ಧಾರ್ಮಿಕ ಸೌಹಾರ್ದಕ್ಕೆ ಧಕ್ಕೆ ತರಬೇಡಿ: ಸಿಪಿಐ ಜಗದೇವಪ್ಪ ಪಾಳಾ

ಚಿತ್ತಾಪುರ: ಮೊಹರಂ ಹಬ್ಬವು ಮುಸ್ಲಿಮರು ಮತ್ತು ಹಿಂದೂಗಳು ಸಾಮೂಹಿಕವಾಗಿ ಆಚರಿಸುವ ಹಬ್ಬವಾಗಿದೆ. ಎಲ್ಲಾ ಧರ್ಮದವರು ಪರಸ್ಪರ ಗೌರವ, ಪ್ರೀತಿ, ವಿಶ್ವಾಸ, ನಂಬಿಕೆಯಿಂದ ಹಬ್ಬದ ಆಚರಣೆ ಮಾಡಬೇಕು. ಧಾರ್ಮಿಕ ಸೌಹಾರ್ದಕ್ಕೆ ಯಾರೂ ಧಕ್ಕೆ ತರುವ ಕೆಲಸ ಮಾಡಬಾರದು ಎಂದು ಕಾಳಗಿ ಸಿಪಿಐ ಜಗದೇವಪ್ಪ ಪಾಳಾ ಹೇಳಿದರು. ತಾಲೂಕಿನ ದಂಡೋತಿ ಗ್ರಾಮದಲ್ಲಿ ಮಾಡಬೂಳ ಪೊಲೀಸ್ ಠಾಣೆ ವತಿಯಿಂದ ಮೊಹರಂ ಹಬ್ಬದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಶಾಂತಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಹಿಂದೂ – ಮುಸ್ಲಿಂ ಸೌಹಾರ್ದಕ್ಕೆ ಹೆಸರಾಗಿರುವ ಮೊಹರಂ ಹಬ್ಬವನ್ನು […]

Continue Reading

ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರ್ ಅವರಿಗೆ ಪಾಟೀಲ ಪುಟ್ಟಪ್ಪ ಸ್ಮಾರಕ ಮಾಧ್ಯಮ ಪ್ರಶಸ್ತಿ

ಬೆಂಗಳೂರು: ಹಿರಿಯ ಪತ್ರಕರ್ತ, ಸಾಹಿತಿ ಮಹಿಪಾಲರೆಡ್ಡಿ ಮುನ್ನೂರ್ ಅವರಿಗೆ ನಾಡೋಜ ಪಾಟೀಲ ಪುಟ್ಟಪ್ಪ ಸ್ಮಾರಕ ಮಾಧ್ಯಮ ಪ್ರಶಸ್ತಿ ಪ್ರಧಾನ ಮಂತ್ರಿಯಿಂದ ಮಾಡಲಾಯಿತು. ನಗರದ ನಯನ ಸಭಾಂಗಣದಲ್ಲಿ ಪತ್ರಕರ್ತರ ವೇದಿಕೆ ಬೆಂಗಳೂರ ವತಿಯಿಂದ ಪತ್ರಿಕಾ ದಿನಾಚರಣೆ ನಿಮಿತ್ಯ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ ಹೆಗಡೆ ಹಾಗೂ ಕಸಾಪ ಮಾಜಿ ರಾಜ್ಯಾಧ್ಯಕ್ಷ ಡಾ.ಮನು ಬಳಿಗಾರ ಅವರು ” ನಾಡೋಜ ಪಾಟೀಲ ಪುಟ್ಟಪ್ಪ ಸ್ಮಾರಕ ಮಾಧ್ಯಮ ಪ್ರಶಸ್ತಿ”ಯನ್ನು ಕಲಬುರಗಿಯ ಹಿರಿಯ ಪತ್ರಕರ್ತ, ಸಾಹಿತಿ ಮಹಿಪಾಲರೆಡ್ಡಿ ಮುನ್ನೂರ್ ಅವರಿಗೆ ಪ್ರಧಾನ […]

