ಮಲೆನಾಡು, ಕಲ್ಯಾಣ ಕರ್ನಾಟಕದಲ್ಲಿ ಭಾರಿ ಮಳೆ: 5 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು: ರಾಜ್ಯದ ಚಿಕ್ಕಮಗಳೂರು, ಕೊಡಗು ಮತ್ತು ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ರವಿವಾರ ಧಾರಾಕಾರ ಮಳೆಯಾಗಿದೆ. ಮಳೆಯ ಅಬ್ಬರಕ್ಕೆ ಮಲೆನಾಡಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಕುದುರೆ ಮುಖ ಭಾಗದಲ್ಲಿ ಭಾರಿ ಮಳೆ ಇದ್ದು, ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಶೃಂಗೇರಿ ಪಟ್ಟಣದ ಗಾಂಧಿ ಮೈದಾನ, ದೇಗುಲದ ವಾಹನ ನಿಲುಗಡೆ ತಾಣದಲ್ಲಿದ್ದ ವಾಹನಗಳು ನೀರಿನಲ್ಲಿ ಮುಳುಗಿವೆ. ಆಸುಪಾಸಿನ ಜಮೀನು, ತೋಟಗಳಿಗೆ ನೀರು ನುಗ್ಗಿದೆ. ಕೊಪ್ಪ, ಕಳಸ, ಎನ್.ಆರ್ ಪುರ, ಮೂಡಿಗೆರೆ ವ್ಯಾಪ್ತಿಯಲ್ಲಿ ಜೋರು ಮಳೆ ಇದೆ. ಚಾರ್ಮಾಡಿ ಘಾಟಿಯಲ್ಲಿ ಜೋರು […]

Continue Reading

ಸಾಲ ಕೊಟ್ಟವರ ಮನೆಯಲ್ಲಿ ಕನ್ನ: ತಂಗಿ ಕೃತ್ಯಕ್ಕೆ ಅಣ್ಣ ಸಾಥ್,​ ಆರು ಜನರ ಬಂಧನ

ನೆಲಮಂಗಲ: ಸಾಲ ತೀರಿಸಲು ಸಾಲ ಕೊಟ್ಟವರ ಮನೆಯಲ್ಲಿ ಕಳ್ಳತನ ಮಾಡಿದ ಗ್ಯಾಂಗ್​ವೊಂದು ಸಿಕ್ಕಿಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಬಾಗಲಗುಂಟೆ ಠಾಣೆಯ ಪೊಲೀಸರು 6 ಜನ ಆರೋಪಿಗಳನ್ನು ಬಂಧಿಸಿ, 9.9 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಕುಖ್ಯಾತ ಕಳ್ಳ ಮೋರಿ ರಾಜ, ವೆಂಕಟೇಶ್, ಕವಿತಾ, ಹರೀಶ್, ನಾಗರಾಜ್ ಮತ್ತು ಪ್ರತಾಪ್​ ಬಂಧಿತರು. ಘಟನೆ ಸಂಬಂಧ ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ನೇಹ ಧಮ್ ಬಿರಿಯಾನಿ ಹೆಸರಿನ ಹೋಟೆಲ್ ನಡೆಸುತ್ತಿದ್ದ ಉದ್ಯಮಿ ಮಂಗಳಾ ಎಂಬುವವರ ಬಳಿ ಕವಿತಾ […]

Continue Reading

ಪಂಚಾಯಿತಿಗಳಿಗೆ ಏಕಕಾಲದಲ್ಲಿ ಚುನಾವಣೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು, ಪಂಚಾಯಿತಿಗಳಿಗೆ ಹೆಚ್ಚಿನ ಅಧಿಕಾರ ನೀಡುವ ಕುರಿತು ಸಮಗ್ರ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ವಿಧಾನಪರಿಷತ್‌ನಲ್ಲಿ ಗಮನ ಸೆಳೆಯುವ ಸೂಚನೆಯಡಿ ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ಹಾಗೂ ಬಿಜೆಪಿಯ ಡಿ.ಎಸ್‌ ಅರುಣ್‌ ಅವರ, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಿಗೆ ಶೀಘ್ರ ಚುನಾವಣೆ ನಡೆಸುವ ವಿಷಯದ ಬಗ್ಗೆ ಉತ್ತರ ನೀಡಿದರು. ಸ್ಥಳೀಯ ಸಂಸ್ಥೆಗಳಿಗೆ […]

