ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹುಲಿ ಅಟ್ಯಾಕ್‌, ವ್ಯಾಘ್ರನ ಬಾಯಿಂದ ರಕ್ಷಿಸಿದ ಸಹೋದ್ಯೋಗಿಗಳು

ಕೋಲ್ಕತ್ತಾ: ಸುಂದರಬನ್ಸ್‌ನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹುಲಿ ದಾಳಿ ನಡೆಸಿದ ಘಟನೆ ನಡೆದಿದೆ. ಹುಲಿ ದಾಳಿಗೊಳಗಾದ ಅರಣ್ಯ ಇಲಾಖೆ ನೌಕರನನ್ನು ತಕ್ಷಣ ಸಹೋದ್ಯೋಗಿಗಳು ರಕ್ಷಿಸಿದ್ದಾರೆ. ನೌಕರನನ್ನು ರಕ್ಷಿಸುತ್ತಿರುವ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಸುಂದರಬನ್ಸ್‌ ಅಭಯಾರಣ್ಯದಲ್ಲಿ ಸೋಮವಾರ ಬೆಳಿಗ್ಗೆ ಅರಣ್ಯ ಇಲಾಖೆಯ ಸಿಬ್ಬಂದಿ ಹುಲಿಯನ್ನು ಅಜ್ಮಲ್ಮರಿ ಅರಣ್ಯಕ್ಕೆ ಅಟ್ಟಲು ಯತ್ನಿಸುತ್ತಿದ್ದರು. ಈ ವೇಳೆ ನೌಕರನ ಮೇಲೆ ಹುಲಿ ದಾಳಿ ಮಾಡಿದೆ.‌ ಎಂಟರಿಂದ ಹತ್ತು ಅರಣ್ಯ ಇಲಾಖೆಯ ಸಿಬ್ಬಂದಿ ಹುಲಿಯನ್ನು ಮತ್ತೆ ಕಾಡಿಗೆ […]

Continue Reading

10, 20 ನಾಣ್ಯಗಳ ಬಗ್ಗೆ ಕೇಂದ್ರ ಸರ್ಕಾರದ ಪ್ರಮುಖ ಘೋಷಣೆ

ಇತ್ತೀಚೆಗೆ ಕರೆನ್ಸಿ ಬಗ್ಗೆ ಹಲವು ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. 500 ರೂ ನೋಟುಗಳ ನಕಲಿ ಮಾರುಕಟ್ಟೆಯಲ್ಲಿ ಇರುವುದರಿಂದ ಆರ್‌ಬಿಐ ಅವುಗಳನ್ನು ನಿಷೇಧಿಸುತ್ತಿದೆ ಎಂಬ ಸುದ್ದಿ ವೈರಲ್ ಆಗಿತ್ತು. 350 ನೋಟುಗಳನ್ನು ಆರ್‌ಬಿಐ ಮುದ್ರಿಸುತ್ತಿದೆ ಎಂಬ ಸುದ್ದಿಯೂ ವೈರಲ್ ಆಗಿತ್ತು. ಇಂತಹ ಹಲವು ವದಂತಿಗಳಿಂದ ಜನರು ಗೊಂದಲಕ್ಕೊಳಗಾಗಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಬಗ್ಗೆ ಜನರಿಂದ ಬರುತ್ತಿರುವ ಪ್ರಶ್ನೆಗಳಿಗೆ ಆರ್‌ಬಿಐ ಉತ್ತರಿಸಬೇಕಾಗಿದೆ. ನಕಲಿ ನೋಟುಗಳು ಚಲಾವಣೆಯಲ್ಲಿವೆ, ದೊಡ್ಡ ನೋಟುಗಳನ್ನು ಮತ್ತೆ ರದ್ದುಗೊಳಿಸಲಾಗುವುದು ಎಂಬ ವದಂತಿಗಳಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ಆದ್ದರಿಂದ […]