Continue Reading

ಪೊಲೀಸ್ ಸಿಬ್ಬಂದಿಗೆ ರೆಡ್ಡಿ ಸೇವೆ ಮಾದರಿ: ಶಂಕರಗೌಡ ಪಾಟೀಲ್

ಚಿತ್ತಾಪುರ: ಪ್ರಸ್ತುತ ದಿನಗಳಲ್ಲಿ ಪೊಲೀಸ್ ಇಲಾಖೆಗೆ ಸೇರುವ ಯುವಕರಿಗೆ ಎಎಸ್‌ಐ ಬಲವಂತರೆಡ್ಡಿ ಸೇವೆ ಮಾದರಿಯಾಗಿದೆ ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ್ ಹೇಳಿದರು. ಪಟ್ಟಣದ ಕಿಂಗ್ ಪ್ಯಾಲೆಸ್‌ ಸಭಾಂಗಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಎಎಸಐ ಬಲವಂತರೆಡ್ಡಿ ಸೇವಾ ನಿವೃತ್ತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಬಲವಂತ ರೆಡ್ಡಿ ಅವರಿಗೆ ವಹಿಸಿದ ಕೆಲಸವನ್ನು ನಿಷ್ಟೆಯಿಂದ ಮಾಡಿ ಮೇಲಾಧಿಕಾರಿಗಳ ಪ್ರೀತಿಗೆ ಪಾತ್ರರಾಗಿದ್ದರು. ಇವರು ನಿಖರ ಮಾಹಿತಿ ಕಲೆ ಹಾಕಿ ಅಪರಾಧಿಗಳನ್ನು ಹಿಡಿಯುವಲ್ಲಿ ನಿಪುಣರಾಗಿದ್ದರು. ಇದಕ್ಕೆ ಉದಾಹರಣೆ ಎಂದರೆ ಕುಖ್ಯಾತ ಅಪರಾಧಿ […]

Continue Reading

ಪಹಣಿಗೆ ಆಧಾರ್ ಜೋಡಣೆ ಮಾಡಿಸಿ

ಚಿತ್ತಾಪುರ: ತಾಲೂಕಿನ ಶೇ 68ರಷ್ಟು ರೈತರು ಮಾತ್ರ ಪಹಣಿಗೆ ಆಧಾರ್ ಜೋಡಣೆ ಮಾಡಿದ್ದಾರೆ. ಸರ್ಕಾರದ ವಿವಿಧ ಸೌಲಭ್ಯಕ್ಕಾಗಿ ಉಳಿದವರು ಆಧಾರ್ ಜೋಡಣೆ ಮಾಡಬೇಕು ಎಂದು ತಹಸೀಲ್ದಾರ್ ಅಮರೇಶ ಬಿರಾದಾರ ತಿಳಿಸಿದ್ದಾರೆ. ಆಧಾರ್ ಜೋಡಣೆಯಿಂದ ಪೌತಿ, ವಾರಸಾ ಖಾತೆಯ ವರ್ಗಾವಣೆಯಲ್ಲಿ ಆಗುವ ಅಕ್ರಮವನ್ನು ತಡೆಗಟ್ಟಬಹುದು. ಉಪ ನೋಂದಣಿ ಕಚೇರಿಯಲ್ಲಿ ತಮ್ಮ ಬದಲಿಗೆ ಬೇರೆಯವರು ಮೊಟ್ಟೆ ದಾಖಲೆ ಸೃಷ್ಟಿಸಿ ನೋಂದಣಿ ಮಾಡಿಸುವದು ತಡೆಗಟ್ಟಬಹುದು. ಬ್ಯಾಂಕ್‌ ಮತ್ತು ಸರ್ಕಾರದ ಇತರೆ ಸೌಲಭ್ಯದ ವಿಳಂಬಕ್ಕೆ ಅವಕಾಶವಿರುವುದಿಲ್ಲ ಎಂದಿದ್ದಾರೆ. ಸರ್ಕಾರದ ಅಧಿಸೂಚನೆ ಪ್ರಕಾರ ಒಂದು ಕುಟುಂಬಕ್ಕೆ […]

