2 ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡುವಂತಿಲ್ಲ: ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು: ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಕುಡಿದು ಮಕ್ಕಳು ಸಾವನ್ನಪ್ಪಿದ ಬಳಿಕ ಅಲರ್ಟ್ ಆದ ರಾಜ್ಯ ಆರೋಗ್ಯ ಇಲಾಖೆ ಮಹತ್ವದ ಸಭೆ ನಡೆಸಿ ಕೆಮ್ಮಿನ ಸಿರಪ್ ಬಳಕೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆ ಮಾರ್ಗಸೂಚಿಯ ಪ್ರಕಾರ, 2 ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡುವಂತಿಲ್ಲ. 2-5 ವರ್ಷದ ಮಕ್ಕಳಿಗೆ ತಜ್ಞರ ಸಲಹೆ ಮೇರೆಗೆ ಔಷಧಿ ನೀಡಬೇಕು. ಅಲ್ಲದೆ 5 ವರ್ಷ ಮೇಲ್ಪಟ್ಟ ಮಕ್ಕಳಿಗೆ ವೈದ್ಯರ ಸಲಹೆ ಮೇರೆಗೆ ಔಷಧಿ ನೀಡಬೇಕು. ಕಡಿಮೆ ಅವಧಿಗೆ ಕನಿಷ್ಠ ಅಗತ್ಯವಿರುವ ಡೋಸ್ ಬಳಸಬೇಕು. […]
Continue Reading