Continue Reading

ಉಪ್ಪಿಟ್ಟು ಬದಲು ಬಿರಿಯಾನಿ, ಚಿಕನ್‌ ಫ್ರೈ ಕೊಡಿ: ಅಂಗನವಾಡಿ ಬಾಲಕನ ಮನವಿಗೆ ಸಚಿವರ ಒಪ್ಪಿಗೆ

ತಿರುವನಂತಪುರಂ: ಅಂಗನವಾಡಿಯಲ್ಲಿ ಉಪ್ಪಿಟ್ಟು ಬದಲಿಗೆ ಬಿರಿಯಾನಿ ಮತ್ತು ಚಿಕನ್‌ ಫ್ರೈ ನೀಡುವಂತೆ ಬಾಲಕ ಮಾಡಿದ ಮನವಿಗೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಒಪ್ಪಿಗೆ ಸೂಚಿಸಿದ್ದಾರೆ. ಊಟದ ಮೆನುವಿನಲ್ಲಿ ಉಪ್ಪಿಟ್ಟು ಬದಲಿಗೆ ಬಿರಿಯಾನಿ, ಚಿಕನ್‌ ಫ್ರೈ ನೀಡಬೇಕು ಎಂದು ಪುಟ್ಟ ಬಾಲಕ ಮನವಿ ಮಾಡಿರುವ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ವೀಡಿಯೋಗೆ ಸಚಿವರು ಸ್ಪಂದಿಸಿದ್ದಾರೆ. ಅಂಗನವಾಡಿಗಳಲ್ಲಿನ ಆಹಾರ ಮೆನುವನ್ನು ಪರಿಶೀಲಿಸಲು ಮತ್ತು ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಶಂಕು ಎಂಬ ಮಗು ಮುಗ್ಧ […]

Continue Reading

ಬಜೆಟ್ 2025: 12 ಲಕ್ಷದವರೆಗೆ ತೆರಿಗೆ ವಿನಾಯಿತಿ

ನವದೆಹಲಿ: ಬಜೆಟ್‌ 2025ರಲ್ಲಿ ಮಧ್ಯಮ ವರ್ಗಕ್ಕೆ ಕೇಂದ್ರ ಸರ್ಕಾರ ಬಂಪರ್‌ ಗಿಫ್ಟ್‌ ಕೊಟ್ಟಿದೆ. ವಾರ್ಷಿಕ 12 ಲಕ್ಷದವರೆಗೆ ಆದಾಯ ಹೊಂದಿರುವವರು ತೆರಿಗೆ ಕಟ್ಟುವಂತಿಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ. ಪ್ರತಿ ಬಾರಿ ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿಯನ್ನು ಹೆಚ್ಚಿಸಬೇಕು ಎಂಬ ಆಗ್ರಹ ಕೇಳಿ ಬರುತ್ತಿತ್ತು. ಹೀಗಾಗಿ ಈ ಬಾರಿ ಗರಿಷ್ಠ 10 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ನೀಡಬಹುದು ಎಂಬ ಮಾತು ಕೇಳಿ ಬಂದಿತ್ತು. ಆದರೆ ಈ ಬಾರಿ ನಿರ್ಮಲಾ ಸೀತಾರಾಮನ್‌ ಅವರು ಬರೋಬ್ಬರಿ […]

Continue Reading

ದಟ್ಟ ಮಂಜಿನಿಂದ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ 50 ವಾಹನಗಳ ನಡುವೆ ಅಪಘಾತ

ಲಕ್ನೋ: ದೆಹಲಿ – ಮೀರತ್ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ದಟ್ಟ ಮಂಜು ಕವಿದ ಪರಿಣಾಮ 50 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ, ಆರಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಅಪಘಾತದಿಂದಾಗಿ ಸಂಚಾರ ದಟ್ಟಣೆ ಉಂಟಾಗಿದೆ, ವಿಡಿಯೋ ವೈರಲ್‌ ಆಗಿದೆ. ಭೋಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೆ ಸಾವುನೋವುಗಳು ಸಂಭವಿಸಿಲ್ಲ. ದಟ್ಟವಾದ ಮಂಜಿನಿಂದಾಗಿ ಈ ಅಪಘಾತ ಸಂಭವಿಸಿದೆ. ಇದರಿಂದಾಗಿ ಸಂಚಾರ ದಟ್ಟಣೆ ಉಂಟಾಗಿದೆ. ಅಪಘಾತಕ್ಕೊಳಗಾದ ವಾಹನಗಳನ್ನು ತೆರವುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಹರಿದು 11 ಜನ ಸಾವು – ಅವಘಡ ಹೇಗಾಯ್ತು ?