Continue Reading

ಎಟಿಎಂ ಕಳ್ಳತನ ಮಾಡುವಾಗಲೇ ಎಎಸ್ಐಯಿಂದ ಕಳ್ಳ ಅರೆಸ್ಟ್‌

ಬಳ್ಳಾರಿ: ಮಧ್ಯರಾತ್ರಿ ಎಟಿಎಂ ದರೋಡೆ ಮಾಡುತ್ತಿದ್ದ ಖದೀಮನನ್ನ ಬಳ್ಳಾರಿಯ ಗಸ್ತು ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದು ಹೆಡೆಮುರಿ ಕಟ್ಟಿದ್ದಾರೆ. ಕಳ್ಳನನ್ನು ಹಿಡಿದ ಪೊಲೀಸ್ ಅಧಿಕಾರಿಯ ಸಾಹಸದ ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೈ ಜುಮ್ಮೆನಿಸುತ್ತದೆ. ಎಎಸ್ಐ ಮಲ್ಲಿಕಾರ್ಜುನ ಖದೀಮನನ್ನ ಬಂಧಿಸಿದ್ದಾರೆ. ಆಂಧ್ರದ ಅನಂತಪುರದ ವೆಂಕಟೇಶ್ ಬಂಧಿತ ಆರೋಪಿ. ಕಳ್ಳನನ್ನು ಹಿಡಿಯುವಾಗ ಸ್ವಲ್ಪ ಯಾಮಾರಿದರೂ ಎಎಸ್ಐ ಮೇಲೆ ದರೋಡೆಕೋರ ಭಯಾನಕ ದಾಳಿ ಮಾಡುತ್ತಿದ್ದ. ಹೀಗಾಗಿ ಸರ್ಕಸ್ ಮಾಡಿ ಖದೀಮನನ್ನು ಹೆಡೆಮುರಿ ಕಟ್ಟುವಲ್ಲಿ ಎಎಸ್ಐ ಯಶಸ್ವಿಯಾಗಿದ್ದಾರೆ. ಖದೀಮ […]

Continue Reading

ನನ್ನ ವಜಾದ ಹಿಂದೆ ಪಿತೂರಿ, ಷಡ್ಯಂತ್ರವಿದೆ – ಯಾರು ಹಿಂದಿದ್ದಾರೆ ಗೊತ್ತಿದೆ: ರಾಜಣ್ಣ ಬಾಂಬ್‌

ಬೆಂಗಳೂರು: ನನ್ನ ವಜಾದ ಹಿಂದೆ ಪಿತೂರಿ ಮತ್ತು ಷಡ್ಯಂತ್ರವಿದೆ. ಏನ್‌ ಆಗಿದೆ ? ಯಾರು ಹಿಂದೆ ಇದ್ದಾರೆ ಎಲ್ಲಾ ಗೊತ್ತಿದೆ. ಕಾಲ ಬಂದಾಗ ಅದನ್ನು ತಿಳಿಸುತ್ತೆನೆ ಎಂದು ಮಾಜಿ ಸಚಿವ ಕೆ.ಎನ್‌ ರಾಜಣ್ಣ ಬಾಂಬ್‌ ಸಿಡಿಸಿದ್ದಾರೆ. ಮಂತ್ರಿ ಸ್ಥಾನದಿಂದ ವಜಾಗೊಳಿಸಿದ ಬೆನ್ನಲ್ಲೇ ರಾಜಣ್ಣ ಅವರು ತಮ್ಮ ಆಪ್ತ ಸಚಿವರು, ಶಾಸಕರ ಜೊತೆ ಸಿಎಂ ಸಿದ್ದರಾಮಯ್ಯ ಅವರನ್ನು ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಮಾಜಿಯಾಗಿ ನಿಮ್ಮ […]

