ರಾಜ್ಯದ ಪೊಲೀಸರಿಗೆ ಇವತ್ತಿಂದ ಪಿ-ಕ್ಯಾಪ್ ಭಾಗ್ಯ: ಹಳೆಯ ಸ್ಲೋಚ್ ಹ್ಯಾಟ್‌ಗಳಿಗೆ ಗುಡ್ ಬೈ

ಬೆಂಗಳೂರು: ರಾಜ್ಯದ ಪೊಲೀಸ್‌ ಕಾನ್‌ಸ್ಟೆಬಲ್‌ ಹಾಗೂ ಹೆಡ್‌ ಕಾನ್‌ಸ್ಟೆಬಲ್‌ಗಳು ಧರಿಸುತ್ತಿದ್ದ ‘ಸ್ಲೋಚ್ ಹ್ಯಾಟ್’ ಬದಲಿಗೆ ‘ಪಿ-ಕ್ಯಾಪ್‌’ಗಳನ್ನು ವಿತರಣೆ ಮಾಡಲಾಗುತ್ತಿದೆ. ಹೊಸ ಟೋಪಿಗಳು ಇಂದಿನಿಂದಲೇ ಪೊಲೀಸರ ಕೈಸೇರಲಿವೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಅವರು ಹೊಸ ಕ್ಯಾಪ್‌ಗಳನ್ನು ವಿತರಣೆ ಮಾಡಲಿದ್ದಾರೆ. ನಂತರ ಹಂತಹಂತವಾಗಿ ವಿವಿಧ ಜಿಲ್ಲೆಗಳ ಕಾನ್‌ಸ್ಟೆಬಲ್‌ ಹಾಗೂ ಹೆಡ್‌ಕಾನ್‌ಸ್ಟೆಬಲ್‌ಗಳಿಗ ಹೊಸ ಕ್ಯಾಪ್‌ ವಿತರಣೆ ನಡೆಯಲಿದೆ. ಜೂನ್‌ನಲ್ಲಿ ನಡೆದಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಹೊಸ […]

Continue Reading

ನಕಲಿ ಲೋಕಾಯುಕ್ತ ಜಸ್ಟೀಸ್ ಹಾವಳಿಗೆ ಬೆಚ್ಚಿಬಿದ್ದ ಅಧಿಕಾರಿಗಳು

ಬೆಂಗಳೂರು: ಹಣ ಮಾಡೋದಕ್ಕೆ ಅಡ್ಡದಾರಿ ಹಿಡಿಯೋ ಸೈಬರ್ ವಂಚಕರು ಈ ಬಾರಿ ಬಳಸಿದ್ದು ನ್ಯಾಯಾಧೀಶರ ಹೆಸರನ್ನು. ಅಚ್ಚರಿ ಅನಿಸಿದ್ದರು ಇದು ನಿಜ. ಲೋಕಾಯುಕ್ತ ಜಸ್ಟೀಸ್ ಹೆಸರಲ್ಲಿ ಅಧಿಕಾರಿಗಳಿಗೆ ಫೋನ್ ಮಾಡಿ ಬೆದರಿಕೆ ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಫೋನ್ ಮಾಡಿ ನಿಮ್ಮ ಇಲಾಖೆಯಲ್ಲಿ ಭ್ರಷ್ಟಚಾರ ನಡೆಯುತ್ತಿದೆ. ನಿಮ್ಮ ಮೇಲಿನ ಆರೋಪಿಗಳಿಂದ ರೇಡ್ ಮಾಡ್ತಿವಿ ಅಂತ ಬೆದರಿಸೋಕೆ ಶುರು ಮಾಡಿದ್ದಾರೆ. ಟ್ರೂ ಕಾಲರ್‌ನಲ್ಲಿ ಲೋಕಾಯುಕ್ತ ಜಸ್ಟೀಸ್ ಹೆಸರು ಬಳಸಿ ಕರೆ ಮಾಡಿದ್ದಾರೆ. ಇದರಿಂದ ಕರೆ ಸ್ವೀಕರಿಸಿದ ಸರ್ಕಾರಿ ಅಧಿಕಾರಿಗಳು […]

Continue Reading

ಕರ್ನಾಟಕದಲ್ಲಿ 13 ಕಂಪನಿಗಳಿಂದ 27 ಸಾವಿರ ಕೋಟಿ ಹೂಡಿಕೆಗೆ ಅಸ್ತು: 8 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂ ಬಂಡವಾಳ ಹೂಡಿಕೆಗೆ ಒಪ್ಪಿಗೆ ಕೊಡಲಾಗಿದೆ. ಇದರಲ್ಲಿ 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು ಸೇರಿವೆ ಎಂದು ಸಭೆ ಬಳಿಕ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ತಿಳಿಸಿದ್ದಾರೆ. ಒಟ್ಟು 13 ಯೋಜನೆಗಳಿಂದ 8,704 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಹೇಳಿದ್ದಾರೆ. […]