Continue Reading

ಟಿ20 ವಿಶ್ವಕಪ್ ಗೆಲುವು ಸಾಧಿಸಿದ ಟೀಂ ಇಂಡಿಯಾಗೆ 125 ಕೋಟಿ ರೂ.ಗಳ ಬಹುಮಾನ

ನವದೆಹಲಿ: 2024ರ ಟಿ20 ವಿಶ್ವಕಪ್ ಗೆಲುವು ಸಾಧಿಸಿದ ಟೀಂ ಇಂಡಿಯಾಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಭರ್ಜರಿ ಬಹುಮಾನ ಘೋಷಿಸಿದ್ದಾರೆ. ಕೆನ್ಸಿಂಗ್ಟನ್ ಓವಲ್ನಲ್ಲಿ ಶನಿವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ 7 ರನ್’ಗಳ ರೋಚಕ ಗೆಲುವು ಸಾಧಿಸಿ ಹೊಸ ಟಿ20 ವರ್ಡ್ ಚಾಂಪಿಯನ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿತು. ವೆಸ್ಟ್ ಇಂಡೀಸ್’ನಲ್ಲಿ ಭಾರತದ ಐತಿಹಾಸಿಕ ಗೆಲುವು ಸಾಧಿಸಿ ಒಂದು ದಿನದ ನಂತರ ಬಿಸಿಸಿಐ ಕಾರ್ಯದರ್ಶಿ ಶಾ ಅವರು ವಿಶ್ವಕಪ್ ಪಂದ್ಯಾವಳಿಯಲ್ಲಿ ಅಜೇಯ ಪ್ರದರ್ಶನ […]

Continue Reading

ಸುಮಾರು ತಿಂಗಳಿಂದ ಠಾಣೆಯಲ್ಲಿರುವ ವಾಹನಗಳ‌ ಮಾಲಿಕರು ಈ ಕೂಡಲೆ ಪಿಎಸ್ಐ ಅವರಿಗೆ ಸಂಪರ್ಕಿಸಿ: ಸಿಪಿಐ ಪಾಳ

ಕಾಳಗಿ: ಮಾಡಬೂಳ ಪೊಲೀಸ್ ಠಾಣೆಯ ಆವರಣದಲ್ಲಿ ಸುಮಾರು ತಿಂಗಳುಗಳಿಂದ ಇರುವ ವಾಹನಗಳ‌ ಮಾಲಿಕರು ಮಾಡಬೂಳ ಪೊಲೀಸ್ ಠಾಣೆಯ ಪಿಎಸ್ಐ ಅವರಿಗೆ ಸಂಪರ್ಕಿಸಬೇಕು ಎಂದು ಕಾಳಗಿ ಸಿಪಿಐ ಜಗದೇವಪ್ಪ ಪಾಳ ತಿಳಿಸಿದ್ದಾರೆ. ಈ ಪಟ್ಟಿಯಲ್ಲಿರುವ ವಾಹನಗಳ ವಾರಸುದಾರರು ಇದುವರೆಗೆ ನಮ್ಮನ್ನು ಸಂಪರ್ಕಿಸಿರುವದಿಲ್ಲ, ಈ ವಾಹನಗಳ ಮಾಲಿಕರು ಸುಮಾರು ತಿಂಗಳಿನಿಂದ ಮಾಡಬೂಳ ಪೊಲೀಸ್ ಠಾಣೆಯ ಆವರಣದಲ್ಲಿ ಇರುತ್ತವೆ. ಈ ವಾಹನಗಳ ಮಾಲಿಕರು ಸಂಬಂಧಪಟ್ಟ ವಾಹನದ ದಾಖಲಾತಿಗಳನ್ನು ತೆಗೆದುಕೊಂಡು ಮಾಡಬೂಳ ಪಿಎಸ್ಐ ಅವರಿಗೆ ಸಂಪರ್ಕಿಸಲು ತಿಳಿಸಿದ್ದಾರೆ. ಜುಲೈ 1ರ ರೊಳಗಾಗಿ ತೆಗೆದುಕೊಂಡು […]

Continue Reading

ಜಮೀನು ಅಕ್ರಮ ತಡೆಗೆ ಎಲ್ಲಾ ಆಸ್ತಿಗಳಿಗೆ ಆಧಾರ್ ಲಿಂಕ್ ಕಡ್ಡಾಯ

ಕಲಬುರಗಿ : ಜಮೀನು ಅಕ್ರಮ ತಡೆಗೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ, ರಾಜ್ಯದಲ್ಲಿನ ಎಲ್ಲಾ ಆಸ್ತಿಗಳಿಗೆ ಆಧಾರ್‌ ಲಿಂಕ್‌ ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ನಗರದ ಜಿಲ್ಲಾಡಳಿತ ಭವನದಲ್ಲಿ ನಡೆದ ಕಲಬುರಗಿ ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಯಾರದೋ ಜಮೀನನ್ನು ಮತ್ತೊಬ್ಬರು ಲಪಟಾಯಿಸುವದನ್ನು ತಡೆಯಲು, ಬೆಳೆ ನಷ್ಟ ಮತ್ತಿತರ ಸಂದರ್ಭಗಳಲ್ಲಿ ದೊರೆಯುವ ಪರಿಹಾರವನ್ನು ಮತ್ತೊಬ್ಬರು ಪಡೆದು ದುರ್ಬಳಕೆ ಮಾಡಿಕೊಳ್ಳುವದು ತಪ್ಪಿಸಲು ರಾಜ್ಯದಲ್ಲಿನ ಎಲ್ಲ ಆಸ್ತಿಗಳಿಗೆ […]

