ಲಂಚ ಪಡೆದು ಸಿಕ್ಕಿಬಿದ್ದ ಬೆಂಗಳೂರು, ಬೀದರ್, ಮಂಡ್ಯದ​​ ಮೂವರು ವೈದ್ಯರ ಅಮಾನತು

ಬೆಂಗಳೂರು: ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ, ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಮೂವರು ವೈದ್ಯರನ್ನು ಕರ್ನಾಟಕದ ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ. ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ, ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶರೀರ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಚೈತ್ರ ಎಂ.ಎಸ್, ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮೂಳೆ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥ ಡಾ. ಮಂಜಪ್ಪ ಸಿ.ಎನ್, ಬೀದರ್ […]

Continue Reading

ರಾಜ್ಯದಲ್ಲಿ 3 ದಿನ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ 16 ಮತ್ತು 17ರಂದು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿರುವ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಸೆ.18 ರಂದು ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಗ್ರಾಮಾಂತರ, […]

Continue Reading

ಅಂಬುಲೆನ್ಸ್‌ಗೆ ದಾರಿ ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

ಧಾರವಾಡ: ಅಂಬುಲೆನ್ಸ್‌ಗೆ ಎಷ್ಟೋ ಜನ ದಾರಿ ಬಿಟ್ಟುಕೊಡುವುದಿಲ್ಲ. ಇನ್ನು ಸಿಎಂ ಕಾರು ಬರುವಾಗ ಅಂಬುಲೆನ್ಸ್‌ಗೆ ದಾರಿ ಬಿಟ್ಟುಕೊಡುವುದಿಲ್ಲ, ಟ್ರಾಫಿಕ್‌ನಲ್ಲೆ ಅಂಬುಲೆನ್ಸ್ ಸಿಲುಕುತ್ತೆ ಎಂದು ದೂರಿದವರೆ ಹೆಚ್ಚು. ಆದರೆ ಸಿಎಂ ಸಿದ್ದರಾಮಯ್ಯ, ಅಂಬುಲೆನ್ಸ್‌ಗೆ ದಾರಿ ಮಾಡಿಕೊಡುವ ಮೂಲಕ ಅಪವಾದದಿಂದ ಮುಕ್ತರಾಗಿದ್ದಾರೆ. ಎದೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಅಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗುವಾಗ ದಾರಿ ಬಿಟ್ಟುಕೊಟ್ಟಿದ್ದಾರೆ ಸಿಎಂ ಸಿದ್ದರಾಮಯ್ಯ. ಧಾರವಾಡ ಕೃಷಿ ವಿವಿಯ ಕೃಷಿ ಮೇಳ ಉದ್ಘಾಟನೆ ಕಾರ್ಯಕ್ರಮ ಮುಗಿಸಿ ಹುಬ್ಬಳ್ಳಿಗೆ ವಾಪಸ್ ಆಗುತ್ತಿದ್ದ ವೇಳೆ ಧಾರವಾಡ ನಗರದ ಎನ್‌ಟಿಟಿಎಫ್ ಬಳಿ […]