Continue Reading

ಮೋದಿ ಚಾಲನೆ ಕೊಟ್ಟಿರುವ ಹಳದಿ ಮಾರ್ಗದ ಮೆಟ್ರೋ ಟಿಕೆಟ್ ದರ ಎಷ್ಟು ? ಎಲ್ಲೆಲ್ಲಿ ನಿಲುಗಡೆ ?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನ ಆರ್​​.ವಿ ರಸ್ತೆಯಿಂದ ಬೊಮ್ಮಸಂದ್ರದ ನಡುವಿನ ಹಳದಿ ಮಾರ್ಗದ ಮೆಟ್ರೋ ಸಂಚಾರಕ್ಕೆ ಚಾಲನೆ ನೀಡಿದರು. ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದರು, ಈ ವೇಳೆ ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಮನೋಹರ್​ ಲಾಲ್ ಖಟ್ಟರ್, ಶೋಭಾ ಕರಂದ್ಲಾಜೆ, ಡಿಸಿಎಂ ಡಿ.ಕೆ ಶಿವಕುಮಾರ​, ಸಂಸದರಾದ ಡಾ.ಸಿ.ಎನ್ ಮಂಜುನಾಥ, ತೇಜಸ್ವಿ ಸೂರ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ಉಪಸ್ಥಿತರಿದ್ದರು. 2014ರಲ್ಲಿ ಆರಂಭವಾದ […]

Continue Reading

ಸಮಾಧಿ ನೆಲಸಮಕ್ಕೆ ಅವನೇ ಕಾರಣ: ಗೀತಾ ಬಾಲಕೃಷ್ಣ

ಬೆಂಗಳೂರು: ರಾಜ್ಯಾದ್ಯಂತ ಅಭಿಮಾನಿಗಳ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನಟ ವಿಷ್ಣುವರ್ಧನ್ ಸಮಾಧಿ ನೆಲಸಮ ವಿಚಾರಕ್ಕೆ ಸಂಬಂಧಿಸಿದಂತೆ ಇದೆ ಮೊದಲ ಬಾರಿಗೆ ದಿ.ನಟ ಬಾಲಕೃಷ್ಣ ಅವರ ಕುಟುಂಬದ ಸದಸ್ಯರೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ. ನಟ ಬಾಲಕೃಷ್ಣ ಅವರಿಗೆ ಸೇರಿದ ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ವಿಷ್ಣುವರ್ಧನ್ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮ ಮಾಡಲಾಗಿರುವ ವಿಚಾರಕ್ಕೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಭಿಮಾನಿಗಳು ಈ ಕೃತ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವಂತೆ ಈ ಕುರಿತು ನಟ ಬಾಲಕೃಷ್ಣ ಕುಟುಂಬದ ಸದಸ್ಯರು ಪ್ರತಿಕ್ರಿಯೆ ನೀಡಿದ್ದಾರೆ. ಘಟನೆ ಕುರಿತು […]

Continue Reading

ವಿಷ್ಣು ಸ್ಮಾರಕಕ್ಕಾಗಿ ಕೋರ್ಟಿಗೆ ಬೇಕಾದರೂ ಹೋಗ್ತಿನಿ, ಹಣ ಕೊಡಲು ರೆಡಿ ಇದ್ದಿನಿ: ಕಿಚ್ಚ ಸುದೀಪ್‌