Continue Reading

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡಲು ಸಚಿವ ಪ್ರಿಯಾಂಕ್ ಖರ್ಗೆಗೆ ಮನವಿ

ಕಲಬುರ್ಗಿ: ಯಾವುದೆ ಗೌರವಧನವಿಲ್ಲದೆ ದುಡಿಯುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಸರ್ಕಾರಿ ಆದೇಶ ಹೊರಡಿಸುವಂತೆ ಆಗ್ರಹಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ/ಬಿಟಿ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ತಾಪುರ ತಾಲೂಕು ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು. ಕಲಬುರ್ಗಿಯಲ್ಲಿ ಸಚಿವರನ್ನು ಭೇಟಿಯಾದ ಪತ್ರಕರ್ತರು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವುದಾಗಿ 2024 – 25ರ ತಮ್ಮ ಬಜೆಟ್ ಭಾಷಣದಲ್ಲಿ […]

Continue Reading

ಪ್ರಾಥಮಿಕ ಶಾಲೆ, ಹಾಸ್ಟೆಲ್‌ಗ‌ಳಿಗೆ ಜಿಲ್ಲಾಧಿಕಾರಿ, ಸಿಇಓ ಭೇಟಿ

ಚಿತ್ತಾಪುರ: ವಸತಿ ನಿಲಯಗಳಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ವಾರಕ್ಕೆ ಒಂದು ಬಾರಿಯಾದರೂ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಯ ಬಗ್ಗೆ ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ವಿವಿಧ ಸರ್ಕಾರಿ ವಸತಿ ನಿಲಯ, ಅಂಗನವಾಡಿ ಕೇಂದ್ರ, ಸರ್ಕಾರಿ ಆಸ್ಪತ್ರೆ ಸೇರಿದಂತೆ ಹಲವೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟಣದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೇಲ್’ಗೆ ಭೇಟಿ ನೀಡಿ ಅಡುಗೆ ಕೋಣೆ, ಊಟದ ವ್ಯವಸ್ಥೆ, ತರಕಾರಿ, […]

Continue Reading

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಕೋಲಿ ಸಮಾಜಕ್ಕೆ ನೀಡಿ

ಚತ್ತಾಪುರ:  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಜಗದೇವ ಗುತ್ತೆದಾರ ಅವರು ವಿಧಾನ ಪರಿಷತ್ ಸದಸ್ಯರಾಗಿದ್ದರಿಂದ ಖಾಲಿಯಾಗಲಿರುವ ಅಧ್ಯಕ್ಷ ಸ್ಥಾನಕ್ಕೆ ಕೋಲಿ ಸಮಾಜದ ಕಾಂಗ್ರೆಸ್ ಮುಖಂಡರನ್ನು ನೇಮಕ ಮಾಡಬೇಕು ಎಂದು ತಾಲೂಕು ಕೋಲಿ ಸಮಾಜದಿಂದ ಕೆಪಿಸಿಸಿ ಹಾಗೂ ಎಐಸಿಸಿ ಅಧ್ಯಕ್ಷರಿಗೆ ಆಗ್ರಹಿಸುತ್ತಿದ್ದೆವೆ ಎಂದು ತಾಲೂಕು ಕೋಲಿ ಸಮಾಜ ಅಧ್ಯಕ್ಷ ರಾಮಲಿಂಗ ಬಾನರ ಹೇಳಿದರು.   ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯದ ನಂತರ ಇಲ್ಲಿಯವರೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಕೋಲಿ ಸಮಾಜದವರನ್ನು ನೇಮಕ ಮಾಡಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಪಕ್ಷದ ತತ್ವ, ಸಿದ್ಧಾಂತ, ಪಕ್ಷನಿಷ್ಠೆಯಿಂದ […]

Continue Reading