ಸಾಮಾಜಿಕ ಬಹಿಷ್ಕಾರ ಹಾಕಿದರೆ 1 ಲಕ್ಷ ದಂಡ, 3 ವರ್ಷ ಜೈಲು: ರಾಜ್ಯ ಸರ್ಕಾರ ಮಸೂದೆ ಮಂಡನೆ

ಸುದ್ದಿ ಸಂಗ್ರಹ ಬೆಳಗಾವಿ ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಸಂಬಂಧ, ವಿಧಾನಸಭೆಯಲ್ಲಿ ಇಂದು ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ (ತಡೆ, ನಿಷೇಧ ಮತ್ತು ಪರಿಹಾರ) ಮಸೂದೆ ಮಂಡಿಸಲಾಗಿದೆ. ಈ ಮಸೂದೆ ಅನ್ವಯ ಇನ್ಮುಂದೆ ಯಾವುದೆ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ, 1 ಲಕ್ಷ ರೂ. ದಂಡ ಹಾಗೂ 3 ವರ್ಷ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಬಹಿಷ್ಕಾರ ಹಾಕುವ ಬಗ್ಗೆ […]

Continue Reading

ಮುಟ್ಟಿನ ರಜೆ ನಿರಾಕರಿಸಿದರೆ 5 ಸಾವಿರದವರೆಗೆ ದಂಡ: ಮಸೂದೆ ಸಿದ್ಧ

ಬೆಳಗಾವಿ (ಸುವರ್ಣ ವಿಧಾನಸೌಧ): ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಮಹಿಳಾ ನೌಕರರಿಗೆ ಪ್ರತಿ ತಿಂಗಳು ಒಂದು ದಿನದ ವೇತನಸಹಿತ ಮುಟ್ಟಿನ ರಜೆ ನೀಡುವುದನ್ನು ಉದ್ದೇಶಪೂರ್ವಕವಾಗಿ ನಿರಾಕರಿಸುವ, ಮುಟ್ಟು ಆದವರನ್ನು ಕೆಟ್ಟದಾಗಿ ನಡೆಸಿಕೊಳ್ಳುವ, ತಾರತಮ್ಯ ಮಾಡುವ ಅಥವಾ ಅಸ್ಪೃಶ್ಯ ಎಂದು ಪರಿಗಣಿಸುವವರಿಗೆ 5 ಸಾವಿರದವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸುವ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಉದ್ದೇಶದಿಂದ ‘ಕರ್ನಾಟಕ ಮಹಿಳಾ ಯೋಗಕ್ಷೇಮ ರಜೆ ಕಾಯ್ದೆ- 2025’ರ ಕರಡು ಮಸೂದೆಯನ್ನು ಸರ್ಕಾರ ಸಿದ್ಧಪಡಿಸಿದೆ. ಇಲ್ಲಿ ನಡೆಯುತ್ತಿರುವ ವಿಧಾನ […]

Continue Reading

ಪ್ರೀತಿಸಿ ಮದ್ವೆಯಾದ, ವಿಚ್ಛೇದನ ಪಡೆದು ಮಾಜಿ ಪತ್ನಿ ಕೊಂದ ಪೊಲೀಸಪ್ಪ

ಬೆಳಗಾವಿ: ಪ್ರೀತಿಸಿ ಮದುವೆಯಾಗಿ ವಿಚ್ಛೇದನ ಪಡೆದ ಬಳಿಕ ಮಾಜಿ ಪತ್ನಿಯನ್ನು ಪೊಲೀಸಪ್ಪ ಕೊಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪತ್ನಿಗೆ ಚಟ್ಟಕಟ್ಟಿ ಮನೆಯ ಹೊರಗಿನಿಂದ ಬೀಗ ಹಾಕಿಕೊಂಡು ಪೊಲೀಸಪ್ಪ ಕಾಣೆಯಾಗಿದ್ದ ಎನ್ನಲಾಗಿದೆ. ಮೃತದೇಹ ಕೊಳೆತು ವಾಸನೆ ಬಂದಾಗ ಸ್ಥಳೀಯರಿಂದ ಪ್ರಕರಣ ಬೆಳಕಿಗೆ ಬಂದಿದೆ. ‌ಮನೆಗೆ ನುಗ್ಗಿ ಭೀಕರವಾಗಿ ಹತ್ಯೆಗೈದ ಬಳಿಕ ಡೋರ್ ಲಾಕ್ ಮಾಡಿಕೊಂಡು ಹಂತಕ ಪರಾರಿಯಾಗಿದ್ದ ಎನ್ನಲಾಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಈ ದಾರುಣ ಘಟನೆ ನಡೆದಿದೆ. ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಕಾಶಮ್ಮ‌ […]

Continue Reading

ಗೋ ಸಾಗಾಣೆ ವಾಹನ ಹಿಡಿದು ಠಾಣೆಗೆ ತಂದರೂ ನಿರ್ಲಕ್ಷ್ಯ: ಪಿಎಸ್ಐ ಸಸ್ಪೆಂಡ್

ಬೆಳಗಾವಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡಿದವರ ವಿರುದ್ಧ ಎಫ್​ಐಆರ್ ದಾಖಲಿಸದೆ ಬಿಟ್ಟು ಕಳುಹಿಸಿದ್ದಕ್ಕೆ ಹುಕ್ಕೇರಿ ಪೊಲೀಸ್ ಠಾಣೆ ಪಿಎಸ್​ಐ ನಿಖಿಲ್ ಕಾಂಬ್ಳೆ ಅವರನ್ನು ಅಮಾನತುಗೊಳಿಸಿ ಎಸ್​ಪಿ ಭೀಮಾಶಂಕರ ಗುಳೇದ್ ಆದೇಶ ಹೊರಡಿಸಿದ್ದಾರೆ. ಜೂ.26 ರಂದು ಶ್ರೀರಾಮಸೇನೆ ಕಾರ್ಯಕರ್ತರು ಗೋವು ಸಾಗಿಸುತ್ತಿದ್ದ ವಾಹನ ಹಿಡಿದು ಠಾಣೆಗೆ ತಂದಿದ್ದರು. ಪಿಎಸ್​ಐ ನಿಖಿಲ್​ ಕಾಂಬ್ಳೆ ಅಕ್ರಮವಾಗಿ ಗೋವು ಸಾಗಣೆ ಸಂಬಂಧ ಕೇಸ್ ದಾಖಲಿಸದೆ ಅವರನ್ನು ಬಿಟ್ಟು ಕಳುಹಿಸಿದ್ದರು. ಅಲ್ಲದೆ ಮೇಲಾಧಿಕಾರಿಗಳ ಗಮನಕ್ಕೂ ತಂದಿರಲಿಲ್ಲ. ಪೊಲೀಸ್​ ಠಾಣೆಗೆ ಬಂದ ಶ್ರೀರಾಮಸೇನೆ ಕಾರ್ಯಕರ್ತರಲ್ಲಿ ಗಡಿಪಾರಾದ […]

Continue Reading