Continue Reading

ಸ್ಯಾಂಡಲ್‌ವುಡ್‌ನ ಬುದ್ಧಿವಂತನಿಗೂ ಹ್ಯಾಕರ್‌ ಕಾಟ: ವಿಡಿಯೋ ಹಂಚಿಕೊಂಡ ಉಪ್ಪಿ ದಂಪತಿ

ಬೆಂಗಳೂರು: ಇತ್ತೀಚೆಗೆ ಮೊಬೈಲ್ ಹ್ಯಾಕರ್‌ಗಳ ಕಾಟ ಹೆಚ್ಚಾಗಿದೆ. ಈ ಬಿಸಿ ಈಗ ಸ್ಯಾಂಡಲ್‌ವುಡ್‌ನ ಬುದ್ಧಿವಂತನಿಗೂ ತಟ್ಟಿದೆ. ಉಪೇಂದ್ರ ಹಾಗೂ ಪ್ರಿಯಾಂಕಾ ದಂಪತಿ ಬೆಳ್ಳಂಬೆಳಗ್ಗೆ ವೀಡಿಯೋ ಮೂಲಕ ತಮ್ಮ ಮೊಬೈಲ್ ಹ್ಯಾಕ್ ಆಗಿರುವ ವಿಚಾರ ಬಹಿರಂಗಪಡಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ನಮ್ಮಿಬ್ಬರ ಫೋನ್ ಹ್ಯಾಕ್ ಆಗಿದೆ. ಯಾರಾದರೂ ನಮ್ಮ ಹೆಸರಲ್ಲಿ ಹಣ ಕೇಳಿದರೆ ಕೊಡಬೇಡಿ, ಅದಕ್ಕೂ ಮುನ್ನ ಅನೌನ್ಸ್ ಮಾಡ್ತಿದ್ದೆವೆ. ಮುಂದೆ ಪೊಲೀಸರಿಗೆ ದೂರು ಕೊಡುತ್ತೆವೆ ಎಂದಿದ್ದಾರೆ ದಂಪತಿ. ಫೋನ್ ಹ್ಯಾಕ್ ಆಗಿದ್ದು ಹೇಗೆ ?ಆನ್‌ಲೈನ್‌ನಲ್ಲಿ ವಸ್ತುವೊಂದನ್ನು […]

Continue Reading

ಹ್ಯಾಂಡ್‌ಶೇಕ್ ನೀಡದಿದ್ದಕ್ಕೆ ಮುಜುಗರ: ಭಾರತದ ವಿರುದ್ಧ ಎಸಿಸಿಗೆ ದೂರು ನೀಡಿದ ಪಾಕ್‌

ದುಬೈ: ಇಲ್ಲಿ ನಡೆದ ಏಷ್ಯಾ ಕಪ್ 2025 ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಗೆದ್ದು ಬೀಗಿದೆ. ಟಾಸ್ ಸಮಯದಲ್ಲಿ ಮತ್ತು ಪಂದ್ಯದ ನಂತರ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಪಾಕ್‌ ತಂಡದ ನಾಯಕ ಸಲ್ಮಾನ್ ಆಘಾ ಅವರನ್ನು ನಿರ್ಲಕ್ಷಿಸಿ, ಹ್ಯಾಂಡ್‌ಶೇಖ್‌ ಸಹ ಮಾಡಲಿಲ್ಲ. ಈ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿದೆ. ಟೀಂ ಇಂಡಿಯಾ ನಾಯಕನ ದಿಟ್ಟತನದಿಂದ ಮುಜುಗರಕ್ಕೊಳಗಾದ ಪಾಕಿಸ್ತಾನ ತಂಡದ ವ್ಯವಸ್ಥಾಪಕ ನವೀದ್ ಅಖ್ತರ್ ಚೀಮಾ, ಭಾರತೀಯ ತಂಡದ ವಿರುದ್ಧ ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ಗೆ ಅಧಿಕೃತವಾಗಿ ದೂರು […]

