ನಾನು ಬಿಎಸ್ಸಿ ಪದವೀಧರ, ಕನ್ನಡ ಬರೆಯಲು ಬರದೆ ಇರುವಷ್ಟು ದಡ್ಡ ನಾನಲ್ಲ: ಸಚಿವ ಶಿವರಾಜ್ ತಂಗಡಗಿ
ಕೊಪ್ಪಳ: ಕನ್ನಡದಲ್ಲಿ ಶುಭವಾಗಲಿ ಎಂದು ಬರೆಯಲು ತಡಕಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಈ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಕನ್ನಡ ಬರೆಯಲು ಬರೊಲ್ಲ ಎಂಬ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಟ್ರೋಲ್ ಆದ ಬಗ್ಗೆ ಮಾತಾಡಿದ್ದಾರೆ. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಸುಳೇಕಲ್‌ನಲ್ಲಿ ಮಾತನಾಡಿರುವ ಅವರು, ನಾನು ಬಿಎಸ್ಸಿ ಪದವೀಧರ. ಕನ್ನಡ ಬರೆಯಲು ಬರದೆ ಇರುವಷ್ಟು ದಡ್ಡ ನಾನಲ್ಲ. […]
Continue Reading