ಮುಂಬೈ: ಬೆಂಗಳೂರಿನಿಂದ ದೆಹಲಿಗೆ ಹೋಗುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಹರಿದು 11 ಜನ ಸಾವನ್ನಪ್ಪಿದ್ದಾರೆ ಎಂದು ನಾಸಿಕ್ ರೈಲ್ವೆ ವಿಭಾಗೀಯ ಆಯುಕ್ತ ಪ್ರವೀಣ್ ಗೆದಮ್ ತಿಳಿಸಿದ್ದಾರೆ. ಮಹಾರಾಷ್ಟ್ರದ ಜಲಗಾಂವ್ ದಾಟುತ್ತಿದ್ದ ಪುಷ್ಪಕ್‌ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಪ್ರಯಾಣಿಕರಲ್ಲಿ ಭೀತಿ ಮೂಡಿಸಿತು. ಪ್ರಯಾಣಿಕರು ರೈಲಿನ ಚೈನ್‌ ಎಳೆದಿದ್ದಾರೆ. ರೈಲು ನಿಂತ ತಕ್ಷಣ ಪ್ರಯಾಣಿಕರು ಇಳಿದು ರೈಲ್ವೆ ಹಳಿ ಮೇಲೆ ತೆರಳುತ್ತಿದ್ದರು. ಈ ವೇಳೆ ಮತ್ತೊಂದು ಟ್ರ್ಯಾಕ್‌ನಲ್ಲಿ ವೇಗವಾಗಿ ಬರುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಪ್ರಯಾಣಿಕರ […]

Continue Reading

ಸೈಫ್‌ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ಮೌಲ್ಯದ ಆಸ್ತಿ ಕೇಂದ್ರದ ವಶಕ್ಕೆ ?

ಭೋಪಾಲ್‌: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಪಟೌಡಿ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿಗಳು ಶೀಘ್ರವೇ ಕೇಂದ್ರ ಸರ್ಕಾರದ ನಿಯಂತ್ರಣಕ್ಕೆ ಬರುವ ಸಾಧ್ಯತೆ ಹೆಚ್ಚಾಗಿದೆ. ಈ ಆಸ್ತಿಗಳ ಮೇಲೆ 2015ರಲ್ಲಿ ವಿಧಿಸಲಾಗಿದ್ದ ತಡೆಯಾಜ್ಞೆಯನ್ನು ಮಧ್ಯಪ್ರದೇಶ ಹೈಕೋರ್ಟ್‌ ತೆಗೆದುಹಾಕಿದೆ. ಇದರಿಂದಾಗಿ 1968ರ ಶತ್ರು ಆಸ್ತಿ ಕಾಯ್ದೆಯ ಅಡಿಯಲ್ಲಿ ಅವುಗಳನ್ನು ಸ್ವಾಧೀನಪಡಿಸಿಕೊಳ್ಳಲು ದಾರಿ ಮಾಡಿಕೊಟ್ಟಿದೆ. ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್‌ ಡಿ.13 ರಂದು, 2017 ತಿದ್ದುಪಡಿ ಮಾಡಿದ ಶತ್ರು ಆಸ್ತಿ ಕಾಯ್ದೆ […]

Continue Reading

ಸೈಫ್ ಅಲಿ ಖಾನ್‌ಗೂ ಮುನ್ನ ಶಾರುಖ್ ಖಾನ್ ಮೇಲೆ ದಾಳಿಗೂ ಸ್ಕೆಚ್ ?

ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಹಲ್ಲೆ ಮಾಡಿದ್ದ ದಾಳಿಕೋರನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಸೈಫ್ ಒಬ್ಬರೆ ಅಲ್ಲ, ಶಾರುಖ್ ಖಾನ್ ಮೇಲೆ ಕೂಡ ದಾಳಿ ನಡೆಸಲು ಸ್ಕೆಚ್ ಹಾಕಲಾಗಿತ್ತು ಎಂಬ ಸುಳಿವು ಪೊಲೀಸರಿಗೆ ಸಿಕ್ಕಿದೆ. ಸೈಫ್‌ಗೆ ಚಾಕು ಇರಿದ ದಾಳಿಕೋರನನ್ನು ಮುಂಬೈ ಪೊಲೀಸರು ಬಂಧಿಸಿದ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಸುದ್ದಿಯೊಂದು ಬೆಳಕಿಗೆ ಬಂದಿದೆ. ಸೈಫ್ ಅಲಿ ಖಾನ್‌ಗೆ ಹಲ್ಲೆ ಮಾಡುವ ಮುಂಚೆ ಶಾರುಖ್ ಮನೆಯ ಮುಂದೆ ಕೂಡ ಹಲವು ಬಾರಿ ಕಾಣಿಸಿಕೊಂಡಿದ್ದ ಎಂದು […]