Continue Reading

ಅಪ್ಪ-ಅಮ್ಮನ ಜಗಳಕ್ಕೆ ಮಕ್ಕಳು ಬಲಿ: ತಂದೆ ನೇಣಿಗೆ ಶರಣು, ಪ್ರಾಣಪಾಯದಿಂದ ತಾಯಿ ಪಾರು

ಬೆಂಗಳೂರು ಗ್ರಾಮಾಂತರ: ಗಂಡ-ಹೆಂಡತಿ ಜಗಳಕ್ಕೆ ಇಬ್ಬರು ಮಕ್ಕಳು ಬಲಿಯಾಗಿರುವ ಘಟನೆ ಹೊಸಕೋಟೆಯ ಗೊಣಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಲ್ಲದೆ ಪತಿಯೂ ಆತ್ಮಹತ್ಯೆಗೆ ಶರಣಾಗಿದ್ದು, ಪತ್ನಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಗಂಡ ಶಿವು, ಮಗಳು ಚಂದ್ರಕಲಾ, ಮಗ ಉದಯ ಸೂರ್ಯ ಸಾವನ್ನಪ್ಪಿದ್ದಾರೆ. ಶಿವು ಪತ್ನಿ ಮಂಜುಳಾ ಪ್ರಾಣಪಾಯದಿಂದ ಪಾರಾಗಿದ್ದಾಳೆ. ಗಂಡ-ಹೆಂಡತಿ ಇಬ್ಬರು ಸಹ ಸಾಲದ ಬಾಧೆಯಲ್ಲಿ ಸಿಲುಕಿಕೊಂಡಿದ್ದರು. ಗಂಡನಿಗೆ ಕೆಲ ದಿನಗಳ ಹಿಂದೆ ಅಪಘಾತವಾಗಿತ್ತು ಎನ್ನಲಾಗಿದೆ. ಇದರಿಂದ ಎಲ್ಲರೂ ಸಹ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಆದರೆ ಮಂಜುಳಾ […]

Continue Reading

ಡ್ರಗ್ ಪೆಡ್ಲರ್‌ಗಳ ಜೊತೆಗೆ ಪೊಲೀಸರ ನಂಟು ಆರೋಪ: ಇನ್‌ಸ್ಪೆಕ್ಟರ್‌ ಸೇರಿ 11 ಪೊಲೀಸರು ಸಸ್ಪೆಂಡ್‌

ಬೆಂಗಳೂರು: ಡ್ರಗ್ ಪೆಡ್ಲರ್‌ಗಳ ಜೊತೆಗೆ ಪೊಲೀಸರ ನಂಟು ಆರೋಪದಲ್ಲಿ ಇನ್‌ಸ್ಪೆಕ್ಟರ್‌ ಸೇರಿದಂತೆ 11 ಜನ ಪೊಲೀಸರನ್ನು ಅಮಾನತು ಮಾಡಲಾಗಿದೆ. ಚಾಮರಾಜಪೇಟೆ, ಜೆಜೆ ನಗರ ಪೊಲೀಸರನ್ನು ಅಮಾನತು ಮಾಡಿ ಪೊಲೀಸ್ ಕಮಿಷನರ್ ಸೀಮಂತಕುಮಾರ್ ಸಿಂಗ್ ಅದೇಶ ಹೊರಡಿಸಿದ್ದಾರೆ. ನಾಲ್ವರು ಡ್ರಗ್ ಪೆಡ್ಲರ್‌ಗಳ ಜೊತೆಗೆ ಸಂಬಂಧ ಹೊಂದಿದ ಆರೋಪದಲ್ಲಿ ಚಾಮರಾಜಪೇಟೆ ಇನ್‌ಸ್ಪೆಕ್ಟರ್‌ ಟಿ.ಮಂಜಣ್ಣ ಸೇರಿ ಹನ್ನೊಂದು ಪೊಲೀಸ್‌ ಸಿಬ್ಬಂದಿ ಅಮಾನತಾಗಿದ್ದಾರೆ. ಪೊಲೀಸರು ತಿಂಗಳಿಗೆ ಒಂದೂವರೆಯಿಂದ 2 ಲಕ್ಷ ಮಾಮೂಲಿ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