Continue Reading

ಬಿಗ್‌ ಬಾಸ್‌ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲು

ಬೆಂಗಳೂರು: ಪರಿಸರ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಮನೆಗೆ ಬೀಗ ಜಡಿದ ಪ್ರಕರಣ ಮಾಸುವ ಮುನ್ನವೆ ಬಿಗ್‌ಬಾಸ್‌ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ. ಬಿಗ್ ಬಾಸ್ ಮನೆಯಲ್ಲಿ S ಪದ ಬಳಕೆ ಮಾಡಿದಕ್ಕೆ ಅಶ್ವಿನಿಗೌಡ ಮತ್ತು ಆಯೋಜಕರ ವಿರುದ್ಧ ಹೈಕೋರ್ಟ್ ವಕೀಲ ಪ್ರಶಾಂತ್ ಮೆತಾಲ್ ಬಿಡದಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಹ ಸ್ಪರ್ಧಿ ರಕ್ಷಿತಾ ಕುರಿತು ಈ ಮಾತನ್ನು ಆಡಿದ್ದಾರೆ. ಇದೊಂದು ವ್ಯಕ್ತಿತ್ವ ನಿಂದನೆ ಎಂದು ಆರೋಪಿಸಿ ಅಶ್ವಿನಿಗೌಡ, ಕಲರ್ಸ್ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್ […]

Continue Reading

ರಾಜ್ಯದ 10 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ದೀಪಾವಳಿ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿಗೆ ಯೆಲ್ಲೋ ಅಲರ್ಟ್‌ ಜಾರಿಯಾಗಿದ್ದು ಮಧ್ಯಾಹ್ನ ಅಥವಾ ಸಂಜೆ ಮಳೆ ಸುರಿಯುವ ಸಾಧ್ಯತೆಯಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಕೋಲಾರ, ಹಾಸನ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಿಗೂ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. […]

Continue Reading

ಆರ್‌ಎಸ್‌ಎಸ್‌ Vs ಸರ್ಕಾರ: ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಒಪ್ಪಿದ ಲಾಯರ್‌ | ಹೈಕೋರ್ಟ್‌ನಲ್ಲಿ ಏನಾಯಿತು ?

ಕಲಬುರಗಿ: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ವಿಚಾರ ಈಗ ಹೈಕೋರ್ಟ್‌ ಮೆಟ್ಟಿಲೇರಿದೆ. ಆರ್‌ಎಸ್‌ಎಸ್‌ ವಾದವನ್ನು ಕೋರ್ಟ್‌ ಪುರಸ್ಕರಿಸಿದರೆ ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಯುವ ಸಾಧ್ಯತೆಯಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್‌ ಖರ್ಗೆ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಇಂದು ಆರ್‌ಎಸ್‌ಎಸ್‌ ಪಥಸಂಚಲನ ನಡೆಸಲು ಮುಂದಾಗಿತ್ತು. ಆದರೆ ತಾಲೂಕು ಆಡಳಿತ ಅನುಮತಿ ನೀಡದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ಹೈಕೋರ್ಟ್‌ನಲ್ಲಿ ತುರ್ತು ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಪುರಸ್ಕರಿಸಿ ವಿಚಾರಣೆ ನಡೆಸಿದ ಕೋರ್ಟ್‌ ಇಂದು ಯಾವುದೆ ಆದೇಶ ಪ್ರಕಟಿಸದೆ ಮುಂದಿನ […]

Continue Reading

ಅಪ್ಪು ಆ್ಯಪ್ ಟ್ರೈಲರ್‌ಗೆ ಕಿಚ್ಚನ ಧ್ವನಿ: ಆ್ಯಪ್‌ನ ಸ್ಪೆಷಾಲಿಟಿ ಏನು ?

ಪವರ್‌ಸ್ಟಾರ್ ಪುನೀತ್ ರಾಜಕುಮಾರ ಅಗಲಿಕೆಗೆ 4 ವರ್ಷ ತುಂಬುತ್ತಿದೆ. ಇದೆ ವೇಳೆ ಅಭಿಮಾನಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದೆ. ಅಪ್ಪು ಅಭಿಮಾನಿಗಳಿಂದ ಅಭಿಮಾನಿಗಳಿಗಾಗಿ ಅಂತ ಅಪ್ಪು ಪತ್ನಿ ಅಶ್ವಿನಿ ಪುನೀತ್‌ ರಾಜಕುಮಾರ ಹೊಸ ಹೆಜ್ಜೆಯೊಂದನ್ನು ಇಟ್ಟಿದ್ದಾರೆ. ಅಪ್ಪು ಅಪ್ಲಿಕೇಷನ್ ಅನಾವರಣ ಮಾಡಲು ಸಜ್ಜಾಗಿದ್ದಾರೆ. ಅದಕ್ಕೂ ಮೊದಲು ಟ್ರೈಲರ್ ರಿಲೀಸ್ ಮಾಡಲಾಗಿದೆ. ಪುನೀತ್ ರಾಜಕುಮಾರ ಅವರ ಪ್ರತಿಭೆ, ಸಮಾಜಸೇವೆ, ಮಾನವೀಯ ಮೌಲ್ಯಗಳು, ಅವರ ಜೀವನ, ಸಾಧನೆ ಪ್ರತಿಯೊಬ್ಬರಿಗೂ ತಲುಪಿಸಲು ಮತ್ತು ಸ್ಫೂರ್ತಿ ತುಂಬಲು ಪಿಆರ್‌ಕೆ ಹೆಸರಿನ ಅಪ್ಲಿಕೇಶನ್ ನಿರ್ಮಿಸಲಾಗಿದ್ದು, ಅದನ್ನು ಅ.25 […]