ಎಕ್ಸ್‌ ಖಾತೆಯಲ್ಲಿ (ಟ್ವಿಟರ್) ಸುದೀರ್ಘ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಕಿಚ್ಚ ಸುದೀಪ್‌, ನಾವು ನಂಬಿಕೆಯಿಟ್ಟಂತಹ ದೇವಸ್ಥಾನ ಒಡೆದಾಗ ಎಷ್ಟು ನೋವಾಗುತ್ತದೆಯೊ ಅಷ್ಟೇ ನೋವು, ಸಂಕಟ ನನಗಾಗಿದೆ. ವಿಷ್ಣು ಸ್ಮಾರಕ ಉಳಿಸಿಕೊಳ್ಳಲು ಸಾಕಷ್ಟು ಹೋರಾಟ ಮಾಡಿದ್ದೆವು. ಸಂಬಂಧ ಪಟ್ಟ ಮಂತ್ರಿಗಳಿಗೆ ಹೇಳಿದೆವು. ಅದಕ್ಕೆ ಹಣಕಾಸು ಬೇಕಾ ? ಮತ್ತೆನಾದರೂ ಬೇಕಾ ? ಎಲ್ಲದಕ್ಕೂ ನಾವು ಸಿದ್ಧರಿದ್ದಿವಿ ಅಂತ ನಾನೇ ಸ್ವತಃ ಹೇಳಿದ್ದೆ. ಆದರೂ ಸರ್ಕಾರ ಇದರ ಬಗ್ಗೆ ಗಮನ ಹರಿಸಲಿಲ್ಲ. ಆ ಭೂಮಿ ಖರೀದಿ ಮಾಡಿರುವವರಲ್ಲಿ ನನ್ನದೊಂದು ಮನವಿ-ನಿಮಗೆ ಎಷ್ಟು […]

Continue Reading

4 ಗಂಟೆಯಲ್ಲಿ 3 ಕಾರ್ಯಕ್ರಮ: ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳಾಪಟ್ಟಿ

ಬೆಂಗಳೂರು: ನಮ್ಮ ಮೆಟ್ರೋದ ಹಳದಿ ಮಾರ್ಗ​ ಮತ್ತು ಬೆಂಗಳೂರು – ಬೆಳಗಾವಿ ನಡುವಿನ ವಂದೆ ಭಾರತ್​ ರೈಲಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಆಗಸ್ಟ್ 10) ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಕುರಿತು ವೇಳಾಪಟ್ಟಿ ಹಂಚಿಕೊಂಡಿರುವ ಸಿಎಂ ಕಚೇರಿ, ಮೋದಿ ಅವರು 4 ಗಂಟೆಗಳ ಕಾಲ ಇರಲಿದ್ದು, ಈ ವೇಳೆ 3 ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಹೆಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ, ಕೆಎಸ್​ಆರ್​ ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಆಗಮಿಲಿದ್ದು, ಅಲ್ಲಿ ಬೆಂಗಳೂರು- […]

Continue Reading

ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ: ಅಭಿಮಾನಿಗಳಿಂದ ತೀವ್ರ ಆಕ್ರೋಶ

ಬೆಂಗಳೂರು: ಅಭಿಮಾನಿಗಳ ವಿರೋಧದ ನಡುವೆಯೂ ಡಾ.ವಿಷ್ಣುವರ್ಧನ್‌ ಅವರ ಸಮಾಧಿಯನ್ನು ತೆರವುಗೊಳಿಸಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹೈಕೋರ್ಟ್‌ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿಯನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಇದರಿಂದ ಆಘಾತಕ್ಕೆ ಒಳಗಾಗಿರುವ ವಿಷ್ಣು ಅಭಿಮಾನಿಗಳು ಸರ್ಕಾರ, ಪೊಲೀಸ್‌ ಇಲಾಖೆ ಮತ್ತು ವಾಣಿಜ್ಯ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. 35 ವರ್ಷಗಳ ಕಲಾಸೇವೆ ಮತ್ತು 200 ಕನ್ನಡ ಚಲನಚಿತ್ರದಲ್ಲಿ ಅಭಿನಯಿಸಿ ಕನ್ನಡಿಗರ ಮನಗೆದ್ದ ಡಾ.ವಿಷ್ಣುವರ್ಧನ್‌ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಕೆಂಗೇರಿಯಲ್ಲಿರುವ ಅಭಿಮಾನ್‌ ಸ್ಟುಡಿಯೋ ಆವರಣದಲ್ಲಿ ನಡೆಸಲಾಗಿತ್ತು. ನಂತರದಲ್ಲಿ ವಿಷ್ಣು ಸಮಾಧಿಯನ್ನು […]

Continue Reading