ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ, ಅಲ್ಲಲ್ಲಿ ಅನಾಹುತ ಸೃಷ್ಟಿ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಆರ್ಭಟ ಜೋರಾಗಿದೆ, ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದ ಕೆಲವು ಕಡೆಗಳಲ್ಲಿ ಅನಾಹುತ ಸೃಷ್ಟಿಯಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಚಾಮರಾಜನಗರ, ಮಂಡ್ಯ, ಹಾಸನ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ, ಹನೂರು ಸೇರಿದಂತೆ ಎಲ್ಲೆಡೆ ಭಾರಿ ಮಳೆಯಾಗಿದೆ, ಬಿಳಿಗಿರಿರಂಗನ ಬೆಟ್ಟದಲ್ಲಿ ಸುಂದರ ಲೋಕ ಸೃಷ್ಟಿಯಾಗಿದೆ. ಮಂಡ್ಯ ನಗರದ ಬಿಎಸ್‌ಎನ್‌ಎಲ್ ಕಚೇರಿ ಬಳಿ ರಸ್ತೆಯಲ್ಲಿ ಹೆಚ್ಚು ನೀರು ನಿಂತ ಹಿನ್ನೆಲೆ ಚರಂಡಿಗೆ ಕಾರು ಉರುಳಿ ಬಿದ್ದಿದೆ. ಹಾಸನ ಜಿಲ್ಲೆಯ ಬೇಲೂರು, ಹೊಳೆನರಸೀಪುರ, […]
Continue Reading