ತಳಿರು ತೋರಣಗಳಿಂದ ಸಿಂಗರಿಸಿ, ಪೂಜೆ ಸಲ್ಲಿಸಿ ಸಿಹಿಹಂಚುವ ಮೂಲಕ ಕಾಂಗ್ರೆಸ್ ಮುಖಂಡರು ಸಂಭ್ರಮಾಚರಣೆ ಆಚರಿಸಿದರು. […]

Continue Reading

ವಾಡಿ: ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಶಿವಶರಣ ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಮುಖಂಡರು ಪುಷ್ಪ ನಮನ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಹನ್ನೆರಡನೆ ಶತಮಾನದ ಕ್ರಾಂತಿಯಲ್ಲಿ ಶಿವಶರಣ ಹಡಪದ ಅಪ್ಪಣ್ಣನವರು ಮುಂಚೂಣಿಯಲ್ಲಿದ್ದರು. ಶರಣ ಕಾಯಕ ಬದುಕು ಯುವ ಪೀಳಿಗೆಗೆ ದಾರಿದೀಪವಾಗಬೇಕು. ಶರಣರು ಯಾತಕ್ಕಾಗಿ ಹೋರಾಟ ಮಾಡಿದರು, ಅದರ ಉದ್ದೇಶ ಬಗ್ಗೆ ಇಂದು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕಿದೆ. ಅವರ ವಚನವನ್ನು ಆಳವಾಗಿ ಅಧ್ಯಯನ ಮಾಡಿದಾಗ ಮಾತ್ರ ಇವೆಲ್ಲವೂ ಸಾಧ್ಯವಾಗುವುದು. ಕಾಯಕ ನಿಷ್ಠೆಗೆ ಹೆಸರಾದ ಹಡಪದ […]

Continue Reading

ಅಕ್ರಮ ಸಾಗಾಟ: ಅಕ್ಕಿ ಸಹಿತ ವಾಹನ ಜಪ್ತಿ

ಚಿತ್ತಾಪುರ: ಕಾಳಸಂತೆಯಲ್ಲಿ ಮಾರಾಟ ಮಾಡಲು ಪಡಿತರ ಅಕ್ಕಿಯನ್ನು ಅಕ್ರಮವಾಗಿ ವಾಹನದಲ್ಲಿ ಸಾಗಿಸುತ್ತಿರುವ ಖಚಿತ ಮಾಹಿತಿ ಆಧರಿಸಿ ಪಿಎಸ್ಐ ಶ್ರೀಶೈಲ ಅಂಬಾಟಿ ಮತ್ತು ಸಿಬ್ಬಂದಿ ದಾಳಿ ಮಾಡಿ ಅಕ್ಕಿ ಸಹಿತ ವಾಹನ ಜಪ್ತಿ ಮಾಡಿದರು. 50 ಕೆ.ಜಿ ತೂಕದ 49 ಪ್ಲಾಸ್ಟಿಕ್ ಚೀಲಗಳಲ್ಲಿದ್ದ 83,300 ಮೌಲ್ಯದ 24 ಕ್ವಿಂಟಾಲ್ 50 ಕೆ.ಜಿ ಅಕ್ಕಿ ವಶಕ್ಕೆ ಪಡೆಯಲಾಗಿದೆ. ವಾಹನ ಜಪ್ತಿ ಮಾಡಿಕೊಂಡು ಹೈದರಾಬಾದ್‌ ಮೂಲಕ ಶಾಣುನಾಯಕ ಲಕ್ಷ್ಮಣನಾಯಕ ಹಾಗೂ ಮಶಾಕ ಸಲೀಂ ದಂಡೋತಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದರು. ಫುಡ್ […]

Continue Reading

ಚಿತ್ತಾಪುರ: ಜು.10 ರಂದು ಗುರುವಂದನೆ

ಚಿತ್ತಾಪುರ: ಪಟ್ಟಣದ ಶ್ರೀ ಸಿದ್ಧವೀರೇಶ್ವರ ಪೆದ್ದು ಮಠದಲ್ಲಿ ಜು.10 ರಂದು ಗುರುವಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ಶರಣು ಊಡಗಿ ತಿಳಿಸಿದ್ದಾರೆ. ದಿಗ್ಗಾಂವ ಪಂಚಗೃಹ ಹಿರೇಮಠದ ಶ್ರೀ ಸಿದ್ಧವೀರ ಶಿವಾಚಾರ್ಯರು ಶ್ರೀ ಸಿದ್ಧವೀರ ಶಿವಾಚಾರ್ಯ ಸಾನ್ನಿಧ್ಯದಲ್ಲಿ ಕರ್ತೃ ಗದ್ದುಗೆ, ಶಿವಲಿಂಗಕ್ಕೆ ರುದಾಭಿಷೇಕ,‌ ವಿಶೇಷ ಪೂಜೆ, ಬಿಲ್ವಾರ್ಚನೆ ನಡೆಯಲಿದೆ. ನಂತರ ಸಿದ್ಧವೀರ ಶ್ರೀಗಳಿಗೆ ಗುರುಪಾದ ಪೂಜೆ, ಗುರುವಂದನೆ ಜರುಗಲಿದೆ. ಹಲವು ಕಲಾವಿದರು ಹಾಗೂ ಭಕ್ತರಿಗೆ ಗುರುರಕ್ಷೆ ನೀಡಿ ಗೌರವಿಸಲಾಗುವುದು ಎಂದು ಹೇಳಿದ್ದಾರೆ

Continue Reading