Continue Reading

ಕುಟುಂಬ ರಾಜಕಾರಣ: ದೇಶದಲ್ಲಿ ಕರ್ನಾಟಕಕ್ಕೆ ನಾಲ್ಕನೇ ಸ್ಥಾನ

ನವದೆಹಲಿ: ದೇಶದಲ್ಲಿ ಕುಟುಂಬ ರಾಜಕಾರಣ ಎಷ್ಟು ಬೇರೂರಿದೆ ಎಂಬ ವರದಿಯೊಂದು ಬಹಿರಂಗಪಡಿಸಿದೆ. ದೇಶದಲ್ಲಿ 21% ಸಂಸದರು, ಶಾಸಕರು ಕುಟುಂಬ ರಾಜಕಾರಣದ ಹಿನ್ನೆಲೆ ಹೊಂದಿದವರು ಎನ್ನಲಾಗಿದೆ. ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್ ವರದಿಯಲ್ಲಿ ಈ ಮಾಹಿತಿ ಹೊರಹಾಕಿದೆ. ಕುಟುಂಬ ರಾಜಕಾರಣದಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ 94 ಜನ ವಂಶಪಾರಂಪರ್ಯದಿಂದ ಅಧಿಕಾರಕ್ಕೆ ಬಂದವರಿದ್ದಾರೆ. ಉತ್ತರ ಪ್ರದೇಶದಲ್ಲಿ 141 ಜನ, ಮಹಾರಾಷ್ಟ್ರದಲ್ಲಿ 129 ಜನ, ಬಿಹಾರದಲ್ಲಿ 96 ಜನ ಇದ್ದಾರೆ. ಕೊನೆಯ ಸ್ಥಾನದಲ್ಲಿ ಅಸ್ಸಾಂ ಇದ್ದು, ಇಲ್ಲಿ ಕೇವಲ 9 […]

Continue Reading

ಆಡಿಷನ್‌ನಲ್ಲಿ ಪರಿಚಯ, ಲವ್‌ ಮ್ಯಾರೇಜ್‌: ಎಸ್‌‌.ನಾರಾಯಣ ಮಗ-ಸೊಸೆ ನಡುವೆ ಬಿರುಕು ಬರಲು ಕಾರಣ ಇದೆನಾ ?

ಬೆಂಗಳೂರು: ನಿರ್ದೇಶಕ ಎಸ್ ನಾರಾಯಣ್ ಕುಟುಂಬದ ವಿರುದ್ಧ ದಾಖಲಾಗಿರುವ ವರದಕ್ಷಿಣೆ ಪ್ರಕರಣದ ಸಂಬಂಧ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ನೋಟಿಸ್ ನೀಡಿರುವ ಖಾಕಿ ಟೀಂ ಸ್ಪಾಟ್ ಮಹಜರು ನಡೆಸಿದ್ದಾರೆ‌. ಪವಿತ್ರಾಗೆ ಎಸ್ ನಾರಾಯಣ್ ಅವರ ಎರಡನೇ ‌ಪುತ್ರ ಪವನ್‌ ಸಿನಿಮಾದ ಆಡಿಷನ್‌ನಲ್ಲಿ ಪರಿಚಯವಾಗಿದ್ದರು, ನಂತರ ‌ಇಬ್ಬರ ನಡುವೆ ಪ್ರೇಮಾಂಕುರವಾಗಿ ಮನೆಯವರನ್ನು ಒಪ್ಪಿಸಿ ಮದುವೆಯಾಗಿದ್ದರು. ಒಂದು ವರ್ಷದ ನಂತರ 2022 ರಲ್ಲಿ ಆರ್’ಆರ್ ನಗರದಲ್ಲಿರುವ ಎಸ್ ನಾರಾಯಣ್ ನಿವಾಸದಿಂದ ಹೊರಬಂದು ಸಪ್ರೇಟಾಗಿ ಜೀವನ ಆರಂಭಿಸಿದ್ದರು. ಆಗ ಗಂಡನಿಗೆ ಕಾರು ಕೊಡಿಸಿದ್ದಾರೆ […]

Continue Reading

ಗಣಪತಿ ಮೆರವಣಿಗೆ ವೇಳೆ ಭೀಕರ ದುರಂತ: ಟ್ರಕ್‌ ಹರಿದು 6 ಜನ ಸ್ಥಳದಲ್ಲೆ ಸಾವು

ಹಾಸನ: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ದುರಂತ ಸಂಭವಿಸಿದೆ. ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್‌ ಹರಿದು 6 ಮಂದಿ ಮೃತಪಟ್ಟಿದ್ದಾರೆ. ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಅವಘಡದಲ್ಲಿ 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ದೌಡಾಯಿಸಿದ್ದಾರೆ.

Continue Reading