Continue Reading

ಪರಸ್ಪರ ಮದುವೆಯಾದ ಇಬ್ಬರು ಹುಡುಗಿಯರು, ಮುಂದೆನಾಯ್ತು ಗೊತ್ತಾ ?

ಮಧ್ಯಪ್ರದೇಶ: ಇಬ್ಬರು ಹುಡುಗಿಯರು ಪರಸ್ಪರ ಮದುವೆಯಾಗಿದ್ದಾರೆ, ಇಬ್ಬರು ಲಿವ್ ಇನ್ ರಿಲೇಶನ್ ಶಿಪ್ ಸರ್ಟಿಫಿಕೇಟ್ ಕೂಡ ಪಡೆದಿದ್ದಾರೆ. ಮಧ್ಯಪ್ರದೇಶದ ಮಂದಸೌರ್‌ನಿಂದ ಈ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಮಂದಸೌರ್‌ನ ಭೈಸೋದಮಂಡಿ ಪ್ರದೇಶದಲ್ಲಿ ಇಬ್ಬರು ಬಾಲಕಿಯರ ವಿವಾಹವಾಗಿದ್ದಾರೆ. ಇಬ್ಬರಿಗೂ ಲಿವ್ ಇನ್ ರಿಲೇಶನ್ ಶಿಪ್ ಸರ್ಟಿಫಿಕೇಟ್ ಕೂಡ ಸಿಕ್ಕಿದ್ದು, ಮದುವೆಯ ವಿಧಿವಿಧಾನಗಳನ್ನು ಮುಗಿಸಿ ಪರಸ್ಪರ ಜೊತೆಯಾಗಿ ಬಾಳುವುದಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರಲ್ಲಿ ಒಬ್ಬ ಹುಡುಗಿಯ ಹೆಸರು ಸೋನಂ, ಇನ್ನೊಬ್ಬ ಹುಡುಗಿಯ ಹೆಸರು ರೀನಾ, ರೀನಾ ವಯಸ್ಸು […]

Continue Reading

ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಇನ್‌ಸ್ಟಾಗ್ರಾಂ ಲಾಗಿನ್ ಸಮಸ್ಯೆ

ನವದೆಹಲಿ: ಇನ್‌ಸ್ಟಾಗ್ರಾಂ ಬಳಕೆದಾರರು ಈಗ ಆಕ್ರೋಶ ಹೊರಹಾಕುತ್ತಿದ್ದಾರೆ. ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಇನ್‌ಸ್ಟಾಗ್ರಾಂ ಡೌನ್ ಆಗಿದೆ. ಬಳಕೆದಾರರು ಖಾತೆಗೆ ಲಾಗಿನ್ ಆಗಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ. ಸರ್ವರ್ ಸಮಸ್ಯೆ ಕಾಡಿದ್ದು, ವಿಶ್ವದ ಹಲವು ಭಾಗದಲ್ಲಿ ಇನ್‌ಸ್ಟಾಗ್ರಾಂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರು ನೀಡಿದ್ದಾರೆ. ಡೌನ್‌ಡಿಟೆಕ್ಟರ್ ವರದಿ ಪ್ರಕಾರ, ಬೆಳಗ್ಗೆ 19.37ರ ಸುಮಾರಿಗೆ ಇನ್‌ಸ್ಟಾಗ್ರಾಂ ಸರ್ವರ್ ಸಮಸ್ಯೆ ಕಾಣಿಸಿಕೊಂಡು ಲಾಗಿನ್ ಆಗಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. 1 ಸಾವಿರಕ್ಕೂ ಹೆಚ್ಚು ರಿಪೋರ್ಟ್ಸ್ ಬೆಳಗ್ಗೆ 10.45ರ ವೇಳೆಗೆ ಇನ್‌ಸ್ಟಾಗ್ರಾಂ ಸಮಸ್ಯೆ […]

Continue Reading