ಭಾರಿ ಮಳೆ: 3 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್

ಬೆಂಗಳೂರು: ರಾಜ್ಯದ ವಿವಿಧೆಡೆ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಹವಾಮಾನ ಇಲಾಖೆ 3 ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್’ ಮತ್ತು ಬಹುತೇಕ ಎಲ್ಲಾ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ಘೋಷಿಸಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’ ನೀಡಿದ್ದು, ಭಾರಿ ಮಳೆಯಾಗಲಿದೆ. ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ರಾಯಚೂರು, ವಿಜಯಪುರ […]

Continue Reading

ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಿಗೆ 2 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. […]

Continue Reading

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ, ಅಲ್ಲಲ್ಲಿ ಅನಾಹುತ ಸೃಷ್ಟಿ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಆರ್ಭಟ ಜೋರಾಗಿದೆ, ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದ ಕೆಲವು ಕಡೆಗಳಲ್ಲಿ ಅನಾಹುತ ಸೃಷ್ಟಿಯಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಚಾಮರಾಜನಗರ, ಮಂಡ್ಯ, ಹಾಸನ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ, ಹನೂರು ಸೇರಿದಂತೆ ಎಲ್ಲೆಡೆ ಭಾರಿ ಮಳೆಯಾಗಿದೆ, ಬಿಳಿಗಿರಿರಂಗನ ಬೆಟ್ಟದಲ್ಲಿ ಸುಂದರ ಲೋಕ ಸೃಷ್ಟಿಯಾಗಿದೆ. ಮಂಡ್ಯ ನಗರದ ಬಿಎಸ್‌ಎನ್‌ಎಲ್ ಕಚೇರಿ ಬಳಿ ರಸ್ತೆಯಲ್ಲಿ ಹೆಚ್ಚು ನೀರು ನಿಂತ ಹಿನ್ನೆಲೆ ಚರಂಡಿಗೆ ಕಾರು ಉರುಳಿ ಬಿದ್ದಿದೆ. ಹಾಸನ ಜಿಲ್ಲೆಯ ಬೇಲೂರು, ಹೊಳೆನರಸೀಪುರ, […]

Continue Reading

ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 33.4 […]

Continue Reading

ಚಂಡಮಾರುತ ಸೃಷ್ಟಿ: ರಾಜ್ಯದ 21 ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು: ಸಮುದ್ರದ ಎರಡು ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ, ಸ್ಪಷ್ಟ ಚಂಡಮಾರುತ ಪರಿಚಲನೆ ದಾಖಲಾಗಿದೆ. ಈ ಕಾರಣದಿಂದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಂದಿನ 05 ದಿನಗಳ ಕಾಲ (ಏಪ್ರಿಲ್ 8 ರವರೆಗೆ) ಗುಡುಗು ಮಿಂಚು, ಬಿರುಗಾಳಿ ಸಹಿತ ಭಾರಿ ಮಳೆ ಅಬ್ಬರಿಸಲಿದೆ. ಕರ್ನಾಟಕದಲ್ಲಿ ಇಂದಿನಿಂದ ಏಪ್ರಿಲ್ 6ರವರೆಗೆ (ಗುರುವಾರ-ರವಿವಾರ) 21 ಜಿಲ್ಲೆಗಳಿಗೆ ಭಾರಿ ಮಳೆ ಪ್ರಯುಕ್ತ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ರಾಜ್ಯದಲ್ಲಿ ಕೆಲವೆಡೆ ಬಿಸಿಲಿನ ತಾಪ ಹೆಚ್ಚಾಗಿತ್ತು, ಈ ಮಧ್ಯೆ ಬದಲಾದ ಹವಾಮಾನ ವೈಪರಿತ್ಯದ ಪ್ರಭಾವದಿಂದಾಗಿ […]

Continue Reading

ಇಂದಿನಿಂದ ಒಂದು ವಾರ ರಾಜ್ಯದಲ್ಲಿ ಗಾಳಿ ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಬುಧವಾರದಿಂದ ಒಂದು ವಾರ ಭಾರಿ ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಚುರುಕುಗೊಂಡಿರುವುದರಿಂದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಂಗಳವಾರದಿಂದಲೇ ವಿವಿಧೆಡೆ ಮೋಡ ಕವಿದ ವಾತಾವರಣ ಕಂಡು ಬರುತ್ತಿದೆ. ಬುಧವಾರ ಹಾಗೂ ಗುರುವಾರದಿಂದ ಮಳೆಯ ಪ್ರಮಾಣ ಹೆಚ್ಚಾಗುವ ಲಕ್ಷಣ ಕಂಡು ಬಂದಿದೆ. ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ […]

Continue Reading