Continue Reading

ಸಂಘ ಸಂಸ್ಥೆಗಳು, ಸಂಘಟನೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು: ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಆಸ್ತಿ, ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆಯಬೇಕು ಎಂದು ತಿಳಿಸಲಾಗಿದೆ. ಅ.16 ರಂದು ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಸರ್ಕಾರ ನಿರ್ಣಯ ಕೈಗೊಂಡಿತ್ತು. ಸಂಘ ಸಂಸ್ಥೆಗಳು, ಸಂಘಟನೆಗಳು ಯಾರಿಂದ ಅನುಮತಿ ಪಡೆಯಬೇಕು ?

Continue Reading

ರಾಜ್ಯ ಸರ್ಕಾರಿ ನೌಕರರಿಗೆ ಶೇ.2 ರಷ್ಟು ತುಟ್ಟಿಭತ್ಯೆ ಮಂಜೂರು

ಕಲಬುರಗಿ: ರಾಜ್ಯ ಸರ್ಕಾರಿ ನೌಕರರಿಗೆ 1 ಜುಲೈ 2025 ರಿಂದ ಅನ್ವಯವಾಗುವಂತೆ ಶೇ.2 ರಷ್ಟು ತುಟ್ಟಿ ಭತ್ಯೆಯನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಆರ್ಥಿಕ ಇಲಾಖೆ (ಸೇವೆಗಳು-2) ಸರ್ಕಾರದ ಜಂಟಿ ಕಾರ್ಯದರ್ಶಿ ಉಮಾ ಕೆ ಅವರು ಅಕ್ಟೋಬರ್ 15ರಂದು ಆದೇಶ ಹೊರಡಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರು ಸದ್ಯ 12.25ರಷ್ಟು ತುಟ್ಟಿ ಭತ್ಯೆಯನ್ನು ಅವರ ಮೂಲ ವೇತನಕ್ಕೆ ಪಡೆಯುತ್ತಿದ್ದು ಈಗ ಮಂಜೂರು ಮಾಡಿರುವ ಶೇ.2 ರಷ್ಟು ತುಟ್ಟಿ ಭತ್ಯೆಯಿಂದ ಶೇ.14.25 ಕ್ಕೆ ಹೆಚ್ಚಳವಾಗಿದೆ. […]

Continue Reading

ಎಪಿಎಲ್‌ಗೆ ಬದಲಾದ ಅರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್: ದಾಖಲೆ ಇದ್ದರೆ 45 ದಿನದೊಳಗೆ ಮತ್ತೆ ಬಿಪಿಎಲ್ ಕಾರ್ಡ್ ಭಾಗ್ಯ

ಬೆಂಗಳೂರು: ಎಪಿಎಲ್‌ಗೆ ಬದಲಾದ ಅರ್ಹರಿಗೆ ಮತ್ತೆ ಬಿಪಿಎಲ್‌ ಕಾರ್ಡ್‌ ಭಾಗ್ಯ ಸಿಗಲಿದೆ. ಅನರ್ಹ ಬಿಪಿಎಲ್ ಕಾರ್ಡ್‌ಗಳ ರದ್ದತಿ ಪ್ರಕ್ರಿಯೆ ಮಧ್ಯೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಮೂಲಕ ಅರ್ಹತೆ ಇದ್ದರೂ ಎಪಿಎಲ್‌ಗೆ ಬದಲಾಗಿ ವಂಚಿತರಾದವರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ‌. 45 ದಿನಗಳೊಳಗೆ ಅರ್ಹರಿಗೆ ಮತ್ತೆ ಬಿಪಿಎಲ್ ಕಾರ್ಡ್ ವಿತರಿಸಲು ಸರ್ಕಾರ ಆಹಾರ ಇಲಾಖೆಗೆ ಗಡುವು ಕೊಟ್ಟಿದೆ. ಎಪಿಎಲ್‌ಗೆ ಬದಲಾದವರು ಪೂರಕ ದಾಖಲೆ ಇದ್ದರೆ ಮತ್ತೆ ಬಿಪಿಎಲ್ ಕಾರ್ಡ್ ಪಡೆಯಲು ಅವಕಾಶ ಮಾಡಿಕೊಡಲಾಗಿದೆ. ಒಂದು […]

Continue Reading